Horoscope Today 14 March 2023: ಮಂಗಳವಾರ: ಸಿಂಹ ರಾಶಿಯವರಿಗೆ ಮಹತ್ವದ ದಿನ, ಉಳಿದ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್‌ 14ರ ರಾಶಿಫಲ ನೋಡೋಣ:

Dina Bhavishya

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಚೈತ್ರ
ಪಕ್ಷ: ಕೃಷ್ಣಪಕ್ಷ
ತಿಥಿ: ಸಪ್ತಮಿ
ನಕ್ಷತ್ರ: ಅನುರಾಧ
ರಾಹುಕಾಲ: ಮಧ್ಯಾಹ್ನ 03:29ರಿಂದ 5 ಗಂಟೆಯವರೆಗೆ

 ಮೇಷ ರಾಶಿ

ಮೇಷ ರಾಶಿ

ಕೆಲಸದ ವಿಷಯದಲ್ಲಿ ಈ ದಿನ ಒಳ್ಳೆಯದಿದೆ. ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೂ ಈ ದಿನ ಒಳ್ಳೆಯದಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇಂದು ಸಂಗಾತಿಯೊಂದಿಗೆ ತಿರುಗಾಡುವ ಅವಕಾಶ ಸಿಗಲಿದೆ. ಆರೋಗ್ಯ ಚೆನ್ನಾಗಿರುತ್ತದೆ.

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 26

ಅದೃಷ್ಟದ ಸಮಯ: ಸಂಜೆ 7 ರಿಂದ 8:55 ರವರೆಗೆ

 ವೃಷಭ ರಾಶಿ

ವೃಷಭ ರಾಶಿ

ಪ್ರತಿಕೂಲ ಸಂದರ್ಭಗಳಲ್ಲಿಯೂ ಸರಾಗವಾಗಿ ಕೆಲಸ ಮಾಡುವ ನಿಮ್ಮ ಸಾಮರ್ಥ್ಯವು ನಿಮಗೆ ಪ್ಲಸ್ ಪಾಯಿಂಟ್‌ ಆಗಲಿದೆ. ಉದ್ಯಮಿಗಳು ಯಾವುದೇ ಕೆಲಸವನ್ನು ಪೂರ್ಣಗೊಳಿಸಲು ತುಂಬಾ ಕಷ್ಟಪಡಬೇಕಾಗಬಹುದು. ತಾಳ್ಮೆಯಿಂದಿರಲು ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ, ದಿನವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ತಂದೆಯ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಅವರ ಆರೋಗ್ಯದ ಕಡೆಗೆ ಗಮನ ಹರಿಸಿ. ನಿಮ್ಮ ಆರೋಗ್ಯ ಸಾಮಾನ್ಯವಾಗಿರಲಿದೆ.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 19

ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ನೀವು ಉದ್ಯಮಿಯಾಗಿದ್ದರೆ ಹೂಡಿಕೆ ಮಾಡಲು ಈ ದಿನ ಒಳ್ಳೆಯ ಅವಕಾಶ ಪಡೆಯುವಿರಿ. ಉದ್ಯೋಗಸ್ಥರು ಕಚೇರಿಯಲ್ಲಿ ಅನಗತ್ಯ ಮಾತುಕತೆಗಳಲ್ಲಿ ಸಮಯ ವ್ಯರ್ಥ ಮಾಡದೆ ನಿಮ್ಮ ಕೆಲಸ ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.

ಅದೃಷ್ಟದ ಬಣ್ಣ: ನೀಲಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ಇತರರ ತಪ್ಪುಗಳನ್ನು ಕಂಡು ಹಿಡಿಯುತ್ತಾ ಕೂರುವ ಬದಲಿಗೆ ನಿಮ್ಮ ಕೆಲಸದತ್ತ ಗಮನ ಹರಿಸಿ. ವ್ಯಾಪಾರಸ್ಥರು ಲಾಭ ಗಳಿಸಲು ಅಡ್ಡಮಾರ್ಗಗಳಿಸಬೇಡಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಪ್ರಯತ್ನ ಯಶಸ್ವಿಯಾಗಬಹುದು. ಈ ದಿನ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ.

ಅದೃಷ್ಟದ ಬಣ್ಣ: ಕೆನೆ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ಸಮಯ: ಬೆಳಗ್ಗೆ 7:50 ರಿಂದ ರಾತ್ರಿ 8:18 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಇಂದು ನಿಮ್ಮ ಜೀವನದಲ್ಲಿ ಮಹತ್ವದ ದಿನ. ಕೆಲಸದ ಮುಂಭಾಗದಲ್ಲಿ ಈ ದಿನವು ಕಾರ್ಯನಿರತವಾಗಿರುತ್ತದೆ. ಇಂದು ಕೆಲಸದ ಹೊರೆ ಹೆಚ್ಚಾಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಸ್ವಲ್ಪ ಒತ್ತಡವನ್ನು ಅನುಭವಿಸಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡಲು ಇಂದು ಉತ್ತಮ ದಿನವಲ್ಲ. ಈ ದಿನ ಮಾನಸಿಕ ಒತ್ತಡದಿಂದ ದೂರವಿರಿ.

ಅದೃಷ್ಟದ ಬಣ್ಣ: ಗುಲಾಬಿ

ಅದೃಷ್ಟದ ಸಂಖ್ಯೆ: 4

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:55 ರವರೆಗೆ

 ಕನ್ಯಾ ರಾಶಿ

ಕನ್ಯಾ ರಾಶಿ

ಈ ದಿನ ಸ್ನೇಹಿತರ ಜೊತೆ ಖುಷಿಯಿಂದ ಕಳೆಯುವುರು. ಹಣದ ವಿಷಯದಲ್ಲಿ ಮಿಶ್ರಫಲ. ನಿಮ್ಮ ಆದಾಯ ಹೆಚ್ಚಿಸಲು ನೀವು ಮತ್ತಷ್ಟು ಪ್ರಯತ್ನ ಮಾಡಬೇಕು. ಕಚೇರಿಯಲ್ಲಿ ನಿಮ್ಮ ಕೆಲಸದಿಂದಾಗಿ ಮತ್ತಷ್ಟು ಪ್ರಗತಿ ಹೊಂದುತ್ತೀರಿ. ವ್ಯಾಪಾರಸ್ಥರಿಗೆ ಇಂದು ಒಳ್ಳೆಯ ದಿನ. ಆರೋಗ್ಯದ ದೃಷ್ಟಿಯಿಂದ ಈ ದಿನ ಚೆನ್ನಾಗಿದೆ.

ಅದೃಷ್ಟದ ಬಣ್ಣ: ತಿಳಿ ಗುಲಾಬಿ

ಅದೃಷ್ಟದ ಸಂಖ್ಯೆ: 34

ಅದೃಷ್ಟದ ಸಮಯ: ಬೆಳಿಗ್ಗೆ 5:25 ರಿಂದ ಮಧ್ಯಾಹ್ನ 2:15 ರವರೆಗೆ

 ತುಲಾ ರಾಶಿ

ತುಲಾ ರಾಶಿ

ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಲಿದೆ, ನೀವು ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುತ್ತೀರಿ. ಕೆಲಸದ ದೃಷ್ಟಿಯಿಂದ ಈ ದಿನ ಚೆನ್ನಾಗಿದೆ. ಉದ್ಯಮಿಗಳು ನಿರೀಕ್ಷಿಸಿದ ಫಲಿತಾಂಶವನ್ನು ಪಡೆಯುತ್ತೀರಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ಮುಕ್ತರಾಗಬಹುದು.

ಅದೃಷ್ಟದ ಬಣ್ಣ: ಕೆಂಪು

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 6:50 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ನಿಮ್ಮ ವೈಯಕ್ತಿಕ ಜೀವನದಲ್ಲಿ ಒತ್ತಡ ಅಧಿಕವಿರಲಿದೆ, ಕುಟುಂಬದಲ್ಲಿ ಪರಿಸ್ಥಿತಿಗಳು ಸರಿಯಿರಲ್ಲ, ಭಿನ್ನಾಭಿಪ್ರಾಯ ಹೆಚ್ಚಾಗುವುದು. ಈ ಸಮಯದಲ್ಲಿ ನೀವು ತುಂಬಾ ಸಮತೋಲಿತವಾಗಿ ವರ್ತಿಸಬೇಕು. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸದತ್ತ ಮಾತ್ರ ಗಮನಹರಿಸಿ. ಉದ್ಯಮಿಗಳ ಯಾವುದೇ ಪ್ರಮುಖ ಸಮಸ್ಯೆಗೆ ಪರಿಹಾರ ದೊರೆಯುತ್ತದೆ. ನಿಮ್ಮ ಕೆಲಸವನ್ನು ಮುಂದುವರಿಸಲು ನೀವು ಉತ್ತಮ ಅವಕಾಶವನ್ನು ಸಹ ಪಡೆಯಬಹುದು. ಹಣದ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ಇದ್ದಕ್ಕಿದ್ದಂತೆ ಕ್ಷೀಣಿಸಬಹುದು.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12:50 ರವರೆಗೆ

ಧನು ರಾಶಿ

ಧನು ರಾಶಿ

ಪ್ರೀತಿಯ ವಿಷಯದಲ್ಲಿ ಇಂದು ನಿಮಗೆ ಸ್ವಲ್ಪ ವಿವಾದಾತ್ಮಕವಾಗಿರುತ್ತದೆ. ಈ ಸಮಯದಲ್ಲಿ ಪ್ರೀತಿಯಿಂದ ವರ್ತಿಸಿ. ಆರ್ಥಿಕ ದೃಷ್ಟಿಕೋನದಿಂದ ನೋಡುವುದಾದರೆ ಈ ದಿನ ಚೆನ್ನಾಗಿದೆ. ಉದ್ಯೋಗಸ್ಥರಿಗೆ ಈ ದಿನ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳುತ್ತದೆ. ವ್ಯಾಪಾರಸ್ಥರಿಗೆ ಈ ದಿನ ಸವಾಲಿನ ದಿನವಾಗಿರುತ್ತದೆ. ಆರೋಗ್ಯ ನಿರ್ಲಕ್ಷಿಸಬೇಡಿ.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ರಾತ್ರಿ 10 ರವರೆಗೆ

ಮಕರ ರಾಶಿ

ಮಕರ ರಾಶಿ

ನೀವು ಬಹಳ ಸಮಯದಿಂದ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದರೆ, ಇಂದು ನಿಮ್ಮ ಆಸೆಯನ್ನು ಪೂರೈಸಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲಸದ ವಿಷಯದಲ್ಲಿ ನೋಡುವುದಾದರೆ ಈ ದಿನವು ಏರಿಳಿತಗಳಿಂದ ತುಂಬಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತುಂಬಾ ಆಯಾಸ ಕಾಡಬಹುದು.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 40

ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ

 ಕುಂಭ ರಾಶಿ

ಕುಂಭ ರಾಶಿ

ಆರೋಗ್ಯದ ದೃಷ್ಟಿಯಿಂದ ಈ ದಿನ ಆರೋಗ್ಯ ಸಮಸ್ಯೆ ಉಂಟಾಗಬಹುದು, ಆರೋಗ್ಯದ ಕಡೆಗೆ ಗಮನಹರಿಸಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನಿಮ್ಮ ಆದಾಯ ಹೆಚ್ಚಾಗಬಹುದು. ನೀವು ಖರ್ಚುಗಳನ್ನು ಮಿತಗೊಳಿಸುವುದು ಒಳ್ಳೆಯದು. ಸಂಗಾತಿ ಜೊತೆ ಮನಸ್ತಾಪ ಬರಬಹುದು, ತಾಳ್ಮೆಯಿಂದ ವರ್ತಿಸಿ.

ಅದೃಷ್ಟದ ಬಣ್ಣ: ನೀಲಿ

ಅದೃಷ್ಟದ ಸಂಖ್ಯೆ: 29

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ

ಮೀನ ರಾಶಿ

ಮೀನ ರಾಶಿ

ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ.ಆದರೆ ನೀವು ಹಣದ ವಿಷಯದಲ್ಲಿ ಬಹಳ ಜಾಗರೂಕರಾಗಿರಬೇಕು, ಇಲ್ಲದಿದ್ದರೆ ನಷ್ಟವು ಸಾಧ್ಯ. ಉದ್ಯಮಿಗಳಿಗೆ, ಉದ್ಯೋಗಿಗಳಿಗೆ ಈ ದಿನ ಒಳ್ಳೆಯದಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಅದೃಷ್ಟದ ಬಣ್ಣ: ಗಾಢ ಕೆಂಪು

ಅದೃಷ್ಟದ ಸಂಖ್ಯೆ: 17

ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 2:30 ರವರೆಗೆ

English summary

Dina Bhavishya -March 14 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 14 March 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Tuesday, March 14, 2023, 7:12 [IST]
X
Desktop Bottom Promotion