Horoscope Today 16 December 2022: ಶುಕ್ರವಾರ: ದ್ವಾದಶ ರಾಶಿಗಳ ದಿನದ ರಾಶಿಫಲ ಹೇಗಿದೆ?

ಶುಭೋದಯ.....ಶುಕ್ರವಾರ ಲಕ್ಷ್ಮಿಯನ್ನು ಆರಾಧಿಸುತ್ತಾ, ನಿಮ್ಮೆಲ್ಲಾ ಒಳ್ಳೆಯ ಕಾರ್ಯಗಳಿಗೆ ಅವಳ ಕೃಪೆ ಇರಲಿ ಎಂದು ಹೇಳುತ್ತಾ ಸೆಪ್ಟೆಂಬರ್ 16 ಶುಕ್ರವಾರದ ರಾಶಿಫಲ ನೋಡೋಣ..

daily horoscope
.

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಮಾರ್ಗಶಿರ
ಪಕ್ಷ: ಕೃಷ್ಣ
ತಿಥಿ: ಅಷ್ಟಮಿ
ನಕ್ಷತ್ರ: ಬೆಳಗ್ಗೆ 7.35ರವರೆಗೆ ಪೂರ್ವ ಫಲ್ಗುಣಿ ನಂತರ ಉತ್ತರ ಫಲ್ಗುಣಿ
ರಾಹುಕಾಲ: ಬೆಳಗ್ಗೆ 10:50ರಿಂದ ಮಧ್ಯಾಹ್ನ 12:15ರವರೆಗೆ
ಸೂರ್ಯೋದಯ: ಬೆಳಿಗ್ಗೆ 6.34
ಸೂರ್ಯಾಸ್ತ: 5.56

ಮೇಷ ರಾಶಿ

ಮೇಷ ರಾಶಿ

ನೀವು ಕಚೇರಿಯಲ್ಲಿ ಪ್ರಮುಖ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರೆ, ಇಂದು ನಿಮ್ಮ ಕೆಲಸವು ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ. ನೀವು ಉನ್ನತ ಅಧಿಕಾರಿಗಳಿಂದ ಸಾಕಷ್ಟು ಪ್ರಶಂಸೆಯನ್ನು ಪಡೆಯಬಹುದು. ಇಂದು ನೀವು ತುಂಬಾ ಆತ್ಮವಿಶ್ವಾಸದಿಂದ ಇರುತ್ತೀರಿ. ಉದ್ಯಮಿಗಳ ಯಾವುದೇ ಪ್ರಮುಖ ಸಮಸ್ಯೆ ಬಗೆಹರಿಯುವುದು. ಇಂದು ನಿಮ್ಮ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನೀವು ಹಣ ಸಂಪಾದಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ಮನೆಯ ಸದಸ್ಯರ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ಹೆಚ್ಚಾಗಬಹುದು. ನಿಮಗೂ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ

 ವೃಷಭ ರಾಶಿ

ವೃಷಭ ರಾಶಿ

ಇಂದು ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಸಾಕಷ್ಟು ಸಮಯವನ್ನು ಕಳೆಯಲು ಸಾಧ್ಯವಾಗುವುದು. ಹಣದ ವಿಷಯದಲ್ಲಿ ನಿಮಗೆ ಈ ದಿನ ತುಂಬಾ ದುಬಾರಿಯಾಗಲಿದೆ. ಆದರೂ ಯಾವುದೇ ದೊಡ್ಡ ಆರ್ಥಿಕ ಸಮಸ್ಯೆ ಇರುವುದಿಲ್ಲ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನೀವು ಉದ್ಯೋಗವನ್ನು ಮಾಡುತ್ತಿದ್ದರೆ ಮತ್ತು ನಿಮ್ಮ ಬಡ್ತಿಗಾಗಿ ಹೊಸ ಕೋರ್ಸ್ ಇತ್ಯಾದಿಗಳನ್ನು ಮಾಡಲು ಯೋಚಿಸುತ್ತಿದ್ದರೆ, ಈ ಸಮಯ ಸೂಕ್ತವಾಗಿದೆ. ಮತ್ತೊಂದೆಡೆ, ವ್ಯಾಪಾರಸ್ಥರು ದೊಡ್ಡ ಗ್ರಾಹಕರೊಂದಿಗೆ ವ್ಯವಹರಿಸಲು ಅವಕಾಶವನ್ನು ಪಡೆಯಬಹುದು. ದಿನದ ಎರಡನೇ ಭಾಗದಲ್ಲಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ನಿಮ್ಮ ಪ್ರಯಾಣವು ಕೆಲಸಕ್ಕೆ ಸಂಬಂಧಿಸಿರಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.

ಅದೃಷ್ಟದ ಬಣ್ಣ: ಗುಲಾಬಿ

ಅದೃಷ್ಟದ ಸಂಖ್ಯೆ: 35

ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ರಾತ್ರಿ 8:45 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ನೀವು ಯಾರನ್ನಾದರೂ ಇಷ್ಟಪಡುತ್ತಿದ್ದರೆ ಮದುವೆಗೆ ನಿಮ್ಮ ಕುಟುಂಬದ ಸದಸ್ಯರ ಸಂಪೂರ್ಣ ಬೆಂಬಲವನ್ನು ನೀವು ಪಡೆಯಬಹುದು. ಜೀವನ ಸಂಗಾತಿಯಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಉದ್ಯೋಗಿಗಳು ತಮ್ಮ ಯಾವುದೇ ಕೆಲಸವನ್ನುಅಪೂರ್ಣವಾಗಿ ಬಿಡದಂತೆ ಸೂಚಿಸಲಾಗಿದೆ. ವ್ಯಾಪಾರಸ್ಥರು ಹಣದ ವಿಷಯದಲ್ಲಿ ಆತುರದಿಂದ ದೂರವಿರಲು ಸಲಹೆ ನೀಡಲಾಗಿದೆ. ಆರೋಗ್ಯದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಸ್ವಲ್ಪವೂ ನಿರ್ಲಕ್ಷ್ಯ ಮಾಡಬೇಡಿ.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ದೀರ್ಘಕಾಲದಿಂದ ಉದ್ಯೋಗವನ್ನು ಹುಡುಕುತ್ತಿದ್ದರೆ, ಇಂದು ನಿಮಗೆ ದಿನ ಒಳ್ಳೆಯದಿದೆ, ಜಾಬ್‌ ಆಫರ್ ಬರಬಹುದು. ಉದ್ಯಮಿಗಳು ತಮ್ಮ ವ್ಯವಹಾರವನ್ನು ಮುಂದುವರಿಸಲು ಯೋಜಿಸುತ್ತಿದ್ದರೆ, ಈ ಸಮಯವು ಅನುಕೂಲಕರವಾಗಿರುತ್ತದೆ. ನೀವು ಯಶಸ್ಸನ್ನು ಪಡೆಯಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮಗೆ ತಲೆನೋವು, ಜ್ವರ ಮುಂತಾದ ಸಮಸ್ಯೆಗಳಿರಬಹುದು.

ಅದೃಷ್ಟದ ಬಣ್ಣ: ಕೆಂಪು

ಅದೃಷ್ಟದ ಸಂಖ್ಯೆ: 7

ಅದೃಷ್ಟದ ಸಮಯ: ಸಂಜೆ 7 ರಿಂದ 9:25 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಕಚೇರಿಯಲ್ಲಿ ನಿಮ್ಮ ಸೃಜನಶೀಲತೆಯನ್ನು ತೋರಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಇಂದು ಬಾಸ್ ನಿಮ್ಮ ಬಗ್ಗೆ ತುಂಬಾ ಪ್ರಭಾವಿತರಾಗುತ್ತಾರೆ. ಉದ್ಯಮಿಗಳು ರಿಸ್ಕ್ ಇರುವ ಆರ್ಥಿಕ ಯೋಜನೆಗಳಲ್ಲಿ ಸಿಲುಕಿಕೊಳ್ಳದಿದ್ದರೆ ಒಳ್ಳೆಯದು. ಯಾವುದೇ ವ್ಯವಹಾರ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ನೀವು ಇದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತೀರಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಸಮಯಕ್ಕೆ ಸರಿಯಾಗಿ ಊಟ ಮಾಡಿ.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 19

ಅದೃಷ್ಟದ ಸಮಯ: ಬೆಳಗ್ಗೆ 4:15 ರಿಂದ ಮಧ್ಯಾಹ್ನ 1 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ನಿಮ್ಮ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಸಲಹೆ ನೀಡಗುವುದು. ಇಂದು ನಿಮಗೆ ಹೆಚ್ಚು ಕೆಲಸವಿಲ್ಲದಿದ್ದರೆ, ಒಳ್ಳೆಯ ಪುಸ್ತಕವನ್ನು ಓದಿ ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯಿರಿ. ಖಾಲಿ ಕುಳಿತಾಗ ಬೇಡದ ವಿಷಯಗಳನ್ನು ಯೋಚಿಸುವುದನ್ನು ತಪ್ಪಿಸಿ. ಕೋಪ ಮತ್ತು ದುರಹಂಕಾರದಿಂದ ಪರಿಸ್ಥಿತಿಗಳು ಕೆಟ್ಟದಾಗಬಹುದು. ವ್ಯಾಪಾರರಿಗಳಿಗೆ ಉತ್ತಮ ಆರ್ಥಿಕ ಲಾಭವಿದೆ. ನಿಮಗೆ ಮೈಗ್ರೇನ್ ಸಮಸ್ಯೆಯಿದ್ದರೆ, ಎಚ್ಚರದಿಂದಿರಿ.

ಅದೃಷ್ಟದ ಬಣ್ಣ: ತಿಳಿ ಗುಲಾಬಿ

ಅದೃಷ್ಟದ ಸಂಖ್ಯೆ: 21

ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 1:30 ರವರೆಗೆ

ತುಲಾ ರಾಶಿ

ತುಲಾ ರಾಶಿ

ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ನೀವು ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯಬಹುದು. ಉದ್ಯಮಿಗಳಿಗೆ ಈ ದಿನದ ಪ್ರಯಾಣವು ಬಹಳ ಮುಖ್ಯ ಮತ್ತು ಪ್ರಯೋಜನಕಾರಿಯಾಗಿದೆ. ಉದ್ಯೋಗಸ್ಥರಿಗೂ ಈ ದಿನ ಚೆನ್ನಾಗಿದೆ. ಹಣದ ವಿಷಯದಲ್ಲಿ ಅದೃಷ್ಟ ನಿಮ್ಮ ಜೊತೆಗಿದೆ. ಕಡಿಮೆ ಶ್ರಮದಿಂದ ಒಳ್ಳೆಯ ಲಾಭ ಪಡೆಯಬಹುದು, ಆರೋಗ್ಯದ ವಿಷಯದಲ್ಲಿ ಆಹಾರಕ್ರಮದ ಕಡೆ ಗಮನ ಹರಿಸಿ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟ ಸಂಖ್ಯೆ: 38

ಅದೃಷ್ಟದ ಸಮಯ: ಸಂಜೆ 7 ರಿಂದ ರಾತ್ರಿ 9 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಕಚೇರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ನೀವು ಯಾವುದೇ ರೀತಿಯ ನಿರ್ಲಕ್ಷ್ಯ ಬೇಡ. ಉದ್ಯಮಿಗಳ ಆರ್ಥಿಕ ಚಿಂತೆ ದೂರಾಗಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷವಿರುತ್ತದೆ. ಹಣದ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ನಿಮ್ಮ ಆರೋಗ್ಯ ಕ್ಷೀಣಿಸುವ ಲಕ್ಷಣಗಳಿವೆ.

ಅದೃಷ್ಟದ ಬಣ್ಣ: ಹಸಿರು

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ

ಧನು ರಾಶಿ

ಧನು ರಾಶಿ

ಉದ್ಯೋಗಿಗಳಿಗೆ ಕೆಲವು ಹೊಸ ಜವಾಬ್ದಾರಿಗಳು ಪಡೆಯಬಹುದು. ನಿಮ್ಮ ಸಕಾರಾತ್ಮಕತೆ ಮತ್ತು ಉತ್ಸಾಹವನ್ನು ನೋಡಿ, ಬಾಸ್ ನಿಮ್ಮ ಬಗ್ಗೆ ತುಂಬಾ ಪ್ರಭಾವಿತರಾಗಬಹುದು. ನೀವು ಶೀಘ್ರದಲ್ಲೇ ಉತ್ತಮ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ. ಆಸ್ತಿ, ಹೋಟೆಲ್ ಅಥವಾ ರೆಸ್ಟೋರೆಂಟ್, ಚಿನ್ನ-ಬೆಳ್ಳಿ, ಎಲೆಕ್ಟ್ರಾನಿಕ್ಸ್ ಇತ್ಯಾದಿಗಳಲ್ಲಿ ಕೆಲಸ ಮಾಡುವ ಜನರು ಇಂದು ದೊಡ್ಡ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಕೆಲಸದಲ್ಲಿ ಬೆಳವಣಿಗೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿದೆ.

ಅದೃಷ್ಟದ ಬಣ್ಣ: ಗಾಢ ನೀಲಿ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಮಕರ ರಾಶಿ

ಮಕರ ರಾಶಿ

ಇಂದು ಮಕರ ರಾಶಿಯವರಿಗೆ ದಿನ ಚೆನ್ನಾಗಿಎ. ಇಂದು ನೀವು ನಿಮಗಾಗಿ ಹೊಸ ಬಟ್ಟೆ ಮತ್ತು ಆಭರಣಗಳನ್ನು ಸಹ ಖರೀದಿಸಬಹುದು. ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ವ್ಯಾಪಾರಸ್ಥರಿಗೆ ಇಂದು ಸರಾಸರಿ ದಿನವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ದಿನ ಅನುಕೂಲಕರ.

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 11

ಅದೃಷ್ಟದ ಸಮಯ: ಬೆಳಿಗ್ಗೆ 4:20 ರಿಂದ ಮಧ್ಯಾಹ್ನ 12 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸುಧಾರಣೆ ಕಂಡುಬರಬಹುದು. ಇಂದು ನೀವು ಪರಸ್ಪರ ಸಾಕಷ್ಟು ಸಮಯ ಕಳೆಯಲು ಸಾಧ್ಯವಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ, ನೀವು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಸ್ವಲ್ಪ ನಿರ್ಲಕ್ಷ್ಯವು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ನೀವು ಯಾವುದೇ ಕೆಲಸವನ್ನು ಯೋಚಿಸದೆ ಮಾಡದಿದ್ದರೆ ಅದು ಉತ್ತಮವಾಗಿರುತ್ತದೆ. ಅನಾರೋಗ್ಯದ ಕಾರಣ ನಿಮ್ಮ ದಿನನಿತ್ಯದ ಯೋಜನೆಗಳಿಗೆ ಅಡ್ಡಿಯಾಗಬಹುದು.

ಅದೃಷ್ಟದ ಬಣ್ಣ: ನೀಲಿ

ಅದೃಷ್ಟದ ಸಂಖ್ಯೆ: 20

ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2:05 ರವರೆಗೆ

ಮೀನ ರಾಶಿ

ಮೀನ ರಾಶಿ

ಉದ್ಯೋಗಸ್ಥರ ಶ್ರಮಕ್ಕೆ ಸಫಲತೆ ಸಿಗಲಿದೆ. ನೀವು ಕಚೇರಿಯಲ್ಲಿ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮಿಗಳ ಆರ್ಥಿಕ ಪರಿಸ್ಥಿತಿಯಲ್ಲಿ ಉತ್ಕರ್ಷದ ಲಕ್ಷಣಗಳು ಕಂಡುಬರುತ್ತಿವೆ. ಕುಟುಂಬ ಜೀವನದಲ್ಲಿ ಖುಷಿ ಇರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು.

ಅದೃಷ್ಟ ಬಣ್ಣ: ಹಳದಿ

ಅದೃಷ್ಟ ಸಂಖ್ಯೆ: 24

ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 3:45 ರವರೆಗೆ

English summary

Dina Bhavishya -16 December 2022 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 16 December 2022 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Friday, December 16, 2022, 6:54 [IST]
X
Desktop Bottom Promotion