Horoscope Today 15 March 2023: ಬುಧವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್‌ 15ರ ರಾಶಿಫಲ ನೋಡೋಣ:

Dina Bhavishya -March 15 2023 Today Rashi Bhavishya, Daily Horoscope in Kannada

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಚೈತ್ರ
ಪಕ್ಷ: ಕೃಷ್ಣಪಕ್ಷ
ತಿಥಿ: ಅಷ್ಟಮಿ
ನಕ್ಷತ್ರ: ಜ್ಯೇಷ್ಠ
ರಾಹುಕಾಲ: ಮಧ್ಯಾಹ್ನ 12:29ರಿಂದ 01:59ರವರೆಗೆ

ಮೇಷ ರಾಶಿ

ಮೇಷ ರಾಶಿ

ಈ ದಿನ ಹಣಕಾಸಿನ ಪ್ರಯೋಜನ ಪಡೆಯುತ್ತೀರಿ. ಇಂದು ಹಣಕ್ಕೆ ಸಂಬಂಧಿಸಿದ ಚಿಂತೆ ದೂರವಾಗಲಿದೆ. ನಿಮ್ಮ ಕೆಲಸದಲ್ಲಿ ಬದಲಾವಣೆಯ ಸೂಚನೆಯಿದೆ. ಆದರೆ ನೀವು ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವುದು ಒಳ್ಳೆಯದು. ಕೆಲಸದಲ್ಲಿ ಬಡ್ತಿ ಸಿಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹವಾಮಾನ ಬದಲಾವಣೆಯಿಂದ ಸಣ್ಣ ಪುಟ್ಟ ಸಮಸ್ಯೆಗಳಿರಬಹುದು.

ಅದೃಷ್ಟದ ಬಣ್ಣ: ಕೆನೆ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಬೆಳಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಇಂದು ಮನಸ್ಸಿನಲ್ಲಿ ನಕಾರಾತ್ಮಕ ಚಿಂತೆ ಮೂಡಬಹುದು. ಆದರೆ ಅಂಥ ಚಿಂತನೆಗಳಿಂದ ಹೊರಬರುವುದು ಒಳ್ಳೆಯದು. ಹಣದ ವಿಷಯದಲ್ಲಿ, ದಿನವು ಸ್ವಲ್ಪ ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳು ಉಂಟಾಗಬಹುದು. ಉದ್ಯೋಗಿಗಳು, ವ್ಯಾಪಾರಸ್ಥರು ಸವಾಲನ್ನು ಎದುರಿಸಬೇಕಾಗುವುದು. ಆರೋಗ್ಯದ ಕಡೆ ಗಮನ ನೀಡಿ.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಸಮಯ: ಸಂಜೆ 6 ರಿಂದ 9:05 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ಈ ದಿನ ನಿಮಗೆ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷವಿರುತ್ತದೆ, ನಿಮ್ಮ ನಿರ್ಧಾರಗಳಿಗೆ ಕುಟುಂಬದ ನಿರ್ಧಾರ ಇರುತ್ತದೆ. ಆರೋಗ್ಯಕ್ಕಾಗಿ ಆಹಾರಕ್ರಮದ ಕಡೆಗೆ ಗಮನ ನೀಡಿ.

ಅದೃಷ್ಟದ ಬಣ್ಣ: ಗುಲಾಬಿ

ಅದೃಷ್ಟದ ಸಂಖ್ಯೆ: 19

ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ಇಂದು ವೈವಾಹಿಕ ಜೀವನ ಚೆನ್ನಾಗಿರಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಒಳ್ಳೆಯ ಪ್ರಯೋಜನ ಪಡೆಯಬಹುದು. ಉದ್ಯೋಗಿಗಳಿಗೆ ಅನುಕೂಲಕರವಾಗಿದೆ. ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ . ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ಸಮಯ: ಸಂಜೆ 6:35 ರಿಂದ 8:55 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ವ್ಯಾಪಾರಸ್ಥರು ಇಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯೋಗಿಗಳಿಗೆ ಈ ದಿನ ಸವಾಲಿನಿಂದ ಕೂಡಿದೆ.ನಿಮ್ಮ ಬಾಸ್‌ ನಿಮ್ಮ ಕೆಲಸದಲ್ಲಿ ತಪ್ಪುಗಳನ್ನು ಕಂಡು ಹಿಡಿಯಬಹುದು. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಆಹಾರಕ್ರಮದ ಕಡೆಗೆ ಗಮನ ಹರಿಸಿ.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 29

ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ ಮಧ್ಯಾಹ್ನ 12 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸಿ. ಶೀಘ್ರದಲ್ಲೇ ಎಲ್ಲವೂ ಸರಿಯಾಗುವುದು. ಹಣದ ವಿಷಯದಲ್ಲಿ, ಈ ದಿನ ಏರಿಳಿತಗಳಿಂದ ತುಂಬಿರುತ್ತದೆ. ಇಂದು ಹಣ ಅಧಿಕ ಖರ್ಚಾಗುವ ಸಾಧ್ಯತೆ ಇದೆ. ಬೇರೆಯವರ ಸಲಹೆ ಮೇರೆಗೆ ಹಣಕಾಸಿನ ನಿರ್ಧಾರ ತೆಗೆದುಕೊಳ್ಳಬೇಡಿ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು.

ಅದೃಷ್ಟದ ಬಣ್ಣ: ಕೆಂಪು

ಅದೃಷ್ಟದ ಸಂಖ್ಯೆ: 4

ಅದೃಷ್ಟದ ಸಮಯ: ಸಂಜೆ 4:50 ರಿಂದ ಸಂಜೆ 6 ರವರೆಗೆ

ತುಲಾ ರಾಶಿ

ತುಲಾ ರಾಶಿ

ತುಲಾ ರಾಶಿಯವರಿಗೆ ಈ ದಿನ ಮಹತ್ವದ ದಿನವಾಗಿದೆ. ಉದ್ಯಮಿಗಳ ಅಪೂರ್ಣವಾಗಿದ್ದ ಕೆಲಸ ಇಂದು ಪೂರ್ಣವಾಗಲಿದೆ. ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಹೆಚ್ಚಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 18

ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ 11 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ವ್ಯಾಪಾರಸ್ಥರಿಗೆ ಇಂದು ಅತ್ಯಂತ ಶುಭ ದಿನ. ಈ ದಿನ ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಉದ್ಯೋಗದೊಂದಿಗೆ ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ನೀವು ಯೋಜಿಸುತ್ತಿದ್ದರೆ ಒಳ್ಳೆಯ ಅವಕಾಶ ಪಡೆಯುತ್ತೀರಿ. ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ದುಬಾರಿಯಾಗಲಿದೆ. ಮನೆಯ ಖರ್ಚು ಹೆಚ್ಚಾಗಬಹುದು. ಇದಲ್ಲದೆ ಯಾವುದೇ ಹಳೆಯ ಸಾಲವನ್ನು ಮರುಪಾವತಿ ಮಾಡುವ ಒತ್ತಡ ನಿಮ್ಮ ಮೇಲಿರಲಿದೆ.

ಅದೃಷ್ಟದ ಬಣ್ಣ: ಹಸಿರು

ಅದೃಷ್ಟದ ಸಂಖ್ಯೆ: 2

ಅದೃಷ್ಟದ ಸಮಯ: ಮಧ್ಯಾಹ್ನ 12:05 ರಿಂದ ಸಂಜೆ 4 ರವರೆಗೆ

ಧನು ರಾಶಿ

ಧನು ರಾಶಿ

ಈ ದಿನ ನಿಮಗೆ ಹಣದ ಚಿಂತೆ ಕಾಡಬಹುದು. ಹಣದ ತೊಂದರೆಯಿಂದಾಗಿ ಕೆಲವೊಂದು ಕಾರ್ಯಗಳು ಅಪೂರ್ಣವಾಗುವುದು. ಈ ಕೆಲಸದಲ್ಲಿ ಈ ದಿನ ಸಾಮಾನ್ಯವಾಗಿರುತ್ತದೆ. ಈ ದಿನ ಆರೋಗ್ಯದ ಕಡೆ ಗಮನಹರಿಸಿ.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 14

ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಮಕರ ರಾಶಿ

ಮಕರ ರಾಶಿ

ಉದ್ಯೋಗಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಕಚೇರಿಯಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ಹೊಸ ಜವಾಬ್ಧಾರಿ ಕೂಡ ಸಿಗಲಿದೆ. ವ್ಯಾಪಾರಸ್ಥರು ಸಹ ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನಿಮಗಾಗಿ ಹಣ ಖರ್ಚು ಮಾಡುತ್ತೀರಿ. ಈ ದಿನ ನಿಮಗೆ ಉತ್ತಮವಾಗಿದೆ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 28

ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ಕೌಟುಂಬಿಕ ಜೀವನದಲ್ಲಿ ಏರಳಿತಗಳಿರಬಹುದು, ಹೊಂದಾಣಿಕೆಯಿಂದ ಸರಿದೂಗಿಸಲು ಪ್ರಯತ್ನಿಸಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಈ ದಿನ ಸಾಲ ತೆಗೆಯಬೇಡಿ. ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ವ್ಯವಹಾರದಲ್ಲಿ ನಿಮ್ಮ ಅದೃಷ್ಟವನ್ನು ಪ್ರಯತ್ನಿಸಲು ಪ್ಲ್ಯಾನ್‌ ಮಾಡುತ್ತಿದ್ದರೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ.

ಅದೃಷ್ಟದ ಬಣ್ಣ: ಕೆಂಪು

ಅದೃಷ್ಟದ ಸಂಖ್ಯೆ: 4

ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8:05 ರವರೆಗೆ

ಮೀನ ರಾಶಿ

ಮೀನ ರಾಶಿ

ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಇಂದು ಉತ್ತಮ ಲಾಭ ದೊರೆಯಲಿದೆ. ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಮಾಡಬೇಡಿ, ಒಟ್ಟಿನಲ್ಲಿ ಈ ದಿನ ಚೆನ್ನಾಗಿದೆ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 35

ಅದೃಷ್ಟದ ಸಮಯ: ಬೆಳಗ್ಗೆ 6:20 ರಿಂದ 11:25 ರವರೆಗೆ

English summary

Dina Bhavishya -March 15 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 15 March 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Wednesday, March 15, 2023, 4:00 [IST]
X
Desktop Bottom Promotion