Latest Updates
-
ದಸರಾ ಟ್ರಾಫಿಕ್ ಜಾಮ್: ತಡವಾದರೂ ಸಂಬಂಧ ಹಾಳಾಗದಂತೆ ನಿಭಾಯಿಸಲು ಇಲ್ಲಿದೆ 90 ಸೆಕೆಂಡ್ಗಳ ಸ್ಕ್ರಿಪ್ಟ್ -
ವಿಜಯದಶಮಿ ಸಂಭ್ರಮ: ಕೊನೆ ನಿಮಿಷದಲ್ಲಿ ಮನೆಯನ್ನು ಆಕರ್ಷಕವಾಗಿಸಲು 5 ಸಿಂಪಲ್ ಎಕೋ-ಫ್ರೆಂಡ್ಲಿ ಐಡಿಯಾಗಳು -
ಮೂಳೆಗಳ ಆರೋಗ್ಯಕ್ಕೆ ಬಜೆಟ್ ಸ್ನೇಹಿ ಆಹಾರ: ಆಸ್ಟಿಯೋ ಪೋರೋಸಿಸ್ ತಡೆಯಲು ಇಂದೇ ಈ ಬದಲಾವಣೆ ಮಾಡಿ! -
ಮೈಸೂರು ದಸರಾ 2026: ಪಂಜಿನ ಕವಾಯತು ಮತ್ತು ಡ್ರೋನ್ ಶೋ ವೀಕ್ಷಿಸಲು ಇಲ್ಲಿದೆ ಕಂಪ್ಲೀಟ್ ಗೈಡ್! -
ದೇವಸ್ಥಾನದ ಉದ್ದದ ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ನೋವು ಮರೆಸುವ 7 ನಿಮಿಷದ ಮ್ಯಾಜಿಕ್ ಟಿಪ್ಸ್ ಇಲ್ಲಿದೆ! -
ವಿಜಯದಶಮಿ ಹಬ್ಬದ ಗಡಿಬಿಡಿ ಬೇಡ: ನೆಮ್ಮದಿಯಿಂದ ಹಬ್ಬ ಆಚರಿಸಲು ದಂಪತಿಗಳಿಗೆ ಇಲ್ಲಿದೆ ಸೀಕ್ರೆಟ್ ಪ್ಲಾನ್ -
ಬೆಂಗಳೂರು ಮಳೆ ಅಲರ್ಟ್: ನಿಮ್ಮ ಅಪಾರ್ಟ್ಮೆಂಟ್ ಮತ್ತು ಬೇಸ್ಮೆಂಟ್ ಸುರಕ್ಷತೆಗೆ ಇಂದೇ ಈ ಕ್ರಮಗಳನ್ನು ಕೈಗೊಳ್ಳಿ! -
ವಿಜಯದಶಮಿ ಹಬ್ಬದೂಟ: ಬ್ಲಡ್ ಶುಗರ್ ಏರಿಕೆಯಾಗದಂತೆ ಹೋಳಿಗೆ-ಪಾಯಸ ಸವಿಯುವುದು ಹೇಗೆ? -
ದಸರಾ ಸಂಭ್ರಮ: ರಾವಣ ದಹನ, ಟ್ರಾಫಿಕ್ ನಿರ್ಬಂಧ ಮತ್ತು ಮಳೆ ಎಚ್ಚರಿಕೆ - ಹೊರಡುವ ಮುನ್ನ ಇದನ್ನು ಓದಿ! -
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್!
ಮಕರದಲ್ಲಿ ಬುಧ ಗೋಚಾರ ಫಲ: ಈ 30 ದಿನ 4 ರಾಶಿಗಳಿಗೆ ತುಂಬಾನೇ ಅದೃಷ್ಟಕರ
ವೈದಿಕ ಜ್ಯೋತಿಷ್ಯದಲ್ಲಿ, ಅತ್ಯಂತ ವೇಗದ ಗ್ರಹವೆಂದು ಪರಿಗಣಿಸಲಾದ ಬುಧವು ಫೆಬ್ರವರಿ 7, 2023 ರಂದು ಬೆಳಗ್ಗೆ 7.11 ಕ್ಕೆ ಮಕರ ರಾಶಿಯನ್ನು ಪ್ರವೇಶಿಸಿದೆ.

ಇದರ ಪ್ರಭಾವ ದ್ವಾದಶ ರಾಶಿಗಳ ಮೇಲೆ ಇರಲಿದೆ, ಆದರೆ ಈ ಸಂಚಾರದ ಅವಧಿ ಈ 4 ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ ನೋಡಿ:
ಮೇಷ ರಾಶಿ
ನಿಮ್ಮ ಜಾತಕದ 10ನೇ ಮನೆಯಲ್ಲಿ ಬುಧ ಸಂಕ್ರಮಣವಾಗಿದೆ ಆದ್ದರಿಂದ ಇದು ನಿಮಗೆ ಲಾಭದಾಯಕ ಸಮಯವಾಗಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರು ಹೊಸ ಉದ್ಯೋಗವನ್ನು ಪಡೆಯಬಹುದು , ವ್ಯಾಪಾರಸ್ಥರು ಲಾಭ ಗಳಿಸಲಿದ್ದಾರೆ. ನಿಮ್ಮ ಗೌರವ ಮತ್ತು ಖ್ಯಾತಿಯು ಹೆಚ್ಚಾಗುತ್ತದೆ ಮತ್ತು ವೃತ್ತಿಜೀವನವು ಉತ್ತುಂಗಕ್ಕೇರುತ್ತದೆ. ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗುವ ಸಮಯ ಬಂದಿದೆ.
ವೃಷಭ ರಾಶಿ
ಈ ಸಂಚಾರದಲ್ಲಿ ಬುಧ ನಿಮ್ಮ 9ನೇ ಮನೆಯಲ್ಲಿದ್ದು ಮೂರನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ.ಇದರಿಂದಾಗಿ ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ವಿದ್ಯಾರ್ಥಿಗಳಿಗೆ ಈ ಸಮಯ ಉತ್ತಮವಾಗಿರುತ್ತದೆ. ಏಕಾಗ್ರತೆ ಹೆಚ್ಚುತ್ತದೆ ಮತ್ತು ನೀವು ಚೆನ್ನಾಗಿ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವವರಿಗೆ ಸಮಯವು ಅನುಕೂಲಕರವಾಗಿದೆ.
ಕರ್ಕ ರಾಶಿ
ಜಾತಕದ 7ನೇ ಮನೆಯಲ್ಲಿ ಬುಧ ಸಂಚಾರವು ಮಾಧ್ಯಮ ಅಥವಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಲಾಭವನ್ನು ನೀಡುತ್ತದೆ. ನೀವು ಕಠಿಣ ಪರಿಶ್ರಮಕ್ಕೆ ತಕ್ಕಫಲಿತಾಂಶವನ್ನು ಪಡೆಯುತ್ತೀರಿ, ನಿಮ್ಮ ಕೆಲಸದಲ್ಲಿ ಕ್ರಿಯಾಶೀಲತೆ ಹೆಚ್ಚಾಗುತ್ತದೆ. ವ್ಯಾಪಾರಸ್ಥರಿಗೆ ಲಾಭವಾಗಲಿದೆ. ಏನಾದರೂ ಕೋರ್ಟ್ ಪ್ರಕರಣವಿದ್ದರೆ ತೀರ್ಪು ನಿಮ್ಮ ಪರ ಬರಲಿದೆ.
ಮಕರ ರಾಶಿ
ಮಕರ ರಾಶಿಯ ಮೊದಲ ಮನೆಯಲ್ಲಿ ಬುಧ ಸಂಚಾರವು ನಿಮಗೆ ಸಮಾಜದಲ್ಲಿ ಗೌರವ, ಸ್ಥಾನ ಮತ್ತು ಪ್ರತಿಷ್ಠೆಯನ್ನು ನೀಡುತ್ತದೆ. ಸ್ವಲ್ಪ ಬುದ್ಧಿ ಉಪಯೋಗಿಸಿದರೆ ನೀವು ಬಹಳಷ್ಟು ಹಣವನ್ನು ಗಳಿಸಲು ಸಾಧ್ಯವಾಗುತ್ತದೆ. ಈ ಸಾಗಣೆಯಲ್ಲಿ ಹೂಡಿಕೆಯ ಲಾಭವನ್ನೂ ಪಡೆಯಬಹುದು. ಹಣ ಸಂಪಾದಿಸಲು ಇದು ಉತ್ತಮ ಸಮಯ.



Click it and Unblock the Notifications

