Just In
Don't Miss
- Movies
ದಾಖಲೆಗಳ ಮೇಲೆ ದಾಖಲೆ ಬರೆದ ಶಾರುಖ್ ಖಾನ್ ಸಿನಿಮಾ 'ಪಠಾಣ್': 3 ಮೂರು ದಿನಗಳ ಕಲೆಕ್ಷನ್ ಎಷ್ಟು?
- Sports
U-19 Women's T20 World Cup 2023: ಇಂಗ್ಲೆಂಡ್ ಮಣಿಸಿದರೆ ಭಾರತದ ವನಿತೆಯರೇ ವಿಶ್ವ ಚಾಂಪಿಯನ್
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Technology
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- News
ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
Horoscope Today 19 Jan 2023: ಗುರುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ....ಓಂ ರಾಘವೇಂದ್ರ ಸ್ವಾಮಿಯೇ ನಮಃ....ವೈದಿಕ ಶಾಸ್ತ್ರದ ಪ್ರಕಾರ ಜನವರಿ 19ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಮಾಘ
ಪಕ್ಷ: ಕೃಷ್ಣ ಪಕ್ಷ
ತಿಥಿ: ಮಧ್ಯಾಹ್ನ 01:18ರವರೆಗೆ ದ್ವಾದಶಿ ನಂತರ ತ್ರಯೋದಶಿ
ನಕ್ಷತ್ರ: ಮಧ್ಯಾಹ್ನ 03:18ರವರೆಗೆ ಜ್ಯೇಷ್ಠ ನಂತರ ಮೂಲ
ರಾಹುಕಾಲ: ಮಧ್ಯಾಹ್ನ 01:56ರಿಂದ 03:22ರವರೆಗೆ

ಮೇಷ ರಾಶಿ
ಆರೋಗ್ಯದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ಕೆಲಸದಲ್ಲೂ ಉತ್ತಮ ಕಾರ್ಯ ನಿರ್ವಹಿಸುತ್ತೀರಿ. ಮಗುವಿಗೆ ಸಂಬಂಧಿಸಿದ ಯಾವುದೇ ದೊಡ್ಡ ನಿರ್ಧಾರವನ್ನು ಸಹ ನೀವು ತೆಗೆದುಕೊಳ್ಳಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಉದ್ಯೋಗವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ, ನಿಮಗೆ ಉತ್ತಮ ಅವಕಾಶ ಸಿಗಬಹುದು. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಜನರು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ತಿಳಿ ಗುಲಾಬಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 12:40 ರಿಂದ ಸಂಜೆ 6:10 ರವರೆಗೆ

ವೃಷಭ ರಾಶಿ
ಇಂದು ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳು ಉಂಟಾಗಬಹುದು. ನಿಮ್ಮ ಹೆಚ್ಚುತ್ತಿರುವ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ. ಕೆಲಸದ ಜಾಗದಲ್ಲಿಅನಗತ್ಯ ಅಹಂಕಾರವು ನಿಮಗೆ ತೊಂದರೆ ತರಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಯಾವುದೇ ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಆರೋಗ್ಯ ಕ್ಷೀಣಿಸುವ ಸಾಧ್ಯತೆಗಳಿವೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:40 ರವರೆಗೆ

ಮಿಥುನ ರಾಶಿ
ಪ್ರೇಮಿಗಳಿಗೆ ಈ ದಿನ ತುಂಬಾ ಚೆನ್ನಾಗಿರುತ್ತದೆ. ಮಿಥುನರಾಶಿಯ ವಿವಾಹಿತರು ಇಂದು ಜಾಗರೂಕರಾಗಿರಿ. ಮೂರನೇಯವರ ಹಸ್ತಕ್ಷೇಪದಿಂದ ಸಂಗಾತಿಯೊಂದಿಗೆ ಬಿರುಕು ಮೂಡುವ ಸಾಧ್ಯತೆ ಇದೆ. ಕಚೇರಿಯಲ್ಲಿನ ಉನ್ನತ ಅಧಿಕಾರಿಗಳ ಸಹಾಯದಿಂದ ಇಂದು ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಬಹುದು. ಆರೋಗ್ಯದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಗ್ಗೆ 7 ರಿಂದ 11:30 ರವರೆಗೆ

ಕರ್ಕ ರಾಶಿ
ಇಂದು ಕೆಲಸದ ಹೊರೆ ಅದಿಕವಿರುತ್ತದೆ. ಯಾವುದೇ ಕೆಲಸವನ್ನು ಹಾಗೂ ನಿರ್ಧಾರವನ್ನು ಆತುರದಿಂದ ಮಾಡಬೇಡಿ. ಈ ಸಮಯದಲ್ಲಿ ಹೂಡಿಕೆ ಮಾಡಲು ಹೋಗಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಇಂದು ನೀವು ಮನೆ ರಿಪೇರಿ ಇತ್ಯಾದಿಗಳಿಗೆ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಆರೋಗ್ಯವಾಗಿರಲು ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದರ ಜೊತೆಗೆ ವಿಶ್ರಾಂತಿಯತ್ತಲೂ ಗಮನ ಹರಿಸಬೇಕು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 33
ಅದೃಷ್ಟದ ಸಮಯ: ಬೆಳಿಗ್ಗೆ 4:20 ರಿಂದ ಮಧ್ಯಾಹ್ನ 3:05 ರವರೆಗೆ

ಸಿಂಹ ರಾಶಿ
ಬಹಳ ಸಮಯದ ನಂತರ ಇಂದು ನಿಮಗಾಗಿ ಸಮಯ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಿದರೆ, ಶೀಘ್ರದಲ್ಲೇ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಹುದು. ಉದ್ಯೋಗಸ್ಥರು ಕಚೇರಿಯಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ವ್ಯಾಪಾರಸ್ಥರು ತಕ್ಕ ಲಾಭವನ್ನು ಗಳಿಸಬಹುದು. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಸಾಧ್ಯತೆಗಳಿವೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ 11:30 ರವರೆಗೆ

ಕನ್ಯಾ ರಾಶಿ
ಈ ದಿನ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನೀವು ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದು ಒಳ್ಳೆಯದು. ಉದ್ಯಮಿಗಳು ಇಂದು ದೊಡ್ಡ ಸವಾಲನ್ನು ಎದುರಿಸಬೇಕಾಗಬಹುದು. ನಿಮ್ಮ ಕೆಲಸದಲ್ಲಿ ಸರ್ಕಾರದ ಅಡಚಣೆ ಉಂಟಾಗಬಹುದು. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 3:20 ರವರೆಗೆ

ತುಲಾ ರಾಶಿ
ಈ ದಿನ ನೀವು ನಿಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಉದ್ಯಮಿಗಳು ಹೊಸ ವ್ಯವಹಾರದಲ್ಲಿ ತಮ್ಮ ಅದೃಷ್ಟವನ್ನು ಪ್ರಯತ್ನಿಸಲು ಯೋಜಿಸುತ್ತಿದ್ದರೆ, ಇಂದು ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8 ರವರೆಗೆ

ವೃಶ್ಚಿಕ ರಾಶಿ
ಪ್ರೀತಿಯ ವಿಷಯದಲ್ಲಿ ಇಂದು ಸ್ವಲ್ಪ ಎಚ್ಚರವಹಿಸಿ, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಯಾವುದೇ ದೊಡ್ಡ ಖರ್ಚು ಮಾಡಲು ದಿನವು ಸೂಕ್ತವಲ್ಲ. ಕಚೇರಿಯಲ್ಲಿ, ನಿಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇರಿಸಿಕೊಳ್ಳಲು ನೀವು ಪ್ರಯತ್ನಿಸಬೇಕು. ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ವ್ಯಾಪಾರಸ್ಥರು ಇಂದು ಪ್ರಯಾಣ ಮಾಡದಂತೆ ಸಲಹೆ ನೀಡಲಾಗಿದೆ. ಆರೋಗ್ಯದ ವಿಷಯದಲ್ಲಿ ಇಂದು ಮಿಶ್ರಫಲ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ 12 ರವರೆಗೆ

ಧನು ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಕೆಲಸವನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗುವುದು. ಉದ್ಯಮಿಗಳ ಪ್ರಮುಖ ಸಮಸ್ಯೆಯು ಕೊನೆಗೊಳ್ಳುತ್ತದೆ. ನಿಮ್ಮ ವ್ಯಾಪಾರವು ವೇಗವಾಗಿ ಬೆಳೆಯುತ್ತದೆ. ಪೋಷಕರ ಬೆಂಬಲ ಸಿಗಲಿದೆ. ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧವೂ ಬಲವಾಗಿರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6 ರವರೆಗೆ

ಮಕರ ರಾಶಿ
ಕಚೇರಿಯ ವಾತಾವರಣವು ತುಂಬಾ ಧನಾತ್ಮಕವಾಗಿರುತ್ತದೆ. ವ್ಯಾಪಾರಸ್ಥರು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವುದಾದರೆ ಸ್ವಲ್ಪ ಕಾಯುವುದು ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುವ ಬಲವಾದ ಸಾಧ್ಯತೆಯಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯದ ವಿಷಯದಲ್ಲಿ, ದಿನವು ಸರಾಸರಿಯಾಗಲಿದೆ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 6:50 ರವರೆಗೆ

ಕುಂಭ ರಾಶಿ
ಸಂಗಾತಿಯ ನಡವಳಿಕೆಯು ನಿಮ್ಮ ದುಃಖ ಹೆಚ್ಚಿಸಲಿದೆ, ಅಲ್ಲದೆ ಕೆಲಸ-ಸಂಬಂಧಿತ ಪ್ರಯತ್ನದ ವೈಫಲ್ಯದಿಂದಾಗಿ ನೀವು ಇಂದು ತುಂಬಾ ನಿರಾಶೆಗೊಳ್ಳಬಹುದು. ಆದರೆ ನೀವು ನಿರಾಸೆ ಪಡುವ ಅಗ್ಯತವಿಲ್ಲ ಸರಿಯಾದ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತಾ ಪರಿಹಾರವಾಗುತ್ತದೆ. ಹಣಕ್ಕೆ ಸಂಬಂಧಿಸಿದ ಚಿಂತೆ ಹೆಚ್ಚಾಗುವುದು. ಆರೋಗ್ಯದಲ್ಲಿ ಹಠಾತ್ ಕುಸಿತವು ನಿಮ್ಮ ದಿನನಿತ್ಯದ ಯೋಜನೆಗಳಲ್ಲಿ ಅಡೆತಡೆಗಳನ್ನು ಉಂಟುಮಾಡುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:20 ರವರೆಗೆ

ಮೀನ ರಾಶಿ
ಮನೆಯ ಹಿರಿಯರ ಆಶೀರ್ವಾದ ನಿಮಗೆ ಸಿಗಲಿದೆ. ಇಂದು ನೀವು ತುಂಬಾ ಧನಾತ್ಮಕವಾಗಿರುತ್ತೀರಿ. ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಹೊಸ ತಿರುವು ಸಿಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಆರೋಗ್ಯ ಉತ್ತಮವಾಗಿರುತ್ತವೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 9:40 ರಿಂದ ಮಧ್ಯಾಹ್ನ 2:30 ರವರೆಗೆ