Horoscope Today 16 Feb 2023: ಗುರುವಾರ: ವೃಷಭ ರಾಶಿಯವರೇ ಕೆಲಸದ ಸ್ಥಳದಲ್ಲಿ ಜಾಗ್ರತೆ, ಉಳಿದ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಫೆಬ್ರವರಿ 16ರ ರಾಶಿಫಲ ನೋಡೋಣ:

ಮೇಷ ರಾಶಿ

ಮೇಷ ರಾಶಿ

ಈ ದಿನ ತುಂಬಾ ಬಿಡುವಿಲ್ಲದ ಕೆಲಸವಿರುತ್ತದೆ. ಈ ದಿನದ ಕೆಲಸದ ಬಗ್ಗೆ ಮೊದಲೇ ಪ್ಲ್ಯಾನ್ ಮಾಡಿದರೆ ಒಳ್ಳೆಯದು, ಹಣಕಾಸಿನ ಸ್ಥಿತಿಯು ನಿಮ್ಮ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಉಳಿತಾಯದ ಕಡೆ ಹೆಚ್ಚು ಗಮನ ಹರಿಸಬೇಕು. ನೀವು ಕ್ರೆಡಿಟ್ ವಹಿವಾಟುಗಳನ್ನು ತಪ್ಪಿಸಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 8

ಅದೃಷ್ಟದ ಸಮಯ: ಬೆಳಿಗ್ಗೆ 4:30 ರಿಂದ ಮಧ್ಯಾಹ್ನ 3:30 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಈ ದಿನ ಕೆಲಸದ ವಿಷಯಲದಲ್ಲಿ ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಕಚೇರಿಯಲ್ಲಿ ಆತುರ ಮತ್ತು ಗಾಬರಿಯಿಂದ ಯಾವುದೇ ಕೆಲಸ ಮಾಡಬೇಡಿ. ಒಂದು ಸಣ್ಣ ತಪ್ಪು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಮನೆಯ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ನಿಮ್ಮ ಪ್ರೀತಿಪಾತ್ರರೊಂದಿಗೆ ಉತ್ತಮ ಸಂಬಂಧವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 31

ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2:20 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ನಿಮ್ಮ ಆರೋಗ್ಯವು ಕೆಲವು ದಿನಗಳಿಂದ ದುರ್ಬಲವಾಗಿದ್ದರೆ ವಿಶ್ರಾಂತಿ ಕಡೆ ಗಮನ ಕೊಡಿ, ನಿರ್ಲಕ್ಷ್ಯವು ದುಬಾರಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಯಾವುದೇ ಆತುರ ಬೇಡ. ನೀವು ದೊಡ್ಡ ವಹಿವಾಟು ನಡೆಸಲಿದ್ದರೆ, ತುಂಬಾ ಜಾಗರೂಕರಾಗಿರಿ. ಸಣ್ಣ ವಿಚಾರದಲ್ಲಿ ಸಂಗಾತಿಯೊಂದಿಗೆ ವಾಗ್ವಾದ ಉಂಟಾಗಬಹುದು. ನಿಮ್ಮ ಕೋಪವನ್ನು ನಿಯಂತ್ರಿಸಲು ಸಲಹೆ ನೀಡಲಾಗಿದೆ. ಇಂದು ಕೆಲಸದಲ್ಲಿ ಮಿಶ್ರ ಫಲಿತಾಂಶವಿರಬಹುದು.

ಅದೃಷ್ಟದ ಬಣ್ಣ: ಕೆನೆ

ಅದೃಷ್ಟದ ಸಂಖ್ಯೆ: 30

ಅದೃಷ್ಟದ ಸಮಯ: ಬೆಳಿಗ್ಗೆ 5:45 ರಿಂದ ಮಧ್ಯಾಹ್ನ 12:35 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ಇಂದು ನಿಮಗೆ ತುಂಬಾ ವಿಶೇಷವಾಗಿರುತ್ತದೆ. ವೈವಾಹಿಕ ಜೀವನದಲ್ಲಿ ಖುಷಿ ಇರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಕಛೇರಿಯಲ್ಲಿರುವ ಬಾಸ್ ನಿಮ್ಮ ಕಾರ್ಯಕ್ಷಮತೆಯಿಂದ ಸಾಕಷ್ಟು ತೃಪ್ತರಾಗುತ್ತಾರೆ. ಇಂದು ನೀವು ಅವರಿಂದ ಕೆಲವು ಉತ್ತಮ ಸಲಹೆಗಳನ್ನು ಪಡೆಯಬಹುದು. ವ್ಯಾಪಾರಿಗಳು ನಿರೀಕ್ಷೆಯಂತೆ ಫಲಿತಾಂಶವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಅದೃಷ್ಟದ ಬಣ್ಣ: ಗಾಢ ಕೆಂಪು

ಅದೃಷ್ಟದ ಸಂಖ್ಯೆ: 25

ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ನೀವು ಕೆಲವು ದಿನಗಳಿಂದ ಏನಾದರೂ ಚಿಂತೆ ಮಾಡುತ್ತಿದ್ದರೆ, ಇಂದು ನಿಮ್ಮ ಚಿಂತೆ ದೂರವಾಗಬಹುದು. ನೀವು ಮಾನಸಿಕವಾಗಿ ಉತ್ತಮವಾಗುತ್ತೀರಿ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನೀವು ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳುತ್ತೀರಿ. ಅಲ್ಲದೆ, ಇಂದು ನಿಮ್ಮ ಸಂಪೂರ್ಣ ಗಮನವು ನಿಮ್ಮ ಕೆಲಸದ ಮೇಲಿರುತ್ತದೆ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಆರ್ಥಿಕ ಸ್ಥಿತಿ ಸಹಜವಾಗಿರಲಿದೆ. ಪ್ರತಿದಿನ ವ್ಯಾಯಾಮದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:15 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಇಂದು ಸವಾಲಿನ ದಿನ. ಕೆಲಸದ ಸ್ಥಳದಲ್ಲಿ ಜಾಗ್ರತೆವಹಿಸಿ. ನಿಮ್ಮ ಕೋಪ ನಿಯಂತ್ರಿಸುವುದು ಒಳ್ಳೆಯದು. ಮನೆಯ ಸದಸ್ಯರ ಆರೋಗ್ಯ ಹಠಾತ್ ಕ್ಷೀಣಿಸುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಆಯಾಸ ಮತ್ತು ಒತ್ತಡದಿಂದಾಗಿ ನಿಮ್ಮ ಆರೋಗ್ಯವು ದುರ್ಬಲವಾಗಿರುತ್ತದೆ.

ಅದೃಷ್ಟದ ಬಣ್ಣ: ಹಸಿರು

ಅದೃಷ್ಟದ ಸಂಖ್ಯೆ: 7

ಅದೃಷ್ಟದ ಸಮಯ: ಸಂಜೆ 7 ರಿಂದ 9:25 ರವರೆಗೆ

ತುಲಾ ರಾಶಿ

ತುಲಾ ರಾಶಿ

ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ವೈಯಕ್ತಿಕ ಅಥವಾ ವೃತ್ತಿಪರ ಜೀವನದ ಜವಾಬ್ದಾರಿಗಳು ಹೆಚಚಾಗಲಿದೆ. ಆದರೆ ನಿಮ್ಮ ಎಲ್ಲಾ ಜವಾಬ್ದಾರಿಗಳನ್ನು ಚೆನ್ನಾಗಿ ನಿಭಾಯಿಸಲು ನಿಮಗೆ ಸಾಧ್ಯವಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಹೊಸ ಆದಾಯದ ಮೂಲವನ್ನು ಸಹ ಪಡೆಯಬಹುದು. ಕಚೇರಿಯಲ್ಲಿ ನಿಮ್ಮ ಕೆಲಸವನ್ನು ನೋಡಿ ಮೆಚ್ಚಿಕೊಳ್ಳುತ್ತಾರೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. ಆರೋಗ್ಯದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ ಎಂದು ಸಾಬೀತುಪಡಿಸುತ್ತದೆ..

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 19

ಅದೃಷ್ಟ ಸಮಯ: ಬೆಳಿಗ್ಗೆ 4:20 ರಿಂದ 11 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಹಣಕಾಸಿನ ಪರಿಸ್ಥಿತಿಯಲ್ಲಿ ದೊಡ್ಡ ಜಿಗಿತದ ಸಾಧ್ಯತೆಯಿದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ಮುಕ್ತಿ ಪಡೆಯುತ್ತೀರಿ. ನೀವು ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ತಮಾಷೆ ಮಾಡುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ಸಣ್ಣ ವಿಷಯವು ದೊಡ್ಡದಾಗಬಹುದು. ಇದು ನಿಮ್ಮ ಕೆಲಸದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ನಡವಳಿಕೆಯನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ತಪ್ಪು ನಡವಳಿಕೆಯು ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ನೋಯಿಸಬಹುದು. ಇಂದು ಆರೋಗ್ಯದ ವಿಷಯವು ಸ್ವಲ್ಪ ದುರ್ಬಲವಾಗಿರುತ್ತದೆ.

ಅದೃಷ್ಟದ ಬಣ್ಣ: ಕಿತ್ತಳೆ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:55 ರವರೆಗೆ

ಧನು ರಾಶಿ

ಧನು ರಾಶಿ

ಇಂದು ನಿಮಗೆ ಹೊಸ ಅವಕಾಶಗಳು ಬರಲಿದೆ. ಉದ್ಯಮಿಗಳು ತಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಉತ್ತಮ ಅವಕಾಶವನ್ನು ಪಡೆಯುತ್ತಾರೆ. ನೀವು ವಿದೇಶಿ ಕಂಪನಿಗಳಿಗೆ ಸಂಬಂಧಿಸಿದ ವ್ಯವಹಾರವನ್ನು ಮಾಡುತ್ತಿದ್ದರೆ, ಇಂದು ನಿಮಗೆ ತುಂಬಾ ಲಾಭದಾಯಕವಾಗಿರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಸೌಕರ್ಯಗಳಲ್ಲಿ ಹೆಚ್ಚಳವಾಗಲಿದೆ. ಬಹಳ ಸಮಯದ ನಂತರ ಇಂದು ನೀವು ಉತ್ತಮ ಮನಸ್ಥಿತಿಯಲ್ಲಿ ಕಾಣುವಿರಿ.

ಅದೃಷ್ಟದ ಬಣ್ಣ: ಕಡು ನೀಲಿ

ಅದೃಷ್ಟದ ಸಂಖ್ಯೆ: 38

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ

ಮಕರ ರಾಶಿ

ಮಕರ ರಾಶಿ

ಉದ್ಯೋಗಸ್ಥರಿಗೆ ಇಂದು ಅತ್ಯಂತ ಮಹತ್ವದ ದಿನವಾಗಲಿದೆ. ಖಾಸಗಿ ಉದ್ಯೋಗ ಮಾಡುವವರು ತಮ್ಮ ಶ್ರಮಕ್ಕೆ ತಕ್ಕಂತೆ ಫಲಿತಾಂಶವನ್ನು ಪಡೆಯುತ್ತಾರೆ. ನೀವು ಸಣ್ಣ ವ್ಯಾಪಾರಸ್ಥರಾಗಿದ್ದರೆ ಇಂದು ನಿಮಗೆ ಉತ್ತಮವಾಗಿರುತ್ತದೆ. ಇಂದು ಖರ್ಚು ಅಧಿಕವಿರಬಹುದು. ಯೋಚಿಸದೆ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ಮನೆಯ ಕಿರಿಯ ಸದಸ್ಯರೊಂದಿಗೆ ನಿಮ್ಮ ಸಂಬಂಧವನ್ನು ಉತ್ತಮವಾಗಿ ಇರಿಸಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ಸಣ್ಣಪುಟ್ಟ ಸಮಸ್ಯೆಗಳಿರಬಹುದು.

ಅದೃಷ್ಟದ ಬಣ್ಣ: ಕೇಸರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ ಮಧ್ಯಾಹ್ನ 3 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ಮನೆಯ ವಾತಾವರಣ ಅಷ್ಟು ಸರಿಯಿರಲ್ಲ. ಹಣದ ವಿಚಾರದಲ್ಲಿ ಜಗಳವಾಗುವ ಸಂಭವವಿದೆ. ಕಛೇರಿಯಲ್ಲಿ ಹಠಾತ್ ಕೆಲಸದ ಹೊರೆಯಿಂದಾಗಿ, ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಉದ್ಯಮಿಗಳ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ದಿನದ ಎರಡನೇ ಭಾಗದಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಮಿಶ್ರ ಫಲ. ಆರೋಗ್ಯ ದುರ್ಬಲವಾಗಿರುತ್ತದೆ.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 27

ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ

ಮೀನ ರಾಶಿ

ನೀವು ಉದ್ಯಮಿಯಾಗಿದ್ದರೆ ಮತ್ತು ಪಾಲುದಾರಿಕೆಯಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ದಾರಿಯಲ್ಲಿ ದೊಡ್ಡ ಅಡಚಣೆ ಉಂಟಾಗಬಹುದು. ಆದರೆ, ನೀವು ಹೆಚ್ಚು ಚಿಂತಿಸಬೇಕಾಗಿಲ್ಲ ಏಕೆಂದರೆ ಈ ಸಮಸ್ಯೆ ತಾತ್ಕಾಲಿಕವಾಗಿದೆ. ಉದ್ಯೋಗಿಗಳಿಗೆ ತಮ್ಮ ಕೆಲಸದ ಮೇಲೆ ಸಂಪೂರ್ಣ ಗಮನ ಹರಿಸಲು ಸಲಹೆ ನೀಡಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

English summary

Dina Bhavishya -16 February 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 16 February 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Wednesday, February 15, 2023, 23:30 [IST]
X
Desktop Bottom Promotion