Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ವೃಶ್ಚಿಕ ರಾಶಿಯಲ್ಲಿ ನಡೆಯಲಿರುವ ಚಂದ್ರಗ್ರಹಣ 2022: ಈ 3 ರಾಶಿಗಳಿಗೆ ಶುಭವಾಗಲಿದೆ
2022 ವರ್ಷದ ಮೊದಲ ಚಂದ್ರಗ್ರಹಣ ಸೋಮವಾರ, ಮೇ 16 ರಂದು ಸಂಭವಿಸಲಿದೆ. ವೈಶಾಖ ಪೂರ್ಣಿಮೆಯ ದಿನದಂದು ನಡೆಯಲಿದೆ. ಈ ದಿನ ನಡೆಯಲಿರುವುದು ಸಂಪೂರ್ಣ ಚಂದ್ರಗ್ರಹಣವಾಗಿದೆ. ಈ ಬಾರಿ ಗೋಚರಿಸಲಿರುವುದು ರಕ್ತ ಚಂದ್ರಗ್ರಹಣ. ಈ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಏಕೆಂದರೆ ಆ ಸಮಯದಲ್ಲಿ ಭಾರತದಲ್ಲಿ ಬೆಳಕು ಹರಿದಿರುತ್ತದೆ. ಆದ್ದರಿಂದ ಸೂತಕವಿರುವುದಿಲ್ಲ. ಆದರೆ ಗ್ರಹಣದ ಪರಿಣಾಮವು ಎಲ್ಲಾ ರಾಶಿಗಳ ಮೇಲೆ ಇದ್ದೇ ಇರುತ್ತದೆ.
ಮೇ 16 ರ ಚಂದ್ರಗ್ರಹಣವು ವೃಶ್ಚಿಕ ರಾಶಿಯಲ್ಲಿ ನಡೆಯಲಿದೆ. ಈ ದಿನ ವಿಶಾಖ ನಕ್ಷತ್ರ ಇರುತ್ತದೆ. ಆದ್ದರಿಂದ ಗ್ರಹಣದ ದಿನ ರಚನೆಯಾಗುತ್ತಿರುವ ಗ್ರಹಗಳು ಮತ್ತು ನಕ್ಷತ್ರಪುಂಜಗಳು ಮೂರು ರಾಶಿಯವರಿಗೆ ಪ್ರಯೋಜನಕಾರಿಯಾಗುತ್ತವೆ. ಚಂದ್ರಗ್ರಹಣವು ಯಾವ 3 ರಾಶಿಯವರಿಗೆ ಶುಭವಾಗಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ
ಈ ಚಂದ್ರಗ್ರಹಣವು ಮೇಷ ರಾಶಿಯವರಿಗೆ ಶುಭ ತರಲಿದೆ. ನಿಮ್ಮ ವೃತ್ತಿಜೀವನದ ದೃಷ್ಟಿಯಿಂದ ಇದು ತುಂಬಾ ಉತ್ತಮ ಸಮಯವಾಗಿರುತ್ತದೆ. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ಉದ್ಯಮಿಗಳಿಗೆ ಈ ಗ್ರಹಣವು ಮಂಗಳಕರವಾಗಿದೆ. ನೀವು ಏನಾದರೂ ಹೂಡಿಕೆ ಮಾಡಲು ಬಯಸುವುದಾದರೆ ಹೂಡಿಕೆಗೆ ಸಮಯ ಉತ್ತಮವಾಗಿರುತ್ತದೆ. ಕೌಟುಂಬಿಕ ಸಮಸ್ಯೆಗಳೆಲ್ಲವೂ ಬಗೆಹರಿಯುತ್ತವೆ. ಸಂಗಾತಿಯ ಸಂಪೂರ್ಣ ಬೆಂಬಲವಿರುತ್ತದೆ. ಮನರಂಜನೆ ಮತ್ತು ವಿನೋದದಲ್ಲಿ ಸ್ವಲ್ಪ ಸಮಯ ಕಳೆಯಬಹುದು.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಚಂದ್ರಗ್ರಹಣವು ಶುಭಕರವಾಗಿರುತ್ತದೆ. ಉದ್ಯೋಗದಲ್ಲಿ ಬಡ್ತಿ ಪಡೆಯಬಹುದು. ಆದಾಯದ ಹೊಸ ಮೂಲಗಳು ಹೊರಹೊಮ್ಮುತ್ತವೆ. ಕೆಲವು ಮಹತ್ವದ ಕೆಲಸಗಳು ನಡೆಯುವ ಸಾಧ್ಯತೆ ಇದೆ. ನಿಮ್ಮ ವ್ಯಕ್ತಿತ್ವ ಮತ್ತು ಕೌಶಲ್ಯಕ್ಕೆ ಮಾನ್ಯತೆ ಸಿಗುವುದು. ದಾಂಪತ್ಯ ಜೀವನದಲ್ಲಿ ಪ್ರೀತಿ ಹೆಚ್ಚಾಗುತ್ತದೆ.

ಧನು ರಾಶಿ
ಚಂದ್ರಗ್ರಹಣವು ಧನು ರಾಶಿಯವರ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ವ್ಯಾಪಾರಿಗಳು ದೊಡ್ಡ ಆದೇಶಗಳನ್ನು ಪಡೆಯಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮದುವೆಗೆ ಸಂಬಂಧಿಸಿದ ಯಾವುದೇ ಸಂಭಾಷಣೆಯನ್ನು ಸರಿಪಡಿಸಬಹುದು. ಸಮಸ್ಯೆಗಳ ಪರಿಹಾರಕ್ಕೆ ಮನೆಯ ಹಿರಿಯರ ಸಹಾಯ ದೊರೆಯಲಿದೆ.



Click it and Unblock the Notifications
