For Quick Alerts
ALLOW NOTIFICATIONS  
For Daily Alerts

ಶನಿವಾರದ ದಿನ ಭವಿಷ್ಯ: ಯಾವ ರಾಶಿಗಳಿಗೆ ಈ ದಿನ ಅದೃಷ್ಟ

|

ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:

ಸಂವತ್ಸರ: ಶಾರ್ವರಿ

ಆಯನ: ಉತ್ತರಾಯಣ
ಋತು: ವಸಂತ
ಮಾಸ: ಚೈತ್ರ
ತಿಥಿ: ಚರ್ತುದಶಿ
ನಕ್ಷತ್ರ: ಬೆಳಗ್ಗೆ 06:46ರವರೆಗೆ ಪೂರ್ವ ಭಾದ್ರಪದ ನಂತರ ಉತ್ತರ ಭಾದ್ರಪದ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಬೆಳಗ್ಗೆ09:16ರಿಂದ 10:48ರವರೆಗೆ
ಗುಳಿಗಕಾಲ: ಬೆಳಗ್ಗೆ 06:10ರಿಂದ 07:43ರವರೆಗೆ
ಯಮಗಂಡಕಾಲ: ಮಧ್ಯಾಹ್ನ 01:54 ರಿಂದ 03: 26ರವರೆಗೆ
ದುರ್ಮುಹೂರ್ತ: ಬೆಳಗ್ಗೆ 06:10 ರಿಂದ 07:49ರವರೆಗೆ
ಬೆಳಗ್ಗೆ 07:00ರಿಂದ 07:49ರವರೆಗೆ

ಸೂರ್ಯೋದಯ: ಬೆಳಗ್ಗೆ 06:10ಕ್ಕೆ
ಸೂರ್ಯಾಸ್ತ: ಸಂಜೆ 06:32ಕ್ಕೆ

ಮೇಷ ರಾಶಿ

ಮೇಷ ರಾಶಿ

ಇಂದು ನೀವು ಸಂತೋಷ ಹಾಗೂ ಉತ್ಸಾಹದಿಂದ ಇರುವಿರಿ. ವ್ಯಾಪಾರಸ್ಥರಿಗೂ ಅನುಕೂಲವಾದ ದಿನವಾಗಿದೆ. ಶೀಘ್ರದಲ್ಲೇ ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಕೆಲವು ದಿನಗಳಿಂದ ನಿಮ್ಮ ಯಾವುದೋ ಕೆಲಸವು ಅಪೂರ್ಣವಾಗಿದ್ದರೆ ಇಂದು ಅದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಕಷ್ಟಪಟ್ಟು ಕೆಲಸ ಮಾಡಲು ಸೂಚಿಸಲಾಗಿದೆ.

ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ನಿಮ್ಮ ಸಂಗಾತಿಯ ಮೇಲೆ ಅನಗತ್ಯ ಕೋಪವನ್ನು ತಪ್ಪಿಸಿ, ಇಲ್ಲದಿದ್ದರೆ ನಿಮ್ಮ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಹಣದ ವಿಷಯದಲ್ಲಿ ಈ ದಿನವು ದುಬಾರಿಯಾಗಲಿದೆ. ನಿಮ್ಮ ಯಾವುದೋ ಮಹತ್ವದ ವಸ್ತವೊಂದು ಕಳೆದು ಹೋಗುವ ಸಾಧ್ಯತೆ ಇದೆ, ಆದ್ದರಿಂದ ಅಮೂಲ್ಯವಾದ ದಾಖಲೆ ಅಥವಾ ವಸ್ತುಗಳನ್ನು ಜೋಪಾನವಾಗಿ ತೆಗೆದಿಡಿ . ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡ ಸಮಸ್ಯೆ ಇಲ್ಲ.

ಉತ್ತಮ ಬಣ್ಣ: ಬಿಳಿ

ಶುಭ ಸಂಖ್ಯೆ: 10

ಶುಭ ಸಮಯ: ಮಧ್ಯಾಹ್ನ 2 ರಿಂದ 7 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಇಂದು ಉದ್ಯೋಗಿಗಳಿಗೆ ತುಂಬಾ ಕಾರ್ಯನಿರತ ದಿನವಾಗಲಿದೆ. ಕೆಲಸದ ಹೊರೆ ಸ್ವಲ್ಪ ಹೆಚ್ಚಾಗಬಹುದು. ಕೆಲವು ಕಾರಣಗಳಿಂದಾಗಿ ನಿಮ್ಮ ಕೆಲವು ಕೆಲಸಗಳು ಅಪೂರ್ಣವಾಗಿರಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಆರ್ಥಿಕವಾಗಿ ಲಾಭ ಪಡೆಯಬಹುದು. ಪಾಲುದಾರರೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆ. ಹಣದ ಪರಿಸ್ಥಿತಿ ಸುಧಾರಿಸಬಹುದು. ಆದರೆ ಬರಬೇಕಾದ ಹಣ ಬರಲು ತಡವಾಗುವುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮಗೆ ಗ್ಯಾಸ್ಟ್ರಿಕ್, ಅಜೀರ್ಣ, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು. ಆದ್ದರಿಂದ ಇಂಥ ಸಮಸ್ಯೆ ಹೆಚ್ಚಿಸುವ ಆಹಾರ ದೂರವಿಡಿ.

ಉತ್ತಮ ಬಣ್ಣ: ಹಳದಿ

ಶುಭ ಸಂಖ್ಯೆ: 2

ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ನೀವು ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಿದರೆ ಇಂದು ಮಿಶ್ರಫಲ. ನಿಮ್ಮ ವ್ಯವಹಾರ ನಿರ್ಧಾರಗಳನ್ನು ತುಂಬಾ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಷ್ಟವಾಗಬಹುದು. ಮತ್ತೊಂದೆಡೆ ಇಂದು ಉದ್ಯೋಗಿಗಳಿಗೆ ಬಹಳ ಮುಖ್ಯವಾದ ದಿನವಾಗಲಿದೆ. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ನೀವು ಸಾಲ ಪಡೆದಿದ್ದರೆ, ಅದನ್ನು ಆದಷ್ಟು ಬೇಗ ಮರುಪಾವತಿಸಲು ಪ್ರಯತ್ನಿಸಿ. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಮನೆಯ ಸದಸ್ಯರ ಆರೋಗ್ಯವು ಸರಿಯಾಗಿ ಇಲ್ಲದಿದ್ದರೆ ಇಂದು ನಿಮ್ಮ ಕಾಳಜಿ ಸ್ವಲ್ಪ ಹೆಚ್ಚಾಗಬಹುದು. ನಿಮ್ಮ ಆರೋಗ್ಯದ ಮಟ್ಟಿಗೆ, ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿಡಲು ಪ್ರತಿದಿನ ಯೋಗ ಮತ್ತು ಧ್ಯಾನವನ್ನು ಮಾಡಿ.

ಉತ್ತಮ ಬಣ್ಣ: ಆಕಾಶ

ಶುಭ ಸಂಖ್ಯೆ: 16

ಶುಭ ಸಮಯ: ಸಂಜೆ 6 ರಿಂದ 9 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ನೀವು ವಿದೇಶಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ನಿಮಗೆ ಸವಾಲಿನ ದಿನವಾಗಲಿದೆ. ನಿಮ್ಮ ಮುಂದೆ ದೊಡ್ಡ ಸಮಸ್ಯೆ ಉದ್ಭವಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ತಾಳ್ಮೆಯಿಂದ ಕೆಲಸ ಮಾಡಲು ನಿಮಗೆ ಸೂಚಿಸಲಾಗಿದೆ. ಸಣ್ಣ ವ್ಯಾಪಾರಿಗಳಿಗೆ ಶುಭ ದಿನವಾಗಿರುತ್ತದೆ. ಚಿಕ್ಕ ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಇಂದು ನೀವು ಆರಾಮ ವಿಷಯಗಳಿಗಾಗಿ ಸ್ವಲ್ಪ ಹಣವನ್ನು ಖರ್ಚು ಮಾಡಬಹುದು. ಸಂಗಾತಿಯೊಂದಿಗೆ ಹೊರಗಡೆ ಸುತ್ತಾಡಲು ಹೋಗಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಮನೆಯಿಂದ ಹೊರಗೆ ಹೋಗುವಾಗ ಸಂಪೂರ್ಣ ಕಾಳಜಿ ವಹಿಸಿ, ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ.

ಉತ್ತಮ ಬಣ್ಣ: ನೀಲಿ

ಶುಭ ಸಂಖ್ಯೆ: 23

ಒಳ್ಳೆಯ ಸಮಯ: ಮಧ್ಯಾಹ್ನ 3 ರಿಂದ 10 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಇಂದು ನೀವು ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ತುಂಬಾ ಶ್ರಮಿಸುತ್ತೀರಿ. ಕೆಲಸದ ಬಗ್ಗೆ ಸ್ವಲ್ಪ ನಿರ್ಲಕ್ಷ್ಯ ವಹಿಸಬೇಡಿ. ಇಂದು ವ್ಯಾಪಾರಿಗಳಿಗೆ ಉತ್ತಮ ದಿನವಾಗಲಿದೆ. ನಿಮ್ಮ ವ್ಯವಹಾರವನ್ನು ವಿಸ್ತರಿಸಲು ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಹಣದ ವಿಷಯಕ್ಕೆ ಬಂದರೆ ಆತುರದ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ, ವಿಶೇಷವಾಗಿ ನೀವು ಸಾಲ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ. ಮನೆಯ ಹಿರಿಯರೊಂದಿಗೆ ನಿಮ್ಮ ಸಂಬಂಧ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ಕೆಟ್ಟ ಚಟವಿದ್ದರೆ ಸಾಧ್ಯವಾದಷ್ಟು ಬೇಗ ಅದನ್ನು ತೊಡೆದುಹಾಕಲು ಪ್ರಯತ್ನಿಸಿ.

ಉತ್ತಮ ಬಣ್ಣ: ಕಿತ್ತಳೆ

ಶುಭ ಸಂಖ್ಯೆ: 4

ಶುಭ ಸಮಯ: ಬೆಳಗ್ಗೆ 6 ರಿಂದ ಮಧ್ಯಾಹ್ನ 2: 30 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಉದ್ಯೋಗಿಗಳ ದಿನವು ತುಂಬಾ ಜನದಟ್ಟಣೆಯಿಂದ ಕೂಡಿರುತ್ತದೆ. ಇದ್ದಕ್ಕಿದ್ದಂತೆ ಇಂದು ನೀವು ಕೆಲಸಕ್ಕಾಗಿ ಪ್ರಯಾಣಿಸಬೇಕಾಗಬಹುದು. ನಿಮ್ಮ ಪ್ರಯಾಣವು ತುಂಬಾ ಆಹ್ಲಾದಕರವಾಗಿರುತ್ತದೆ. ನೀವು ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮತ್ತು ಹೊಸ ಕೋರ್ಸ್ ತೆಗೆದುಕೊಳ್ಳಲು ಬಯಸಿದರೆ, ಇಂದು ನಿಮ್ಮ ಯೋಜನೆಯನ್ನು ಮುಂದುವರಿಸಲು ಅನುಕೂಲಕರ ದಿನವಾಗಿದೆ. ವ್ಯಾಪಾರಿಗಳು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತೀರಿ, ವಿಶೇಷವಾಗಿ ನಿಮ್ಮ ಕೆಲಸವು ಷೇರು ಮಾರುಕಟ್ಟೆಗೆ ಸಂಬಂಧಿಸಿದ್ದಲ್ಲಿ ಆತುರಪಡಬೇಡಿ. ಮನೆಯಲ್ಲಿ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಇದದ್ರೆ ಮನೆಯ ವಾತಾವರಣ ಸುಧಾರಿಸುವ ಸಾಧ್ಯತೆ ಇದೆ. ಜಗಳಗಳು, ಚರ್ಚೆ ಇತ್ಯಾದಿಗಳನ್ನು ತಪ್ಪಿಸಿ. ಇಂದು ಆರ್ಥಿಕ ರಂಗದಲ್ಲಿ ಸಾಮಾನ್ಯವಾಗಿರಲಿದೆ. ಇನ್ನು ಆರೋಗ್ಯದ ಬಗ್ಗೆ ಹೇಳುವುದಾದರೆ ಇಂದು ಕಿವಿಗಳಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು.

ಉತ್ತಮ ಬಣ್ಣ: ಗಾಢ ಕೆಂಪು

ಶುಭ ಸಂಖ್ಯೆ: 30

ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ

ತುಲಾ ರಾಶಿ

ತುಲಾ ರಾಶಿ

ಇಂದು ನಿಮಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನಲ್ಲಿ ಅನೇಕ ಚಿಂತೆಗಳಿವೆ, ದುಃಖಿಸುವಿರಿ, ಆದರೆ ನೀವು ನಿಮ್ಮ ಮೇಲೆ ನಂಬಿಕೆ ಇಡುವುದು ಒಳ್ಳೆಯದು ಸೂಕ್ತ ಎಂದು ಹೇಳಲಾಗಿದೆ, ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ. ಶೀಘ್ರದಲ್ಲೇ ವಿಷಯಗಳು ನಿಮ್ಮ ಪರವಾಗಿ ಆಗುವುದು. ಹಣದ ಬಗ್ಗೆ ಹೇಳುವುದಾದರೆ ಇಂದು ನಿಮಗೆ ಸಾಮಾನ್ಯಕ್ಕಿಂತ ಉತ್ತಮ ದಿನವಾಗಿರುತ್ತದೆ. ಇಂದು ನೀವು ಸಣ್ಣ ಸಾಲವನ್ನು ಮರುಪಾವತಿಸಲು ಸಾಧ್ಯವಾಗುತ್ತದೆ. ಇಂದು ಸ್ವಲ್ಪ ಆಲಸ್ಯ ತೋರುವುದರಿಂದ ಕೆಲಸದಲ್ಲಿ ಸರಿಯಾಗಿ ಗಮನಹರಿಸಲು ಸಾಧ್ಯವಾಗುವುದಿಲ್ಲ. ಆದರೆ ಕೆಲಸದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡದಂತೆ ನಿಮಗೆ ಸೂಚಿಸಲಾಗಿದೆ. ವ್ಯಾಪಾರಿಗಳು ದೊಡ್ಡ ಹೂಡಿಕೆ ಮಾಡುವ ಬಗ್ಗೆ ಯೋಚಿಸುತ್ತಿದ್ದರೆ ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಬೇಕು. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಯಾವುದೇ ವಿವಾದಾತ್ಮಕ ವಿಷಯವನ್ನು ಚರ್ಚಿಸುವುದನ್ನು ತಪ್ಪಿಸಿ.

ಉತ್ತಮ ಬಣ್ಣ: ಕಂದು

ಶುಭ ಸಂಖ್ಯೆ: 8

ಶುಭ ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯಲ್ಲಿ ನಿಮ್ಮ ದಕ್ಷತೆ ಮತ್ತು ಸೃಜನಶೀಲತೆಯಿಂದ ನಿಮ್ಮ ಮೇಲಾಧಿಕಾರಿಗಳ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ನೀವು ಈ ರೀತಿ ಶ್ರಮಿಸುವುದನ್ನು ಮುಂದುವರಿಸಿದರೆ, ಶೀಘ್ರದಲ್ಲೇ ನೀವು ದೊಡ್ಡ ಬಡ್ತಿಯನ್ನು ಪಡೆಯಬಹುದು. ನೀವು ಉದ್ಯಮಿಯಾಗಿದ್ದರೆ ಮತ್ತು ನಿಮ್ಮ ವ್ಯವಹಾರವನ್ನು ಮುಂದುವರೆಸುವ ಬಗ್ಗೆ ಯೋಚಿಸುತ್ತಿದ್ದರೆ, ಇಂದು ಇದಕ್ಕೆ ಅನುಕೂಲಕರ ದಿನವಾಗಿದೆ. ನೀವು ಉತ್ತಮ ಅವಕಾಶವನ್ನು ಸಹ ಪಡೆಯಬಹುದು. ಹಣದ ಪರಿಸ್ಥಿತಿ ಬಲವಾಗಿರುತ್ತದೆ. ಆದಾಗ್ಯೂ ಅದನ್ನು ನೋಡಿ ಖರ್ಚು ಮಾಡಲು ನಿಮಗೆ ಸೂಚಿಸಲಾಗಿದೆ. ಇತರರ ಆಜ್ಞೆಯ ಮೇರೆಗೆ ನಿಮ್ಮ ಸ್ವಂತ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ವೈವಾಹಿಕ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳಾಗಬಹುದು. ನಿಮ್ಮ ಸಂಗಾತಿಯಿಂದ ನೀವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಇಂದು ನೀವು ಯಾವುದೇ ಪ್ರಮುಖ ಮಾನಸಿಕ ಆತಂಕವನ್ನು ತೊಡೆದುಹಾಕುವ ಸಾಧ್ಯತೆಯಿದೆ. ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ತುಂಬಾ ಬಲಶಾಲಿಯಾಗಿರುತ್ತೀರಿ.

ಉತ್ತಮ ಬಣ್ಣ: ಕೆಂಪು

ಶುಭ ಸಂಖ್ಯೆ: 19

ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ

ಧನು ರಾಶಿ

ಅದು ವೈಯಕ್ತಿಕ ಅಥವಾ ವೃತ್ತಿಪರ ಜೀವನವಾಗಲಿ, ಜವಾಬ್ದಾರಿಗಳ ಹೊರೆ ನಿಮ್ಮ ಮೇಲೆ ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ ನೀವು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತೀರಿ, ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳುವುದು ಉತ್ತಮ ಹಾಗೂ ಉತ್ತಮ ಯೋಜನೆಯ ಪ್ರಕಾರ ನಿಮ್ಮ ಎಲ್ಲಾ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಪ್ರಣಯ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವೆಂದು ತೋರುತ್ತದೆ. ನಿಮ್ಮ ಹಾಗೂ ಸಂಗಾತಿ ನಡುವೆ ಯಾವುದೋ ವಿಷಯಕ್ಕೆ ತಿಕ್ಕಾಟವಿದ್ದರೆ ಇಂದು ನಿಮ್ಮ ನಡುವೆ ಎಲ್ಲವೂ ಶಾಂತವಾಗಿರುತ್ತದೆ. ವೈವಾಹಿಕ ಜೀವನದಲ್ಲಿ ಮೂರನೇಯ ವ್ಯಕ್ತಿ ಮೂಗು ತೂರಿಸುವುದನ್ನು ತಪ್ಪಿಸಿ. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ಇಂದು ನೀವು ಉಳಿತಾಯದ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೀರಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಯಾಸ ಮತ್ತು ಒತ್ತಡವು ಆರೋಗ್ಯದ ಕುಸಿತಕ್ಕೆ ಕಾರಣವಾಗಬಹುದು.

ಉತ್ತಮ ಬಣ್ಣ: ಕ್ರೀಮ್

ಶುಭ ಸಂಖ್ಯೆ: 22

ಶುಭ ಸಮಯ: ಸಂಜೆ 4 ರಿಂದ ರಾತ್ರಿ 8:55

ಮಕರ ರಾಶಿ

ಮಕರ ರಾಶಿ

ವ್ಯವಹಾರಸ್ಥರಿಗೆ ಇಂದು ಬಹಳ ಪ್ರಯೋಜನಕಾರಿ ದಿನವಾಗಲಿದೆ, ವಿಶೇಷವಾಗಿ ನಿಮ್ಮ ವ್ಯವಹಾರವು ವಿದೇಶಿ ಕಂಪನಿಗಳೊಂದಿಗೆ ಸಂಪರ್ಕ ಹೊಂದಿದ್ದರೆ ಇಂದು ಅಪಾರ ಆರ್ಥಿಕ ಲಾಭವನ್ನು ಪಡೆಯಬಹುದು. ಉದ್ಯೋಗಿಗಳ ಅಪೂರ್ಣವಾದ ಕೆಲಸವೊಂದು ಇಂದು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ, ಹಾಗೆಯೇ ನಿಮ್ಮ ಮೇಲಧಿಕಾರಿಗಳ ಬೆಂಬಲವನ್ನು ನೀವು ಪಡೆಯುತ್ತೀರಿ. ಹಣದ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಅನಗತ್ಯ ಖರ್ಚುಗಳನ್ನು ನಿರ್ಬಂಧಿಸಿ. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಇಂದು ಪೋಷಕರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ನೀವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಅವರ ಆಶೀರ್ವಾದವನ್ನು ತೆಗೆದುಕೊಳ್ಳಿ. ಇಂದು ವಿದ್ಯುತ್ ಉಪಕರಣಗಳನ್ನು ಬಳಸುವಾಗ ನೀವು ಹೆಚ್ಚು ಜಾಗರೂಕರಾಗಿರಬೇಕು.

ಉತ್ತಮ ಬಣ್ಣ: ಹಳದಿ

ಶುಭ ಸಂಖ್ಯೆ: 26

ಶುಭ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ನೀವು ವೃತ್ತಿಜೀವನಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ಹೊಂದಿದ್ದರೆ ನೀವು ಉತ್ತಮ ಸಲಹೆಗಾರರಿಂದ ಸಲಹೆ ಪಡೆಯಬೇಕು. ನಿಮ್ಮದೇ ಆದ ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಯಾವುದೇ ಆತುರಪಡಬೇಡಿ. ನಿಮ್ಮ ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗಬಹುದು, ಆದ್ದರಿಂದ ನೀವು ಮಾನಸಿಕವಾಗಿ ಸಿದ್ಧರಾಗಿರಿ. ಇಂದು ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯಬೇಡಿ. ನೀವು ವ್ಯಾಪಾರ ಮಾಡಿದರೆ ಮತ್ತು ನಿಮಗೆ ಉತ್ತಮ ಲಾಭ ಸಿಗದಿದ್ದರೆ ಪ್ರಚಾರದ ಬಗ್ಗೆ ಹೆಚ್ಚಿನ ಗಮನ ಹರಿಸಲು ನಿಮಗೆ ಸೂಚಿಸಲಾಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನೀವು ಉತ್ತಮ ಆರೋಗ್ಯದಲ್ಲಿರುತ್ತೀರಿ.

ಶುಭ ಬಣ್ಣ: ನೇರಳೆ

ಶುಭ ಸಂಖ್ಯೆ: 14

ಒಳ್ಳೆಯ ಸಮಯ: ಸಂಜೆ 5:10 ರಿಂದ 9:50

 ಮೀನ ರಾಶಿ

ಮೀನ ರಾಶಿ

ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನ. ನಿಮ್ಮ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ನಿಮಗೆ ಸೂಚಿಸಲಾಗಿದೆ. ಸ್ನೇಹಿತರೇ, ನೀವು ಹೆಚ್ಚಿನ ಪ್ರಮಾಣದ ನೀರನ್ನು ಕೂಡ ಕುಡಿಯಬೇಕು. ಕುಟುಂಬ ಜೀವನದ ಬಗ್ಗೆ ಹೇಳುವುದಾದರೆ ನೀವು ಇಂದು ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವುದಾದರೆ ನಿಮ್ಮ ಹಿರಿಯರ ಸಲಹೆಯನ್ನು ಪಡೆಯಿರಿ. ಸಂಗಾತಿಯೊಂದಿಗೆ ಖುಷಿಯಾಗಿರುವಿರಿ. ಉದ್ಯೋಗಸ್ಥರು ತಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನೀವು ಕೆಲಸವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಕಾರ್ಯನಿರತ ದಿನವಾಗಲಿದೆ.

ಉತ್ತಮ ಬಣ್ಣ: ಗುಲಾಬಿ

ಶುಭ ಸಂಖ್ಯೆ: 7

ಶುಭ ಸಮಯ: ಸಂಜೆ 4:15 ರಿಂದ 10 ರವರೆಗೆ

English summary

Dina Bhavishya 10 April 2021

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Saturday, April 10, 2021, 4:00 [IST]
X