Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
2021 ನವೆಂಬರ್ ಈ ರಾಶಿಗಳಿಗೆ ಅದೃಷ್ಟ ತರಲಿದೆ
ಇನ್ನೇನು ಕೆಲವೇ ದಿನಗಳಲ್ಲಿ ಆಕ್ಟೋಬರ್ ಕಳೆದು ನವೆಂಬರ್ ಆರಂಭವಾಗಲಿದೆ. ನವೆಂಬರ್ ತಿಂಗಳನ್ನು ಗ್ರಹಗಳು ಮತ್ತು ನಕ್ಷತ್ರಪುಂಜಗಳ ವಿಷಯದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. 2021ರ ನವೆಂಬರ್ ಮಾಸದಲ್ಲಿ ಅನೇಕ ಗ್ರಹಗಳು ರಾಶಿಚಕ್ರದಲ್ಲಿ ಬದಲಾವಣೆ ಕಾಣುತ್ತದೆ. ಈ ಗ್ರಹಗಳ ಸಂಚಾರವು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಮೇಲೂ ಪರಿಣಾಮ ಬೀರಲಿದೆ.
ಇವುಗಳ ಪರಿಣಾಮ ಕೆಲವರಿಗೆ ನವೆಂಬರ್ ತಿಂಗಳು ಸಂತಸ, ಲಾಭ ತರುತ್ತದೆ. ಈ ತಿಂಗಳಲ್ಲಿ, ಕೆಲಸದ ಸ್ಥಳದಲ್ಲಿ ಪ್ರಗತಿಯ ಸಾಧ್ಯತೆಗಳು ಮತ್ತು ಆದಾಯದಲ್ಲಿ ಹೆಚ್ಚಳದ ಸಾಧ್ಯತೆ ಇರುತ್ತದೆ. ನವೆಂಬರ್ ತಿಂಗಳು ಯಾವ ರಾಶಿಚಕ್ರ ಚಿಹ್ನೆಗಳಿಗೆ ಅದೃಷ್ಟವನ್ನು ತರುತ್ತದೆ ಎಂಬುದನ್ನು ತಿಳಿಯೋಣ:

ವೃಷಭ ರಾಶಿ
ವೃಷಭ ರಾಶಿಯವರಿಗೆ ನವೆಂಬರ್ ತಿಂಗಳು ಶುಭ ಫಲಿತಾಂಶಗಳನ್ನು ತರುತ್ತದೆ. ಈ ಸಮಯದಲ್ಲಿ ನೀವು ಅದೃಷ್ಟದ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಉದ್ಯೋಗವನ್ನು ಹುಡುಕುತ್ತಿರುವ ಜನರು ಒಳ್ಳೆಯ ಸುದ್ದಿ ಪಡೆಯಬಹುದು. ನಿಗದಿತ ಸಮಯಕ್ಕೆ ಕೆಲಸಗಳು ಪೂರ್ಣಗೊಳ್ಳಲಿದೆ. ಆತ್ಮವಿಶ್ವಾಸವು ಹೆಚ್ಚಾಗುತ್ತದೆ ಮತ್ತು ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ.

ಮಿಥುನ ರಾಶಿ
ಈ ತಿಂಗಳು ಹಣಕಾಸಿನ ವಿಷಯಗಳಿಗೆ ತುಂಬಾ ಅನುಕೂಲಕರವಾಗಿದೆ. ಈ ಸಮಯದಲ್ಲಿ, ನಿಮಗೆ ಹಣದ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಹೂಡಿಕೆ ಯೋಜನೆ ಮಾಡಬಹುದು. ಕೆಲಸದ ಸ್ಥಳದಲ್ಲಿ ನೀವು ಗೌರವವನ್ನು ಪಡೆಯಬಹುದು. ಉದ್ಯೋಗ ಬದಲಾವಣೆಗೆ ಸಮಯ ಅನುಕೂಲಕರವಾಗಿದೆ. ಈ ತಿಂಗಳು ನೀವು ಉದ್ಯೋಗದಲ್ಲಿ ಬಡ್ತಿ ಪಡೆಯಬಹುದು.

ಸಿಂಹ ರಾಶಿ
ನವೆಂಬರ್ ತಿಂಗಳು ಆರ್ಥಿಕ ರಂಗದಲ್ಲಿ ಲಾಭದಾಯಕವೆಂದು ಸಾಬೀತುಪಡಿಸುತ್ತದೆ. ಈ ಸಮಯದಲ್ಲಿ ನೀವು ಹೊಸ ಆದಾಯದ ಮೂಲಗಳನ್ನು ಪಡೆಯುತ್ತೀರಿ. ಕಠಿಣ ಪರಿಶ್ರಮಕ್ಕೆ ಪೂರ್ಣ ಫಲ ಸಿಗಲಿದೆ. ಬಾಕಿ ಇದ್ದ ಅಥವ ತಡೆಹಿಡಿದಿದ್ದ ಹಣವನ್ನು ಹಿಂತಿರುಗಿಸಲಾಗುತ್ತದೆ. ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಯಾವುದೇ ಅಪರಿಚಿತ ವ್ಯಕ್ತಿಯೊಂದಿಗೆ ಹಣದ ವ್ಯವಹಾರವನ್ನು ತಪ್ಪಿಸಿ. ಕೆಲಸದ ಸ್ಥಳದಲ್ಲಿ ಬಾಸ್ ನಿಮ್ಮ ಬಗ್ಗೆ ಸಂತೋಷಪಡುತ್ತಾರೆ. ವ್ಯಾಪಾರಸ್ಥರಿಗೆ ಲಾಭವಾಗಲಿದೆ.



Click it and Unblock the Notifications
