Latest Updates
-
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!!
Horoscope Today 7 March 2023: ಮಂಗಳವಾರ : ತುಲಾ ರಾಶಿಯವರಿಗೆ ಅದೃಷ್ಟದ ದಿನ, ಉಳಿದ ರಾಶಿಗಳ ರಾಶಿಫಲ ಹೇಗಿದೆ ನೋಡೋಣ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 7ರ ರಾಶಿಫಲ ನೋಡೋಣ:

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಫಲ್ಗುಣ
ಪಕ್ಷ: ಶುಕ್ಲಪಕ್ಷ
ತಿಥಿ: ಪೂರ್ಣಿಮ
ನಕ್ಷತ್ರ: ಪೂರ್ವ ಫಲ್ಗುಣಿ
ರಾಹುಕಾಲ: ಮಧ್ಯಾಹ್ನ 03:30ರಿಂದ 5 ಗಂಟೆ

ಮೇಷ ರಾಶಿ
ಇಂದು, ಪ್ರತಿಕೂಲ ಸಂದರ್ಭಗಳಲ್ಲಿಯೂ ಸುಲಭವಾಗಿ ಕೆಲಸ ಮಾಡುವ ನಿಮ್ಮ ಸಾಮರ್ಥ್ಯ ನೋಡಿ ಉನ್ನತ ಅಧಿಕಾರಿಗಳು ನಿಮ್ಮ ಕಾರ್ಯವೈಖರಿ ಬಗ್ಗೆ ಖುಷಿ ವ್ಯಕ್ತಪಡಿಸುತ್ತಾರೆ. ಉದ್ಯಮಿಗಳು ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತಾರೆ, ವಿಶೇಷವಾಗಿ ನೀವು ಕಬ್ಬಿಣದ ವ್ಯಾಪಾರಿಯಾಗಿದ್ದರೆ ಈ ದಿನ ನಿಮಗೆ ಒಳ್ಳೆಯದಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಸ್ವಲ್ಪ ಆರೋಗ್ಯ ಸಮಸ್ಯೆಗಳು ಇರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12

ವೃಷಭ ರಾಶಿ
ಕೆಲಸದ ವಿಷಯದಲ್ಲಿ ಈ ದಿನವು ತುಂಬಾ ಕಾರ್ಯನಿರತವಾಗಿರುತ್ತದೆ. ಇಂದು ನೀವು ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ತುಂಬಾ ಶ್ರಮಿಸುತ್ತೀರಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್ ಮೀರಿ ಹೋಗದಿದ್ದರೆ ಒಳ್ಳೆಯದು. ಮನೆಯ ವಾತಾವರಣ ಅಷ್ಟು ಸರಿಯಿರಲ್ಲ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಒಳ್ಳೆಯದಲ್ಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5:10 ರಿಂದ ರಾತ್ರಿ 9:50 ರವರೆಗೆ

ಮಿಥುನ ರಾಶಿ
ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಂಬಂಧ ಉತ್ತಮವಾಗಿಡಲು ಪ್ರಯತ್ನಿಸಿ. ಆರ್ಥಿಕ ರಂಗದಲ್ಲಿ, ಇಂದು ನಿಮಗೆ ಒಳ್ಳೆಯ ದಿನ. ಈ ದಿನ ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಉತ್ತಮ ಸಲಹೆಗಳನ್ನು ಸಹ ಪಡೆಯುತ್ತೀರಿ. ವ್ಯಾಪಾರಸ್ಥರು ಆತುರದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯದ ವಿಷಯದಲ್ಲಿ, ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 4:15 ರಿಂದ ಸಂಜೆ 7 ರವರೆಗೆ

ಕರ್ಕ ರಾಶಿ
ಹಣದ ವಿಷಯದಲ್ಲಿ ಈ ದಿನ ಅದೃಷ್ಟದ ದಿನ. ಇಂದು ನೀವು ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯಬಹುದು. ಇಂದು ನಿಮ್ಮ ಸಂಗಾತಿಯೊಂದಿಗೆ ಬಹಳ ವಿಶೇಷವಾದ ದಿನವಾಗಲಿದೆ. ಕೆಲಸದ ವಿಷಯದಲ್ಲಿ ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ಸಿಂಹ ರಾಶಿ
ಪ್ರೇಮಿಗಳಿಗೆ ಈ ದಿನ ಒಳ್ಳೆಯದಲ್ಲ, ನಿಮ್ಮ ನಡುವೆ ಮನಸ್ತಾಪ ಬರಬಹುದು. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಕಿರಿಕಿರಿ ಅನುಭವಿಸಬಹುದು. ಶಾಂತ ಮನಸ್ಸಿನಿಂದ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿದರೆ ಉತ್ತಮ. ನೀವು ವ್ಯಾಪಾರಸ್ಥರಾಗಿದ್ದರೆ ಮತ್ತು ಕೆಲವು ಕಾರಣಗಳಿಂದ ನಿಮ್ಮ ಕೆಲವು ಕೆಲಸ ಅಪೂರ್ಣವಾಗಿದ್ದರೆ ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ, ಹೆಚ್ಚುತ್ತಿರುವ ಮಾನಸಿಕ ಒತ್ತಡ ನಿಮ್ಮ ಮೇಲೆ ತುಂಬಾನೇ ಪರಿಣಾಮ ಬೀರಲಿದೆ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 4:30 ರವರೆಗೆ

ಕನ್ಯಾ ರಾಶಿ
ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ. ನೀವು ಕಚೇರಿಯಲ್ಲಿ ಕೆಲವು ದೊಡ್ಡ ಜವಾಬ್ದಾರಿಯನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಯಾವುದೇ ತಪ್ಪು ಮಾಡುವುದನ್ನು ತಪ್ಪಿಸಬೇಕು. ಉದ್ಯಮಿಗಳಿಗೆ ಇಂದು ಸವಾಲಿನ ದಿನ ಎಂದು ನಿರೀಕ್ಷಿಸಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆರೋಗ್ಯಕರ ದಿನಚರಿಯತ್ತ ಗಮನಹರಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 7:00 ನಿಂದ 8:45 ರವರೆಗೆ

ತುಲಾ ರಾಶಿ
ಕೆಲಸದ ವಿಷಯದಲ್ಲಿ ಉತ್ತಮವಾದ ದಿನ. ವ್ಯಾಪಾರಸ್ಥರು ಉತ್ತಮ ಲಾಭ ಗಳಿಸುವಿರಿ. ಹಣದ ಪರಿಸ್ಥಿತಿ ಸುಧಾರಿಸಬಹುದು. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಕೆಲವು ಕಾರಣಗಳಿಗಾಗಿ, ನೀವು ನಿಮ್ಮ ಮನೆಯಿಂದ ದೂರವಿದ್ದರೆ, ಇಂದು ನಿಮ್ಮ ಪ್ರೀತಿಪಾತ್ರರನ್ನು ಭೇಟಿ ಮಾಡುವ ಅವಕಾಶವನ್ನು ನೀವು ಪಡೆಯಬಹುದು. ಆರೋಗ್ಯವಾಗಿರಲು, ನೀವು ಸಮಯಕ್ಕೆ ಸರಿಯಾಗಿ ತಿನ್ನಬೇಕು ಹಾಗೂ ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಬೇಕು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ ಮಧ್ಯಾಹ್ನ 3 ರವರೆಗೆ

ವೃಶ್ಚಿಕ ರಾಶಿ
ಆರೋಗ್ಯದ ವಿಷಯದಲ್ಲಿ, ಇಂದು ಏರಳಿತಗಳಿವೆ, ಹಳೆಯ ಆರೋಗ್ಯ ಸಮಸ್ಯೆ ಕಾಡಬಹುದು. ಸ್ವಲ್ಪವೂ ನಿರ್ಲಕ್ಷ್ಯ ಮಾಡಬೇಡಿ. ಆರ್ಥಿಕ ವಿಷಯದಲ್ಲಿ ಈ ದಿನ ಮಿಶ್ರಫಲ. ನೀವು ಮನೆಯ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ನಿಮ್ಮ ಮಾತು ಮತ್ತು ನಡವಳಿಕೆ ಕಡೆ ಗಮನ ನೀಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ

ಧನು ರಾಶಿ
ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ. ಉದ್ಯಮಿಗಳು ತಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆಗಳು ಇರಬಹುದು, ಆದರೆ ಕೋಪ ಮತ್ತು ಆತುರವು ನಿಮ್ಮ ಮನೆಯ ಶಾಂತಿಯನ್ನು ಮತ್ತಷ್ಟು ಕದಡಬಹುದು. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 6 ರವರೆಗೆ

ಮಕರ ರಾಶಿ
ಕಚೇರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿಮಗೆ ಸಲಹೆ ನೀಡಲಾಗಿದೆ. ವ್ಯಾಪಾರಸ್ಥರು ಇಂದು ದೀರ್ಘ ಪ್ರಯಾಣವನ್ನು ತಪ್ಪಿಸಬೇಕು. ಕೆಲಸದ ಜೊತೆಗೆ ನಿಮ್ಮ ಕುಟುಂಬದ ಬಗ್ಗೆಯೂ ಗಮನ ಹರಿಸಬೇಕು. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ನೀವು ಸಮತೋಲನವನ್ನು ಸಾಧಿಸಿದರೆ ಅದು ಉತ್ತಮವಾಗಿರುತ್ತದೆ. ಹಣದ ವಿಷಯದಲ್ಲಿ ಇಂದು ಉತ್ತಮವಾಗಿದೆ. ಶೀತ, ಕೆಮ್ಮು ಈ ಬಗೆಯ ಆರೋಗ್ಯ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 12:05 ರಿಂದ ರಾತ್ರಿ 8:50 ರವರೆಗೆ

ಕುಂಭ ರಾಶಿ
ವ್ಯಾಪಾರಸ್ಥರಿಗೆ ಇಂದು ಅತ್ಯಂತ ಶುಭ ದಿನವಾಗಲಿದೆ. ನೀವು ಆರ್ಥಿಕ ಲಾಭವನ್ನೂ ಪಡೆಯುತ್ತೀರಿ. ಉದ್ಯೋಗಿಗಳಿಗೂ ಈ ದಿನ ಅನುಕೂಲಕರ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ಈ ರೀತಿಯ ತಪ್ಪು ಮಾಡುವುದನ್ನು ತಪ್ಪಿಸಿ. ಸಂಗಾತಿಯ ಆರೋಗ್ಯ ದುರ್ಬಲವಾಗಿರಬಹುದು. ಆರೋಗ್ಯದ ಕಡೆ ಗಮನ ನೀಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 10:50 ರವರೆಗೆ

ಮೀನ ರಾಶಿ
ಇಂದು ಕಛೇರಿಯಲ್ಲಿ ತರಾತುರಿಯಲ್ಲಿ ಯಾವುದೇ ಕೆಲಸ ಮಾಡಬೇಡಿ. ನೀವು ಒಂದು ಸಣ್ಣ ತಪ್ಪು ಮಾಡಿದರೂ ಅದು ನಿಮ್ಮ ಪ್ರಗತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ಕಾರಿ ಉದ್ಯೋಗದಲ್ಲಿರುವ ಜನರು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಇಂದು ನೀವು ಮನೆಯ ಕಿರಿಯ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಹಣದ ವಿಷಯದಲ್ಲಿ ಜಾಗರೂಕರಾಗಿರಿ. ಆರೋಗ್ಯದ ಬಗ್ಗೆ ಹೆಚ್ಚು ಚಿಂತಿಸಬೇಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 6:20 ರವರೆಗೆ



Click it and Unblock the Notifications











