Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 16 March 2023: ಗುರುವಾರ: ಮಿಥುನ ರಾಶಿಯವರಿಗೆ ದಿನ ಒಳ್ಳೆಯದಿದೆ, ಉಳಿದ ರಾಶಿಗಳ ರಾಶಿಫಲ ಹೇಗಿರಲಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 16ರ ರಾಶಿಫಲ ನೋಡೋಣ:

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಚೈತ್ರ
ಪಕ್ಷ: ಕೃಷ್ಣಪಕ್ಷ
ತಿಥಿ: ನವಮಿ
ನಕ್ಷತ್ರ: ಪೂರ್ವ ಆಷಾಢ
ರಾಹುಕಾಲ: ಮಧ್ಯಾಹ್ನ 01:59ರಿಂದ 03:29ರವರೆಗೆ

ಮೇಷ ರಾಶಿ
ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಆರ್ಥಿಕ ದೃಷ್ಟಿಯಿಮದ ಈ ದಿನ ಉತ್ತಮವಾಗಿದೆ. ಈ ದಿನ ಹೆಚ್ಚು ಉಳಿತಾಯ ಮಾಡಲು ಸಾಧ್ಯವಾಗುತ್ತದೆ. ಇಂದು ಕೆಲಸದ ಹೊರೆ ಸ್ವಲ್ಪ ಹೆಚ್ಚಿರಲಿದೆ. ಆರೋಗ್ಯ ದುರ್ಬಲವಾಗಬಹುದು.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 6 ರಿಂದ 9:20 ರವರೆಗೆ

ವೃಷಭ ರಾಶಿ
ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗಸ್ಥರು ಕಚೇರಿಯಲ್ಲಿ ನಡೆಯುವ ರಾಜಕೀಯದ ಬಗ್ಗೆ ಜಾಗರೂಕರಾಗಿರಬೇಕು. ವ್ಯಾಪಾರಸ್ಥರು ಲಾಭ ಗಳಿಸಲು ಹೆಚ್ಚಿನ ಶ್ರಮ ಹಾಕಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಶೀತ, ಕೆಮ್ಮು ಈ ಬಗೆಯ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 4:35 ರಿಂದ 7:20 ರವರೆಗೆ

ಮಿಥುನ ರಾಶಿ
ಈ ದಿನ ಚೆನ್ನಾಗಿರಲಿದೆ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯಮಿಗಳ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಇಂದು ನಿಮ್ಮ ಯಾವುದೇ ಬಾಕಿಯುಳಿದ ಕೆಲಸ ಪೂರ್ಣಗೊಳ್ಳಲಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 2:55 ರವರೆಗೆ

ಕರ್ಕ ರಾಶಿ
ಮನೆಯಲ್ಲಿ ವಯಸ್ಸಾದವರು ಇದ್ದರೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಯಾವುದೇ ದೊಡ್ಡ ಖರ್ಚು ಮಾಡುವ ಮುನ್ನ ಎಚ್ಚರಿಕೆಯಿಂದ ಯೋಚಿಸಿ. ರೋಗ ನಿರೋಧಕ ಶಕ್ತಿ ಬಲಪಡಿಸುವತ್ತ ಗಮನಹರಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 23
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 5:15 ರವರೆಗೆ

ಸಿಂಹ ರಾಶಿ
ಇಂದು ನಿಮ್ಮ ಎಲ್ಲಾ ಕೆಲಸ -ಕಾರ್ಯಗಳು ನೀವು ಊಹಿಸಿದಂತೆ ನೆರವೇರಲಿದೆ. ಉದ್ಯಮಿಗಳು ಅಪಾರ ಆರ್ಥಿಕ ಲಾಭವನ್ನು ಪಡೆಯಬಹುದು. ಹಣದ ವಿಷಯದಲ್ಲಿ ಈ ದಿನ ದುಬಾರಿಯಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ 4:20 ರವರೆಗೆ

ಕನ್ಯಾ ರಾಶಿ
ಪ್ರೀತಿಯ ವಿಷಯದಲ್ಲಿ ಈ ದಿನ ಮಿಶ್ರಫಲ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುವುದು. ಶೀಘ್ರದಲ್ಲೇ ಅದರ ಸರಿಯಾದ ಫಲಿತಾಂಶ ಪಡೆಯುವಿರಿ. ಕೆಲಸದ ಸ್ಥಳದಲ್ಲಿ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ನಿಮಗೆ ಹೃದಯ ಸಂಬಂಧಿ ಕಾಯಿಲೆ ಇದ್ದರೆ, ಕೋಪ ಮತ್ತು ಒತ್ತಡ ತಪ್ಪಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 12:15 ರಿಂದ 3:30 ರವರೆಗೆ

ತುಲಾ ರಾಶಿ
ಇತ್ತೀಚೆಗೆ ಖರ್ಚುಗಳು ಅಧಿಕವಾಗುವುದರಿಂದ ಈ ದಿನ ಮಾನಸಿಕ ಒತ್ತಡ ಹೆಚ್ಚಾಗಲಿದೆ. ಇಂದು ಆರೋಗ್ಯ ಸ್ವಲ್ಪ ದುರ್ಬಲವಾಗಬಹುದು, ಕಣ್ಣುಗಳಿಗೆ ಸಮಸ್ಯೆ ಬರಬಹುದು. ಕಚೇರಿಯಲ್ಲಿ ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ತಿಗೊಳಿಸಲು ಪ್ರಯತ್ನಿಸಿ. ನೀವು ವ್ಯಾಪಾರಸ್ಥರಾಗಿದ್ದರೆ ಮತ್ತು ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ಈ ಸಮಯದಲ್ಲಿಅದನ್ನು ತಪ್ಪಿಸಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆ

ವೃಶ್ಚಿಕ ರಾಶಿ
ಮನೆಯ ಸದಸ್ಯರ ಜೊತೆ ಭಿನ್ನಾಭಿಪ್ರಾಯ ಮೂಡಬಹುದು, ಕೋಪ ನಿಯಂತ್ರಿಸಿ. ಕಚೇರಿಯಲ್ಲಿ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಅಧಿಕವಾಗಿರಲಿದೆ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು,ಬಾಕಿಯುಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಬಿಡಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 9:40 ರಿಂದ ಮಧ್ಯಾಹ್ನ 12:25 ರವರೆಗೆ

ಧನು ರಾಶಿ
ಉದ್ಯೋಗಿಗಳಿಗೆ ಈ ದಿನ ಅನುಕೂಲಕರ, ವ್ಯಾಪಾರಸ್ಥರಿಗೂ ಇಂದು ಅತ್ಯಂತ ಶುಭ ದಿನವಾಗಲಿದೆ. ನೀವು ಸ್ವಲ್ಪ ಪ್ರಯತ್ನದಿಂದ ದೊಡ್ಡ ಯಶಸ್ಸನ್ನು ಪಡೆಯಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುತ್ತೀತಿ. ನಿಮ್ಮ ದೊಡ್ಡ ಚಿಂತೆ ದೂರವಾಗಬಹುದು. ಸಂಗಾತಿಯನ್ನು ಅನಗ್ಯತವಾಗಿ ಅನುಮಾನಿಸುವ ಗುಣ ಒಳ್ಳೆಯದಲ್ಲ. ಆರೋಗ್ಯದ ವಿಷಯದಲ್ಲಿ ಈ ದಿನವು ಏರಿಳಿತಗಳಿಂದ ತುಂಬಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

ಮಕರ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ, ಇಂದು ಯಾವುದೇ ಪ್ರಮುಖ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ,ಉದ್ಯೋಗಸ್ಥರಿಗೆ ದಿನವು ಕಾರ್ಯನಿರತವಾಗಿರುತ್ತದೆ. ನೀವು ನಿಮ್ಮ ಎಲ್ಲಾ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನೀವು ಯೋಚಿಸದೆ ಮುಕ್ತವಾಗಿ ಖರ್ಚು ಮಾಡಿದರೆ ಮುಂದೆ ಮತ್ತಷ್ಟು ಆರ್ಥಿಕ ತೊಂದರೆ ಉಂಟಾಗಬಹುದು. ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯಬಹುದು. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ

ಕುಂಭ ರಾಶಿ
ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಇಂದು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನಷ್ಟವಾಗಬಹುದು. ಉದ್ಯೋಗಸ್ಥರಿಗೆ ಈ ದಿನ ಒಳ್ಳೆಯದಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 7 ರವರೆಗೆ

ಮೀನ ರಾಶಿ
ಮನೆಯ ವಾತಾವರಣ ಶಾಂತವಾಗಿರುತ್ತದೆ. ಇಂದು ನೀವು ಕುಟುಂಬದೊಂದಿಗೆ ಸ್ವಲ್ಪ ದೂರ ಪ್ರಯಾಣಿಸುವ ಅವಕಾಶವನ್ನು ಪಡೆಯಬಹುದು. ವ್ಯಾಪಾರಸ್ಥರಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ನಿಮ್ಮ ಕಠಿಣ ಪರಿಶ್ರಮವು ಯಶಸ್ವಿಯಾಗಲಿದೆ. ಹಣದ ವಿಷಯದಲ್ಲಿ ಈ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಆದಾಯಕ್ಕೆ ಅನುಗುಣವಾಗಿ ಖರ್ಚು ಮಾಡಿ. ಉತ್ತಮ ಆರೋಗ್ಯಕ್ಕಾಗಿ ನಿಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 12:20 ರಿಂದ ಸಂಜೆ 4 ರವರೆಗೆ



Click it and Unblock the Notifications