Latest Updates
-
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ
Horoscope Today 21 Feb 2023: ಮಂಗಳವಾರ : ಸಿಂಹ ರಾಶಿಯವರಿಗೆ ಮುಖ್ಯವಾದ ದಿನ, ಉಳಿದ ರಾಶಿಗಳ ರಾಶಿಫಲ ಹೇಗಿದೆ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಫೆಬ್ರವರಿ 21ರ ರಾಶಿಫಲ ನೋಡೋಣ:

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಫಲ್ಗುಣ
ಪಕ್ಷ: ಶುಕ್ಲಪಕ್ಷ
ತಿಥಿ: ಪ್ರತಿಪಾದ
ನಕ್ಷತ್ರ: ಶತಾಭಿಷ
ರಾಹುಕಾಲ: ಮಧ್ಯಾಹ್ನ 03:30ರಿಂದ ಸಂಜೆ 04:58ರವರೆಗೆ

ಮೇಷ ರಾಶಿ
ಇಂದು ಮಿಶ್ರ ಫಲಿತಾಂಶಗಳ ದಿನವಾಗಿದೆ. ತರಾತುರಿಯಲ್ಲಿ ಮತ್ತು ಭಾವುಕರಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಉತ್ತಮ. ಮಗುವಿನ ಕಡೆಯಿಂದ ಸಂತೋಷ ಇರುತ್ತದೆ. ಮಕ್ಕಳ ಸಾಧನೆ ಬಗ್ಗೆ ಹೆಮ್ಮೆ ಪಡಿ. ಕೆಲಸದ ಬಗ್ಗೆ ಹೇಳುವುದಾದರೆ ನೀವು ಕಚೇರಿಯಲ್ಲಿ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು, ಆದರೆ ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸದ ಬಲದಿಂದ ನೀವು ಈ ಸವಾಲನ್ನು ಜಯಿಸಲು ಸಾಧ್ಯವಾಗುತ್ತದೆ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸರಾಸರಿ ದಿನವಾಗಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಿಗ್ಗೆ 4:35 ರಿಂದ ಮಧ್ಯಾಹ್ನ 1 ರವರೆಗೆ

ವೃಷಭ ರಾಶಿ
ಅನಗ್ಯತ ವಿಷಯಗಳ ಬಗ್ಗೆ ಚಿಂತೆ ಮಾಡದೆ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ. ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಕೇಂದ್ರೀಕರಿಸಲು ಸಲಹೆ ನೀಡಲಾಗಿದೆ. ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಸಣ್ಣ ವಿಷಯಕ್ಕೆ ನಿಮ್ಮ ನಡುವೆ ಬಿರುಕು ಉಂಟಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಕೆಲಸದ ವಿಷಯದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಅದು ಉದ್ಯೋಗ ಅಥವಾ ವ್ಯಾಪಾರವಾಗಿರಲಿ ನೀವು ಕಷ್ಟಪಟ್ಟು ಕೆಲಸ ಮಾಡುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ, ನಿಮಗೆ ಶೀತ, ಕೆಮ್ಮು ಇತ್ಯಾದಿ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ

ಮಿಥುನ ರಾಶಿ
ಪ್ರಣಯ ಜೀವನ ಚೆನ್ನಾಗಿರುತ್ತದೆ. ಸಂಗಾತಿಯೊಂದಿಗೆ ಖುಷಿಯಾಗಿರುತ್ತೀರಿ. ಹಣದ ವಿಷಯದಲ್ಲಿ ಈ ದಿನ ತುಂಬಾ ದುಬಾರಿಯಾಗಿದೆ. ಅನಗತ್ಯ ವೆಚ್ಚಗಳು ನಿಮ್ಮ ಬಜೆಟ್ ಪ್ಲ್ಯ ಹಾಳು ಮಾಡುತ್ತದೆ. ನೀವು ಹಣದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡದಿರುವುದು ಉತ್ತಮ. ನೀವು ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಪ್ರಸ್ತುತ ಕೆಲಸದ ಬಗ್ಗೆ ಅತೃಪ್ತರಾಗಿದ್ದರೆ, ಹೊಸ ಉದ್ಯೋಗವನ್ನು ಹುಡುಕಲು ಇಂದು ಸರಿಯಾದ ದಿನವಾಗಿದೆ. ನೀವು ಉತ್ತಮ ಅವಕಾಶಗಳನ್ನು ಪಡೆಯಬಹುದು. ಇಂದು ವ್ಯಾಪಾರಸ್ಥರಿಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ಆದರೆ, ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯುವ ನಿರೀಕ್ಷೆಯಿದೆ. ಆರೋಗ್ಯ ಉತ್ತಮವಾಗಿರುತ್ತವೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 6:15 ರಿಂದ ರಾತ್ರಿ 9 ರವರೆಗೆ

ಕರ್ಕ ರಾಶಿ
ಕೆಲಸದಲ್ಲಿ ವಿಷಯದಲ್ಲಿ ತುಂಬಾ ಮಾನಸಿಕ ಒತ್ತಡ ತೆಗೆದುಕೊಂಡರೆ ನಿಮ್ಮ ಆರೋಗ್ಯವು ಹದಗೆಡಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟ ಸಮಯ: ಬೆಳಿಗ್ಗೆ 6:55 ರಿಂದ ಸಂಜೆ 4 ರವರೆಗೆ

ಸಿಂಹ ರಾಶಿ
ಈ ದಿನ ಬಹಳ ಮುಖ್ಯವಾಗಲಿದೆ. ಆಸ್ತಿಗೆ ಸಂಬಂಧಿಸಿದ ಕೆಲವು ದೊಡ್ಡ ಲಾಭವನ್ನು ನೀವು ಪಡೆಯಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ನೀವು ವ್ಯಾಪಾರ ಮತ್ತು ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ, ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹಿರಿಯರಿಂದ ಕೆಲವು ಉತ್ತಮ ಸಲಹೆಗಳನ್ನು ಪಡೆಯಬಹುದು. ನೀವು ಅವಿವಾಹಿತರಾಗಿದ್ದರೆ, ಶೀಘ್ರದಲ್ಲೇ ನೀವು ಬಯಸಿದ ವ್ಯಕ್ತಿಯೊಂದಿಗೆ ಮದುವೆ ನಡೆಯುವುದು. ಆರೋಗ್ಯ ಇಂದು ಉತ್ತಮವಾಗಿರುತ್ತವೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ ಮಧ್ಯಾಹ್ನ 3:00 ರವರೆಗೆ

ಕನ್ಯಾ ರಾಶಿ
ಖಾಸಗಿ ಉದ್ಯೋಗಿಗಳಿಗೆ ಕೆಲಸದ ಒತ್ತಡ ಅಧಿಕವಿರುತ್ತದೆ. ಚಿಲ್ಲರೆ ವ್ಯಾಪಾರಿಗಳು ತಮ್ಮ ವ್ಯವಹಾರ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿದೆ. ನಿಮ್ಮ ಆತುರದ ನಷ್ಟಕ್ಕೆ ಕಾರಣವಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಈ ದಿನ ಆಯಾಸವಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ

ತುಲಾ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದಾಗ ಬೇಸರವಾಗಬಹುದು. ಉದ್ಯೋಗಿಗಳ ಕೆಲಸದ ಜವಾಬ್ದಾರಿ ಹೆಚ್ಚುವುದ ಆದರೆ ಚಿಂತಿಸಬೇಕಾಗಿಲ್ಲ ಉನ್ನತ ಅಧಿಕಾರಿಗಳ ನೆರವಿನಿಂದ ನಿಮ್ಮ ಕೆಲಸ ಕಾರ್ಯಗಳು ಸುಸೂತ್ರವಾಗಿ ಪೂರ್ಣಗೊಳ್ಳಲಿವೆ. ಹಣದ ವಿಷಯದಲ್ಲಿ ಈ ದಿನ ಅಷ್ಟು ಒಳ್ಳೆಯದಲ್ಲ, ಆರ್ಥಿಕ ತೊಂದರೆಗಳು ಇರುತ್ತದೆ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಪ್ರತಿಕೂಲವಾಗಿರುತ್ತವೆ. ಸಂಗಾತಿಯೊಂದಿಗೆ ಮನಸ್ತಾಪ ಇರುವುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ

ವೃಶ್ಚಿಕ ರಾಶಿ
ಇಂದು ನಿಮ್ಮ ಮನಸ್ಥಿತಿ ಅಷ್ಟು ಸರಿಯಿರಲ್ಲ. ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳುವುದು ಉತ್ತಮ. ಕಚೇರಿಯಲ್ಲಿ ಮೇಲಧಿಕಾರಿಗಳು ನಿಮಗೆ ನೀಡಿದ ಜವಾಬ್ದಾರಿಯನ್ನು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದ ಪೂರೈಸಲು ಪ್ರಯತ್ನಿಸಿ. ನೀವು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಿದರೆ, ನೀವು ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ. ಉದ್ಯಮಿಗಳಿಗೆ ದೊಡ್ಡ ಆರ್ಥಿಕ ಲಾಭಗಳ ಬಲವಾದ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಇಂದು ದಿನದ ಎರಡನೇ ಭಾಗದಲ್ಲಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ
ಉದ್ಯಮಿಗಳು ಈ ದಿನ ದೊಡ್ಡ ವ್ಯವಹಾರವನ್ನು ಮಾಡಲಿದ್ದರೆ, ನೀವು ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ನೀವು ದೊಡ್ಡ ನಷ್ಟವನ್ನು ಅನುಭವಿಸಬಹುದು. ಇಂದು ಕೆಲಸದ ಹೊರೆ ಹೆಚ್ಚಿರುತ್ತದೆ. ಹಣದ ವಿಷಯದಲ್ಲಿ ಈ ದಿನವು ಮಿಶ್ರವಾಗಿರುತ್ತದೆ. ಅಧಿಕ ಖರ್ಚಿಗೆ ಕಡಿವಾಣ ಹಾಕಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಆರೋಗ್ಯದ ಕಡೆ ಗಮನ ನೀಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8:55 ರವರೆಗೆ

ಮಕರ ರಾಶಿ
ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಎಲ್ಲಾ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ನೀವು ಪ್ರಯತ್ನಿಸಬೇಕು. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ನಿರ್ಧಾರಗಳನ್ನು ನೀವು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಕಚೇರಿಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯದಲ್ಲ. ಆರೋಗ್ಯದಲ್ಲಿ ಹಠಾತ್ ಕ್ಷೀಣತೆ ಉಂಟಾಗಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12

ಕುಂಭ ರಾಶಿ
ನಿಮ್ಮ ಆರೋಗ್ಯ ಸರಿಯಿಲ್ಲದಿದ್ದರೆ ಮತ್ತಷ್ಟು ಹದಗೆಡಬಹುದು. ಕೆಲಸದ ಬಗ್ಗೆ ಹೇಳುವುದಾದರೆ ಈ ದಿನ ಅಷ್ಟು ಉತ್ತಮವಾದ ದಿನವಲ್ಲ. ಈ ದಿನ ಆತ್ಮವಿಶ್ವಾಸ ಕುಸಿಯಬಹುದು. ಮತ್ತೊಂದೆಡೆ, ಉದ್ಯಮಿಗಳ ಕೆಲವು ಪ್ರಮುಖ ಕೆಲಸಗಳು ಮಧ್ಯದಲ್ಲಿ ಸಿಲುಕಿಕೊಳ್ಳಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಯಾವುದೇ ಸಾಲವನ್ನು ತೆಗೆದುಕೊಂಡಿದ್ದರೆ, ಸಾಧ್ಯವಾದಷ್ಟು ಬೇಗ ಅದನ್ನು ಮರುಪಾವತಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5:10 ರಿಂದ ರಾತ್ರಿ 8:50 ರವರೆಗೆ

ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಕೆಲವು ದಿನಗಳವರೆಗೆ ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದರೆ, ನೀವು ನಿಮ್ಮ ಕೆಲಸದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ನಿಮ್ಮ ವ್ಯವಹಾರದಲ್ಲಿ ಹೊಸ ಪ್ಲ್ಯಾನ್ ಮಾಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯ ಪರಿಸರ ಚೆನ್ನಾಗಿರುತ್ತದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 4:15 ರಿಂದ ರಾತ್ರಿ 8 ರವರೆಗೆ



Click it and Unblock the Notifications











