Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 9 Feb 2023: ಗುರುವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಫೆಬ್ರವರಿ 9ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಫಲ್ಗುಣ
ಪಕ್ಷ: ಕೃಷ್ಣಪಕ್ಷ
ತಿಥಿ: ಚತುರ್ಥಿ
ನಕ್ಷತ್ರ: ಉತ್ತರ ಫಲ್ಗುಣ
ರಾಹುಕಾಲ: ಮಧ್ಯಾಹ್ನ 2:01ರಿಂದ 03:29ರವರೆಗೆ

ಮೇಷ ರಾಶಿ
ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಕೆಲಸದ ಬಗ್ಗೆ ಹೇಳುವುದಾದರೆ ಈ ದಿನ ಒಳ್ಳೆಯದಿದೆ. ಮತ್ತೊಂದೆಡೆ ಉದ್ಯಮಿಗಳ ಸಂಕಷ್ಟ ಕೂಡ ಹೆಚ್ಚಾಗಲಿದೆ. ನೀವು ಕೆಲವು ಕಾನೂನು ವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರವಹಿಸಿ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯದಿದೆ, ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮಗೆ ಶೀತ, ಕೆಮ್ಮು ಇತ್ಯಾದಿ ಸಣ್ಣ-ಪುಟ್ಟ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ತಿಳಿ ಗುಲಾಬಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 12:40 ರಿಂದ ಸಂಜೆ 6:10 ರವರೆಗೆ

ವೃಷಭ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಮಹತ್ವದ ದಿನವಾಗಿದೆ. ನಿಮ್ಮ ಶಿಕ್ಷಣದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತದೆ. ಉದ್ಯಮಿಗಳು ಇಂದು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವ ಬಲವಾದ ಸಾಧ್ಯತೆಯಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಹಣದ ವಿಷಯದಲ್ಲಿ, ದಿನವು ಮಿಶ್ರವಾಗಿರುತ್ತದೆ. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ, ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:40 ರವರೆಗೆ

ಮಿಥುನ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ, ಕೆಲವು ದಿನಗಳಿಂದ ನೀವು ಲಾಭ ಅಷ್ಟು ಗಳಿಸದಿದ್ದರೆ ಈ ದಿನ ಚಿಂತಿಸಬೇಕಾಗಿಲ್ಲ. ನಿಮಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆ ಇದೆ. ಕಛೇರಿಯಲ್ಲಿ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಇಲ್ಲದಿದ್ದರೆ ಇಂದು ನಷ್ಟ ಉಂಟಾಗುವ ಸಾಧ್ಯತೆ ಉದೆ. ಹಣದ ಪರಿಸ್ಥಿತಿ ಸುಧಾರಿಸಬಹುದು. ನೀವು ಹೊಸ ಆದಾಯದ ಮೂಲವನ್ನು ಪಡೆಯುತ್ತೀರಿ. ಆದರೆ ನೀವು ಹಣದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಸರಾಸರಿಯಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಗ್ಗೆ 7 ರಿಂದ 11:30 ರವರೆಗೆ

ಕರ್ಕ ರಾಶಿ
ಯಾರದೋ ಭಾವನೆಗೆ ಧಕ್ಕೆ ತರುವಂತಹ ತಮಾಷೆ ಮಾಡಬೇಡಿ. ಈ ವಿಷಯದ ಬಗ್ಗೆ ವಿಶೇಷ ಕಾಳಜಿ ವಹಿಸಲು ಇಂದು ನಿಮಗೆ ಸಲಹೆ ನೀಡಲಾಗುತ್ತದೆ. ಉದ್ಯಮಿಗಳಿಗೆ ಇಂದು ಸವಾಲಿನ ದಿನ ಎಂದು ನಿರೀಕ್ಷಿಸಲಾಗಿದೆ. ನೀವು ಕೆಲವು ಮೋಸದ ಹಣಕಾಸಿನ ಯೋಜನೆಯಲ್ಲಿ ಸಿಕ್ಕಿಬೀಳಬಹುದು, ಎಚ್ಚರವಹಿಸಿ. ನಿಮ್ಮ ನಿರ್ಧಾರಗಳನ್ನು ನೀವು ಬಹಳ ಎಚ್ಚರಿಕೆಯಿಂದ ಮಾಡುವುದು ಉತ್ತಮ. ನೀವು ನಿಮ್ಮ ಕೆಲಸವನ್ನು ಮಾಡುವಾಗ ಆತುರ ಹಾಗೂ ಭಯ ಒಳ್ಳೆಯದಲ್ಲ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಬೆನ್ನು ನೋವಿನ ಸಮಸ್ಯೆ ಕಾಡಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 33
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 3:05

ಸಿಂಹ ರಾಶಿ
ಸಂಗಾಯಿಯೊಂದಿಗೆ ಸಂಬಂಧ ಚೆನ್ನಾಗಿರುತ್ತದೆ, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಲಿದೆ. ಅತಿಯಾದ ಉತ್ಸುಕತೆಯಿಂದ ಹಣ ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಕಚೇರಿಯಲ್ಲಿ ಬಾಕಿ ಇರುವ ಕೆಲಸಗಳಿಂದ ಮೇಲಧಿಕಾರಿಗಳ ಕೋಪ ಮತ್ತಷ್ಟು ಹೆಚ್ಚಾಗಬಹುದು. ವ್ಯಾಪಾರಸ್ಥರು ಒಳ್ಳೆಯ ಲಾಭ ಪಡೆಯಬಹುದು. ವಿಶೇಷವಾಗಿ ನೀವು ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಒಳ್ಳೆಯದಿದೆ. ಆರೋಗ್ಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ 11:30 ರವರೆಗೆ

ಕನ್ಯಾ ರಾಶಿ
ಹೆಚ್ಚುತ್ತಿರುವ ಕೆಲಸದ ಒತ್ತಡದಿಂದಾಗಿ ಇಂದು ತುಂಬಾ ಆಯಾಸವನ್ನು ಅನುಭವಿಸಬಹುದು. ಈ ದಿನ ವಿಶ್ರಾಂತಿಗೆ ಹೆಚ್ಚಿನ ಗಮನ ಹರಿಸಿದರೆ ಉತ್ತಮ, ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ. ನೀವು ಅವಾಹಿತರಾಗಿದ್ದು ಪ್ರೇಮ ವಿವಾಹದ ಬಗ್ಗೆ ಚಿಂತಿಸುತ್ತಿದ್ದರೆ ಆತುರ ಒಳ್ಳೆಯದಲ್ಲ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 3:20 ರವರೆಗೆ

ತುಲಾ ರಾಶಿ
ತುಲಾ ರಾಶಿಯವರಿಗೆ ಇಂದು ದಿನ ಚೆನ್ನಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಮೇಲೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ನೀವು ಒಳ್ಳೆಯ ಸುದ್ದಿ ಪಡೆಯಬಹುದು. ನಿಮ್ಮ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಉದ್ಯಮಿಗಳು ಶೀಘ್ರದಲ್ಲೇ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 5:20 ರಿಂದ 7:20 ರವರೆಗೆ

ವೃಶ್ಚಿಕ ರಾಶಿ
ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ನೀವು ಖರ್ಚು ಮಾಡಬೇಕಾಗುತ್ತದೆ. ನೀವು ಕೆಲಸದ ಬಗ್ಗೆ ಬೇರೆಯವರ ಬಳಿ ಹೆಚ್ಚು ಹೇಳಲು ಹೋಗಬೇಡಿ. ವ್ಯಾಪಾರಸ್ಥರಿಗೆ ಈ ದಿನ ಒಳ್ಳೆಯದಿದೆ. ಒಟ್ಟಿನಲ್ಲಿ ಈ ದಿನ ಈ ದಿನ ಧನಾತ್ಮಕವಾಗಿರುತ್ತೀರಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ

ಧನು ರಾಶಿ
ಮನಸ್ಸಿನಲ್ಲಿ ಸಾಕಷ್ಟು ಪ್ರಕ್ಷುಬ್ಧತೆ ಇರುತ್ತದೆ, ಈ ದಿನ ನಿಮ್ಮ ಮಾನಸಿಕ ಸ್ಥಿತಿ ಅಷ್ಟು ಸರಿಯಿರುವುದಿಲ್ಲ. ನಕಾರಾತ್ಮಕ ಆಲೋಚನೆಗಳಿಂದ ದೂರವಿರುವುದು ಉತ್ತಮ. ನೀವು ಕೆಲಸದ ಕಡೆಗೆ ಅಧಿಕ ಗಮನಹರಿಸುವುದು ಒಳ್ಳೆಯದು. ಉದ್ಯಮಿಗಳು ಹಣದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ವಿಶೇಷವಾಗಿ ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ಯೋಜಿಸುತ್ತಿದ್ದ ನೀವು ನಿಮ್ಮ ಆಪ್ತರ ಸಲಹೆ ಪಡೆಯುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6 ರವರೆಗೆ

ಮಕರ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ದೊಡ್ಡ ಹೂಡಿಕೆಯನ್ನು ಮಾಡಿದ್ದರೆ, ಇಂದು ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಕೆಲಸದ ಜವಾಬ್ದಾರಿ ಹೆಚ್ಚಾಗಲಿದೆ. ಹಣದ ಸ್ಥಿತಿ ಸಾಮಾನ್ಯವಾಗಿರುತ್ತದೆ. ಇಂದು ಹಣದ ಕೊರತೆಯಿಂದಾಗಿ ನಿಮ್ಮ ಕೆಲವು ಕೆಲಸಗಳು ಅಪೂರ್ಣವಾಗಿ ಉಳಿಯುವ ಸಾಧ್ಯತೆಯಿದೆ. ಮನೆಯ ಹಿರಿಯರ ಮಾತುಗಳನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಆರೋಗ್ಯದ ವಿಷಯದಲ್ಲಿ ದಿನವು ಏರಿಳಿತಗಳಿಂದ ತುಂಬಿರುತ್ತದೆ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 6:50 ರವರೆಗೆ

ಕುಂಭ ರಾಶಿ
ಪ್ರೀತಿಯ ವಿಷಯದಲ್ಲಿ ಇಂದು ಬಹಳ ಒಳ್ಳೆಯ ಸೂಚನೆಯಿದೆ, ನೀವು ಯಾರನ್ನಾದರೂ ಇಷ್ಟ ಪಡುತ್ತಿದ್ದರೆ ಈ ದಿನ ನಿಮ್ಮ ಪ್ರೀತಿ ನಿವೇದನೆಗೆ ಇಂದು ನಿಮ್ಮ ಪ್ರೀತಿಯ ಜೀವನ ಪ್ರಾರಂಭವಾಗಬಹುದು. ಆರ್ಥಿಕ ರಂಗದಲ್ಲಿ, ದಿನವು ದುಬಾರಿಯಾಗಲಿದೆ. ಇಂದು ನೀವು ಹಳೆಯ ಬಿಲ್ ಅನ್ನು ಪಾವತಿಸಬೇಕಾಗಬಹುದು. ಕೆಲಸದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಕೈಲಾದದ್ದನ್ನು ನೀವು ನೀಡಬೇಕಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು, ನೀವು ನಿಮ್ಮ ಬಗ್ಗೆ ಹೆಚ್ಚು ಗಮನ ಹರಿಸಬೇಕು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:20 ರವರೆಗೆ

ಮೀನ ರಾಶಿ
ಸಂಗಾತಿಯೊಂದಿಗಿನ ಸಂಬಂಧವು ಬಲವಾಗಿರುತ್ತದೆ. ಕೆಲಸದ ವಿಷಯದಲ್ಲಿ ನೋಡುವುದಾದರೆ ಇಂದು ನಿಮಗೆ ಮಿಶ್ರ ಫಲಿತಾಂಶವಾಗಲಿದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಕಷ್ಟಪಟ್ಟು ಕೆಲಸ ಮಾಡಿ ಮತ್ತು ನಿಮ್ಮ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇರುವುದಿಲ್ಲ ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನೀವು ಕರಿದ ಆಹಾರವನ್ನು ತ್ಯಜಿಸಬೇಕು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 9:40 ರಿಂದ ಮಧ್ಯಾಹ್ನ 2:30 ರವರೆಗೆ



Click it and Unblock the Notifications