Latest Updates
-
ಯುಗಾದಿ ಹಬ್ಬಕ್ಕೆ ಮಾಡಿ ಗಸೆಗಸೆ ಪಾಯಸ: ಬಾಯಲ್ಲಿ ನೀರು ತರಿಸುವ ಸಿಹಿ -
Summer Garden: ಬೇಸಿಗೆಯಲ್ಲಿ ಬಾಡದ ಹೂವುಗಳಿವು! ಈ 5 ಹೂಗಳನ್ನು ನೆಡಿದ್ರೆ ಸಾಕು.. ನಿಮ್ಮ ಗಾರ್ಡನ್ ಕಲರ್ಫುಲ್ -
ಸೂರ್ಯ ಬುಧನಿಂದ ಬುಧಾದಿತ್ಯ ಯೋಗ; ಈ ರಾಶಿಯವರ ಬದುಕಲ್ಲಿ ಬೆಳಕು, ಕಷ್ಟಗಳು ಪರಿಹಾರ -
ಯುಗಾದಿ ಹೊಸತೊಡಕು.. ಮಟನ್ ಖರೀದಿಸುವಾಗ ಮೋಸ ಹೋಗಬೇಡಿ! ಫ್ರೆಶ್ ಇದ್ಯಾ? ಅಥವಾ ನಿನ್ನೆಯದ್ದೇ? ಹೀಗೆ ಗುರುತಿಸಿ -
ಒಂದು ಹನಿ ಎಣ್ಣೆ ಕೆಳಗೆ ಬೀಳದಂತೆ ಬಾಟಲಿಗೆ ಹಾಕೋ ಐಡಿಯಾ ಗೊತ್ತಾ? ಈ ಟ್ರಿಕ್ಸ್ ನೀವೆಂದು ಬಳಸಿರಲ್ಲ! -
ಸ್ಟೌವ್ ಬೇಡ, ಎಣ್ಣೆ ಬೇಡ..! 5 ನಿಮಿಷದಲ್ಲಿ ಸಿದ್ಧವಾಗುತ್ತೆ ಈ ಇಡಿಚ್ಚ ಮೊಸರು ಚಟ್ನಿ! ಒಮ್ಮೆ ಟ್ರೈ ಮಾಡಿ -
ಬಾಯಿ ಚಪ್ಪರಿಸಿ ಸವಿಯುವ ಮಾವಿನಮಿಡಿ ಉಪ್ಪಿನಕಾಯಿ: ಮನೆಯಲ್ಲೇ ಮಾಡುವ ವಿಧಾನ! -
Eid-ul-Fitr 2026: ಮಾ.20 ಅಥವಾ ಮಾ.21? ಭಾರತದಲ್ಲಿ ರಂಜಾನ್ ಯಾವ ದಿನ? ರಜೆ ಯಾವಾಗ? ತಿಳಿಯಿರಿ -
ಗುರು-ಶುಕ್ರನಿಂದ ಗಜಕೇಸರಿ ರಾಜಯೋಗ: ಯುಗಾದಿ ಬಳಿಕ ಈ ರಾಶಿಯವರ ಜೀವನದಲ್ಲಿ ಅದೃಷ್ಟ! -
ಶನಿ ಕೃಪೆ ಶುರು.. ಹಣ, ಯಶಸ್ಸು, ಶುಭ ಸುದ್ದಿ! ಯುಗಾದಿ ಬಳಿಕ ಈ 3 ರಾಶಿಗಳಿಗೆ ಭಾರೀ ಅದೃಷ್ಟ
ಸೋಮವಾರದ ದಿನ ಭವಿಷ್ಯ: ಮೇಷದಿಂದ ಮೀನದವರೆಗಿನ ರಾಶಿಫಲ
ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:

ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಹೇಮಂತ
ಮಾಸ: ಮಾರ್ಗಶಿರ
ನಕ್ಷತ್ರ: ಮಧ್ಯಾಹ್ನ 3:40ರವರೆಗೆ ರೋಹಿಣಿ, ನಂತರ ಮೃಗಶಿರ್ಷ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ: ಬೆಳಗ್ಗೆ 07:55 ರಿಂದ 09:20
ಗುಳಿಕಕಾಲ: ಮಧ್ಯಾಹ್ನ 01:36 ರಿಂದ 03:01ರವರೆಗೆ
ಯಮಗಂಡಕಾಲ: ಬೆಳಗ್ಗೆ 10:45 ರಿಂದ 12:11ರವರೆಗೆ
ದುರ್ಮುಹೂರ್ತ: ಮಧ್ಯಾಹ್ನ 12:33ರಿಂದ 01:19ರವರೆಗೆ
ಮಧ್ಯಾಹ್ನ 02:50ರಿಂದ 03:35ರವರೆಗೆ
ಸೂರ್ಯೋದಯ: ಬೆಳಗ್ಗೆ 06:30ಕ್ಕೆ
ಸೂರ್ಯಾಸ್ತ: ಸಂಜೆ 05:52ಕ್ಕೆ

ಮೇಷ ರಾಶಿ
ಇಂದು ನೀವು ನಿಮ್ಮ ನಿರ್ಧಾರಗಳನ್ನು ಹೃದಯದಿಂದ ತೆಗೆದುಕೊಳ್ಳದೆ, ಬುದ್ಧಿವಂತಿಕೆಯಿಂದ ತೆಗೆದುಕೊಂಡರೆ ಒಳ್ಳೆಯದು. ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯಲ್ಲಿ ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸುವುದು ಇಂದು ನಿಮ್ಮ ಗುರಿಯಾಗಿರಬೇಕು, ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಉತ್ತಮ ಆರ್ಥಿಕ ಲಾಭಕ್ಕಾಗಿ ವ್ಯಾಪಾರಸ್ಥರು ತಮ್ಮ ವ್ಯವಹಾರ ಯೋಜನೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸೂಚಿಸಲಾಗಿದೆ. ಸಣ್ಣ ವ್ಯಾಪಾರಿಗಳು ಉತ್ತಮ ಲಾಭ ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಏರಿಳಿತದಿಂದ ತುಂಬಿರುತ್ತದೆ. ಮನೆಯ ಕೆಲವು ಸದಸ್ಯರೊಂದಿಗೆ ನೀವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಅಂತಹ ಪರಿಸ್ಥಿತಿಯಲ್ಲಿ ನೀವು ಕೋಪದಿಂದ ಅಲ್ಲ, ಶಾಂತಿಯುತವಾಗಿ ವರ್ತಿಸಿ. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ಇಂದು ವೆಚ್ಚವನ್ನು ಕಡಿಮೆ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯವಾಗಿರಲಿದೆ.
ಉತ್ತಮ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 2
ಶುಭ ಸಮಯ: ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ

ವೃಷಭ ರಾಶಿ
ವ್ಯಾಪಾರಸ್ಥರು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ನೀವು ದೊಡ್ಡ ಉದ್ಯಮಿಗಳಾಗಿದ್ದರೆ ನೀವು ಇಂದು ನೌಕರರೊಂದಿಗೆ ಸಂಬಳದ ಬಗ್ಗೆತರ್ಕ ಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ ನೀವು ನಿಮ್ಮ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಉದ್ಯೋಗಿಗಳ ಜೀವನದಲ್ಲಿ ಯಾವುದೋ ದೊಡ್ಡ ಬದಲಾವಣೆ ಸಾಧ್ಯ. ಇಂದು ನಿಮ್ಮ ವರ್ಗಾವಣೆಯ ಬಗ್ಗೆ ನೀವು ಹಠಾತ್ ಕಚೇರಿಯಲ್ಲಿ ಮಾಹಿತಿಯನ್ನು ಪಡೆಯಬಹುದು. ಹಣವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಉಳಿತಾಯದ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೀರಿ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆ. ನೀವು ಇಂದು ನಿಮ್ಮ ಪ್ರಿಯತಮೆಯಿಂದ ಉತ್ತಮ ಉಡುಗೊರೆಯನ್ನು ಸಹ ಪಡೆಯಬಹುದು. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಆಕಾಶ
ಶುಭ ಸಂಖ್ಯೆ: 16
ಒಳ್ಳೆಯ ಸಮಯ: ಸಂಜೆ 6 ರಿಂದ 9 ರವರೆಗೆ

ಮಿಥುನ ರಾಶಿ
ಹಣದ ವಿಷಯದಲ್ಲಿ ನೀವು ಜಾಗರೂಕರಾಗಿರಲು ಸೂಚಿಸಲಾಗುತ್ತದೆ. ಖಾತೆಗಳನ್ನು ಕಾಯ್ದಿರಿಸುವಾಗ ಸಂಪೂರ್ಣ ಎಚ್ಚರಿಕೆ ವಹಿಸಿ. ಇಂದು ಸಾಲ ನೀಡುವುದನ್ನು ತಪ್ಪಿಸಲು ನಿಮಗೆ ಸೂಚಿಸಲಾಗಿದೆ, ಇಲ್ಲದಿದ್ದರೆ ನಿಮ್ಮ ಹಣ ಹಿಂತಿರುಗುವುದು ಕಷ್ಟ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಇಂದು ನೀವು ಕುಟುಂಬ ಸದಸ್ಯರೊಂದಿಗೆ ಖುಷಿಯಾಗಿರುತ್ತೀರಿ. ಒಡಹುಟ್ಟಿದವರೊಂದಿಗಿನ ಸಂಬಂಧವು ಬಲವಾಗಿರುತ್ತದೆ. ನೀವು ವಿವಾಹಿತರಾಗಿದ್ದರೆ ನಿಮ್ಮ ವೈವಾಹಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ಈ ಸಮಯದಲ್ಲಿ ನಿಮ್ಮ ಸಂಗಾತಿಗೆ ನಿಮ್ಮ ಭಾವನಾತ್ಮಕ ಬೆಂಬಲ ಬೇಕು. ಇಂದು ಕೆಲಸದಲ್ಲಿ ಮಿಶ್ರ ಫಲಿತಾಂಶಗಳು ಇರಲಿವೆ. ಉದ್ಯೋಗಿಗಳಿಗೆ ಎಚ್ಚರಿಕೆಯಿಂದ ಕೆಲಸ ಮಾಡಲು ಸೂಚಿಸಲಾಗಿದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಶೀತ ರೀತಿಯ ಸಣ್ಣ ಸಮಸ್ಯೆ ಕಾಣಿಸಬಹುದು.
ಉತ್ತಮ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 23
ಒಳ್ಳೆಯ ಸಮಯ: ಮಧ್ಯಾಹ್ನ 3 ರಿಂದ 10 ರವರೆಗೆ

ಕರ್ಕ ರಾಶಿ
ಕೆಲಸದ ಮುಂಭಾಗದಲ್ಲಿನೀವು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನೀವು ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡುತ್ತಿದ್ದರೆ ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಉದ್ಯೋಗದಾತರಿಗೆ ಬಡ್ತಿ ನೀಡಲಾಗುತ್ತಿದೆ. ನೀವು ಕಷ್ಟಪಟ್ಟು ಕೆಲಸ ಮಾಡಿ. ನೀವು ವಿದ್ಯಾರ್ಥಿಯಾಗಿದ್ದರೆ ಇಂದು ನಿಮ್ಮ ಅಧ್ಯಯನದಲ್ಲಿ ದೊಡ್ಡ ಅಡಚಣೆಯಾಗಬಹುದು. ಆದಾಗ್ಯೂ, ನಿಮ್ಮ ಸಮಸ್ಯೆ ತಾತ್ಕಾಲಿಕ. ಹಣದ ವಿಷಯದಲ್ಲಿ ಈ ದಿನವು ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ, ಇಲ್ಲದಿದ್ದರೆ ನೀವು ಮುಂದಿನ ದಿನಗಳಲ್ಲಿ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಸಾಮರಸ್ಯದಿಂದ ಉಳಿಯುತ್ತದೆ. ಇಂದು ನೀವು ನಿಮ್ಮ ಪ್ರೀತಿಯೊಂದಿಗೆ ಬಹಳ ಸ್ಮರಣೀಯ ಸಮಯವನ್ನು ಕಳೆಯುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಉತ್ತಮ ಬಣ್ಣ: ಕಿತ್ತಳೆ
ಶುಭ ಸಂಖ್ಯೆ: 4
ಶುಭ ಸಮಯ: ಬೆಳಗ್ಗೆ 4 ರಿಂದ ಮಧ್ಯಾಹ್ನ 2: 30 ರವರೆಗೆ

ಸಿಂಹ ರಾಶಿ
ತುಂಬಾ ಸಮಯದಿಂದ ಕೋರ್ಟ್ ಕೇಸ್ ವಿಷಯದಲ್ಲಿ ಅಲಿಯುತ್ತಿದ್ದರೆ ಇಂದು ನೀವು ಯಶಸ್ಸನ್ನು ಪಡೆಯಬಹುದು. ಹಣದ ಪರಿಸ್ಥಿತಿಯಲ್ಲಿ ದೊಡ್ಡ ಜಿಗಿತ ಉಂಟಾಗಬಹುದು. ಕುಟುಂಬ ಜೀವನದ ಬಗ್ಗೆ ಹೇಳುವುದಾದರೆ ತಾಯಿ ಅಥವಾ ತಂದೆಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಬೇಕಾಗುವುದು. ಕುಟುಂಬದಲ್ಲಿ ಜವಾಬ್ದಾರಿ ಹೆಚ್ಚುವುದರಿಂದ ನೀವು ಇಂದು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದಾಗ್ಯೂ, ಸಂಗಾತಿಯ ಸಹಾಯದಿಂದ ನಿಮ್ಮ ಎಲ್ಲಾ ಜವಾಬ್ದಾರಿಗಳನ್ನು ಪೂರೈಸಲು ನಿಮಗೆ ಸಾಧ್ಯವಾಗುತ್ತದೆ.
ಉದ್ಯೋಗಿಗಳು ಕಚೇರಿಯಲ್ಲಿ ಬೇಡದ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸುವುದನ್ನು ತಪ್ಪಿಸಲು ಸೂಚಿಸಲಾಗುತ್ತದೆ. ಈ ಸಮಯದಲ್ಲಿ, ನಿಮ್ಮ ಸಂಪೂರ್ಣ ಗಮನವು ನಿಮ್ಮ ಕೆಲಸದ ಮೇಲೆ ಇರಬೇಕು. ವ್ಯಾಪಾರಸ್ಥರು ಇಂದು ಸಾಲ ಪಡೆಯುವುದನ್ನು ತಪ್ಪಿಸಬೇಕಾಗಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವುದು ಒಳ್ಲೆಯದು.
ಉತ್ತಮ ಬಣ್ಣ: ಗಾಢ ಕೆಂಪು
ಅದೃಷ್ಟ ಸಂಖ್ಯೆ: 30
ಒಳ್ಳೆಯ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ

ಕನ್ಯಾ ರಾಶಿ
ಇಂದು ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶ ಸಿಗಲಿದೆ. ನೌಕರರು ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಬೆಂಬಲವನ್ನು ಪಡೆಯುತ್ತಾರೆ ಮತ್ತು ಇಂದು ನಿಮ್ಮ ಕೆಲವು ಪ್ರಮುಖ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಅದೇ ಸಮಯದಲ್ಲಿ, ವ್ಯವಹಾರಸ್ಥರು ತಮ್ಮ ವ್ಯವಹಾರವನ್ನು ಮುಂದುವರಿಸಲು ಉತ್ತಮ ಅವಕಾಶವನ್ನು ಸಹ ಪಡೆಯಬಹುದು. ಆರ್ಥಿಕ ರಂಗದಲ್ಲಿ ನೀವು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತೀರಿ. ಆದಾಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ನೀವು ಇಂದು ಯಶಸ್ಸನ್ನು ಪಡೆಯದಿರಬಹುದು, ಆದರೆ ನೀವು ನಿರಾಶೆಗೊಳ್ಳಬೇಕಾಗಿಲ್ಲ. ಸಮಯ ಬಂದಾಗ ನಿಮ್ಮ ಕಠಿಣ ಪರಿಶ್ರಮದ ಫಲವನ್ನು ನೀವು ಖಂಡಿತವಾಗಿ ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣಬಹುದು.
ಉತ್ತಮ ಬಣ್ಣ: ಕಂದು
ಶುಭ ಸಂಖ್ಯೆ: 8
ಶುಭ ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ

ತುಲಾ ರಾಶಿ:
ಇಂದು ಮನಸ್ಸು ಖಿನ್ನತೆಗೆ ಒಳಗಾಗುತ್ತದೆ ಮತ್ತು ನೀವು ನಕಾರಾತ್ಮಕ ಆಲೋಚನೆಗಳಿಂದ ಮನಸ್ಸು ಹಾಳಾಗುವುದು. ಈ ಸಮಯದಲ್ಲಿ, ನಿಮ್ಮ ಸಂಪೂರ್ಣ ಗಮನವು ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಹರಿಸುವುದು ಒಳ್ಳೆಯದು. ಅನಗತ್ಯವಾಗಿ ಯೋಚಿಸುವ ಮೂಲಕ ನಿಮ್ಮ ಮಾನಸಿಕ ಶಾಂತಿಗೆ ಭಂಗ ಮಾಡಬೇಡಿ. ಅಲ್ಲದೆ, ನಿಮ್ಮ ಅಮೂಲ್ಯ ಸಮಯವನ್ನು ಸಹ ವ್ಯರ್ಥ ಮಾಡುವುದನ್ನು ತಪ್ಪಿಸಿ. ಹಣದ ಪರಿಸ್ಥಿತಿ ಸುಧಾರಿಸುವ ಸಾಧ್ಯತೆಯಿದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಮನೆಯ ಸದಸ್ಯರೊಂದಿಗಿನ ಸಂಬಂಧವು ಚೆನ್ನಾಗಿರುತ್ತದೆ. ನೀವು ಮನೆಯ ಹಿರಿಯರಿಂದ ಬೆಂಬಲ ಪಡೆಯುತ್ತೀರಿ. ಮಕ್ಕಳ ಶಿಕ್ಷಣದಲ್ಲಿ ಅಡಚಣೆ ಉಂಟಾಗಬಹುದು. ಕೆಲಸದ ಬಗ್ಗೆ ಹೇಳುವುದಾದರೆ ದ್ಯೋಗದಾತರು ಉತ್ತಮ ಯಶಸ್ಸನ್ನು ಪಡೆಯಬಹುದು. ಮತ್ತೊಂದೆಡೆ, ಲೇಖನ ಸಾಮಗ್ರಿಗಳಿಗೆ ಸಂಬಂಧಿಸಿದ ವ್ಯಾಪಾರ ಮಾಡುತ್ತಿರುವವರು ಆರ್ಥಿಕ ಲಾಭಗಳ ಬಲವಾದ ಸಾಧ್ಯತೆ ಇದೆ. ಇಂದು ಆರೋಗ್ಯದ ದೃಷ್ಟಿಯಿಂದ ಏರಿಳಿತಗಳು ತುಂಬಿರುತ್ತವೆ. ಪ್ರತಿದಿನ ಬೆಳಗ್ಗೆ ಎದ್ದು ಲಘು ವ್ಯಾಯಾಮ ಮಾಡಲು ನಿಮಗೆ ಸೂಚಿಸಲಾಗಿದೆ.
ಉತ್ತಮ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 19
ಒಳ್ಳೆಯ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ವೃಶ್ಷಿಕ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಇತರ ಯೋಚನೆ ಬಿಟ್ಟು ಅಧ್ಯಯನದತ್ತ ಗಮನ ಹರಿಸಬೇಕು. ನಿಮ್ಮ ಆನ್‌ಲೈನ್ ತರಗತಿಗಳನ್ನು ತಪ್ಪಿಸಿಕೊಳ್ಳದಂತೆ ನಿಮಗೆ ಸೂಚಿಸಲಾಗಿದೆ. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ಇಂದು ವೆಚ್ಚಗಳು ಕಡಿಮೆ ಇರುತ್ತದೆ ಮತ್ತು ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತದೆ. ವೈವಾಹಿಕ ಜೀವನದಲ್ಲಿ ಕೆಲವು ಒತ್ತಡ ಸಾಧ್ಯ. ಸಣ್ಣ ವಿಷಯವೂ ದೊಡ್ಡದಾಗಬಹುದು, ಆದ್ದರಿಂದ ಸಂಗಾತಿ ಜೊತೆ ತಾಳ್ಮೆಯಿಂದ ವರ್ತಿಸಿ. ಕೆಲಸದ ಬಗ್ಗೆ ಹೇಳುವುದಾದರೆ ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ವ್ಯವಹಾರವನ್ನು ಮಾಡುವ ಜನರು ಇಂದು ಜಾಗರೂಕರಾಗಿರಲು ಸೂಚಿಸಲಾಗಿದೆ. ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳದಿರುವುದು ಉತ್ತಮ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಉತ್ತಮ ಬಣ್ಣ: ಕ್ರೀಮ್
ಶುಭ ಸಂಖ್ಯೆ: 22
ಒಳ್ಳೆಯ ಸಮಯ: ಸಂಜೆ 4 ರಿಂದ 8:55 ರವರೆಗೆ

ಧನು ರಾಶಿ
ಸ್ವಲ್ಪ ಸಮಯದಿಂದ ನೀವು ನಿರೀಕ್ಷಿಸಿದ ಫಲಿತಾಂಶಗಳನ್ನು ನೀವು ಪಡೆಯದಿದ್ದರೆ, ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿರಿಸಿಕೊಳ್ಳಬೇಕು. ನೀವು ಪೂರ್ಣ ಶಕ್ತಿ ಮತ್ತು ಉತ್ಸಾಹದಿಂದ ಮುಂದುವರಿಯಿರಿ, ಶೀಘ್ರದಲ್ಲೇ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಿಗಳಿಗೆ ಇಂದು ಕಚೇರಿಯಲ್ಲಿ ಯಾವುದೇ ಕಷ್ಟದ ಕೆಲಸವನ್ನು ನಿಯೋಜಿಸಬಹುದು. ಆದರೂ ಹಿರಿಯ ಅಧಿಕಾರಿಗಳ ಸಹಾಯದಿಂದ ನಿಮ್ಮ ಕೆಲಸವು ಸಮಯಕ್ಕೆ ಪೂರ್ಣಗೊಳ್ಳುತ್ತದೆ, ಆದ್ದರಿಂದ ನೀವು ಹೆಚ್ಚು ಚಿಂತಿಸಬೇಕಾಗಿಲ್ಲ. ಷೇರು ಮಾರುಕಟ್ಟೆಗೆ ಸಂಬಂಧಿಸಿದ ವ್ಯವಹಾರ ಮಾಡುವವರು ಹಣಕಾಸಿನ ನಷ್ಟವನ್ನು ಅನುಭವಿಸಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಮನೆಯ ಸದಸ್ಯರೊಂದಿಗೆ ಸಮನ್ವಯ ಇರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ನಿಮಗೆ ಅಲರ್ಜಿ ಅಥವಾ ಸೋಂಕು ಉಂಟಾಗಬಹುದು. ಅಸಡ್ಡೆ ಮಾಡಬೇಡಿ.
ಉತ್ತಮ ಬಣ್ಣ: ಹಳದಿ
ಶುಭ ಸಂಖ್ಯೆ: 26
ಶುಭ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12 ರವರೆಗೆ

ಮಕರ ರಾಶಿ
ಕೆಲಸದಲ್ಲಿ ನೀವು ಇಂದು ಮಿಶ್ರ ಫಲಿತಾಂಶಗಳನ್ನು ಪಡೆಯಬಹುದು. ಕಚೇರಿಯಲ್ಲಿ ಯಾವುದೇ ತಪ್ಪುಗಳನ್ನು ಮಾಡದಂತೆ ಸಲಹೆ ನೀಡಲಾಗುತ್ತದೆ. ಇಂದು ನಿಮ್ಮ ಬಾಸ್ ನಿಮ್ಮ ಮೇಲೆ ನಿಗಾ ಇಡುತ್ತಾರೆ. ಹಣಕಾಸು ಕೆಲಸ ಮಾಡುವ ಜನರು ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಪೋಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿದೆ. ನೀವು ಅವಿವಾಹಿತರಾಗಿದ್ದರೆ ಇಂದು ನಿಮ್ಮ ಮದುವೆಯನ್ನು ಮನೆಯಲ್ಲಿಯೂ ಚರ್ಚಿಸಬಹುದು. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ಇಂದು ಆರ್ಥಿಕ ರಂಗದಲ್ಲಿ ಯಾವುದೇ ದೊಡ್ಡ ಸಮಸ್ಯೆ ಇಲ್ಲ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಸಿಗರೇಟ್ ಮತ್ತು ಮದ್ಯದಂತಹ ಕೆಟ್ಟ ಅಭ್ಯಾಸಗಳಿಂದ ದೂರವಿರಬೇಕು.
ಉತ್ತಮ ಬಣ್ಣ: ನೇರಳೆ
ಅದೃಷ್ಟ ಸಂಖ್ಯೆ: 14
ಒಳ್ಳೆಯ ಸಮಯ: ಸಂಜೆ 5:10 ರಿಂದ 9:50

ಕುಂಭ ರಾಶಿ
ಕಾರ್ಯ ಕ್ಷೇತ್ರದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಸಂಭಾಷಣೆಯಲ್ಲಿ ನಿಮ್ಮ ಕೌಶಲ್ಯ ಮತ್ತು ತಿಳುವಳಿಕೆಯಿಂದ ನೀವು ದೊಡ್ಡ ಲಾಭವನ್ನು ಪಡೆಯಬಹುದು. ದಿನ ಮುಂದುವರೆದಂತೆ ಹಣಕಾಸು ಸುಧಾರಿಸುತ್ತದೆ. ಹಣಕಾಸಿನ ವಿಷಯಗಳ ಬಗ್ಗೆ ಸ್ವಲ್ಪ ಜಾಗರೂಕರಾಗಿರಿ, ಇಲ್ಲದಿದ್ದರೆ ನಿಮ್ಮ ಕೈಯಲ್ಲಿರುವ ಹಣ ಸುಲಭವಾಗಿ ಜಾರಿಕೊಳ್ಳುತ್ತದೆ. ಸಂಜೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವುದರಿಂದ ಸಂತೋಷ ಹೆಚ್ಚುವುದು.
ಇಂದು ನಿಮ್ಮ ಕಠಿಣ ಪರಿಶ್ರಮವು ಫಲ ನೀಡುತ್ತದೆ ಮತ್ತು ಇಂದು ಯಾರ ಬಳಿಯೂ ಚರ್ಚಿಸಲು ಹೀಗಬೇಡಿ, ಇಲ್ಲದಿದ್ದರೆ ಸಣ್ಣ ವಿಷಯವು ದೊಡ್ಡ ಸಮಸ್ಯೆಯನ್ನು ಆಹ್ವಾನಿಸಬಹುದು.
ಉತ್ತಮ ಬಣ್ಣ: ಗುಲಾಬಿ
ಶುಭ ಸಂಖ್ಯೆ: 7
ಒಳ್ಳೆಯ ಸಮಯ: ಸಂಜೆ 4:15 ರಿಂದ 10 ರವರೆಗೆ

ಮೀನ ರಾಶಿ
ಆರ್ಥಿಕ ರಂಗದಲ್ಲಿ ಈ ದಿನವು ಉತ್ತಮವಾಗಿದೆ. ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಬೇಕು.ಕೆಲಸದಲ್ಲಿ ಇಂದು ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರುತ್ತದೆ. ನಿಮ್ಮ ಮೇಲಾಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಯಿಂದ ಹೆಚ್ಚು ಪ್ರಭಾವಿತರಾಗುತ್ತಾರೆ ಮತ್ತು ನೀವು ದೊಡ್ಡ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಇಂದು ಹಣ ಸಂಪಾದಿಸಲು ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು. ಅತಿಯಾದ ಭಾವನಾತ್ಮಕತೆಯು ನಿಮಗೆ ಹಾನಿಕಾರಕ ಎಂಬುವುದನ್ನು ಮರೆಯದಿರಿ, ಆದ್ದರಿಂದ ಈ ವಿಷಯದ ಬಗ್ಗೆ ವಿಶೇಷ ಕಾಳಜಿ ವಹಿಸಿ.
ಉತ್ತಮ ಬಣ್ಣ: ಕ್ರೀಮ್
ಶುಭ ಸಂಖ್ಯೆ: 21
ಒಳ್ಳೆಯ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ



Click it and Unblock the Notifications











