Just In
- 6 hrs ago
ಸತ್ತು ಸ್ವರ್ಗಕ್ಕೆ ಹೋಗಿ ಮತ್ತೆ ಬದುಕಿ ಬಂದ ಪೆರ್ರಿ ಎಂಬ ವ್ಯಕ್ತಿಯ ಕತೆ, ಅಚ್ಚರಿಯಾದರೂ ಇದು ಸತ್ಯ
- 8 hrs ago
ಗರ್ಭಧಾರಣೆಗೆ ಪ್ರಯತ್ನಿಸುತ್ತಿರುವವರು ಮೆಡಿಟೇರಿಯನ್ ಡಯಟ್ ಪಾಲಿಸಿದರೆ ಒಳ್ಳೆಯದು, ಏಕೆ?
- 12 hrs ago
ಸಕ್ಕರೆ ಹಾಕಿದ ಪಾನೀಯ ಕುಡಿದರೆ ಪುರುಷರಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚುವುದೇ?
- 15 hrs ago
Horoscope Today 20 Jan 2023: ಶುಕ್ರವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
Don't Miss
- Sports
2028ರ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ಗೆ ಇಲ್ಲ ಅವಕಾಶ: ವ್ಯರ್ಥವಾಯಿತು ಐಸಿಸಿ ಪ್ರಯತ್ನ
- Movies
ಸ್ಯಾಂಡಲ್ವುಡ್ 'ಲವ್ ಬರ್ಡ್ಸ್'ಗೆ ವಕೀಲೆಯಾದ ಸಂಯುಕ್ತ ಹೊರನಾಡು
- News
ಮಧ್ಯಪ್ರದೇಶ: ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಪತ್ನಿ, ಭಯದಿಂದ ನದಿಗೆ ಹಾರಿ ಪತಿ ಆತ್ಮಹತ್ಯೆ
- Automobiles
ಟಾಟಾ ನೆಕ್ಸಾನ್ ಪ್ರತಿಸ್ಪರ್ಧಿಯಾದ ಹೊಸ ಮಹೀಂದ್ರಾ XUV400 ಎಲೆಕ್ಟ್ರಿಕ್ ಎಸ್ಯುವಿಯ ವಿಶೇಷತೆಗಳು
- Finance
ಉದ್ಯೋಗ ಕಡಿತದ ನಡುವೆ ಸಿಹಿಸುದ್ದಿ: ಭಾರತ್ಪೇಯಲ್ಲಿ ಉದ್ಯೋಗಾವಕಾಶ
- Technology
ಟ್ರಾಯ್ನ ಈ ಉಪಯುಕ್ತ ಸೇವೆಗೆ ಜಿಯೋ ಮತ್ತು ಏರ್ಟೆಲ್ನಿಂದ ಭಾರಿ ವಿರೋಧ! ಕಾರಣ ಏನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
Horoscope Today 21 Jan 2023: ಶನಿವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ಹನುಮಂತನ ಕೃಪೆ ನಿಮ್ಮ ಮೇಲುರಲಿ ಎಂದು ಹೇಳುತ್ತ ವೈದಿಕ ಶಾಸ್ತ್ರದ ಪ್ರಕಾರ ಜನವರಿ 21ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಮಾಘ
ಪಕ್ಷ: ಕೃಷ್ಣ ಪಕ್ಷ
ತಿಥಿ: ಅಮವಾಸ್ಯೆ
ನಕ್ಷತ್ರ: ಬೆಳಗ್ಗೆ 9:40ರವರೆಗೆ ಪೂರ್ವ ಆಷಾಢ ನಂತರ ಉತ್ತರ ಆಷಾಢ
ರಾಹುಕಾಲ: ಬೆಳಗ್ಗೆ 09:39ರಿಂದ 11:05ರವರೆಗೆ

ಮೇಷ ರಾಶಿ
ಇದು ಕೆಲಸದಲ್ಲಿ ಬಿಡುವಿಲ್ಲದ ದಿನವಾಗಲಿದೆ. ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ಉದ್ಯಮಿಗಳು ದೀರ್ಘ ಪ್ರಯಾಣ ಹೋಗಬೇಕಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಸಮಯಕ್ಕೆ ಸರಿಯಾಗಿ ಊಟ ಮಾಡಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 11:25 ರವರೆಗೆ

ವೃಷಭ ರಾಶಿ
ಸರ್ಕಾರಿ ಕೆಲಸ ಮಾಡುತ್ತಿದ್ದರೆ ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಉದ್ಯಮಿಗಳ ದಾರಿಯಲ್ಲಿ ಬರುವ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ. ಅದರಲ್ಲೂ ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ ಉತ್ತಮ ಲಾಭ ಪಡೆಯಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 8:45 ರಿಂದ ಮಧ್ಯಾಹ್ನ 2:20 ರವರೆಗೆ

ಮಿಥುನ ರಾಶಿ
ನೀವು ದೀರ್ಘಕಾಲದಿಂದ ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಹೊಂದಿದ್ದರೆ ಅದನ್ನುನಿರ್ಲಕ್ಷ್ಯ ಮಾಡಬೇಡಿ. ನೀವು ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಹಣಕಾಸಿನ ಭಾಗವನ್ನು ಬಲಪಡಿಸಲು, ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಮನೆಯ ಹಿರಿಯರ ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 40
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ಕರ್ಕ ರಾಶಿ
ಇಂದು ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ, ಕಚೇರಿಯಲ್ಲಿ ಯಾವುದೇ ಕೆಲಸ ಅಪೂರ್ಣ ಬಿಡಬೇಡಿ. ವ್ಯಾಪಾರಸ್ಥರು ದೊಡ್ಡ ಹಣಕಾಸಿನ ವಹಿವಾಟು ಮಾಡುವುದನ್ನು ತಪ್ಪಿಸಬೇಕು ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆ. ನಿಮ್ಮ ಪರಸ್ಪರ ನಂಬಿಕೆ ಹೆಚ್ಚಾಗುತ್ತದೆ. ಆರೋಗ್ಯ ಕ್ಷೀಣಿಸುವ ಸಾಧ್ಯತೆಗಳಿವೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 4:45 ರಿಂದ ರಾತ್ರಿ 8 ರವರೆಗೆ

ಸಿಂಹ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ. ನೀವು ದೊಡ್ಡ ಯಶಸ್ಸನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಹೊಸದನ್ನು ಕಲಿಯುವ ಅವಕಾಶವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಪ್ರಮುಖ ಆರ್ಥಿಕ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ನೀವು ಈಗಾಗಲೇ ಕಾಯಿಲೆ ಹೊಂದಿದ್ದರೆ ಹೆಚ್ಚು ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 6 ರಿಂದ 8:45 ರವರೆಗೆ

ಕನ್ಯಾ ರಾಶಿ
ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಬರಬಹುದು, ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ, ಇಲ್ಲದಿದ್ದರೆ ನಿಮ್ಮ ಆರೋಗ್ಯವು ತೀವ್ರವಾಗಿ ಕುಸಿಯಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ, ಹವ್ಯಾಸಗಳಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಬೇಡಿ.
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 4:20 ರವರೆಗೆ

ತುಲಾ ರಾಶಿ
ಕೆಲಸದ ವಿಷಯದಲ್ಲಿ ಇಂದು ಅದೃಷ್ಟದ ದಿನ. ಉದ್ಯೋಗಸ್ಥರಿಗೆ ಒಳ್ಳೆಯ ಅವಕಾಶ ಸಿಗುತ್ತದೆ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ, ನಿಮ್ಮ ಕನಸು ನನಸಾಗುವ ಬಲವಾದ ಸಾಧ್ಯತೆಯಿದೆ. ಉದ್ಯಮಿಗಳ ಯಾವುದೇ ಸ್ಥಗಿತಗೊಂಡ ಕೆಲಸವನ್ನು ಇಂದು ಪೂರ್ಣಗೊಳಿಸಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮಗುವಿನ ಶಿಕ್ಷಣ ಅಥವಾ ಆರೋಗ್ಯದ ಬಗ್ಗೆ ಚಿಂತಿತರಾಗುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ 7:55 ರವರೆಗೆ

ವೃಶ್ಚಿಕ ರಾಶಿ
ಹಣಕ್ಕೆ ಸಂಬಂಧಿಸಿದ ಚಿಂತೆಗಳು ಕಾಡಬಹುದು. ಇಂದು, ಹಣದ ಕೊರತೆಯಿಂದಾಗಿ, ನಿಮ್ಮ ಕೆಲವು ಪ್ರಮುಖ ಕೆಲಸಗಳಿಗೆ ತೊಂದರೆಯಾಗುವುದು. ಉದ್ಯಮಿಗಳು ಇಂದು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ನಿಮ್ಮ ಸಂಗಾತಿಯೊಂದಿಗಿನ ಸಮಸ್ಯೆಗಳನ್ನು ಕೂತು ಮಾತನಾಡಿ ಬಗೆಹರಿಸಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಎಚ್ಚರವಹಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ
ಇಂದು ದಿನದ ಆರಂಭವು ತುಂಬಾ ಚೆನ್ನಾಗಿರಲಿದೆ. ಇಂದು ತುಂಬಾ ಚಟುವಟಿಕೆಯಿಂದ ಕೆಲಸವನ್ನು ಮಾಡುತ್ತೀರಿ. ಲಾಭ ಗಳಿಸುವ ಆತುರವನ್ನು ತಪ್ಪಿಸಲು ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನೀವು ದೊಡ್ಡ ನಷ್ಟವನ್ನು ಅನುಭವಿಸಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮ್ಮ ಸೊಂಟ ಅಥವಾ ಬೆನ್ನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿದ್ದರೆ ಸೂಕ್ತ ಚಿಕಿತ್ಸೆ ಪಡೆಯಿರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ 11 ರವರೆಗೆ

ಮಕರ ರಾಶಿ
ಮನೆಯ ವಾತಾವರಣ ಸರಿಯಿರಲ್ಲ, ಹಣದ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆಯುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ. ಕಚೇರಿಯಲ್ಲಿ ಯಾವುದೇ ಕೆಲಸ ಬಾಕಿ ಇದ್ದರೆ, ಸಾಧ್ಯವಾದಷ್ಟು ಬೇಗ ಅದನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಮತ್ತೊಂದೆಡೆ, ಉದ್ಯಮಿಗಳು ಇಂದು ನ್ಯಾಯಾಲಯದ ಪ್ರಕರಣದಲ್ಲಿ ಸಿಲುಕದಂತೆ ಎಚ್ಚರವಹಿಸಿ. ಆರ್ಥಿಕವಾಗಿ ಸದೃಢವಾಗಿರಲು ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಇಂದು ಆರೋಗ್ಯದ ವಿಷಯದಲ್ಲಿ ಏರಿಳಿತಗಳಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 3 ರವರೆಗೆ

ಕುಂಭ ರಾಶಿ
ಇಂದು ನೀವು ಧಾರ್ಮಿಕ ವಿಷಯಗಳ ಕಡೆ ಆಸಕ್ತಿ ತೋರುವಿರಿ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ನೀವು ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ, ಆತ್ಮವಿಶ್ವಾಸವು ಹೆಚ್ಚಾಗುತ್ತದೆ, ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ನೀವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬಹುದು. ತಂಗಳು ಆಹಾರ ಸೇವಿಸಬೇಡಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

ಮೀನ ರಾಶಿ
ನೀವು ಇಂದು ಕಛೇರಿಯಲ್ಲಿ ಹೆಚ್ಚಿನ ಗೌರವವನ್ನು ಪಡೆಯಬಹುದು. ನಿಮ್ಮ ಉತ್ತಮ ಕಾರ್ಯಕ್ಷಮತೆಯ ಆಧಾರದ ಮೇಲೆ, ನೀವು ಉತ್ತಮ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ಮತ್ತೊಂದೆಡೆ, ಇಂದು ಉದ್ಯಮಿಗಳಿಗೆ ಸವಾಲುಗಳು ಎದುರಾಗುವುದು. ನಿಮ್ಮ ಕೆಲವು ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು ಹಣದ ಖರ್ಚು ಹೆಚ್ಚಾಗಬಹುದು. ಇತರರ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಕೋಪ ಮತ್ತು ಒತ್ತಡದಿಂದ ದೂರವಿರಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:15 ರಿಂದ ರಾತ್ರಿ 9 ರವರೆಗೆ