For Quick Alerts
ALLOW NOTIFICATIONS  
For Daily Alerts

Horoscope Today 15 Jan 2023: ಭಾನುವಾರ: ಮಕರ ಸಂಕ್ರಾಂತಿಯಂದು ನಿಮ್ಮ ರಾಶಿಫಲ ಹೇಗಿದೆ ನೋಡಿ

|

ಶುಭೋದಯ..... ಮಕರ ಸಂಕ್ರಾಂತಿ ಶುಭಾಶಯಗಳು.... ವೈದಿಕ ಶಾಸ್ತ್ರದ ಪ್ರಕಾರ ಜನವರಿ 15ರ ರಾಶಿಫಲ ನೋಡೋಣ:

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಮಾಘ
ಪಕ್ಷ: ಕೃಷ್ಣ ಪಕ್ಷ
ತಿಥಿ: ಅಷ್ಟಮಿ
ನಕ್ಷತ್ರ: ಚೈತ್ರಾ
ರಾಹುಕಾಲ: ಸಂಜೆ 04:46ರಿಂದ 06:12ರವರೆಗೆ

ಮೇಷ ರಾಶಿ'

ಮೇಷ ರಾಶಿ'

ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ, ಇದರಿಂದ ತುಂಬಾ ಕಿರಿಕಿರಿ ಅನಿಸುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.ಆರೋಗ್ಯದ ವಿಷಯ ದುರ್ಬಲವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಮಾಡಬೇಡಿ.

ಅದೃಷ್ಟದ ಬಣ್ಣ: ಕೆನೆ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ಸಮಯ: ಸಂಜೆ 6 ರಿಂದ 9:15 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಇಂದು ನೀವು ಮಾಡುವ ಕೆಲಸದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ನೀವು ಶೀಘ್ರದಲ್ಲೇ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಿದೆ, ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಆದರೂ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಆರೋಗ್ಯ ಕೂಡ ಸರಾಸರಿಯಾಗಿರುತ್ತದೆ.

ಅದೃಷ್ಟದ ಬಣ್ಣ: ಕೆಂಪು

ಅದೃಷ್ಟದ ಸಂಖ್ಯೆ: 15

ಅದೃಷ್ಟದ ಸಮಯ: ಮಧ್ಯಾಹ್ನ 2:15 ರಿಂದ ರಾತ್ರಿ 8:10 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ಆರ್ಥಿಕ ದೃಷ್ಟಿಯಿಂದ ಈ ದಿನ ಚೆನ್ನಾಗಿದೆ, ಸಣ್ಣ ಸಾಲದಿಂದ ಕೂಡ ಮುಕ್ತರಾಗಬಹುದು. ಕೆಲಸ ಕಾರ್ಯಗಳಲ್ಲಿ ತಪ್ಪುಗಳಾಗದಂತೆ ಎಚ್ಚರವಹಿಸಿ, ವ್ಯಾಪಾರಸ್ಥರು ಇಂದು ಉತ್ತಮ ಲಾಭವನ್ನು ಪಡೆಯಬಹುದು. ಸಂಗಾತಿ ಜೊತೆ ಭಿನ್ನಾಭಿಪ್ರಾಯ ಬಂದಾಗ ಕೋಪ ನಿಯಂತ್ರಿಸುವುದು ಒಳ್ಳೆಯದು. ಆರೋಗ್ಯದ ವಿಷಯದಲ್ಲಿ, ದಿನವು ಮಿಶ್ರಣವಾಗುವ ಸಾಧ್ಯತೆಯಿದೆ.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ: 31

ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ವಿದ್ಯಾರ್ಥಿಗಳು ಕಲಿಕೆಯತ್ತ ಸಂಪೂರ್ಣ ಗಮನ ಹರಿಸಿ, ಇಲ್ಲದಿದ್ದರೆ ನಿಮ್ಮ ಗುರಿ ಮುಟ್ಟಲು ಕಷ್ಟವಾಗುವುದು. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಉದ್ಯೋಗಿಗಳು ಈ ದಿನ ಜಾಗರೂಕರಾಗಿರಲು ಸೂಚಿಸಲಾಗಿದೆ. ಉದ್ಯಮಿಗಳ ಪ್ರಮುಖ ಸಮಸ್ಯೆ ಬಗೆಹಿಯಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಆರೋಗ್ಯದಲ್ಲಿ ಸುಧಾರಣೆಯ ಲಕ್ಷಣಗಳಿವೆ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 11

ಅದೃಷ್ಟದ ಸಮಯ: ಬೆಳಿಗ್ಗೆ 4:45 ರಿಂದ 10:25 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಇಂದು ನಿಮ್ಮ ಕೆಲವು ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು, ಈ ಕಾರಣದಿಂದಾಗಿ ನೀವು ತುಂಬಾ ಚಿಂತೆ ಮತ್ತು ಅಸಮಾಧಾನಗೊಳ್ಳುವಿರಿ. ಆದರೆ ನಿಮ್ಮ ಈ ಸಮಸ್ಯೆ ತಾತ್ಕಾಲಿಕವಾಗಿದೆ. ಸರಿಯಾದ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತಾ ಪರಿಹಾರವಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕಚೇರಿಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.

ಅದೃಷ್ಟದ ಬಣ್ಣ: ಗಾಢ ಹಳದಿ

ಅದೃಷ್ಟದ ಸಂಖ್ಯೆ: 14

ಅದೃಷ್ಟದ ಸಮಯ: ಸಂಜೆ 4:05 ರಿಂದ ರಾತ್ರಿ 9 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಕೆಲಸದ ಮುಂಭಾಗದಲ್ಲಿ ಇಂದು ನಿಮಗೆ ತುಂಬಾ ಅದೃಷ್ಟದ ದಿನ. ನಿಮ್ಮ ಕೆಲಸದಲ್ಲಿ ನೀವು ಬಯಸಿದ ಫಲ ಸಿಗಲಿದೆ. ಇಂದು, ಕಠಿಣ ಹೋರಾಟದ ನಂತರ, ಉದ್ಯಮಿಗಳು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಬಹುದು. ನೀವು ಉತ್ತಮ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯಲು ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಅದೃಷ್ಟದ ಬಣ್ಣ: ಕಿತ್ತಳೆ

ಅದೃಷ್ಟದ ಸಂಖ್ಯೆ: 20

ಅದೃಷ್ಟದ ಸಮಯ: ಬೆಳಗ್ಗೆ 8:40 ರಿಂದ ಮಧ್ಯಾಹ್ನ 12:30 ರವರೆಗೆ

 ತುಲಾ ರಾಶಿ

ತುಲಾ ರಾಶಿ

ಇಂದು ತುಲಾ ರಾಶಿಯವರ ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ ಆದರೆ ಬಜೆಟ್ ಮೀರಿ ಹೋಗದಂತೆ ನೋಡಿಕೊಳ್ಳಬೇಕು. ನಿಮ್ಮ ಕೆಲಸದ ಹೊರೆ ಕಡಿಮೆಯಾಗಲಿದೆ. ಉದ್ಯಮಿಗಳು ಇಂದು ಉತ್ತಮ ಅವಕಾಶವನ್ನು ಪಡೆಯಬಹುದು. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಬಿಡಿ, ವಿಶ್ರಾಂತಿಯತ್ತ ಗಮನ ಹರಿಸಿ.

ಅದೃಷ್ಟದ ಬಣ್ಣ: ಕೆನೆ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 7 ರವರೆಗೆ

 ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಇಂದು ನೀವು ದೀರ್ಘ ಪ್ರಯಾಣವನ್ನು ಮಾಡುವುದನ್ನು ತಪ್ಪಿಸುವುದು ಒಳ್ಳೆಯದು. ನೀವು ಕೆಲಸದ ಬಗ್ಗೆ ಹೆಚ್ಚು ಗಂಭೀರವಾಗಿರಬೇಕು. ಉದ್ಯೋಗವಿರಲಿ, ವ್ಯಾಪಾರವಿರಲಿ ಜಾಗರೂಕರಾಗಿರಿ. ಸ್ವಲ್ಪ ಅಜಾಗರೂಕತೆಯು ದೊಡ್ಡ ಹಾನಿಯನ್ನುಂಟುಮಾಡುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಅಗ್ಯತಕ್ಕಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಅದೃಷ್ಟದ ಬಣ್ಣ: ಗಾಢ ಗುಲಾಬಿ

ಅದೃಷ್ಟದ ಸಂಖ್ಯೆ: 4

ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 2:30 ರವರೆಗೆ

 ಧನು ರಾಶಿ

ಧನು ರಾಶಿ

ನಿಮ್ಮ ಯಾವುದೇ ಪ್ರಮುಖ ಕೆಲಸದಲ್ಲಿ ಅಡೆತಡೆಗಳಿದ್ದರೆ, ಇಂದು ಬಗೆಹರಿಯಲಿದೆ, ಇದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ಅದೃಷ್ಟದ ದಿನ, ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ವ್ಯಾಪಾರಸ್ಥರು ಕಾನೂನು ವಿಷಯಗಳಲ್ಲಿ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಆತ್ಮೀಯರ ಬೆಂಬಲ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಲಿದೆ.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 38

ಅದೃಷ್ಟದ ಸಮಯ: ಬೆಳಿಗ್ಗೆ 7:55 ರಿಂದ 10:30 ರವರೆಗೆ

ಮಕರ ರಾಶಿ

ಮಕರ ರಾಶಿ

ಇಂದು ಅದೃಷ್ಟದ ದಿನ, ನಿಮ್ಮ ಕೆಲಸ ಕಾರ್ಯಗಳು ನೀವು ಬಯಸಿದಂತೆ ಪೂರ್ಣವಾಗಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಸ್ಥರು ಇಂದು ಬಹಳಷ್ಟು ಓಡಬೇಕಾಗಬಹುದು. ನಿಮ್ಮ ಕೆಲವು ಕೆಲಸಗಳಲ್ಲಿ ಕಾಗದದ ಅಡಚಣೆಗಳಿರಬಹುದು. ಇಂದು ಆರ್ಥಿಕ ರಂಗದಲ್ಲಿ ತುಂಬಾ ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳು ಉಂಟಾಗಬಹುದು. ನಿಮ್ಮ ಸಂಗಾತಿಯೊಂದಿಗೆ ವಾದ ಮಾಡುವುದನ್ನು ತಪ್ಪಿಸಿ. ಇಂದು ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 19

ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 4 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ರಿಯಲ್ ಎಸ್ಟೇಟ್‌ ವ್ಯವಹಾರ ಮಾಡುವವರಿಗೆ ಒಳ್ಳೆಯ ದಿನ. . ಷೇರು ಮಾರುಕಟ್ಟೆಯೊಂದಿಗೆ ಸಂಬಂಧ ಹೊಂದಿದ್ದರೆ, ಇಂದು ನೀವು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ದುಡಿಯುವ ಜನರಿಗೆ ದಿನವು ಸಾಮಾನ್ಯವಾಗಿರುತ್ತದೆ. ಹಣದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ವಿಶೇಷವಾಗಿ ಇಂದು ನೀವು ಯಾವುದೇ ದೊಡ್ಡ ಹಣಕಾಸಿನ ವಹಿವಾಟು ಮಾಡದಿದ್ದರೆ ಒಳ್ಳೆಯದು. ಮನೆಯ ವಾತಾವರಣ ಉದ್ವಿಗ್ನತೆಯಿಂದ ಕೂಡಿರುತ್ತದೆ. ಅನಗತ್ಯ ಚಿಂತೆಗಳಿಂದ ದೂರವಿರಿ.

ಅದೃಷ್ಟದ ಬಣ್ಣ: ನೀಲಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ

ಮೀನ ರಾಶಿ

ಮೀನ ರಾಶಿ

ಕೆಲಸದ ಮುಂಭಾಗದಲ್ಲಿ, ಇಂದು ಮಿಶ್ರ ಫಲಿತಾಂಶ.ಮನಸ್ಸಿನಲ್ಲಿ ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳೂ ಬರಬಹುದು, ಚಿಂತೆ ಬಿಡಿ. ವ್ಯಾಪಾರಸ್ಥರು ಜಾಗ್ರತೆವಹಿಸದಿದ್ದರೆ ನಷ್ಟ ಉಂಟಾಗಬಹುದು. ಯಾವುದೇ ದೊಡ್ಡ ಖರ್ಚು ಮಾಡುವುದನ್ನು ತಪ್ಪಿಸಿ. ಮನೆಯಲ್ಲಿ ಸಣ್ಣ ವಿಷಯಗಳಿಗೆ ಕೋಪಗೊಳ್ಳಲು ಹೋಗಬೇಡಿ. ಆರೋಗ್ಯ ದುರ್ಬಲವಾಗಿರಬಹುದು.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 29

ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 12:30 ರವರೆಗೆ

English summary

Dina Bhavishya -15 January 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 15 January 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
X
Desktop Bottom Promotion