Horoscope Today 8 March 2023: ಬುಧವಾರ : ಮೀನ ರಾಶಿಯವರಿಗೆ ಸವಾಲಿನ ದಿನ, ಉಳಿದ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್‌ 8ರ ರಾಶಿಫಲ ನೋಡೋಣ:

Dina Bhavishya -March 8 2023 Today Rashi Bhavishya, Daily Horoscope in Kannada

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಫಲ್ಗುಣ
ಪಕ್ಷ: ಶುಕ್ಲಪಕ್ಷ
ತಿಥಿ: ಪ್ರತಿಪಾದ
ನಕ್ಷತ್ರ: ಉತ್ತರ ಫಲ್ಗುಣಿ
ರಾಹುಕಾಲ: ಮಧ್ಯಾಹ್ನ 12:31ರಿಂದ 02:00 ಗಂಟೆಯವರೆಗೆ

ಮೇಷ ರಾಶಿ

ಮೇಷ ರಾಶಿ

ಕೆಲಸದ ವಿಷಯದಲ್ಲಿ ಇಂದು ನಿಮಗೆ ಮಿಶ್ರ ಫಲ. ಇಂದು ನೀವು ಕೆಲಸದ ಕಡೆ ತುಂಬಾನೇ ಗಮನಹರಿಸಬೇಕು. ಬೇಗನೆ ಲಾಭ ಗಳಿಸಲು ಅಡ್ಡಮಾರ್ಗ ಹಿಡಿಯದಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಆಯಾಸ ಹೆಚ್ಚಾಗಬಹುದು.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅಷ್ಟು ಒಳ್ಳೆಯದಲ್ಲ. ಬಿಡುವಿಲ್ಲದ ಕೆಲಸದಿಂದ ತುಂಬಾ ಆಯಾಸ ಉಂಟಾಗಿದ್ದರೆ ನೀವು ವಿಶ್ರಾಂತಿಯತ್ತ ಗಮನ ಹರಿಸುವುದು ಒಳ್ಳೆಯದು. ಉದ್ಯೋಗಿಗಳಿಗೆ ಈ ದಿನ ಉತ್ತಮವಿದೆ. ವ್ಯಾಪಾರಸ್ಥರು ಇಂದು ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಕುಟುಂಬ ಜೀವನದಲ್ಲಿ ನೆಮ್ಮದಿ ಇರಲಿದೆ.

ಅದೃಷ್ಟದ ಬಣ್ಣ: ಕೆನೆ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ಸಮಯ: ಬೆಳಿಗ್ಗೆ 4:55 ರಿಂದ 9:30 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ನೀವು ವ್ಯಾಪಾರಸ್ಥರಾಗಿದ್ದರೆ ನೀವು ನಿಮ್ಮ ವ್ಯವಹಾರದ ಕಡೆಗೆ ಸಂಪೂರ್ಣ ಗಮನ ನೀಡಿ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರಿಗಳ ಸಂಪೂರ್ಣ ಸಹಕಾರ ದೊರೆಯಲಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರುತ್ತದೆ, ಆರೋಗ್ಯ ಕೂಡ ಉತ್ತಮವಾಗಿರುತ್ತದೆ.

ಅದೃಷ್ಟದ ಬಣ್ಣ: ನೀಲಿ

ಅದೃಷ್ಟದ ಸಂಖ್ಯೆ: 21

ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ಕಚೇರಿಯಲ್ಲಿ ನಡೆಯುವ ರಾಜಕೀಯದ ಬಗ್ಗೆ ನೀವು ಹುಷಾರಾಗಿರಬೇಕು. ಉದ್ಯಮಿಗಳ ಆರ್ಥಿಕ ಭಾಗವು ಬಲವಾಗಿರುತ್ತದೆ. ನೀವು ದೊಡ್ಡ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಒಳ್ಳೆಯದಲ್ಲ. ನಿಮಗೇನಾದರೂ ಆರೋಗ್ಯ ಸಮಸ್ಯೆಯಿದ್ದರೆ ನೀವು ಹೆಚ್ಚು ಜಾಗರೂಕರಾಗಿರಬೇಕು.

ಅದೃಷ್ಟದ ಬಣ್ಣ: ಗುಲಾಬಿ

ಅದೃಷ್ಟದ ಸಂಖ್ಯೆ: 35

ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ರಾತ್ರಿ 8:45 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಉದ್ಯಮಿಗಳು ತಮ್ಮ ಯೋಜನೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಬಹುದು. ನೀವು ಪ್ರಮುಖ ವ್ಯವಹಾರ ನಿರ್ಧಾರವನ್ನೂ ಜಾಗೂರೂಕತೆಯಿಂದ ತೆಗೆದುಕೊಳ್ಳಬೇಕು. ಉದ್ಯೋಗವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ, ಅಂತಹ ವಿಷಯಗಳಲ್ಲಿ ಯಾವುದೇ ಆತುರಪಡಬೇಡಿ. ಚೆನ್ನಾಗಿ ಯೋಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯ ವಾತಾವರಣದಲ್ಲಿ ಸುಧಾರಣೆ ಕಾಣಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ತುಂಬಾ ಸಮಯ ಖಾಲಿ ಹೊಟ್ಟೆಯಲ್ಲಿ ಇರಬೇಡಿ.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:15 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಮನೆಯಲ್ಲಿ ಬದಲಾವಣೆ ನೀವು ಬಯಸುವುದಾದರೆ ನಿಮ್ಮ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳಾಗಬೇಕು. ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ನಿರುದ್ಯೋಗಿಗಳಿಗೂ ಕೆಲಸ ಸಿಗುವ ಸೂಚನೆ ಇದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ, ಆರೋಗ್ಯ ಚೆನ್ನಾಗಿರುತ್ತದೆ.

ಅದೃಷ್ಟದ ಬಣ್ಣ: ಹಸಿರು

ಅದೃಷ್ಟದ ಸಂಖ್ಯೆ: 7

ಅದೃಷ್ಟದ ಸಮಯ: ಸಂಜೆ 7 ರಿಂದ 9:25 ರವರೆಗೆ

ತುಲಾ ರಾಶಿ

ತುಲಾ ರಾಶಿ

ವೈಯಕ್ತಿಕ ಜೀವನದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ, ಉದ್ಯಮಿಗಳಿಗೆ ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನೀವು ಬಟ್ಟೆ ವ್ಯಾಪಾರಿಯಾಗಿದ್ದರೆ ನಿಮ್ಮ ವ್ಯಾಪಾರದಲ್ಲಿ ಹೆಚ್ಚಳವಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಗಮನ ನೀಡಿ.

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 19

ಅದೃಷ್ಟದ ಸಮಯ: ಬೆಳಗ್ಗೆ 4:20 ರಿಂದ 11 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಕಚೇರಿಯಲ್ಲಿ ಸ್ಪರ್ಧೆ ಹೆಚ್ಚಾಗಬಹುದು. ಈ ಅವಧಿಯಲ್ಲಿ ನೀವು ಹೆಚ್ಚು ಶ್ರಮವಹಿಸಿ ಕೆಲಸ ಮಾಡಲು ಸೂಚಿಸಲಾಗಿದೆ. ಮತ್ತೊಂದೆಡೆ, ಉದ್ಯಮಿಗಳು ತಮ್ಮ ವಿರೋಧಿಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಅವರ ನಿಮಗೆ ತೊಂದರೆ ಉಂಟು ಮಾಡಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಸಂಗಾತಿ ಮನಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಅದೃಷ್ಟದ ಬಣ್ಣ: ಕಿತ್ತಳೆ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:55 ರವರೆಗೆ

ಧನು ರಾಶಿ

ಧನು ರಾಶಿ

ಇಂದು ಆರ್ಥಿಕ ಸ್ಥಿತಿ ಅಷ್ಟು ಸರಿಯಿರಲ್ಲ . ಇಂದು ಹಣ ನಷ್ಟವಾಗುವ ಸಾಧ್ಯತೆ ಇದೆ. ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡದಿದ್ದರೆ ಅದು ಉತ್ತಮವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಯಾವುದೇ ತೊಂದರೆಯಿಲ್ಲದೆ ಪೂರ್ಣಗೊಳ್ಳುತ್ತವೆ. ನೀವು ಉದ್ಯಮಿಗಳಾಗಿದ್ದರೆ ಹೂಡಿಕೆಯ ವಿಷಯದಲ್ಲಿ ಆತುರಪಡಬೇಡಿ. ನೀವು ಅನಗತ್ಯ ಚಿಂತೆಗಳಿಂದ ದೂರವಿರಿ. ನೀವು ಆಹಾರಕ್ರಮದ ಕಡೆಗೆ ಗಮನ ನೀಡಿ.

ಅದೃಷ್ಟದ ಬಣ್ಣ: ಗಾಢ ನೀಲಿ

ಅದೃಷ್ಟದ ಸಂಖ್ಯೆ: 38

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ

ಮಕರ ರಾಶಿ

ಮಕರ ರಾಶಿ

ನೀವು ಯಾವುದೇ ಪ್ರಮುಖ ವೃತ್ತಿ ಸಂಬಂಧಿತ ಸಮಸ್ಯೆಯನ್ನು ತೊಡೆದುಹಾಕಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹಣಕಾಸಿನ ಲಾಭ ಉಂಟಾಗಲಿದೆ. ಆರೋಗ್ಯದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ. ಆರೋಗ್ಯದ ಕಡೆ ತುಂಬಾ ಗಮನಹರಿಸಬೇಕಾಗಿದೆ.

ಅದೃಷ್ಟದ ಬಣ್ಣ: ಕೇಸರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ ಮಧ್ಯಾಹ್ನ 3 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ನಿಮ್ಮ ಎಲ್ಲಾ ನಿರ್ಧಾರಗಳನ್ನು ನೀವು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 27

ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ

ಮೀನ ರಾಶಿ

ಇಂದು ನಿಮಗೆ ಸವಾಲಿನ ದಿನವಾಗಿರುತ್ತದೆ. ಮಗುವಿನ ಕುರಿತ ಚಿಂತೆ ಹೆಚ್ಚಬಹುದು. ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಇರಲಿದೆ. ಉದ್ಯಮಿಗಳು ತಮ್ಮ ವ್ಯವಹಾರವನ್ನು ಮುಂದುವರಿಸಲು ಅವಕಾಶ ಪಡೆಯುವಿರಿ. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 13

ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

English summary

Dina Bhavishya -March 8 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 8 March 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Tuesday, March 7, 2023, 23:50 [IST]
X
Desktop Bottom Promotion