ಶನಿವಾರದ ದಿನ ಭವಿಷ್ಯ: ಸಿಂಹ ರಾಶಿಯವರೇ, ಸಮಸ್ಯೆಗಳಿಗೆ ಹೆದರಬೇಡಿ

ಶುಭೋದಯ....ದಿನ ಬೆಳಗಾಗಿ ನಮ್ಮ ದಿನಚರಿ ಆರಂಭವಾಗುವುದೇ ಒಂದು ನಂಬಿಕೆ ಮೇಲೆ. ಈ ದಿನ ಎಲ್ಲವೂ ಒಳಿತಾಗಲಿ ಎಂದು ದೇವರನ್ನು ಕೇಳಿಕೊಳ್ಳುತ್ತೇವೆ. ಜ್ಯೋತಿಷ್ಯದಲ್ಲೂ ಕೂಡ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ಹೇಳಲಾಗುತ್ತದೆ. ಬನ್ನಿ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ತಿಳಿಯೋಣ:

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,

ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.

ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋ ಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.

ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

Dina Bhavishya 7 November 2020

ಸಂವತ್ಸರ: ಶಾರ್ವರಿ
ಆಯನ: ದಕ್ಷಿಣಾಯನ
ಋತು: ಶರದ್
ಮಾಸ: ಕಾರ್ತಿಕಾ
ತಿಥಿ: ಷಷ್ಠಿ
ನಕ್ಷತ್ರ: 8:5ರವರೆಗೆ ಪುನರ್ವಸು ನಂತರ ಪುಷ್ಯಾ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಬೆಳಗ್ಗೆ 08:59ರಿಂದ 10:26ರವರೆಗೆ
ಗುಳಿಕಕಾಲ: ಬೆಳಗ್ಗೆ06:05ರಿಂದ 07:32 ರವರೆಗೆ
ಯಮಗಂಡಕಾಲ: ಮಧ್ಯಾಹ್ನ 01:19ರಿಂದ02:46ರವರೆಗೆ
ದುರ್ಮುಹೂರ್ತ: ಬೆಳಗ್ಗೆ 06:51 ರಿಂದ07:37ರವರೆಗೆ
ಸಂಜೆ 07:26ರಿಂದ 07:31ರವರೆಗೆ

ಸೂರ್ಯೋದಯ: ಬೆಳಗ್ಗೆ 06:05ಕ್ಕೆ
ಸೂರ್ಯಾಸ್ತ: ಸಂಜೆ 05:40ಕ್ಕೆ

ಮೇಷ ರಾಶಿ :

ಮೇಷ ರಾಶಿ :

ಇಂದು ನಿಮ್ಮ ಕುಟುಂಬ ಜೀವನವು ಸಂತೋಷವಾಗಿರುತ್ತದೆ. ನೀವು ಕುಟುಂಬದವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನೀವು ಯಾವುದೇ ತೊಂದರೆಗೆ ಸಿಲುಕಿದರೆ, ನಿಮ್ಮ ಪ್ರೀತಿಪಾತ್ರರ ಸಹಾಯ ಪಡೆಯಲು ಹಿಂಜರಿಯಬೇಡಿ. ನಿಮ್ಮ ತಂದೆಯ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ. ನೀವು ಅವಿವಾಹಿತರಾಗಿದ್ದರೆ, ಇಂದು ನಿಮ್ಮ ಮದುವೆ ಬಗ್ಗೆ ಪ್ರಸ್ತಾಪ ಮಾಡಬಹುದು. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಇಂದು ನೀವು ಮನೆಯ ಸೌಕರ್ಯಗಳಿಗಾಗಿ ಸ್ವಲ್ಪ ಹಣವನ್ನು ಖರ್ಚು ಮಾಡಬಹುದು. ಕೆಲಸದ ಬಗ್ಗೆ ಮಾತನಾಡುವುದಾದರೆ, ಇಂದು ಕಚೇರಿಯಲ್ಲಿ ಕೆಲಸದ ಹೊರೆ ಸ್ವಲ್ಪ ಹೆಚ್ಚು ಇರಬಹುದು. ಹಾಗಂತ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ ಮತ್ತು ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ಪ್ರಯತ್ನಿಸಿ. ನೀವು ವ್ಯಾಪಾರ ವಹಿವಾಟು ಮಾಡಿದರೆ ಇದ್ದಕ್ಕಿದ್ದಂತೆ ನೀವು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು, ಆದರೆ ಶೀಘ್ರದಲ್ಲೇ ಈ ಸಮಸ್ಯೆಯನ್ನು ಪರಿಹಾರವಾಗುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.

ಉತ್ತಮ ಬಣ್ಣ: ನೀಲಿ

ಶುಭ ಸಂಖ್ಯೆ: 38

ಶುಭ ಸಮಯ: ಬೆಳಿಗ್ಗೆ 8:25 ರಿಂದ ಮಧ್ಯಾಹ್ನ 2 ರವರೆಗೆ

ವೃಷಭ ರಾಶಿ :

ವೃಷಭ ರಾಶಿ :

ವೃತ್ತಿಜೀವನದಬಗ್ಗೆ ನಿಮ್ಮ ಮನಸ್ಸಿನಲ್ಲಿ ಯಾವುದೇ ಗೊಂದಲವಿದ್ದರೆ ನಿಮ್ಮ ಸಲಹೆಗಾರರಿಂದ ನೀವು ಸಲಹೆ ತೆಗೆದುಕೊಳ್ಳಬೇಕು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಕಚೇರಿಯಲ್ಲಿ, ಹಿರಿಯ ಅಧಿಕಾರಿಗಳು ನಿಮಗೆ ಮಾರ್ಗದರ್ಶನ ನೀಡುತ್ತಾರೆ ಮತ್ತು ಇಂದು ನಿಮಗೆ ಕೆಲವು ದೊಡ್ಡ ಮತ್ತು ಪ್ರಮುಖ ಜವಾಬ್ದಾರಿಯನ್ನು ನೀಡಬಹುದು. ನಿಮ್ಮ ಕೆಲಸವನ್ನು ನೀವು ಸಂಪೂರ್ಣ ಸಕಾರಾತ್ಮಕತೆ ಮತ್ತು ಕಠಿಣ ಪರಿಶ್ರಮದಿಂದ ಮಾಡುತ್ತೀರಿ. ಸಹಭಾಗಿತ್ವದಲ್ಲಿ ವ್ಯಾಪಾರ ಮಾಡುವುದಿದ್ದರೆ ಉತ್ತಮ ಲಾಭ ಪಡೆಯಬಹುದು. ಕುಟುಂಬ ಜೀವನದ ವಿಷಯದಲ್ಲಿ ನಿಮ್ಮ ಮನೆಯ ವಾತಾವರಣ ಇಂದು ಉತ್ತಮವಾಗಿರುತ್ತದೆ. ಸಂಗಾತಿಯ ಮನಸ್ಥಿತಿ ಸರಿ ಇರುವುದಿಲ್ಲ. ಇಂತಹಪರಿಸ್ಥಿತಿಯಲ್ಲಿ, ನೀವು ಯಾವುದೇ ವಿವಾದಿತ ವಿಷಯವನ್ನು ಚರ್ಚಿಸಬೇಡಿ. ದುಬಾರಿ ವೆಚ್ಚವಾಗುವ ಸಾಧ್ಯತೆ ಇದೆ. ಈ ಹಬ್ಬದ ಅವಧಿಯಲ್ಲಿ ನಿಮ್ಮ ಮನೆಯ ವೆಚ್ಚಗಳು ಹೆಚ್ಚಾಗಬಹುದು. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಬಹುದು. ಗ್ಯಾಸ್ಟ್ರಿಕ್ ಅಥವಾ ಅಜೀರ್ಣ ಸಮಸ್ಯೆ ಎದುರಾಗಬಹುದು.

ಉತ್ತಮ ಬಣ್ಣ: ಕಡು ಹಸಿರು

ಶುಭ ಸಂಖ್ಯೆ: 10

ಶುಭ ಸಮಯ: ಸಂಜೆ 6:05 ರಿಂದ 9:30 ರವರೆಗೆ

ಮಿಥುನ ರಾಶಿ :

ಮಿಥುನ ರಾಶಿ :

ನೀವು ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ, ನೀವು ನಕಾರಾತ್ಮಕ ಆಲೋಚನೆಗಳಿಂದ ದೂರವಿರಬೇಕು. ಅನಗತ್ಯ ವಿಷಯಗಳ ಬಗ್ಗೆ ಯೋಚಿಸಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ. ಈ ಸಮಯವು ನಿಮಗೆ ಬಹಳ ಮುಖ್ಯವಾಗಿದೆ. ಕಚೇರಿಯಲ್ಲಿ ಏನಾದರೂ ಸಮಸ್ಯೆ ಇದ್ದರೆ, ನೀವು ನಿಮ್ಮ ಮೇಲಾಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಬೇಕು. ಒತ್ತಡದಲ್ಲಿ ಕೆಲಸ ಮಾಡಿದರೆ ನಿಮ್ಮ ಆರೋಗ್ಯ ಮತ್ತು ಕಾರ್ಯಕ್ಷಮತೆ ಎರಡರ ಕುಸಿತಕ್ಕೆ ಕಾರಣವಾಗಬಹುದು. ವ್ಯಾಪಾರ ಅಥವಾ ರಾಜಕೀಯವಾಗಿ ಸಮಸ್ಯೆ ಎದುರಾಗಿದ್ದರೆ , ಇಂದು ನೀವು ಯಶಸ್ಸನ್ನು ಪಡೆಯಬಹುದು. ಹಣದ ಪರಿಸ್ಥಿತಿ ಎಂದಿಗಿಂತ ಉತ್ತಮವಾಗಿರುತ್ತದೆ. ಇಂದು ನೀವು ಯಾವುದೇ ಹಳೆಯ ಬಿಲ್ ಅನ್ನು ಸಹ ಪಾವತಿಸಬಹುದು. ಮನೆಯಲ್ಲಿ ಶಾಂತಿ ಇರುತ್ತದೆ ಮತ್ತು ಕುಟುಂಬದೊಂದಿಗೆ ನಿಮ್ಮ ಸಂಬಂಧವೂ ಉತ್ತಮವಾಗಿರುತ್ತದೆ.

ಉತ್ತಮ ಬಣ್ಣ: ಮೆರೂನ್

ಶುಭ ಸಂಖ್ಯೆ: 31

ಶುಭ ಸಮಯ: ಮಧ್ಯಾಹ್ನ 3 ರಿಂದ 8 ರವರೆಗೆ

ಕರ್ಕಾಟಕ ರಾಶಿ :

ಕರ್ಕಾಟಕ ರಾಶಿ :

ರಾಜಕೀಯ ಕೆಲಸದಿಂದ ದೂರವಿರಿ ಮತ್ತು ನಿಮ್ಮ ಕೆಲಸದತ್ತ ಗಮನ ಹರಿಸಿ. ಈ ಸಮಯದಲ್ಲಿ ಕೆಲಸದ ಬಗ್ಗೆ ನಿರ್ಲಕ್ಷ್ಯ ನಿಮ್ಮ ತೊಂದರೆಗಳನ್ನು ಹೆಚ್ಚಿಸುತ್ತದೆ. ಇದಲ್ಲದೆ, ನಿಮ್ಮ ಬಾಸ್ ಮುಂದೆ ನೀವು ಕೆಟ್ಟವರಾಗಿ ಕಾಣಿಸಬಹುದು. ವ್ಯಾಪಾರಿಗಳಿಗೆ ಸಾಲ ನೀಡಬೇಡಿ. ನಿಮ್ಮ ವಿರೋಧಿಗಳ ಬಗ್ಗೆ ನೀವು ಜಾಗರೂಕರಾಗಿರಬೇಕು. ಸಂಗಾತಿಯ ನಡವಳಿಕೆಯಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮ ನಡವಳಿಕೆಯನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಮತ್ತು ನಿಮ್ಮ ಪ್ರಿಯತಮೆಯನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು. ಹೆತ್ತವರ ಆರೋಗ್ಯ ಉತ್ತಮವಾಗಿರುತ್ತದೆ. ನೀವು ಅವರ ಆಶೀರ್ವಾದವನ್ನು ಪಡೆಯುತ್ತೀರಿ. ಇಂದು ನೀವು ಕೆಲವು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯಬಹುದು. ನಿಮ್ಮ ಆರೋಗ್ಯದಲ್ಲಿ ಯಾವ ಸಮಸ್ಯೆ ಇಲ್ಲ.

ಉತ್ತಮ ಬಣ್ಣ: ಹಳದಿ

ಅದೃಷ್ಟ ಸಂಖ್ಯೆ: 9

ಶುಭ ಸಮಯ: ಬೆಳಿಗ್ಗೆ 11 ರಿಂದ ರಾತ್ರಿ 8:05

ಸಿಂಹ ರಾಶಿ :

ಸಿಂಹ ರಾಶಿ :

ಜೀವನದಲ್ಲಿ ಏರಿಳಿತಗಳು ಬರುತ್ತದೆ. ಎದುರಾಗುವ ಸಮಸ್ಯೆಗಳು ಮತ್ತು ಸವಾಲುಗಳಿಗೆ ಹೆದರ ಬೇಡಿ. ಬದಲಾಗಿ ನೀವು ಅವನ್ನು ಧೈರ್ಯದಿಂದ ಎದುರಿಸಿದರೆ ಯಶಸ್ಸು ನಿಮ್ಮದಾಗುತ್ತದೆ. ಇಂದು ಇದ್ದಕ್ಕಿದ್ದಂತೆ ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರ ಬರುವಿರಿ. ಕಚೇರಿಯ ವಾತಾವರಣವು ತುಂಬಾ ಉತ್ತಮವಾಗಿರುತ್ತದೆ, ನಿಮ್ಮ ಕಾರ್ಯಕ್ಷಮತೆ ಶ್ಲಾಘನೀಯವಾಗಿರುತ್ತದೆ ಮತ್ತು ನೀವು ಬಾಸ್‍ನ ಸಹಾಯವನ್ನೂ ಪಡೆಯುತ್ತೀರಿ. ನೀವು ದೊಡ್ಡ ಉದ್ಯಮಿಗಳಾಗಿದ್ದರೆ, ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಯಾವುದೇ ಆತುರಪಡಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಹಣದ ಪರಿಸ್ಥಿತಿ ಸಾಮಾನ್ಯವಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಉತ್ತಮ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 9

ಶುಭ ಸಮಯ: ಬೆಳಿಗ್ಗೆ 7:20 ರಿಂದ ಸಂಜೆ 5 ರವರೆಗೆ

ಕನ್ಯಾರಾಶಿ :

ಕನ್ಯಾರಾಶಿ :

ನಿಮಗೆ ಇಂದುಹೆಚ್ಚು ಕೆಲಸವಿಲ್ಲದಿದ್ದರೆ, ನಿಮ್ಮ ಬಿಡುವಿನ ಸಮಯವನ್ನು ಚೆನ್ನಾಗಿ ಬಳಸಿಕೊಳ್ಳಿ, ಉತ್ತಮ ಪುಸ್ತಕವನ್ನು ಓದಿ. ಇದು ನಿಮ್ಮ ಜ್ಞಾನವನ್ನು ಹೆಚ್ಚಿಸುತ್ತದೆ. ಕೆಲಸ ಮಾಡಿದರೆ ಇಂದು ನೀವು ಕಚೇರಿಯಲ್ಲಿ ಕೆಲವು ಪ್ರಮುಖ ಮಾಹಿತಿಯನ್ನು ಪಡೆಯಬಹುದು. ಹಿರಿಯ ಅಧಿಕಾರಿಗಳೊಂದಿಗೆ ನಿಮ್ಮ ಸಂಬಂಧವನ್ನು ಸುಧಾರಿಸಲು ಪ್ರಯತ್ನಿಸಿ. ನೀವು ಉದ್ಯಮಿಯಾಗಿದ್ದರೆ, ನಿಮ್ಮ ವ್ಯವಹಾರವು ವೇಗವಾಗಿ ಬೆಳೆಯುವ ಸಾಧ್ಯತೆ ಇದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನೀವು ಕುಟುಂಬ ಸದಸ್ಯರಿಂದ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಹಿರಿಯ ಸಹೋದರನಿಂದ ಆರ್ಥಿಕ ಬೆಂಬಲ ಸಿಗಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಉಲ್ಲಾಸದಿಂದ ಹಾಗೂ ಶಕ್ತಿಯುತವಾಗಿರಲು ಬೆಳಿಗ್ಗೆ ವಾಯು ವಿಹಾರ ಮಾಡಿ.

ಉತ್ತಮ ಬಣ್ಣ: ಹಸಿರು

ಶುಭ ಸಂಖ್ಯೆ: 6

ಶುಭ ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ

ತುಲಾ ರಾಶಿ :

ತುಲಾ ರಾಶಿ :

ಇಂದು ನಿಮಗೆ ಮಿಶ್ರ ಫಲ. ನೀವು ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗಬಹುದು, ವಿಶೇಷವಾಗಿ ಹಣಕಾಸಿನ ವಿಷಯಗಳಲ್ಲಿ ನಿಮ್ಮ ಕಾಳಜಿ ಹೆಚ್ಚುತ್ತಿದೆ. ಹಳೆಯ ಸಾಲವನ್ನು ಮರುಪಾವತಿಸಲು ನೀವು ಒತ್ತಡಕ್ಕೆ ಒಳಗಾಗುತ್ತೀರಿ. ಕೆಲಸದ ವಿಷಯದಲ್ಲಿ ನೋಡಿದ್ರೆ, ಕಚೇರಿಯಲ್ಲಿ ನೀವು ಇಂದು ಒಂದು ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸಲು ತುಂಬಾ ಶ್ರಮಿಸುತ್ತೀರಿ, ಆದರೆ ಇದರೊಂದಿಗೆ ನೀವು ನಿಮ್ಮ ಸಮಯವನ್ನು ಸಹ ನೋಡಿಕೊಳ್ಳಬೇಕಾಗುತ್ತದೆ. ನಿಮ್ಮ ಎಲ್ಲಾ ಕಾರ್ಯಗಳನ್ನು ಶಾಂತ ಮನಸ್ಸಿನಿಂದ ಮತ್ತು ಎಚ್ಚರಿಕೆಯಿಂದ ನಿರ್ವಹಿಸಲು ಪ್ರಯತ್ನಿಸಿ. ನೀವು ಅವಸರದಲ್ಲಿ ತಪ್ಪುಗಳನ್ನು ಮಾಡಬಹುದು. ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ಫಲ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಕುಟುಂಬ ಸದಸ್ಯರೊಂದಿಗಿನ ಸಂಬಂಧವು ಸಾಮರಸ್ಯದಿಂದ ಉಳಿಯುತ್ತದೆ. ಮಕ್ಕಳ ಶಿಕ್ಷಣದಲ್ಲಿ ಎದುರಾಗುವ ಯಾವುದೇ ಅಡೆತಡೆಗಳನ್ನು ನಿವಾರಿಸಬಹುದು. ಆರೋಗ್ಯದ ಬಗ್ಗೆ ಮಾತನಾಡುತ್ತಾ, ನಿಮಗೆ ಮೈಗ್ರೇನ್ ಇದ್ದರೆ ಹೆಚ್ಚು ಕಾಳಜಿ ವಹಿಸಿ.

ಉತ್ತಮ ಬಣ್ಣ: ಕಂದು

ಶುಭ ಸಂಖ್ಯೆ: 26

ಶುಭ ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ

ವೃಶ್ಚಿಕ ರಾಶಿ:

ವೃಶ್ಚಿಕ ರಾಶಿ:

ಇಂದು ನೀವು ನಿಮ್ಮ ಕುಟುಂಬ ಜೀವನದ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ನಿಮ್ಮ ವಿನಮ್ರ ಸ್ವಭಾವವು ನಿಮಗೆ ಸಹಾಯ ಮಾಡಲಿದೆ, ವಿಶೇಷವಾಗಿ ನಿಮ್ಮ ಪೋಷಕರು ನಿಮ್ಮೊಂದಿಗೆ ತುಂಬಾ ಸಂತೋಷವಾಗಿರುತ್ತಾರೆ. ಸಂಗಾತಿಯ ಪ್ರೀತಿಯ ನಡವಳಿಕೆಯು ನಿಮಗೆ ವಿಶೇಷ ಭಾವನೆಯನ್ನು ನೀಡುತ್ತದೆ. ಹಣದ ವಿಷಯದಲ್ಲಿ ಇಂದು ನಿಮಗೆ ಮಿಶ್ರ ಫಲವಾಗಿರುತ್ತದೆ. ನಿಮ್ಮ ಆದಾಯವು ಉತ್ತಮವಾಗಿರುತ್ತದೆ. ಕೆಲಸದ ಬಗ್ಗೆ ಮಾತನಾಡುತ್ತಾ, ಉದ್ಯೋಗಿಗಳಿಗೆ ಕಚೇರಿಯ ಹಿರಿಯ ಅಧಿಕಾರಿಗಳಿಂದ ಮಾರ್ಗದರ್ಶನ ಸಿಗುತ್ತದೆ. ಮತ್ತೊಂದೆಡೆ, ವ್ಯಾಪಾರಸ್ಥರು ಸಹ ಇಂದು ಪ್ರಯೋಜನ ಪಡೆಯಬಹುದು. ಆರೋಗ್ಯ ಉತ್ತಮವಾಗಿರುತ್ತದೆ, ಇಂದು ನೀವು ಸಕಾರಾತ್ಮಕತೆಯನ್ನು ಅನುಭವಿಸುವಿರಿ.

ಉತ್ತಮ ಬಣ್ಣ: ಕೆಂಪು

ಶುಭ ಸಂಖ್ಯೆ: 12

ಶುಭ ಸಮಯ: ಬೆಳಿಗ್ಗೆ 4:15 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ :

ಧನು ರಾಶಿ :

ನೀವು ಸಣ್ಣ ವಿಷಯಗಳನ್ನು ಮನಸ್ಸಲಿಟ್ಟುಕೊಳ್ಳವುದನ್ನು ಬಿಡಿ ಮತ್ತು ಅನಗತ್ಯ ವಿಷಯಗಳನ್ನು ನಿರ್ಲಕ್ಷಿಸಲು ಕಲಿಯಿರಿ ಇಲ್ಲದಿದ್ದರೆ ನೀವು ಅನಗತ್ಯ ಸಮಸ್ಯೆಗಳಲ್ಲಿ ಸಿಲುಕಿಕೊಳ್ಳುತ್ತೀರಿ. ತಾಯಿಯ ಆರೋಗ್ಯ ಕುಸಿಯಬಹುದು. ಈ ಸಮಯದಲ್ಲಿ ಅವರನ್ನು ಒತ್ತಡದಿಂದ ದೂರವಿಡಿ. ಹಣದ ಬಗ್ಗೆ ಮಾತನಾಡುತ್ತಾ, ನಿಮಗೆ ಹಣಕಾಸಿನ ಸಮಸ್ಯೆ ಎದುರಾಗುತ್ತದೆ. ದೈನಂದಿನ ಅಗತ್ಯಗಳನ್ನು ಪೂರೈಸಲು ನೀವು ಇಂದು ಸಾಲ ಮಾಡಬೇಕಾಗಬಹುದು. ಕೆಲಸದ ವಿಷಯದಲ್ಲಿ, ಈ ದಿನದಂದು ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು, ವಿಶೇಷವಾಗಿ ನೀವು ವೃತ್ತಿಪರರಾಗಿದ್ದರೆ, ನಿಮ್ಮ ಕಠಿಣ ಪರಿಶ್ರಮದ ಫಲಶ್ರುತಿಯನ್ನು ನೀವು ಪಡೆಯುವ ಸಾಧ್ಯತೆಯಿದೆ. ವ್ಯಾಪಾರಸ್ಥರು ಪ್ರಯಾಣವನ್ನು ಮಾಡಬೇಡಿ. ಇಂದಿನ ಪ್ರಯಾಣವು ತುಂಬಾ ದುಬಾರಿ ಮತ್ತು ಮತ್ತು ಆಯಾಸ ತರಿಸಬಹುದು. ಆರೋಗ್ಯದ ಬಗ್ಗೆ ಮಾತನಾಡುವುದಾದಲ್ಲಿ, ನೀವು ಮಾನಸಿಕ ಹೊರೆ ಹೆಚ್ಚಾಗುತ್ತದೆ. ಅದು ನಿಮ್ಮ ದೈಹಿಕ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಉತ್ತಮ ಬಣ್ಣ: ಬಿಳಿ

ಅದೃಷ್ಟ ಸಂಖ್ಯೆ: 19

ಶುಭ ಸಮಯ: ಸಂಜೆ 6 ರಿಂದ 10 ರವರೆಗೆ

ಮಕರ ರಾಶಿ :

ಮಕರ ರಾಶಿ :

ಇಂದಿನ ದಿನದ ಆರಂಭ ಉತ್ತಮವಾಗಿರಲಿದೆ. ನೀವು ಬೆಳಿಗ್ಗೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು, ಇದು ಮನೆಯ ವಾತಾವರಣವನ್ನು ಸಂತೋಷಪಡಿಸುತ್ತದೆ. ಮಾನಸಿಕವಾಗಿ ನೀವು ಸಾಕಷ್ಟು ನೆಮ್ಮದಿಯನ್ನು ಅನುಭವಿಸುವಿರಿ. ನಿಮ್ಮ ಹಿರಿಯರ ಸಲಹೆ ಪಡೆದುಕೊಂಡೇ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಿ, ವಿಶೇಷವಾಗಿ ನಿಮ್ಮ ಹೆತ್ತವರ ಅಭಿಪ್ರಾಯವನ್ನು ನೀವು ತಿಳಿದುಕೊಳ್ಳಬೇಕು. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ಇಂದು ನೀವು ಕುಟುಂಬ ಸದಸ್ಯರಿಗೆ ಉಡುಗೊರೆಗಳನ್ನು ಸಹ ಖರೀದಿಸಬಹುದು. ಕೆಲಸದ ಬಗ್ಗೆ ಮಾತನಾಡುವುದಾದಲ್ಲಿ, ವ್ಯಾಪಾರಸ್ಥರು ಇಂದು ಏರಿಳಿತಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಗ್ರಾಹಕರ ಆಯ್ಕೆಗಳಿಗೆ ಆದ್ಯತೆ ನೀಡಿ. ನೀವು ದೊಡ್ಡ ಉದ್ಯಮಿಯಾಗಿದ್ದರೆ ನಿಮ್ಮ ಉದ್ಯೋಗಿಗಳೊಂದಿಗೆ ಸಮನ್ವಯವನ್ನು ಸುಧಾರಿಸಲು ಪ್ರಯತ್ನಿಸಿ. ಉದ್ಯೋಗದಲ್ಲಿರುವ ಜನರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಆರೋಗ್ಯದ ದೃಷ್ಟಿಯಿಂದ ದಿನ ಅನುಕೂಲಕರವಾಗಿರುತ್ತದೆ.

ಉತ್ತಮ ಬಣ್ಣ: ಗುಲಾಬಿ

ಶುಭ ಸಂಖ್ಯೆ: 8

ಶುಭ ಸಮಯ: ಮಧ್ಯಾಹ್ನ 12:55 ರಿಂದ 7 ಗಂಟೆ

ಕುಂಭ ರಾಶಿ :

ಕುಂಭ ರಾಶಿ :

ಇಂದಿನ ಕೆಲಸದ ಆಯಾಸವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳುವುದು ಉತ್ತಮ. ಕುಟುಂಬ ಜೀವನವು ಉತ್ತಮವಾಗಿರುತ್ತದೆ. ಮಕ್ಕಳಿಂದ ಸಂತೋಷ ಸಿಗುತ್ತದೆ. ವೈವಾಹಿಕ ಜೀವನದ ಸಮಸ್ಯೆಗಳು ಇಂದು ಪರಿಹಾರವಾಗಲಿದೆ. ನಿಮ್ಮ ಸಂಗಾತಿಯೊಂದಿಗಿನ ವಿರಸ ಕೊನೆಗೊಳ್ಳುತ್ತದೆ ಮತ್ತು ಇಂದು ಅವರು ನಿಮ್ಮನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯ ಹೆಚ್ಚುವ ಸಾಧ್ಯತೆ ಇದೆ. ಇಂದು ನೀವು ಕಚೇರಿಯಲ್ಲಿ ಅನಗತ್ಯವಾಗಿ ಯಾರೊಂದಿಗಾದರೂ ವಿವಾದ ಮಾಡುವ ಸಂದರ್ಭ ಎದುರಾಗಬಹುದು. ಅಂತಹ ಸಂದರ್ಭಗಳನ್ನು ತಪ್ಪಿಸಿ, ನಿಮ್ಮ ಕೆಲಸದ ಬಗ್ಗೆ ಗಮನಹರಿಸಲು ನೀವು ಉತ್ತಮವಾಗಿ ಪ್ರಯತ್ನಿಸುತ್ತೀರಿ. ಕೋರ್ಟ್ ಕಚೇರಿ ಪ್ರಕರಣಗಳಿಗೆ ದಿನ ಅನುಕೂಲಕರವಾಗಿದ್ದ ನೀವು ಯಶಸ್ಸನ್ನು ಪಡೆಯಬಹುದು. ಇಂದು ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ಭವಿಷ್ಯದಲ್ಲಿ ನೀವು ಕೊರಗುವಂತಹ ಕೆಲಸವನ್ನು ಮಾಡಬೇಡಿ.

ಉತ್ತಮ ಬಣ್ಣ: ನೇರಳೆ

ಅದೃಷ್ಟ ಸಂಖ್ಯೆ: 30

ಶುಭ ಸಮಯ: ಬೆಳಿಗ್ಗೆ 4:10 ರಿಂದ ಮಧ್ಯಾಹ್ನ 3:50

ಮೀನ ರಾಶಿ :

ಮೀನ ರಾಶಿ :

ಉದ್ಯೋಗಿಗಳು ಇಂದು ತಮ್ಮ ಕೆಲಸದಲ್ಲಿ ವೇಗವನ್ನು ಕಾಯ್ದುಕೊಳ್ಳಬೇಕಾಗುತ್ತದೆ ಮತ್ತು ಪ್ರಮುಖ ಕಾರ್ಯಗಳನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗಿದೆ. ಇಂದು ವ್ಯವಹಾರಕ್ಕೆ ಸಂಬಂಧಿಸಿದ ಜನರ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ ಮತ್ತು ಅವರಿಗೆ ಪ್ರಯೋಜನಗಳೂ ಸಿಗುತ್ತವೆ. ನೀವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ನೀವು ಲಾಭ ಪಡೆಯಬಹುದು. ನಿಮ್ಮ ವೈವಾಹಿಕ ಜೀವನದ ಬಗ್ಗೆ ಮಾತನಾಡುವುದಾದಲ್ಲಿ, ಇಂದು ನಿಮ್ಮ ಜೀವನ-ಸಂಗಾತಿಯ ವರ್ತನೆ ನಿಮಗೆ ಸ್ವಲ್ಪ ತೊಂದರೆ ಉಂಟುಮಾಡಬಹುದು. ಸಂಭಾಷಣೆಯಲ್ಲಿ ಅವರ ನಿಷ್ಠುರತೆ ನಿಮಗೆ ದುಃಖವನ್ನುಂಟು ಮಾಡುತ್ತದೆ. ಪ್ರೀತಿಯ ದಂಪತಿಗಳಿಗೆ ದಿನ ಸಾಮಾನ್ಯವಾಗಿರುತ್ತದೆ. ಆರ್ಥಿಕವಾಗಿ ಬಹಳ ಲಾಭದಾಯಕವಾಗಿರುತ್ತದೆ. ಇಂದು ನೀವು ಹೆಚ್ಚುವರಿ ಹಣವನ್ನು ಸಂಪಾದಿಸಲು ಸಾಧ್ಯವಾಗುತ್ತದೆ. ನಿಮ್ಮ ಭಾವನೆಗಳ ಮೇಲೆ ನೀವು ಅತಿಯಾಗಿ ಭಾವನಾತ್ಮಕವಾಗಿರುವುದು ಸರಿಯಲ್ಲ.

ಉತ್ತಮ ಬಣ್ಣ: ನೀಲಿ

ಅದೃಷ್ಟ ಸಂಖ್ಯೆ: 14

ಶುಭ ಸಮಯ: ಸಂಜೆ 6:15 ರಿಂದ 11 ರವರೆಗೆ

ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು,

ಆಚಾರ್ಯ ಶ್ರೀ ರಾಘವೇಂದ್ರ ಭಟ್ ಕುಡ್ಲ.

ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಉಪಾಸಕರು

ಪ್ರೀತಿ- ಪ್ರೇಮ ವಿಚಾರ, ಸತಿ- ಪತಿ ಕಲಹ, ಮದುವೆ ವಿಳಂಬ, ಸಂತಾನ, ಉದ್ಯೋಗ, ವ್ಯಾಪಾರ ಸಮಸ್ಯೆ, ದೃಷ್ಟಿ ದೋಷ, ಕುಜ ದೋಷ, ವಾಮಾಚಾರ ಬಾಧಿತರಿಗೆ ಪರಿಹಾರ ನಿಶ್ಚಿತ. ಹಣಕಾಸು ಸಮಸ್ಯೆ, ಅನಾರೋ ಗ್ಯ, ಶತ್ರು ಬಾಧೆ, ಗೃಹ ನಿರ್ಮಾಣದಲ್ಲಿ ಅಡೆ-ತಡೆಗಳಿದ್ದಲ್ಲಿ ಸುಲಭ ಪರಿಹಾರ ಒದಗಿಸಲಿದ್ದಾರೆ. ನಿಮ್ಮ ಯಾವುದೇ ಸಮಸ್ಯೆಗೆ ಒಮ್ಮೆ ಭೇಟಿ ನೀಡಿ.

ದುರ್ಗಾ ಅನುಗ್ರಹ ಜ್ಯೋತಿಷ್ಯ ಕೇಂದ್ರ ಮೊಬೈಲ್ ಫೋನ್ ಸಂಖ್ಯೆ 9945699005

English summary

Dina Bhavishya 7 November 2020

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Saturday, November 7, 2020, 4:00 [IST]
X
Desktop Bottom Promotion