Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಮಾರ್ಚ್ನಲ್ಲಿದೆ 4 ಗ್ರಹಗಳ ಸಂಚಾರ: ಈ 3 ರಾಶಿಯವರಿಗೆ ಈ ತಿಂಗಳು ಅದೃಷ್ಟಕರ
ಮಾರ್ಚ್ನಲ್ಲಿ 4 ಪ್ರಮುಖ ಗ್ರಹಗಳ ರಾಶಿ ಬದಲಾವಣೆಯಾಗಲಿದೆ. ಮಂಗಳ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸುತ್ತದೆ. ಶುಕ್ರ ಗ್ರಹವು ಮೇಷ ರಾಶಿಯಲ್ಲಿ ಸಾಗುತ್ತಾನೆ. ಮಾರ್ಚ್ 15ಕ್ಕೆ ಮೀನ ರಾಶಿಗೆ ಸಂಚಾರವಾಗಲಿದೆ. ಈ ತಿಂಗಳು ಬುಧ ಕೂಡ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ಗ್ರಹಗಳ ರಾಶಿ ಬದಲಾವಣೆ 12 ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಈ ಸಂಚಾರ ಕೆಲವು ರಾಶಿಗಳಿಗೆ ಶುಭವಾದರೆ ಇನ್ನು ಕೆಲವು ರಾಶಿಗಳಿಗೆ ಅಷ್ಟೊಂದು ಅನುಕೂಲಕರವಲ್ಲ.
ಮಾರ್ಚ್ ತಿಂಗಳಿನಲ್ಲಿ ಮಂಗಳ, ಶುಕ್ರ, ಸೂರ್ಯ, ಬುಧ ಗ್ರಹಗಳ ಸಂಚಾರ ಯಾವಾಗ, ಈ ಗ್ರಹಗಳ ಸಂಚಾರ ಈ ತಿಂಗಳಿನಲ್ಲಿ ಯಾವ ರಾಶಿಗಳಿಗೆ ತುಂಬಾ ಒಳ್ಳೆಯದು ಎಂದು ನೋಡೋಣ ಬನ್ನಿ:

4 ಗ್ರಹಗಳ ಸಂಚಾರವಿದೆ
ಶುಕ್ರ ಸಂಚಾರ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಾರ್ಚ್ 12 ರ ಭಾನುವಾರ ಬೆಳಗ್ಗೆ 8.37 ಕ್ಕೆ ಶುಕ್ರ ಗ್ರಹವು ಮೀನ ರಾಶಿಯನ್ನು ಬಿಟ್ಟು ಮೇಷ ರಾಶಿಯನ್ನು ಪ್ರವೇಶಿಸಲಿದೆ. ಏಪ್ರಿಲ್ 6 ರವರೆಗೆ ಇದೇ ರಾಶಿಯಲ್ಲಿ ಇರಲಿದೆ
ಮಂಗಳ ಸಂಚಾರ
ಗ್ರಹಗಳ ಅಧಿಪತಿಯಾದ ಮಂಗಳ ಗ್ರಹವು ಮಾರ್ಚ್ 13 ರಂದು ಬೆಳಗ್ಗೆ 5.33 ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಲಿದೆ. ಮಂಗಳ ಮಿಥುನ ರಾಶಿಯಲ್ಲಿ ಮೇ 10 ರಂದು ಮಧ್ಯಾಹ್ನ 2.14 ರವರೆಗೆ ಇರಲಿದೆ. ನಂತರ ಕರ್ಕ ರಾಶಿಗೆ ಪ್ರವೇಶಿಸಲಿದೆ.
ಸೂರ್ಯ ಸಂಚಾರ
ಗ್ರಹಗಳ ರಾಜ ಸೂರ್ಯ ಮಾರ್ಚ್ 15 ರಂದು ಬೆಳಗ್ಗೆ 6.47 ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಏಪ್ರಿಲ್ 14 ರಂದು ಮಧ್ಯಾಹ್ನ 3.12 ಕ್ಕೆ ಮೇಷ ರಾಶಿಗೆ ಪ್ರವೇಶಿಸಲಿದೆ.
ಬುಧ ಸಂಚಾರ
ಗ್ರಹಗಳ ರಾಜ ಬುಧನು ಮಾರ್ಚ್ 16 ರಂದು ಬೆಳಗ್ಗೆ 10.54 ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರ ನಂತರ, ಮಾರ್ಚ್ 31 ರಂದು, 3:01 ಕ್ಕೆ, ಅದು ಮತ್ತೆ ಮೇಷ ರಾಶಿಯನ್ನು ಪ್ರವೇಶಿಸುತ್ತದೆ. ಜೂನ್ 7 ರವರೆಗೆ ಮೇಷ ರಾಶಿಯಲ್ಲಿ ಇರಲಿದೆ.

ತುಲಾ ರಾಶಿ
ಮಾರ್ಚ್ ತಿಂಗಳು ನಿಮಗೆ ಮಂಗಳಕರವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಪ್ರಮೋಷನ್ ಮತ್ತು ಬಡ್ತಿ ಬಗ್ಗೆ ಮಾತನಾಡಬಹುದು. ಇದರೊಂದಿಗೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಉತ್ತಮ ಅವಕಾಶಗಳನ್ನು ಪಡೆಯುತ್ತಾರೆ. ಅದೇ ಸಮಯದಲ್ಲಿ, ನಿಮ್ಮ ಕೆಲಸದಲ್ಲಿ ಯಶಸ್ಸು ಇರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಅದೇ ಸಮಯದಲ್ಲಿ, ನಿಮ್ಮ ವೈವಾಹಿಕ ಜೀವನದಲ್ಲಿ ಸಂಬಂಧ ತುಂಬಾ ಚೆನ್ನಾಗಿ ಇರಲಿದೆ. ಈ ಅವಧಿಯಲ್ಲಿ ಉದ್ಯಮಿಗಳು ಲಾಭವನ್ನು ಪಡೆಯುತ್ತಾರೆ, ನಿಮಗೆ ಹೊಸ ಆದಾಯದ ಅವಕಾಶಗಳು ಸಿಗಲಿದೆ. ಅವಾಹಿತರಾಗಿದ್ದು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಒಳ್ಳೆಯ ಸಂಬಂಧ ಕೂಡಿ ಬರಲಿದೆ. ಆದರೆ ಈ ಸಮಯದಲ್ಲಿ ನೀವು ವಹಿವಾಟು ಮಾಡುವಾಗ ಜಾಗರೂಕರಾಗಿರಬೇಕು. ಅದೇ ಸಮಯದಲ್ಲಿ, ಅಗತ್ಯ ದಾಖಲೆಗಳಿಗೆ ಸಹಿ ಮಾಡುವಾಗ ಜಾಗರೂಕರಾಗಿರಿ.

ಕರ್ಕ ರಾಶಿ
ಮಾರ್ಚ್ ತಿಂಗಳು ನಿಮಗೆ ಅನುಕೂಲಕರವಾಗಿದೆ. ಈ ತಿಂಗಳಿನಲ್ಲಿ ವಿಶೇಷ ಪ್ರಯೋಜನಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳು ಸಹ ಈ ಸಮಯದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ಇದರೊಂದಿಗೆ ಸಮಾಜದಲ್ಲಿ ಗೌರವವೂ ಹೆಚ್ಚಾಗಲಿದೆ. ರಾಜಕೀಯದಲ್ಲಿ ಇರುವವರಿಗೆ ಈ ಅವಧಿ ಉತ್ತಮವಾಗಿದೆ. ಅದೃಷ್ಟದ ಅವಧಿಯಾಗಿರುವುದರಿಂದ ಪಾಲುದಾರಿಕೆ ಕೆಲಸದಲ್ಲಿ ಯಶಸ್ಸನ್ನು ಪಡೆಯಬಹುದು. ಅಲ್ಲದೆ, ಉದ್ಯೋಗಸ್ಥರು ಕೆಲಸದ ಸ್ಥಳದಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ಪಡೆಯಬಹುದು.

ವೃಷಭ ರಾಶಿ
ಮಾರ್ಚ್ ತಿಂಗಳು ನಿಮಗೆ ಪ್ರಯೋಜನಕಾರಿ ಮತ್ತು ಆನಂದದಾಯಕವಾಗಿದೆ. ಈ ತಿಂಗಳು ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಇದರೊಂದಿಗೆ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ. ಗ್ರಹಗತಿಗಳ ಸ್ಥಾನದಿಂದಾಗಿ ನಿಮಗೆ ಬರಬೇಕಾಗಿದ್ದ ಹಣವು ಮರಳಿ ದೊರೆಯಲಿದೆ



Click it and Unblock the Notifications
