Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಅತ್ಯಾಚಾರಿಗಳ ಅಂತ್ಯಕ್ಕೆ ಟ್ವಿಟ್ಟಿಗರ ಸಂಭ್ರಮ
ಹೆಣ್ಣನ್ನು ಬರೀ ಕಾಮದ ದೃಷ್ಟಿಯಿಂದ ನೋಡುವ ಕ್ರೂರಿ ಮೃಗಗಳಿಗೆ ನಡುಕ ಶುರುವಾಗಿದೆ. ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಕೊಂದ ಪಾಪಿಗಳು ಇನ್ನಿಲ್ಲ ಎನ್ನುವುದೇ ಖುಷಿಪಡುವಂಥ ವಿಷಯವಾಗಿದೆ. ಇದೇ ಮೊದಲ ಬಾರಿಗೆ ಅತ್ಯಾಚಾರಿಗಳಿಗೆ ನಡುಕ ಹುಟ್ಟಿಸುವ ಘಟನೆ ನಡೆದಿದ್ದು, ಈ ಘಟನೆ ಬಗ್ಗೆ ಸಾಮಾಜಿಕ ತಾಣದಲ್ಲಿ ಜನರು ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೈದರಾಬಾದ್‌ನ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ, ಸುಟ್ಟು ಕೊಂದು ಪೈಶಾಚ್ಯ ಕೃತ್ಯ ಮುಗಿಸಿದ ಜಾಗದಲ್ಲಿಯೇ ಹೈದರಾಬಾದ್ ಪೊಲೀಸರ ಎನ್‌ಕೌಂಟರ್‌ನಲ್ಲಿ ಪಾಪಿಗಳು ಪರಲೋಕ ಸೇರಿದ್ದಾರೆ. ನವೆಂಬರ್ 27ಕ್ಕೆ ಪಶುವೈದ್ಯೆಯನ್ನು ಗ್ಯಾಂಗ್ ರೇಪ್ ಮಾಡಿ ಕೊಂದವರನ್ನು ಒಂದೇ ದಿನದಲ್ಲಿ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು ಪೊಲೀಸರು. ಆದರೆ ಅರೆಸ್ಟ್ ಮಾಡಿ ಜೈಲಿನಲ್ಲಿ ಇಡುವುದರಿಂದ ಇಂಥ ಪ್ರಕರಣಗಳು ನಿಲ್ಲುವುದಿಲ್ಲ, ಈ ಆರೋಪಿಗಳನ್ನು ಆದಷ್ಟು ಬೇಗ ನೇಣಿನಲ್ಲಿ ಹಾಕಿ ಎಂದು ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ನಡೆದ 10 ದಿನಗಳಲ್ಲಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಸಿಕ್ಕಿರುವುದು ಎಲ್ಲರ ಹರ್ಷಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಅಪರಾಧಿ ದಾಖಲೆಯ ಕಚೇರಿNCRB) ಪ್ರಕಾರ ಪ್ರತಿದಿನ ಸುಮಾರು ನೂರಕ್ಕೂ ಅಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. 2017ರಲ್ಲಿ 32, 000 ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇನ್ನು ಎಷ್ಟೋ ಸಂತ್ರಸ್ತೆಯರು ಮರ್ಯಾದೆಗೆ ಅಂಜಿ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಲು ಹಿಂದೇಟು ಹಾಕುತ್ತಿದ್ದಾರೆ. ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದರೂ ಕೆಲವು ವರ್ಷಗಳು ಕಳೆದ ಮೇಲೆ ಜೈಲಿನಿಂದ ಹೊರಬರಬಹುದು ಎಂಬ ಚಿಂತನೆಯೇ ಅತ್ಯಾಚಾರ ಹೆಚ್ಚಲು ಕಾರಣವಾಗಿದೆ.
ಆದರೆ ಹೈದರಾಬಾದ್‌ನ ಎನ್‌ಕೌಂಟರ್ ಪ್ರಕರಣ ಅತ್ಯಾಚಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದು, ಇದರ ಕುರಿತು ಟ್ವಿಟರ್‌ನಲ್ಲಿ ಟ್ವೀಟ್‌ಗಳ ಮಹಾಪೂರವೇ ಹರಿದು ಬರುತ್ತಿದೆ.



Click it and Unblock the Notifications
