Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 12 Feb 2023: ಭಾನುವಾರ: ಕರ್ಕದವರಿಗೆ ಕೆಲಸದಲ್ಲಿ ಬದಲಾವಣೆಯ ಸಮಯ, ಉಳಿದ ರಾಶಿಗಳ ರಾಶಿಫಲ ಹೇಗಿದೆ ನೋಡಿ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಫೆಬ್ರವರಿ 12ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಫಲ್ಗುಣ
ಪಕ್ಷ: ಕೃಷ್ಣಪಕ್ಷ
ತಿಥಿ: ಬೆಳಗ್ಗೆ 9:45ರವರೆಗೆ ಷಷ್ಠಿ, ನಂತರ ಸಪ್ತಮಿ
ನಕ್ಷತ್ರ: ಸ್ವಾತಿ
ರಾಹುಕಾಲ: ಸಂಜೆ 04:57ರಿಂದ 06:25

ಮೇಷ ರಾಶಿ
ಈ ದಿನ ತುಂಬಾ ಚೆನ್ನಾಗಿರಲಿದೆ. ಈ ದಿನವು ಕಾರ್ಯನಿರತವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಸಂಬಂಧವನ್ನು ಉತ್ತಮವಾಗಿ ಇರಿಸಿಕೊಳ್ಳಲು ಪ್ರಯತ್ನಿಸಿ. ಸಣ್ಣ ವಿಷಯಗಳಿಗೆ ಜಗಳ ಒಳ್ಳೆಯದಲ್ಲ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಗ್ಗೆ4ರಿಂದ ಮಧ್ಯಾಹ್ನ 2:55ರವರೆಗೆ

ವೃಷಭ ರಾಶಿ'
ಉದ್ಯಮಿಗಳ ಆರ್ಥಿಕ ಸ್ಥಿತಿ ಸುಧಾರಿಸುವುದು. ಈ ದಿನ ನಿಮ್ಮ ಎಲ್ಲಾ ನಿರ್ಧಾರಗಳನ್ನು ನೀವು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಮನೆಯ ವಾತಾವರಣವು ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಲಿದೆ. ಆರೋಗ್ಯ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 12:15 ರಿಂದ ಸಂಜೆ 7:45 ರವರೆಗೆ

ಮಿಥುನ ರಾಶಿ
ಕೆಲವು ದಿನಗಳಿಂದ ನಿಮ್ಮ ಆರೋಗ್ಯವು ಸರಿಯಾಗಿಲ್ಲದಿದ್ದರೆ, ಇಂದು ಸ್ವಲ್ಪ ಸುಧಾರಣೆಯನ್ನು ಕಾಣಬಹುದು. ನೀವು ವಿಶ್ರಾಂತಿಯತ್ತ ಗಮನ ಹರಿಸುವುದು ಉತ್ತಮ. ಉದ್ಯೋಗಿಗಳ ದಿನವು ಸಾಮಾನ್ಯವಾಗಿರುತ್ತದೆ. ಮತ್ತೊಂದೆಡೆ, ಉದ್ಯಮಿಗಳು ಇಂದು ಉತ್ತಮ ಆರ್ಥಿಕ ಲಾಭಗಳನ್ನು ಪಡೆಯಬಹುದು, ವಿಶೇಷವಾಗಿ ನಿಮ್ಮ ವ್ಯಾಪಾರವು ಧಾನ್ಯಗಳಾಗಿದ್ದರೆ, ಇಂದು ನಿಮಗೆ ಲಾಭದಾಯಕವಾಗಿರುತ್ತದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯ ಪ್ರೀತಿಯ ನಡವಳಿಕೆಯು ನಿಮಗೆ ವಿಶೇಷ ಭಾವನೆಯನ್ನು ನೀಡುತ್ತದೆ. ಇಂದು ನೀವು ನಿಮ್ಮ ಆಲೋಚನೆಗಳನ್ನು ಪರಸ್ಪರ ಹಂಚಿಕೊಳ್ಳಲು ಅವಕಾಶವನ್ನು ಪಡೆಯುತ್ತೀರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಕರ್ಕ ರಾಶಿ
ಕೆಲಸದ ವಿಷಯದಲ್ಲಿ ಬದಲಾವಣೆಯ ಸಮಯ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಹಣಕಾಸಿನ ವಿಷಯಗಳಲ್ಲಿ, ನೀವು ತುಂಬಾ ಅಸಡ್ಡೆ ಮಾಡಬಾರದು. ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡುವಾಗ ನೀವು ಹೆಚ್ಚು ಜಾಗರೂಕರಾಗಿರಬೇಕು. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 8:40 ರಿಂದ ಮಧ್ಯಾಹ್ನ 3 ರವರೆಗೆ

ಸಿಂಹ ರಾಶಿ
ಉದ್ಯೋಗಸ್ಥರಿಗೆ ಇಂದು ಅತ್ಯಂತ ಮಹತ್ವದ ದಿನವಾಗಲಿದೆ. ಉದ್ಯಮಿಗಳು ಇಂದು ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯುತ್ತಾರೆ. ನಿನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 7:40 ರವರೆಗೆ

ಕನ್ಯಾ ರಾಶಿ
ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ವ್ಯಾಪಾರಸ್ಥರಿಗೆ ಇಂದು ತುಂಬಾ ಸವಾಲಿನ ದಿನವಾಗಿದೆ. ನಿಮ್ಮ ಯಾವುದೇ ಕೆಲಸದಲ್ಲಿ ಸರ್ಕಾರದ ಅಡಚಣೆ ಉಂಟಾಗಬಹುದು. ನಿಮ್ಮ ಈ ಸಮಸ್ಯೆ ತಾತ್ಕಾಲಿಕವಾದರೂ, ಹೆಚ್ಚು ಚಿಂತಿಸಬೇಡಿ. ನೀವು ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ವಿಶೇಷವಾಗಿ ತಂದೆಯೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 6:30 ರಿಂದ 8:15 ರವರೆಗೆ

ತುಲಾ ರಾಶಿ
ಇಂದು ಆರೋಗ್ಯದ ವಿಷಯದಲ್ಲಿ ಏರಿಳಿತಗಳಿರುತ್ತದೆ. ಕೆಲಸದ ಜೊತೆಗೆ ನಿಮ್ಮ ಬಗ್ಗೆಯೂ ಗಮನ ಹರಿಸುವುದು ಉತ್ತಮ. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗುವ ನಿರೀಕ್ಷೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಎಲ್ಲಾ ಕೆಲಸವನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಿ ಪ್ರಯತ್ನಿಸಿ, ವ್ಯಾಪಾರಸ್ಥರಿಗೂ ಈ ದಿನ ಒಳ್ಳೆಯದಿದೆ.
ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಇಂದು ಮನೆಯಲ್ಲಿ ಯಾವುದೇ ಶುಭ ಕಾರ್ಯಕ್ರಮವನ್ನು ಆಯೋಜಿಸಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ

ವೃಶ್ಚಿಕ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ವಾತಾವರಣ ಚೆನ್ನಾಗಿರುತ್ತದೆ, ಕೆಲಸದ ಬಗ್ಗೆ ನೋಡುವುದಾದರೆ ನಿಮ್ಮ ಮೇಲೆ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಕಿವಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ

ಧನು ರಾಶಿ
ಇಂದು ನೀವು ದೀರ್ಘ ಪ್ರಯಾಣ ಮಾಡಬಹುದು. ನೀವು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಅದಕ್ಕೆ ಈಗ ಸೂಕ್ತ ಸಮಯವಾಗಿದೆ. ಉದ್ಯಮಿಗಳು ತಮ್ಮ ವ್ಯಾಪಾರ ಯೋಜನೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನೀವು ವೈಮನಸ್ಸನ್ನು ಹೊಂದಿರಬಹುದು. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 4:30 ರಿಂದ ಮಧ್ಯಾಹ್ನ 3:30 ರವರೆಗೆ

ಮಕರ ರಾಶಿ
ವೈವಾಹಿಕ ಜೀವನ ಸಂತೋಷವಿರುತ್ತದೆ. ನಿಮ್ಮ ನಡುವಿನ ಪ್ರೀತಿ ಇನ್ನಷ್ಟು ಆಳವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ, ಶೀಘ್ರದಲ್ಲೇ ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಸಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2:20 ರವರೆಗೆ

ಕುಂಭ ರಾಶಿ
ಈ ಸಮಯದಲ್ಲಿ ಒತ್ತಡ ಅಧಿಕವಿರುತ್ತದೆ, ಅಸಡ್ಡೆ ವರ್ತನೆ ನಿಮಗೆ ನಷ್ಟ ಉಂಟು ಮಾಡಬಹುದು. ನೀವು ವ್ಯಾಪಾರಿಯಾಗಿದ್ದರೆ ಹಳೆಯ ಸ್ಟಾಕ್ ಅನ್ನು ತೆರವುಗೊಳಿಸಬೇಕು. ಆತುರ ಒಳ್ಳೆಯದಲ್ಲ. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.

ಮೀನ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಚೆನ್ನಾಗಿದೆ. ನಿಮ್ಮ ನಷ್ಟವನ್ನು ಸರಿದೂಗಿಸಲು ನಿಮಗೆ ಅವಕಾಶ ಸಿಗಬಹುದು. ಅದೇ ಸಮಯದಲ್ಲಿ, ಉದ್ಯೋಗಿಗಳ ಮೇಲೆ ಒತ್ತಡ ಹೆಚ್ಚಲಿದೆ. ನಿಮಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ನಿಮ್ಮಿಂದ ಹಿಂತೆಗೆದುಕೊಳ್ಳುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯವಾಗಿರಲು, ನಿಮ್ಮ ದೈನಂದಿನ ದಿನಚರಿಯನ್ನು ನೀವು ಬದಲಾಯಿಸಬೇಕಾಗಿದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 11 ರವರೆಗೆ



Click it and Unblock the Notifications