ಮಂಗಳವಾರದ ದಿನ ಭವಿಷ್ಯ: ಸಿಂಹ ರಾಶಿಯವರಿಗೆ ಈ ದಿನ ಮಿಶ್ರ ಫಲ

ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,

ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.

ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.

ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

Dina Bhavishya 3 November 2020

ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಶರದ್
ಮಾಸ: ಕಾರ್ತಿಕಾ
ನಕ್ಷತ್ರ: ನವೆಂಬರ್ 04, ಮಧ್ಯಾಹ್ನ 02:30ರ ವರೆಗೆ ರೋಹಿಣಿ, ನಂತರ, ಮೃಘಶಿರ
ಕೃಷ್ಣ ಪಕ್ಷ
ರಾಹುಕಾಲ: ಮಧ್ಯಾಹ್ನ 02:49ರಿಂದ 04:12ರವರೆಗೆ
ಗುಳಿಕಕಾಲ: ಮಧ್ಯಾಹ್ನ 12:04ರಿಂದ 01:27ರವರೆಗೆ
ಯಮಗಂಡಕಾಲ: ಮಧ್ಯಾಹ್ನ 09:20ರಿಂದ 10:42ರವರೆಗೆ
ದುರ್ಮುಹೂರ್ತ: ಬೆಳಗ್ಗೆ 08:47ರಿಂದ 09:31ರವರೆಗೆ
ಬೆಳಗ್ಗೆ 10:47ರಿಂದ 11:39ರವರೆಗೆ
ಸೂರ್ಯೋದಯ: ಬೆಳಗ್ಗೆ 06:35ಕ್ಕೆ
ಸೂರ್ಯಾಸ್ತ: ಸಂಜೆ 05:34ಕ್ಕೆ

ಮೇಷ ರಾಶಿ:

ಮೇಷ ರಾಶಿ:

ಇಂದು ನಿಮಗೆ ನಿಮ್ಮ ಸ್ನೇಹಿತರ ಹಾಗೂ ಕುಟುಂಬದ ಸಂಪೂರ್ಣ ಬೆಂಬಲ ಸಿಗಲಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಮಾನಸಿಕ ಸ್ಥಿತಿ ಇಂದು ಉತ್ತಮವಾಗಿರುತ್ತದೆ. ಪ್ರಮುಖ ನಿರ್ಧಾರಗಳನ್ನು ಸುಲಭವಾಗಿ ತೆಗೆದುಕೊಳ್ಳುತ್ತೀರಿ. ಕೆಲಸದ ಬಗ್ಗೆ ಮಾತನಾಡುವುದಾದರೆ, ಕಚೇರಿಯಲ್ಲಿ ಕಠಿಣ ಪರಿಶ್ರಮದ ಜೊತೆಗೆ ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧ ಉಳಿಸಿಕೊಳ್ಳಬೇಕು. ನೀವು ಜೊತೆಗೂಡಿ ಕೆಲಸ ಮಾಡಿದರೆ, ಅದು ನಿಮಗೆ ಅನುಕೂಲಕರ. ಮೇಲಾಧಿಕಾರಿಗಳ ಜೊತೆಗೆ ಪ್ರಮುಖ ಚರ್ಚೆಗಳನ್ನು ನಡೆಸಬಹುದು. ನಿಮ್ಮ ಅಭಿಪ್ರಾಯಗಳನ್ನು ನೀವು ಬಹಿರಂಗವಾಗಿ ವ್ಯಕ್ತಪಡಿಸಬೇಕು. ಚಿಲ್ಲರೆ ವ್ಯಾಪಾರಿಗಳಿಗೆ ಇಂದು ಬಹಳ ಪ್ರಯೋಜನಕಾರಿ ದಿನ. ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತೀರಿ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಕುಟುಂಬದೊಂದಿಗೆ ನೀವು ಹೆಚ್ಚಿನ ಸಮಯವನ್ನು ಕಳೆಯಬಹುದು. ಹಣದ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಇಂದು ಅಗತ್ಯವಾದ ಶಾಪಿಂಗ್ ಅನ್ನು ಸಹ ಮಾಡಬಹುದು. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡುವುದು ಒಳ್ಳೆಯದು. ಇಂದು ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.

ಅದೃಷ್ಟದ ಬಣ್ಣ: ಆಕಾಶ

ಅದೃಷ್ಟದ ಸಂಖ್ಯೆ: 26

ಶುಭ ಸಮಯ: ಮಧ್ಯಾಹ್ನ 3 ರಿಂದ 8 ರವರೆಗೆ

ವೃಷಭ ರಾಶಿ:

ವೃಷಭ ರಾಶಿ:

ನಿಮಗೆ ಇಂದು ನಿರಾಳವಾದ ದಿನ. ಯಾವುದೇ ಆಸ್ತಿ ವಿವಾದವನ್ನು ಬಗೆಹರಿಸುವ ಸಾಧ್ಯತೆಯು ಬಲವಾಗಿದೆ. ತೀರ್ಮಾನವು ನಿಮ್ಮ ಪರವಾಗಿಯೇ ಬರಬಹುದು. ಇದರಿಂದ ನೀವು ಆರ್ಥಿಕ ಲಾಭ ಪಡೆಯುತ್ತೀರಿ. ಸರ್ಕಾರಿ ಉದ್ಯೋಗಿಗಳಿಗೆ ಇಂದು ಬಹಳ ಶುಭ ದಿನ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ತುಂಬಾ ಸಂತೋಷಗೊಳ್ಳುತ್ತಾರೆ. ನಿಮಗೆ ಬೇಕಾದ ವರ್ಗಾವಣೆಯನ್ನು ಸಹ ನೀವು ಪಡೆಯಬಹುದು. ನೀವು ಚಿನ್ನ ಮತ್ತು ಬೆಳ್ಳಿಯನ್ನು ವ್ಯಾಪಾರ ಮಾಡುತ್ತಿದ್ದರೆ, ನೀವು ಹಳೆಯ ಗ್ರಾಹಕರಿಂದ ಲಾಭಗಳನ್ನು ಗಳಿಸಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಇಂದು, ನಿಮ್ಮ ಸಂಗಾತಿಯಿಂದ ನೀವು ವಿಶೇಷ ಉಡುಗೊರೆಯನ್ನು ಪಡೆಯಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ಯಾವುದೇ ಹೆಚ್ಚಿನ ಸಮಸ್ಯೆ ಇರುವುದಿಲ್ಲ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಈ ಸಮಯದಲ್ಲಿ ಸಣ್ಣ ಅನಾರೋಗ್ಯವನ್ನು ಸಹ ನಿರ್ಲಕ್ಷಿಸಬೇಡಿ.

ಅದೃಷ್ಟದ ಬಣ್ಣ: ನೀಲಿ

ಅದೃಷ್ಟದ ಸಂಖ್ಯೆ: 27

ಶುಭ ಸಮಯ: ಬೆಳಗ್ಗೆ 7:00 ರಿಂದ ಸಂಜೆ 4:30 ರವರೆಗೆ

ಮಿಥುನ ರಾಶಿ:

ಮಿಥುನ ರಾಶಿ:

ನಿಮ್ಮ ಆರೋಗ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ಇಂದು ಗ್ರಹಗತಿಗಳು ನಿಮ್ಮ ಪರವಾಗಿವೆ. ಹಾಗಾಗಿ ನೀವು ಆರೋಗ್ಯದ ವಿಷಯದಲ್ಲಿ ಸುಧಾರಣೆಯನ್ನು ಕಾಣಬಹುದು. ಇಂದು ನಿಮಗೆ ಉತ್ತಮವಾದ ದಿನ. ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನಹರಿಸಲು ಸಹ ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ. ಯಾವುದೇ ಸಮಸ್ಯೆ ಇದ್ದರೂ ನಿಮಗೆ ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲವಿದೆ. ಮತ್ತೊಂದೆಡೆ, ತಂದೆಗೆ ಇಂದು ಉತ್ತಮ ದಿನ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಸ್ವಲ್ಪ ಅತೃಪ್ತರಾಗಿರುವಂತೆ ಕಾಣುತ್ತಾರೆ. ನಿಮಗೆ ಸಾಧ್ಯವಾದಷ್ಟು ಸರಿಯಾಗಿ ಕೆಲಸ ಮಾಡಲು ಪ್ರಯತ್ನಿಸಿ. ಹಾಗೆಯೇ ಆಹಾರ ಮತ್ತು ಪಾನೀಯ ವ್ಯಾಪಾರಸ್ಥರು ಸ್ವಚ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ಸಮಯದಲ್ಲಿ, ನಿಮ್ಮ ಸಣ್ಣ ತಪ್ಪು ಕೂಡ ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನಿಮ್ಮ ಇನ್ನಷ್ಟು ಪ್ರಯತ್ನಿಸಬೇಕು.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 3

ಶುಭ ಸಮಯ: ಸಂಜೆ 6 ರಿಂದ 11:05

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿ:

ಇಂದು ನಿಮ್ಮ ಮನಸ್ಸಿಗೆ ಸ್ವಲ್ಪ ಕಿರಿಕಿರಿ ಉಂಟಾಗಬಹುದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸಬಹುದು. ಎಲ್ಲಾ ಅನಗತ್ಯ ವಿಷಯಗಳನ್ನು ಮರೆತು ನಿಮ್ಮ ಗಮನವನ್ನು ಪ್ರಮುಖ ಕೆಲಸಗಳನ್ನು ಮಾಡುವತ್ತ ಕೇಂದ್ರೀಕರಿಸಿ. ಹಣದ ವಿಷಯದಲ್ಲಿ ದಿನವು ಅಷ್ಟು ಒಳ್ಳೆಯದಲ್ಲ. ಆದಾಯಕ್ಕಿಂತ ಹೆಚ್ಚು ವೆಚ್ಚವಾಗಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸರಿಯಾದ ಆರ್ಥಿಕ ಯೋಜನೆ ಹಾಕಿಕೊಳ್ಳಿ. ಕಚೇರಿಯಲ್ಲಿ ಕೆಲಸದ ಹೊರೆ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು. ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸಲು ನೀವು ಇನ್ನಷ್ಟು ಸಮಯ ಕೆಲಸಮಾಡಬೇಕಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಅಸಮಾಧಾನಗೊಳ್ಳುವ ಬದಲು, ನೀವು ತಾಳ್ಮೆ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕಾಗುತ್ತದೆ. ವ್ಯವಹಾರ ಮಾಡುವವರು ಆರ್ಥಿಕ ವಹಿವಾಟುಗಳನ್ನು ಬಹಳ ಎಚ್ಚರಿಕೆಯಿಂದ ನಡೆಸಬೇಕು. ಕುಟುಂಬ ಜೀವನದಲ್ಲಿ ಇಂದು ಸಂತೋಷ. ನಿಮ್ಮ ಸಂಗಾತಿಯೊಂದಿಗೆ ನೀವು ಸ್ವಲ್ಪ ಮನಸ್ತಾಪ ಮಾಡಿಕೊಳ್ಳಬಹುದು. ಕೋಪದಿಂದ ಕೆಟ್ಟ ಪದಗಳನ್ನು ಬಳಸುವುದನ್ನು ತಪ್ಪಿಸಿ.

ಅದೃಷ್ಟದ ಬಣ್ಣ: ಕ್ರೀಮ್

ಅದೃಷ್ಟದ ಸಂಖ್ಯೆ: 15

ಶುಭ ಸಮಯ: ಬೆಳಗ್ಗೆ 10:10 ರಿಂದ ಮಧ್ಯಾಹ್ನ 3:15 ರವರೆಗೆ

ಸಿಂಹ ರಾಶಿ:

ಸಿಂಹ ರಾಶಿ:

ಇಂದು ನಿಮಗೆ ಸ್ವಲ್ಪ ಹಿಳಿ ಸ್ವಲ್ಪ ಖಾರ ಎಂಬಂಥ ದಿನ. ಕೆಲಸ ಕಾರ್ಯಗಳಲ್ಲಿ ಮಿಶ್ರ ಫಲ. ಮೊದಲನೆಯದಾಗಿ, ಇಂದು ನಿಮ್ಮ ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಕೆಮ್ಮು, ಶೀತ ಅಥವಾ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಅಸ್ವಸ್ಥತೆ ನಿಮ್ಮನ್ನು ಕಾಡಬಹುದು. ಹಾಗಾಗಿ ಆರೋಗ್ಯದ ಬಗ್ಗೆ ಅಸಡ್ಡೆ ಬೇಡ. ಮತ್ತೊಂದೆಡೆ, ಮನೆಯ ಪರಿಸ್ಥಿತಿ ಉದ್ವಿಗ್ನವಾಗಿರುತ್ತದೆ. ಮನೆಯ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಹದಗೆಡಬಹುದು. ಹಾಗಿದ್ದಾಗ, ನಿಮ್ಮ ಮಾತು ಮತ್ತು ನಡವಳಿಕೆಯನ್ನು ಸಮತೋಲನದಲ್ಲಿಟ್ಟುಕೊಳ್ಳಿ. ಕೋಪದ ಮಾತು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಹಣದ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಇಂದು ವೆಚ್ಚಗಳು ಕಡಿಮೆ ಇರುತ್ತದೆ. ಉದ್ಯೋಗದಾತರು ಸೋಮಾರಿತನವನ್ನು ತ್ಯಜಿಸಿ ತಮ್ಮ ಕೆಲಸದತ್ತ ಗಮನ ಹರಿಸಬೇಕು. ಮತ್ತೊಂದೆಡೆ, ಮರದ ಪೀಠೋಪಕರಣಗಳಿಗೆ ಸಂಬಂಧಿಸಿದ ವ್ಯಾಪಾರ ಮಾಡುವರು ಇಂದು ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಇದೆ. ಇಂದು ಸಂಜೆ ಸಹೋದ್ಯೋಗಿಗಳೊಂದಿಗೆ ಸಕಾರಾತ್ಮಕ ಸಮಯ ಕಳೆಯುತ್ತೀರಿ.

ಅದೃಷ್ಟದ ಬಣ್ಣ: ಕೆಂಪು

ಅದೃಷ್ಟದ ಸಂಖ್ಯೆ: 8

ಶುಭ ಸಮಯ: ಬೆಳಗ್ಗೆ 4:50 ರಿಂದ ಮಧ್ಯಾಹ್ನ 12:05

ಕನ್ಯಾರಾಶಿ:

ಕನ್ಯಾರಾಶಿ:

ವಿದ್ಯಾರ್ಥಿಗಳಿಗೆ ಇಂದು ಶುಭವಾಗಲಿದೆ. ನೀವು ಇತ್ತೀಚೆಗೆ ಯಾವುದಾದರೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ನೀಡಿದ್ದರೆ ನೀವು ಉತ್ತಮ ಫಲಿತಾಂಶವನ್ನು ಪಡೆಯುವ ಸಾಧ್ಯತೆಯಿದೆ. ಕಚೇರಿ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ನಿಮ್ಮ ಮೇಲಧಿಕಾರಿಗಳ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಇಂದು ಕೆಲಸ ಮಾಡುವುದರಲ್ಲಿ ನೀವು ವಿಭಿನ್ನ ಆನಂದವನ್ನು ಅನುಭವಿಸುವಿರಿ. ವ್ಯಾಪಾರಸ್ಥರ ಆರ್ಥಿಕ ಸಮಸ್ಯೆಗಳು ಪರಿಹಾರವಾಗಬಹುದು. ನೀವು ದೊಡ್ಡ ಉದ್ಯಮಿಯಾಗಿದ್ದರೆ ನಿಮ್ಮ ಉದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಅನಗತ್ಯ ಚರ್ಚೆಯಿಂದ ನಿಮಗೆ ಹಾನಿಯುಂಟಾಗಬಹುದು. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಹಠಾತ್ ಸಂಪತ್ತನ್ನು ಪಡೆಯುವ ಸಾಧ್ಯತೆ. ಶಾಪಿಂಗ್ ಮಾಡಲು ಈ ದಿನ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ದಿನ ಅನುಕೂಲಕರವಾಗಿರುತ್ತದೆ. ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರಾಮವಾಗಿರುತ್ತೀರಿ.

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 35

ಶುಭ ಸಮಯ: ಬೆಳಗ್ಗೆ 4:05 ರಿಂದ 3:40ರವರೆಗೆ

ತುಲಾ ರಾಶಿ:

ತುಲಾ ರಾಶಿ:

ಇಂದು ನಿಮ್ಮ ಸಂಗಾತಿಯೊಂದಿಗೆ ಬಹಳ ವಿಶೇಷ ಮತ್ತು ಪ್ರಣಯದ ದಿನವಾಗಿರುತ್ತದೆ. ನೀವು ಸಂಗಾತಿಯೊಂದಿಗೆ ಸುತ್ತಾಡಲು ಹೋಗಬಹುದು. ಮನರಂಜನೆಗಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆಯಿದೆ. ನಿಮ್ಮ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಿ. ಕಳ್ಳತನವಾಗುವುದು ಅಥವಾ ಕಳೆದುಹೋಗುವ ಸಾಧ್ಯತೆ ಇದೆ. ಇನ್ನು ಕೆಲಸದ ವಿಷಯಕ್ಕೆ ಬಂದಾಗ, ನಿಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡ ಉಂಟಾಗಬಹುದು. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ನಿಮ್ಮ ಕಾರ್ಯಕ್ಷಮತೆಯೂ ಕುಸಿಯಬಹುದು. ಹಾಗಾಗಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಿ. ವ್ಯಾಪಾರಸ್ಥರು ಅವರ ಧೈರ್ಯ ಹಾಗೂ ಬುದ್ಧಿವಂತಿಕೆಯಿಂದ ಉತ್ತಮ ಯಶಸ್ಸನ್ನು ಪಡೆಯಬಹುದು. ನೀವು ಇಂದು ನಿಮ್ಮ ಪ್ರತಿಸ್ಪರ್ಧಿಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತೀರಿ. ಹಣದ ಹರಿವು ಉತ್ತಮವಾಗಿರುತ್ತದೆ, ಆದರೆ ನಿಮ್ಮ ಖರ್ಚುಗಳ ಬಗ್ಗೆ ಗಮನವಿರಲಿ. ನೀವು ಯೋಚಿಸದೆ ಖರ್ಚು ಮಾಡುತ್ತಿದ್ದರೆ, ಮುಂದೆ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನ ಸಾಮಾನ್ಯವಾಗಿದೆ.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 20

ಶುಭ ಸಮಯ: ಬೆಳಗ್ಗೆ 11:30 ರಿಂದ ರಾತ್ರಿ 9 ರವರೆಗೆ

ವೃಶ್ಚಿಕ ರಾಶಿ:

ವೃಶ್ಚಿಕ ರಾಶಿ:

ಇಂದು ನಿಮ್ಮ ಗೌರವ ಮತ್ತು ಖ್ಯಾತಿ ಹೆಚ್ಚಾಗುತ್ತದೆ. ಜನರು ನಿಮ್ಮ ಉತ್ತಮ ಗುಣಗಳನ್ನು ಹೊಗಳುತ್ತಾರೆ. ಇಂದು, ನಿಮ್ಮ ಮಾತು ಮತ್ತು ಸೌಮ್ಯ ನಡವಳಿಕೆಯಿಂದ ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ನಿಮ್ಮ ಕೆಲಸವು ಮಾರಾಟ ಅಥವಾ ಹಣಕಾಸು ವಿಷಯಕ್ಕೆ ಸಂಬಂಧಿತವಾಗಿದ್ದರೆ, ಇಂದು ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು, ಕಬ್ಬಿಣದ ವ್ಯಾಪಾರಿಗಳು ಯಾವುದೇ ದೊಡ್ಡ ವ್ಯವಹಾರವನ್ನು ಬುದ್ಧಿವಂತಿಕೆಯಿಂದ ಮಾಡಬೇಕು. ಇಲ್ಲದಿದ್ದರೆ ಲಾಭದ ಬದಲು ನಷ್ಟವಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ತಿಳಿಯಾಗಿರುತ್ತವೆ. ಮನೆಯ ಸದಸ್ಯರೊಂದಿಗೆ ಹೊಂದಾಣಿಕೆ ಸಾಧ್ಯ. ಜೀವನ ಸಂಗಾತಿಯೊಂದಿಗೆ ಉತ್ತಮ ಭಾಂದವ್ಯ. ಇಬ್ಬರೂ ಸೇರಿ ನಿಮ್ಮ ಜವಾಬ್ದಾರಿಗಳನ್ನು ನಿಭಾಯಿಸುತ್ತೀರಿ. ಆರ್ಥಿಕವಾಗಿ, ದಿನವು ದುಬಾರಿಯಾಗಲಿದೆ. ಆರೋಗ್ಯದ ಬಗ್ಗೆ ಮಾತನಾಡುವುದಾದರೆ, ಹವಾಮಾನದಲ್ಲಿನ ಬದಲಾವಣೆಯಿಂದಾಗಿ, ಇಂದು ಆರೋಗ್ಯ ಸಮಸ್ಯೆ ಉಂಟಾಗಬಹುದು.

ಅದೃಷ್ಟದ ಬಣ್ಣ: ಗುಲಾಬಿ

ಅದೃಷ್ಟದ ಸಂಖ್ಯೆ: 5

ಶುಭ ಸಮಯ: ಸಂಜೆ 6 ರಿಂದ 9 ರವರೆಗೆ

ಧನು ರಾಶಿ:

ಧನು ರಾಶಿ:

ಇದ್ದಕ್ಕಿದ್ದಂತೆ ಕಚೇರಿಯಲ್ಲಿ, ದೊಡ್ಡ ಸಮಸ್ಯೆ ಎದುರಾಗಬಹುದು. ಸಹೋದ್ಯೋಗಿಗಳೊಂದಿಗೆ ವಿವಾದ ಉಂಟಾಗುವ ಸಾಧ್ಯತೆಯಿದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಅನಗತ್ಯ ಮಾತುಕತೆಯಿಂದ ದೂರವಿರಿ ಮತ್ತು ನಿಮ್ಮ ಕೆಲಸದತ್ತ ಗಮನ ಹರಿಸಿ. ವ್ಯಾಪಾರ ಮಾಡುವವರಿಗೆ ಆರ್ಥಿಕ ಬಿಕ್ಕಟ್ಟು ಎದುರಾಗಬಹುದು. ಹಣದ ಸಮಸ್ಯೆಯಿಂದಾಗಿ, ನಿಮ್ಮ ಕೆಲವು ಪ್ರಮುಖ ಕೆಲಸಗಳು ಇಂದು ಅರ್ಧದಲ್ಲೇ ನಿಲ್ಲಬಹುದು. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಇಂದು ನೀವು ಏಕಾಂತದಲ್ಲಿ ಸಮಯ ಕಳೆಯಲು ಇಷ್ಟಪಡುತ್ತೀರಿ. ನೀವು ನಿಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದೆ. ಆರೋಗ್ಯದಲ್ಲಿನ ಕ್ಷೀಣತೆಯು ನಿಮ್ಮ ದಿನನಿತ್ಯದ ಯೋಜನೆಗಳಿಗೆ ಅಡ್ಡಿಯಾಗಬಹುದು. ನಿಮ್ಮ ಆಯಾಸ ಹೆಚ್ಚಾಗಬಹುದು ಮತ್ತು ನೀವು ಸಾಕಷ್ಟು ಬಲಹೀನತೆಯನ್ನು ಅನುಭವಿಸಬಹುದು.

ಅದೃಷ್ಟದ ಬಣ್ಣ: ಹಸಿರು

ಅದೃಷ್ಟದ ಸಂಖ್ಯೆ: 1

ಶುಭ ಸಮಯ: ಬೆಳಗ್ಗೆ 9:20 ರಿಂದ ಸಂಜೆ 6 ರವರೆಗೆ

ಮಕರ ರಾಶಿ:

ಮಕರ ರಾಶಿ:

ಇಂದು ನೀವು ನಿಮ್ಮ ನಕಾರಾತ್ಮಕ ಯೋಚನೆಗಳನ್ನು ಬಿಟ್ಟು ಸಕಾರಾತ್ಮಕ ಚಿಂತನೆಗಳನ್ನು ಮಾಡಲು ಪ್ರಯತ್ನಿಸಿ. ಧೈರ್ಯವಾಗಿ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಿ. ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದಾಗಿ ಪ್ರಶಂಸೆಯನ್ನು ಪಡೆದುಕೊಳ್ಳುತ್ತೀರಿ. ನಿಮ್ಮ ಬಾಸ್ ಇಂದು ನಿಮ್ಮೊಂದಿಗೆ ತುಂಬಾ ಸಂತೋಷವಾಗಿರುತ್ತಾರೆ. ಅವರು ನಿಮಗೆ ಕೆಲವು ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಡಬಹುದು. ಸಣ್ಣ ವ್ಯಾಪಾರಿಗಳಿಗೆ ಇಂದು ಉತ್ತಮ ದಿನ ಎಂದು ಹೇಳಬಹುದು. ನಿಮಗೆ ದೊಡ್ಡ ಲಾಭವನ್ನು ಪಡೆಯಲು ಸಾಧ್ಯವಾಗದಿದ್ದರೂ, ಇಂದು ಯಾವುದೇ ನಷ್ಟವಾಗುವುದಿಲ್ಲ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನೀವು ಪೋಷಕರ ಆಶೀರ್ವಾದ ಪಡೆಯುತ್ತೀರಿ. ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಸಂಗಾತಿಯೊಂದಿಗೆ ಮನಸ್ತಾಪ ಇದ್ದರೆ, ಇಂದು ಅವರ ಕೋಪ ಕಡಿಮೆ ಆಗಿ ವಾತಾವರಣ ತಿಳಿಯಾಗಬಹುದು. ಆರೋಗ್ಯದಲ್ಲಿ ಸುಧಾರಣೆ.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 16

ಶುಭ ಸಮಯ: ಮಧ್ಯಾಹ್ನ 2:30 ರಿಂದ 8 ಗಂಟೆ

ಕುಂಭ ರಾಶಿ:

ಕುಂಭ ರಾಶಿ:

ಇಂದು ನಿಮಗೆ ಯಾವುದೇ ರೀತಿಯ ಒತ್ತಡವೂ ಇರುವುದಿಲ್ಲ. ಮತ್ತು ನೀವು ಆರಾಮವಾಗಿರುತ್ತೀರಿ. ಕೆಲಸದ ವಿಷಯದಲ್ಲಿ ದಿನವು ಶುಭವಾಗಿರುತ್ತದೆ. ನೌಕರಿ ಹುಡುಕುತ್ತಿರುವವರಿಗೆ ಇಂದು ಕೆಲವು ಒಳ್ಳೆಯ ಸುದ್ದಿಗಳು ಸಿಗಬಹುದು. ನಿಮ್ಮ ಕಾರ್ಯಕ್ಷಮತೆಯನ್ನು ಮೆಚ್ಚಿ ನಿಮ್ಮ ಮೇಲಾಧಿಕಾರಿಗಳು ಭಡ್ತಿ ನೀಡುವ ಸಾದ್ಯತೆಯಿದೆ. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ. ಹಾಗೆಯೇ ವ್ಯಾಪಾರಿ ವರ್ಗವೂ ಸಹ ಇಂದು ಪ್ರಯೋಜನ ಪಡೆಯಬಹುದು. ದೊಡ್ಡ ಗ್ರಾಹಕರ ಸಂಪರ್ಕ ಸಿಗಬಹುದು. ವೈಯಕ್ತಿಕ ಜೀವನದಲ್ಲಿ ಯಾವುದೇ ದೊಡ್ಡ ಸಮಸ್ಯೆಗಳಿರುವುದಿಲ್ಲ. ನೀವು ಸಣ್ಣ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸಹ, ನಿಮ್ಮ ಪ್ರೀತಿಪಾತ್ರರ ಸಹಾಯದಿಂದ ನೀವು ಅವುಗಳನ್ನು ನಿಭಾಯಿಸಲು ಸಾಧ್ಯವಾಗುತ್ತದೆ. ದೀರ್ಘಕಾಲದ ನಂತರ ವಿವಾಹಿತರು ತಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುವ ಸಾಧ್ಯತೆ ಇದೆ. ಈ ಕ್ಷಣಗಳನ್ನು ನೀವು ತುಂಬಾ ಆನಂದಿಸುವಿರಿ.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 22

ಶುಭ ಸಮಯ: ಸಂಜೆ 5 ರಿಂದ 9 ರವರೆಗೆ

ಮೀನ ರಾಶಿ:

ಮೀನ ರಾಶಿ:

ಇಂದು ನೀವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮಗೆ ಯಾರ ಬೆಂಬಲವೂ ಸಿಗದಿದ್ದರೆ, ನಿರಾಶೆಗೊಳ್ಳುವ ಅಗತ್ಯವಿಲ್ಲ, ಶೀಘ್ರದಲ್ಲೇ ಪರಿಸ್ಥಿತಿಗಳು ಬದಲಾಗುತ್ತವೆ ಮತ್ತು ನಿಮಗೆ ಸರಿಯಾದ ಬೆಂಬಲವೂ ಸಿಗುತ್ತದೆ. ನಿಮ್ಮ ಕೆಲಸದ ಬಗ್ಗೆ ಮಾತನಾಡುವುದಾದರೆ, ಇಂದು ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳದಿರುವುದು ಉತ್ತಮ. ಬಹಳ ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಿ. ಯಾವುದೇ ಕೆಲಸಕ್ಕೂ ಅವಸರ ಬೇಡ. ವಿವಾಹಿತರರು ಆನಂದದಾಯಕ ದಿನವನ್ನು ಕಳೆಯುತ್ತಾರೆ. ಸಂಗಾತಿಯ ಪ್ರೀತಿಯ ನಡವಳಿಕೆ ಮತ್ತು ಅವರ ಸಕಾರಾತ್ಮಕತೆಯು ಎಂತಹ ಕಷ್ಟಕರ ಸಂದರ್ಭಗಳಲ್ಲಿಯೂ ನಿಮಗೆ ಧೈರ್ಯವನ್ನು ನೀಡುತ್ತದೆ. ಹಣಕ್ಕೆ ಸಂಬಂಧಿಸಿದಂತೆ, ಇಂದಿನ ದಿನವು ದುಬಾರಿಯಾಗಲಿದೆ. ನೀವು ಬಹಳ ದೀರ್ಘ ಮತ್ತು ಹಳೆಯ ಬಿಲ್ ಪಾವತಿಸಬೇಕಾಗಬಹುದು.

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 4

ಶುಭ ಸಮಯ: ಬೆಳಗ್ಗೆ 7:20 ರಿಂದ ಮಧ್ಯಾಹ್ನ 2:30 ರವರೆಗೆ

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,

ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.

ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.

ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

English summary

Dina Bhavishya 3 November 2020

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Tuesday, November 3, 2020, 4:00 [IST]
X
Desktop Bottom Promotion