Latest Updates
-
ಚೆನ್ನೈ-ಕೊಯಮತ್ತೂರಿನಲ್ಲಿ ಭಾರಿ ಮಳೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಮಾಡಿ ಈ ಸಿಂಪಲ್ ವರ್ಕ್ಔಟ್! -
ಬೆಂಗಳೂರು ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ತಲುಪಲು ಇಲ್ಲಿದೆ ಸ್ಮಾರ್ಟ್ ಟ್ರಾವೆಲ್ ಪ್ಲಾನ್! -
ಡೆಂಗ್ಯೂ ಭೀತಿ: ನಿಮ್ಮ ಬಾಲ್ಕನಿಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು 10 ನಿಮಿಷದ ಸಿಂಪಲ್ ಟಿಪ್ಸ್! -
ಮುಂಬೈನಲ್ಲಿ ತೀವ್ರ ಬಿಸಿಲು: IMD ಯಿಂದ ಹಳದಿ ಎಚ್ಚರಿಕೆ; ಆರೋಗ್ಯ ಕಾಪಾಡಿಕೊಳ್ಳಲು ಈ ಮುನ್ನೆಚ್ಚರಿಕೆ ಅಗತ್ಯ! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ 72 ಗಂಟೆಗಳ ಪ್ಲಾನ್ ಫಾಲೋ ಮಾಡಿ! -
ದೆಹಲಿ ವಾಯು ಮಾಲಿನ್ಯ: AQI ಏರಿಕೆ, ಹೊರಗೆ ಹೋಗುವ ಮುನ್ನ ಈ ಮಾಸ್ಕ್ ಧರಿಸುವುದು ಕಡ್ಡಾಯ! -
ವಿಶ್ವ ಶಿಕ್ಷಕರ ದಿನ: ಶಿಕ್ಷಕರಿಗೆ ಗೌರವ ಸಲ್ಲಿಸುವಾಗ ಪೋಷಕರು ಪಾಲಿಸಬೇಕಾದ ಶಿಷ್ಟಾಚಾರಗಳೇನು? -
ಕೇರಳ-ತಮಿಳುನಾಡು ಮಳೆ ಅಲರ್ಟ್: ನಿಮ್ಮ ಮನೆ ಮತ್ತು ಕಾರನ್ನು ಸುರಕ್ಷಿತವಾಗಿಡಲು ಈ 5 ತಕ್ಷಣದ ಕ್ರಮಗಳನ್ನು ಕೈಗೊಳ್ಳಿ! -
ಜಿಮ್ಗೆ ಹೋಗುವವರೇ ಎಚ್ಚರ! ಪ್ರೊಟೀನ್ ಸಪ್ಲಿಮೆಂಟ್ಸ್ ಮೇಲೆ FDA ದಾಳಿ, ನಕಲಿ ಉತ್ಪನ್ನ ಪತ್ತೆಹಚ್ಚುವುದು ಹೇಗೆ? -
ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್: ಭಾರತದ ಗೆಲುವಿನ ಸಂಭ್ರಮಕ್ಕೆ ಇಲ್ಲಿದೆ ವೈರಲ್ ಮೀಮ್ಸ್ ಮತ್ತು ಸೇಫ್ ಸೆಲೆಬ್ರೇಷನ್ ಗೈಡ್!
ಈದ್ ಮಿಲಾದ್ 2022: ಈ ಆಚರಣೆಯ ಮಹತ್ವವೇನು?
ಮುಸ್ಲಿಂರ ಪ್ರಮುಖ ಹಬ್ಬಗಳಲ್ಲಿ ಈದ್ ಮಿಲಾದ್ ಉನ್ ನಬಿ ಕೂಡ ಒಂದು. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 8ರಂದು ಸಂಜೆ ಈದ್ ಮಿಲಾದ್ ಆಚರಣೆ ಶುರುವಾಗಿ ಅಕ್ಟೋಬರ್ 9ರಂದು ಸಂಜೆ ಮುಕ್ತಾಯವಾಗಲಿದೆ.

ಇಸ್ಲಾಮಿಕ್ ಕ್ಯಾಲೆಂಡರ್ನ ಮೂರನೇ ತಿಂಗಳಾದ ರಬಿ ಯಲ್ ಅವ್ವಲ್ ತಿಂಗಳಿನಲ್ಲಿ ಪ್ರವಾದಿ ಮೊಹಮದ್ರ ಜನ್ಮ ದಿನವನ್ನು ಆಚರಿಸಲಾಗುವುದು. ಈ ದಿನ ನಿರ್ಬಂಧಿತ ಆಚರಣೆಗಳೊಂದಿಗೆ ಗುರುತಿಸಿಕೊಂಡಿದೆ ಏಕೆಂದರೆ ಈ ದಿನ ಪ್ರವಾದಿ ಮೊಹಮದ್ರ ಸಾವಿನ ವಾರ್ಷಿಕೋತ್ಸವ ಕೂಡ ಆಗಿದೆ.
ಪ್ರವಾದಿ ಮೊಹಮ್ಮದ್ ಸೌದಿ ಅರೇಬಿಯಾದ ಮಕ್ಕಾದಲ್ಲಿ 570 CE ಯಲ್ಲಿ ಜನಿಸಿದರು ಎಂದು ಹೇಳಲಾಗುವುದು. ಇವರು ಮನುಷ್ಯರಿಗೆ ಪ್ರೀತಿ ಮತ್ತು ಏಕತೆಯ ಸಂದೇಶವನ್ನ ಸಾರಲು ಅಲ್ಲಾನ ಸಂದೇಶ ವಾಹಕರಾಗಿ ಭೂಮಿಗೆ ಬಂದರು ಎಂದು ಹೇಳಲಾಗುವುದು.
ಈದ್ ಮಿಲಾದ್ ಕುರಾನ್ ಪಠಣೆ ಹಾಗೂ ಪ್ರಾರ್ಥನೆಗಳನ್ನು ಮಾಡುತ್ತಾ ಆಚರಿಸಲಾಗುವುದು. ದರ್ಗಾ ಹಾಗೂ ಮಸೀದಿಗಳಲ್ಲಿ ಸಂಜೆ ಜುಲೂಸ್(ಮೆರವಣಿಗೆ) ಇರುತ್ತದೆ.
ಈದ್ ಮಿಲಾದ್ ಎಂಬುವುದು ಪ್ರವಾದಿಯವರ ಜನ್ಮದಿನವನ್ನಾಗಿ ಆಚರಿಸಲಾಗುವುದಾದರೂ ಕುರಾನ್ ಸಂದೇಶಗಳ ಪುನಸ್ಮರಣೆ ಈ ಆಚರಣೆಯ ಪ್ರಮುಖ ಉದ್ದೇಶವಾಗಿದೆ.



Click it and Unblock the Notifications

