ಶುಕ್ರವಾರದ ದಿನ ಭವಿಷ್ಯ (31-01-2020)

ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ. ನಮ್ಮೊಂದಿಗೆ ಬಂದ ವ್ಯಕ್ತಿಗಳು ಹಾಗೂ ಅನುಭವಿಸಿದ ಸನ್ನಿವೇಶಗಳ ಅನುಭವ ಹಾಗೂ ನೆನಪುಗಳು ಮಾತ್ರವೇ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ. ಆ ಅನುಭವಗಳೇ ಜೀವನ ಎಂದರೇನು? ಎನ್ನುವ ಪಾಠವನ್ನು ಹೇಳಿಕೊಡುತ್ತವೆ. ಶುಕ್ರವಾರವಾದ ಈ ಶುಭ ದಿನ ಆ ಮಹಾ ಲಕ್ಷ್ಮಿಯು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಯಾವೆಲ್ಲಾ ಬದಲಾವಣೆಯನ್ನು ತರುತ್ತಾಳೆ? ನಿಮ್ಮ ಜೀವನದ ಪಯಣದಲ್ಲಿ ಯಾವೆಲ್ಲಾ ಘಟನೆಗಳು ನಡೆಯಬಹುದು? ಎನ್ನುವುದನ್ನು ನೀವು ತಿಳಿದು ಕೊಳ್ಳಬೇಕೆಂದುಕೊಂಡಿದ್ದರೆ, ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ಈ ಮುಂದಿನ ರಾಶಿ ಭವಿಷ್ಯವನ್ನು ಪರಿಶೀಲಿಸಿ....

Dina Bhavishya

ಸಂವತ್ಸರ: ವಿಕಾರಿನಾಮ
ಆಯನ: ಉತ್ತರಾಯನ
ಋತು: ಶಿಶಿರ
ಮಾಸ: ಮಾಘ
ಪಕ್ಷ: ಶುಕ್ಲ
ತಿಥಿ: ಷಷ್ಠಿ
ನಕ್ಷತ್ರ: ರೇವತಿ
ರಾಹುಕಾಲ: ಬೆಳಗ್ಗೆ 11.14 ರಿಂದ ಮಧ್ಯಾಹ್ನ 12.35 ರವರೆಗೆ
ಗುಳಿಕಕಾಲ: ಬೆಳಗ್ಗೆ 8.31 ರಿಂದ 9.52 ರವರೆಗೆ
ಯಮಗಂಡಕಾಲ: ಮಧ್ಯಾಹ್ನ 3.17 ರಿಂದ 4.38 ರವರೆಗೆ
ದುರ್ಮುಹೂರ್ತ: ಬೆಳಗ್ಗೆ 9.20 ರಿಂದ 10.03 ರವರೆಗೆ
ಸೂರ್ಯೋದಯ: ಬೆಳಿಗ್ಗೆ 7.10
ಸೂರ್ಯಾಸ್ತ: ಸಂಜೆ 5.59

ಮೇಷ ರಾಶಿ

ಮೇಷ ರಾಶಿ

ಇಂದು ನೀವು ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ, ಸಾಕಷ್ಟು ಮೋಜು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಕುಟುಂಬ ಮತ್ತು ಸ್ನೇಹಿತರಿಂದ ಬೆಂಬಲವನ್ನು ಪಡೆಯುವ ಸಾಧ್ಯತೆಯಿದೆ. ಕೆಲಸದಲ್ಲಿ ಇಂದು ಸೃಜನಶೀಲತೆ ಮತ್ತು ವಿಶೇಷ ಕೌಶಲ್ಯವನ್ನು ತೋರಿಸುತ್ತೀರಿ, ಅದು ನಿಮಗೆ ದೊಡ್ಡ ಯಶಸ್ಸನ್ನು ನೀಡುತ್ತದೆ. ನಿಮ್ಮ ಪ್ರತಿಭೆಯನ್ನು ನೋಡಿ ಎಲ್ಲರೂ ಇಷ್ಟಪಡುತ್ತಾರೆ. ವ್ಯಾಪಾರಿಗಳಿಗೆ ದಿನ ಉತ್ತಮವಾಗಿರುತ್ತದೆ. ಇಂದು ನೀವು ನಿರೀಕ್ಷಿಸಿದಂತೆ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆ ಇದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಿವಾದವನ್ನು ಬಗೆಹರಿಸಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನ. ಇಂದು ತುಂಬಾ ಒಳ್ಳೆಯದನ್ನು ಅನುಭವಿಸುವಿರಿ.

ಅದೃಷ್ಟ ಬಣ್ಣ: ಕ್ರೀಮ್

ಅದೃಷ್ಟ ಸಂಖ್ಯೆ: 7

ಅದೃಷ್ಟ ಸಮಯ: ಮಧ್ಯಾಹ್ನ 2:15 ರಿಂದ 7:30 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಇಂದು ನಿಮ್ಮ ವೈಯಕ್ತಿಕ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ಅಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂದು ನಿಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಮತ್ತು ನಿಮ್ಮ ಮನಸ್ಸಿನಲ್ಲಿ ಯಾವುದೇ ಸಂದಿಗ್ಧತೆ ಇದ್ದರೆ, ಪ್ರೀತಿಪಾತ್ರರ ಅಭಿಪ್ರಾಯ ಕೇಳಿ. ಅವಸರದಲ್ಲಿ ಯಾವುದೇ ತಪ್ಪು ಹೆಜ್ಜೆ ಇಡಬೇಡಿ. ನೀವು ಬಯಸಿದರೆ ಸಂಗಾತಿಯ ಸಹಾಯ ತೆಗೆದುಕೊಳ್ಳಬಹುದು. ವೃತ್ತಿಜೀವನದ ವಿಷಯಗಳು ಇಂದು ಉತ್ತಮವಾಗಿರುತ್ತವೆ. ನಿಮ್ಮ ನಿರಂತರ ಪ್ರಯತ್ನಗಳು ಇಂದು ಯಶಸ್ವಿಯಾಗುವ ನಿರೀಕ್ಷೆಯಿದೆ. ನಿರುದ್ಯೋಗಿಗಳಾಗಿದ್ದರೆ ಇಂದು ಉದ್ಯೋಗ ಪಡೆಯುವ ಬಲವಾದ ಸಾಧ್ಯತೆಯಿದೆ. ವ್ಯವಹಾರದಲ್ಲಿ ಬಯಸಿದ ಫಲಿತಾಂಶಗಳನ್ನು ಪಡೆಯಬಹುದು, ಅದು ನಿಮಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಹೊಸದನ್ನು ಮಾಡುವ ಬಗ್ಗೆ ಯೋಚಿಸುತ್ತಿದ್ದರೆ ಇಂದು ನಿಮ್ಮ ಯೋಜನೆಗೆ ಉತ್ತಮ ದಿನವಾಗಿದೆ. ಇಂದು ಹೆಚ್ಚು ಹಣ ಖರ್ಚು ಮಾಡಲಿದ್ದೀರಿ. ಈ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆಯೂ ನೀವು ಕಾಳಜಿ ವಹಿಸಬೇಕಾಗುತ್ತದೆ.

ಅದೃಷ್ಟ ಬಣ್ಣ: ಹಸಿರು

ಅದೃಷ್ಟ ಸಂಖ್ಯೆ: 6

ಅದೃಷ್ಟ ಸಮಯ: ಮಧ್ಯಾಹ್ನ 12:15 ರಿಂದ 7:45 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ. ಹಣಕಾಸಿನ ಪರಿಸ್ಥಿತಿಯ ಬಗ್ಗೆ ಮಾತನಾಡಿದರೆ ಯಾವುದೇ ಆರ್ಥಿಕ ಸಮಸ್ಯೆ ಇರುವುದಿಲ್ಲ. ಆರ್ಥಿಕವಾಗಿ ಇನ್ನಷ್ಟು ಬಲಪಡಿಸಲು ನಿಮ್ಮ ಪ್ರಯತ್ನಗಳು ಮುಂದುವರಿಯುತ್ತವೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪೋಷಕರ ಆಶೀರ್ವಾದವನ್ನು ಪಡೆಯುತ್ತೀರಿ. ಇಂದು ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಅವರು ತಮ್ಮ ಕೆಲಸಕ್ಕಾಗಿ ಇಂದು ಪ್ರಯಾಣಿಸುವ ಸಾಧ್ಯತೆಯಿದೆ. ಉದ್ಯೋಗದಲ್ಲಿರುವವರು ತಮ್ಮ ಮೇಲಧಿಕಾರಿಗಳ ಸಹಾಯದಿಂದ ಯಾವುದೇ ದೊಡ್ಡ ಸಮಸ್ಯೆಯನ್ನು ತೊಡೆದುಹಾಕುತ್ತಾರೆ. ವಿದ್ಯಾರ್ಥಿಗಳು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಅಧ್ಯಯನದಲ್ಲಿ ಯಾವುದೇ ಅಡೆತಡೆಗಳಿದ್ದರೆ ಶಿಕ್ಷಕರ ಮಾರ್ಗದರ್ಶನದೊಂದಿಗೆ ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಇಂದು ಆರೋಗ್ಯದ ಬಗ್ಗೆ ಅಸಡ್ಡೆ ಮಾಡಬೇಡಿ, ವಿಶೇಷವಾಗಿ ಈ ರಾಶಿಚಕ್ರದ ಹಿರಿಯರು ಇಂದು ಜಾಗರೂಕರಾಗಿರಬೇಕು. ಪ್ರೀತಿಯ ವಿಷಯದಲ್ಲಿ, ದಿನವು ಚೆನ್ನಾಗಿರುತ್ತದೆ.

ಅದೃಷ್ಟ ಬಣ್ಣ: ಗುಲಾಬಿ

ಅದೃಷ್ಟ ಸಂಖ್ಯೆ: 31

ಅದೃಷ್ಟ ಸಮಯ: ಬೆಳಿಗ್ಗೆ 10: 00 ರಿಂದ ಮಧ್ಯಾಹ್ನ 12:55 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ. ಜೀವನ ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ ಮತ್ತು ಅಗತ್ಯವಿದ್ದರೆ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ಉದ್ಯೋಗದಲ್ಲಿರುವವರು ಇಂದು ಸ್ವಲ್ಪ ಜಾಗರೂಕರಾಗಿರಬೇಕು. ಇಂದು ಕೆಲಸದ ಬಗ್ಗೆ ನಿಮ್ಮ ನಿರ್ಲಕ್ಷ್ಯವು ಸಲ್ಲದು. ಉನ್ನತ ಅಧಿಕಾರಿಗಳು ನಿಮ್ಮೊಂದಿಗೆ ಕಟ್ಟುನಿಟ್ಟಾಗಿ ವರ್ತಿಸಿದರೆ ಅವರ ಮಾತನ್ನು ಎಚ್ಚರಿಕೆಯಿಂದ ಕೇಳಿ, ಇಲ್ಲದಿದ್ದರೆ ನೀವು ಪಶ್ಚಾತಾಪ ಅನುಭವಿಸುವಿರಿ. ಕುಟುಂಬ ಸಂತೋಷವಾಗಿರುತ್ತದೆ. ನಾಳೆಯ ಬಗ್ಗೆ ಚಿಂತೆ ಮಾಡುವ ಮೂಲಕ ಇಂದಿನ ದಿನವನ್ನು ಹಾಳು ಮಾಡುತ್ತಿದ್ದೀರಿ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಆರ್ಥಿಕ ರಂಗದಲ್ಲಿ ದಿನ ಸಾಮಾನ್ಯವಾಗಿರಲಿದೆ. ನೀವು ದುಂದುಗಾರಿಕೆಯನ್ನು ತಪ್ಪಿಸಬೇಕಾಗುತ್ತದೆ. ಪ್ರಯಾಣಕ್ಕೆ ದಿನ ಒಳ್ಳೆಯದಲ್ಲ. ವಿದ್ಯಾರ್ಥಿಗಳು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬಹುದು.

ಅದೃಷ್ಟ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 11

ಅದೃಷ್ಟ ಸಮಯ: ಮಧ್ಯಾಹ್ನ 2:30 ರಿಂದ 7:50 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಇಂದು ನಿಮ್ಮ ದಿನ ಶುಭವಾಗಿರುತ್ತದೆ. ವೈವಾಹಿಕ ಜೀವನದಲ್ಲಿ ನಿಮ್ಮ ಸಂಗಾತಿಯು ಹೆಚ್ಚು ಪ್ರಣಯ ಮನಸ್ಥಿತಿಯಲ್ಲಿರುತ್ತಾರೆ. ಪ್ರೇಮಿಗಳಿಗೆ ಕೆಲವು ಸಮಸ್ಯೆಗಳಿರಬಹುದು. ನಿಮ್ಮ ಗೆಳೆಯ/ಗೆಳತಿಯೊಂದಿಗಿನ ಸಂಬಂಧದ ವ್ಯತ್ಯಾಸಗಳು ಗಾಢವಾಗಬಹುದು. ಎಲ್ಲಾ ತಪ್ಪು ಕಲ್ಪನೆಗಳನ್ನು ನಿವಾರಿಸಲು ಪ್ರಯತ್ನಿಸಿ. ಆರ್ಥಿಕ ರಂಗದಲ್ಲಿ ದಿನವು ಲಾಭದಾಯಕವಾಗಿರುತ್ತದೆ. ಇಂದು ಸುಲಭವಾಗಿ ಹಣವನ್ನು ಸಂಪಾದಿಸಲು ಸಾಧ್ಯವಾಗುತ್ತದೆ. ನಿಮ್ಮ ಯಾವುದೇ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾದರೆ ನೀವು ಉತ್ತಮ ಪ್ರಯೋಜನಗಳನ್ನು ಸಹ ಪಡೆಯಬಹುದು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಕುಟುಂಬ ಸದಸ್ಯರ ಸಹಾಯದಿಂದ ನಿಮ್ಮ ಅಪೂರ್ಣ ವ್ಯವಹಾರವನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಮಾತನಾಡಿದರೆ ಇಂದು ಉತ್ತಮ ದಿನವಾಗಿರುತ್ತದೆ.

ಅದೃಷ್ಟ ಬಣ್ಣ: ಗಾಢ ಹಳದಿ

ಅದೃಷ್ಟ ಸಂಖ್ಯೆ: 34

ಅದೃಷ್ಟ ಸಮಯ: ಸಂಜೆ 4:05 ರಿಂದ 9:00 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಕೆಲಸದಲ್ಲಿ ಇಂದು ಸ್ವಲ್ಪ ನಿರಾಶೆ ಉಂಟಾಗಬಹುದು. ಇಂದು ಕೆಲವು ಪ್ರಯತ್ನಗಳು ವಿಫಲವಾಗಬಹುದು, ಇದು ನಿಮ್ಮ ಯೋಜನೆಯ ನ್ಯೂನತೆಯನ್ನು ತೋರಿಸುತ್ತದೆ. ವ್ಯಾಪಾರ ಮಾಡಿದರೆ ಯಾವುದೇ ಹೊಸ ಒಪ್ಪಂದದ ಬಗ್ಗೆ ಮನಸ್ಸಿನಲ್ಲಿ ಗೊಂದಲ ಉಂಟಾಗಬಹುದು. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ನೀವು ಸಂಶಯಿಸಬಹುದು. ಈ ಸಂದರ್ಭದಲ್ಲಿ ನಿಮಗೆ ಸರಿಯಾದ ಸಲಹೆ ಬೇಕು. ಆರ್ಥಿಕವಾಗಿ ಇಂದು ಉತ್ತಮ ದಿನವಾಗಿರುತ್ತದೆ. ಹಣವನ್ನು ಸ್ವೀಕರಿಸುವ ಬಲವಾದ ಸಾಧ್ಯತೆಯಿದೆ. ದಾಂಪತ್ಯ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಸಂಗಾತಿಯ ಬದಲಾದ ಮನಸ್ಥಿತಿ ನಿಮ್ಮ ದೂರುಗಳನ್ನು ಸಹ ಕೊನೆಗೊಳಿಸುತ್ತದೆ. ಇಂದು ಅವರು ತಮ್ಮ ಆಲೋಚನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಹುದು. ಪ್ರೀತಿಯ ದಂಪತಿಗಳಿಗೆ ಇಂದು ಬಹಳ ರೋಮ್ಯಾಂಟಿಕ್ ದಿನವಾಗಿರುತ್ತದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳು ಇರುವುದಿಲ್ಲ.

ಅದೃಷ್ಟ ಬಣ್ಣ: ಮರೂನ್

ಅದೃಷ್ಟ ಸಂಖ್ಯೆ: 17

ಅದೃಷ್ಟ ಸಮಯ: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:30 ರವರೆಗೆ

ತುಲಾ ರಾಶಿ

ತುಲಾ ರಾಶಿ

ಕೆಲಸದಲ್ಲಿ ವಿಶೇಷವಾಗಿ ವ್ಯಾಪಾರ ಮಾಡುವವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ಇಂದು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯುವ ಸಾಧ್ಯತೆಯಿದೆ, ನಿಮ್ಮ ಕೆಲಸವು ಅತ್ಯಂತ ವೇಗವಾಗಿ ಮುಂದುವರಿಯುವ ಸಾಧ್ಯತೆಯಿದೆ. ದುಡಿಯುವ ಜನರು ಇಂದು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಉನ್ನತ ಅಧಿಕಾರಿಗಳಿಂದ ಸಾಕಷ್ಟು ದೂರುಗಳು ಬರುತ್ತವೆ. ಇವೆಲ್ಲವೂ ಕೆಲಸದ ಬಗ್ಗೆ ನಿಮ್ಮ ನಿರ್ಲಕ್ಷ್ಯದ ಪರಿಣಾಮವಾಗಿದೆ. ಮನೆಯ ವಾತಾವರಣವು ಇಂದು ಸರಿಯಾಗಿರುವುದಿಲ್ಲ, ಸದಸ್ಯರ ಆರೋಗ್ಯದ ಕ್ಷೀಣತೆಯಿಂದಾಗಿ ನಿಮ್ಮ ಆತಂಕ ಹೆಚ್ಚಾಗಬಹುದು. ಸಂಗಾತಿಯು ಜೀವನದ ಪ್ರತಿಯೊಂದು ಏರಿಳಿತದಲ್ಲೂ ನಿಮ್ಮನ್ನು ಬೆಂಬಲಿಸಿದ್ದಾರೆ, ಈ ಸಮಯದಲ್ಲಿ ಅವರನ್ನು ಬಿಡದಿರುವುದು ಉತ್ತಮ. ಇಂದು ಹಣದ ವಿಷಯ ಮಿಶ್ರವಾಗಿದೆ.

ಅದೃಷ್ಟ ಬಣ್ಣ: ನೀಲಿ

ಅದೃಷ್ಟ ಸಂಖ್ಯೆ: 28

ಅದೃಷ್ಟ ಸಮಯ: ಮಧ್ಯಾಹ್ನ 3:00 ರಿಂದ 7:55 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಕಷ್ಟಪಟ್ಟು ಕೆಲಸ ಮಾಡಿದರೆ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಇಂದು ಕಚೇರಿಯಲ್ಲಿ ಕೆಲವು ಒಳ್ಳೆಯ ಸುದ್ದಿಗಳನ್ನು ನೀಡಬಹುದು. ನಿಮ್ಮ ಯಶಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಗುರಿಯತ್ತ ಹೆಚ್ಚು ವೇಗವಾಗಿ ಚಲಿಸುವಿರಿ. ಇಂದು ವಿವಾಹಿತ ದಂಪತಿಗಳ ಜೀವನದಲ್ಲಿ ಸ್ವಲ್ಪ ಸಮಸ್ಯೆ ಉಂಟಾಗುತ್ತದೆ. ವಾದಿಸುವ ಮೂಲಕ ನೀವು ವಿಷಯವನ್ನು ಮತ್ತಷ್ಟು ಹೆಚ್ಚಿಸಬೇಡಿ, ಬದಲಾಗಿ ಪರಸ್ಪರ ತಿಳುವಳಿಕೆಯಿಂದ ವಿಷಯವನ್ನು ಕೊನೆಗೊಳಿಸಲು ಪ್ರಯತ್ನಿಸಿ. ಇದು ನಿಮ್ಮಿಬ್ಬರಿಗೂ ಒಳ್ಳೆಯದು. ಇಂದು ನೀವು ನಿಮ್ಮ ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕಾಗುತ್ತದೆ. ನಿಮ್ಮ ಒಂದು ತಪ್ಪು ಪದ ಸಂಬಂಧದಲ್ಲಿ ಋಣಾತ್ಮಕವಾಗಿ ಪರಿಣಾಮ ಬೀರುತ್ತದೆ. ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.

ಅದೃಷ್ಟ ಬಣ್ಣ: ನೇರಳೆ

ಅದೃಷ್ಟ ಸಂಖ್ಯೆ: 11

ಅದೃಷ್ಟ ಸಮಯ: ಬೆಳಿಗ್ಗೆ 6:45 ರಿಂದ 10:25 ರವರೆಗೆ

ಧನು ರಾಶಿ

ಧನು ರಾಶಿ

ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಉಳಿಯುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಸಾಮರಸ್ಯದಿಂದ ಉಳಿಯುತ್ತದೆ, ಆದರೆ ಅವರೊಂದಿಗೆ ಹೆಚ್ಚು ಸಮಯ ಕಳೆಯಬೇಕಾಗುತ್ತದೆ. ಪ್ರಣಯ ಜೀವನದಲ್ಲಿ ಪಾಲುದಾರರೊಂದಿಗೆ ನೀವು ಸಂತೋಷದ ದಿನವನ್ನು ಆನಂದಿಸುವಿರಿ. ಕೆಲಸದಲ್ಲಿ ಇಂದು ಕೆಲವು ಪ್ರಮುಖ ಕಾರ್ಯಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗುತ್ತೀರಿ, ಅದು ನಿಮ್ಮ ಬಾಸ್ ಮತ್ತು ಇತರ ಉನ್ನತ ಅಧಿಕಾರಿಗಳ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕಾಗಿ ನಿಮಗೆ ಪ್ರಶಂಸೆ ಮಾತ್ರವಲ್ಲ ಪ್ರೋತ್ಸಾಹವೂ ಸಿಗುತ್ತದೆ. ನೀವು ಇಂದು ಒಂದು ಸಣ್ಣ ಪ್ರಯಾಣ ಮಾಡುವ ಸಾಧ್ಯತೆಯಿದೆ. ಆರ್ಥಿಕ ದೃಷ್ಟಿಯಿಂದ ಇಂದು ಇದ್ದಕ್ಕಿದ್ದಂತೆ ದೊಡ್ಡ ಸಮಸ್ಯೆಯನ್ನು ಎದುರಿಸಬಹುದು. ಉತ್ತಮ ಆರೋಗ್ಯದೊಂದಿಗೆ ನೀವು ಇಂದು ಹೆಚ್ಚು ಹೆಚ್ಚು ಕೆಲಸ ಮಾಡಲು ಸಾಧ್ಯವಾಗುತ್ತದೆ.

ಅದೃಷ್ಟ ಬಣ್ಣ: ಬಿಳಿ

ಅದೃಷ್ಟ ಸಂಖ್ಯೆ: 31

ಅದೃಷ್ಟ ಸಮಯ: ಮಧ್ಯಾಹ್ನ 1:00 ರಿಂದ 3:00 ರವರೆಗೆ

ಮಕರ ರಾಶಿ

ಮಕರ ರಾಶಿ

ನಿಮ್ಮ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಉತ್ತಮ ದಿನ. ನೀವು ಸ್ವಾವಲಂಬಿಗಳಾಗಿ ಉಳಿದಿದ್ದರೆ, ಅದು ನಿಮ್ಮ ಏಕೈಕ ಪ್ರಯೋಜನವಾಗಿರುತ್ತದೆ, ನಿಮ್ಮ ಯಾವುದೇ ಕೆಲಸವನ್ನು ಇತರರಿಗೆ ನೀಡಬೇಡಿ. ಕೆಲಸದಲ್ಲಿ, ಇಂದು ಯಾವುದೇ ಸಮಸ್ಯೆ ಇದ್ದರೆ ನೀವು ಭಯಪಡುವ ಅಗತ್ಯವಿಲ್ಲ, ಬದಲಿಗೆ ನಿಮ್ಮ ಪರವಾಗಿ ನೀವು ಶ್ರಮಿಸುತ್ತಲೇ ಇರುತ್ತೀರಿ, ನೀವು ಪ್ರಯೋಜನವನ್ನು ಪಡೆಯುವ ಸಾಧ್ಯತೆಯಿದೆ. ಇಂದು ಉದ್ಯೋಗಿಗಳಿಗೆ ವಿಶೇಷವಾಗಿ ಅದ್ಭುತ ದಿನವಾಗಿರುತ್ತದೆ. ನಿಮ್ಮ ಸಂಗಾತಿಯ ಸ್ವಭಾವದಲ್ಲಿ ಇಂದು ನೀವು ಬದಲಾವಣೆಯನ್ನು ನೋಡಬಹುದು. ಅವರು ನಿಮ್ಮ ಮೇಲೆ ಕೋಪಗೊಂಡಿದ್ದರೆ ಇಂದು ನೀವು ಅವರಿಗೆ ಮನವರಿಕೆ ಮಾಡಲು ಸಾಧ್ಯವಾಗುತ್ತದೆ. ಇಂದು ಹಣದ ವಿಷಯದಲ್ಲಿ ತುಂಬಾ ಜಾಗರೂಕರಾಗಿರುತ್ತೀರಿ, ಏಕೆಂದರೆ ತಪ್ಪು ನಿರ್ಧಾರವು ನಿಮಗೆ ದೊಡ್ಡ ಹಾನಿ ಮಾಡುತ್ತದೆ ಎಂದು ನೀವು ಚೆನ್ನಾಗಿ ಅರ್ಥಮಾಡಿಕೊಂಡಿದ್ದೀರಿ. ಆರೋಗ್ಯ ಉತ್ತಮವಾಗಿರುತ್ತದೆ.

ಅದೃಷ್ಟ ಬಣ್ಣ: ಗುಲಾಬಿ

ಅದೃಷ್ಟ ಸಂಖ್ಯೆ: 30

ಅದೃಷ್ಟ ಸಮಯ: ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 2:30 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ಇಂದು ನಿಮಗೆ ತುಂಬಾ ಕಾರ್ಯನಿರತ ದಿನವಾಗಲಿದೆ. ನೀವು ಕೆಲಸ ಮಾಡುತ್ತಿದ್ದರೆ, ಇಂದು ನಿಮ್ಮ ಹೆಚ್ಚಿನ ಸಮಯವನ್ನು ಸಭೆಯಲ್ಲಿ ಅಥವಾ ಇತರ ಕೆಲವು ಪ್ರಮುಖ ಕೆಲಸಗಳನ್ನು ಪೂರೈಸುವಲ್ಲಿ ಕಳೆಯಲಾಗುತ್ತದೆ. ನಿಮ್ಮ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನೀವು ಯಶಸ್ವಿಯಾಗಿದ್ದರೆ, ಶೀಘ್ರದಲ್ಲೇ ದೊಡ್ಡ ಪ್ರಗತಿಯನ್ನು ಪಡೆಯಬಹುದು. ಆದರೆ ಇಂದು ನಿಮಗಾಗಿ ಸಮಯವನ್ನು ಕಂಡುಕೊಳ್ಳಲು ನಿಮಗೆ ಸಾಧ್ಯವಾಗುವುದಿಲ್ಲ. ವ್ಯಾಪಾರಸ್ಥರು ಇಂದು ಲಾಭ ಪಡೆಯಬಹುದು. ಹಣದ ಪರಿಸ್ಥಿತಿಯಲ್ಲಿ ಪ್ರಮುಖ ಸುಧಾರಣೆಯ ಸಾಧ್ಯತೆಯಿದೆ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ಜೀವನ ಸಂಗಾತಿಯೊಂದಿಗೆ ಉತ್ತಮ ತಿಳುವಳಿಕೆಯಿಂದಾಗಿ ಮನೆಯಲ್ಲಿ ಶಾಂತಿಯ ವಾತಾವರಣ ಇರುತ್ತದೆ. ಇದು ಮಾತ್ರವಲ್ಲ ನಿಮ್ಮ ಪ್ರೀತಿಪಾತ್ರರು ನಿಮಗೆ ತುಂಬಾ ಸಂತೋಷವನ್ನುಂಟು ಮಾಡುವಂಥದನ್ನು ಮಾಡಬಹುದು. ಪ್ರೀತಿಯ ವಿಷಯದಲ್ಲಿ, ಇಂದಿನ ದಿನವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ನಿಮ್ಮ ಪ್ರೇಮಿಯನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಅದೃಷ್ಟ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 15

ಅದೃಷ್ಟ ಸಮಯ: ಮಧ್ಯಾಹ್ನ 2:15 ರಿಂದ 10:10 ರವರೆಗೆ

ಮೀನ ರಾಶಿ

ಮೀನ ರಾಶಿ

ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಲ್ಲ, ಆದ್ದರಿಂದ ನೀವು ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತಪ್ಪಿಸಬೇಕು. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಿದ್ದರೆ ನಿಮ್ಮ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಬಹುದು ಅಥವಾ ಅವರಿಂದ ಸಹಾಯ ಪಡೆಯಬಹುದು. ನೀವು ಈ ರೀತಿಯಾಗಿ ಒತ್ತಡದಲ್ಲಿ ಕೆಲಸ ಮಾಡಿದರೆ, ಅದು ನಿಮ್ಮ ಕಾರ್ಯಕ್ಷಮತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ನಿಮ್ಮ ಆರೋಗ್ಯವು ಹೆಚ್ಚು ದುರ್ಬಲಗೊಳ್ಳುತ್ತದೆ. ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡುವ ಮೊದಲು ವ್ಯಾಪಾರಸ್ಥರು ಎಚ್ಚರಿಕೆಯಿಂದ ಯೋಚಿಸಬೇಕು. ವೈವಾಹಿಕ ಜೀವನದಲ್ಲಿ ಎಲ್ಲವೂ ಸಾಮಾನ್ಯವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ಭಾವನಾತ್ಮಕ ಬಾಂಧವ್ಯ ಮತ್ತಷ್ಟು ಹೆಚ್ಚಾಗಬಹುದು. ಹಣವು ನಿಮ್ಮೊಂದಿಗೆ ಉಳಿಯುತ್ತದೆ, ಆದರೆ ಯೋಚಿಸದೆ ಖರ್ಚು ಮಾಡುವ ನಿಮ್ಮ ಅಭ್ಯಾಸವು ಇಂದು ನಿಮ್ಮನ್ನು ತೊಂದರೆಗೆ ಸಿಲುಕಿಸುತ್ತದೆ.

ಅದೃಷ್ಟ ಬಣ್ಣ: ತಿಳಿ ಹಳದಿ

ಅದೃಷ್ಟ ಸಂಖ್ಯೆ: 22

ಅದೃಷ್ಟ ಸಮಯ: ಸಂಜೆ 4:30 ರಿಂದ 10:00 ರವರೆಗೆ

English summary

Daily Horoscope 31 Jan 2020 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Friday, January 31, 2020, 4:00 [IST]
X
Desktop Bottom Promotion