Latest Updates
-
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್
ಮಕರದಲ್ಲಿ ಮಾರ್ಗಿಯಾಗುವ ಶನಿ: ಈ 5 ರಾಶಿಗಳಿಗೆ ಈ ಸಂಚಾರ ತುಂಬಾನೇ ಒಳ್ಳೆಯದಿದೆ
ಗ್ರಹಗಳಲ್ಲಿಯೇ ಅತ್ಯಂತ ನಿಧಾನವಾಗಿ ಚಲಿಸುವ ಗ್ರಹವೆಂದರೆ ಅದು ಶನಿಗ್ರಹ. ಶನಿಗ್ರಹ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಎರಡೂವರೆ ವರ್ಷ ತೆಗೆದುಕೊಳ್ಳುತ್ತದೆ. ಆದ್ದರಿಂದ ಶನಿ ರಾಶಿಗಳ ಮೇಲೆ ಬಿರುವ ಪ್ರಬಾವ ಕೂಡ ದೀರ್ಘವಾಗಿರುತ್ತೆ. ಇದೇ ವರ್ಷ ಏಪ್ರಿಲ್‌ನಲ್ಲಿ ಶನಿಯು ಕುಂಭ ರಾಶಿಯನ್ನು ಪ್ರವೇಶಿಸಿದೆ.

ಶನಿಯು ಕುಂಭ ರಾಶಿಯಲ್ಲಿ ಜೂನ್ 5, 2022ಕ್ಕೆ ವಕ್ರೀಯವಾಗಿ ಚಲಿಸಿ ಜುಲೈ 12, 2022ರಲ್ಲಿ ಮಕರ ರಾಶಿಯಲ್ಲಿ ವಕ್ರೀಯವಾಗಿ ಚಲಿಸಲಾರಂಭಿಸಿತ್ತು. 141 ದಿನಗಳ ವಕ್ರೀಯ ಚಲನೆಯಲ್ಲಿದ್ದ ಶನಿ ಇದೀಗ ಅಕ್ಟೋಬರ್ 23ರಿಂದ ಮಕರ ರಾಶಿಯಲ್ಲಿ ನೇರವಾಗಿ ಚಲಿಸಿ ಜನವರಿ 17ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸುತ್ತದೆ.

ಅಕ್ಟೋಬರ್ 23ಕ್ಕೆ ಶನಿ ಮಾರ್ಗಿ
ವೈದಿಕ ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಶನಿದೇವನು ಯಾವುದೇ ರಾಶಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದಾಗ, ಸಾಡೇ ಸತಿ ಮತ್ತು ಧೈಯಾ ಇರುವ ರಾಶಿಯವರು ಅನೇಕ ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಅವರ ಕಾರ್ಯಗಳಲ್ಲಿ ವೈಫಲ್ಯಗಳನ್ನು ಪಡೆಯುತ್ತಾರೆ. ಉದ್ಯೋಗದಲ್ಲಿ ಒತ್ತಡ ಮತ್ತು ವ್ಯಾಪಾರದಲ್ಲಿ ನಷ್ಟ ಉಂಟಾಗುವುದು.
ಇದಲ್ಲದೆ ಆರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಇದೀಗ ವಕ್ರೀಯಾಗಿರುವ ಶನಿ ಅಕ್ಟೋಬರ್ 23ರಿಂದ ಮಾರ್ಗಿಯಾಗಿ ಚಲಿಸಲಾರಂಭಿಸಿದಾಗ ಈ ರಾಶಿಯವರ ಸಂಕಷ್ಟಗಳು ಕಡಿಮೆಯಾಗಲು ಪ್ರಾರಂಭಿಸುತ್ತವೆ. ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.
ಅಕ್ಟೋಬರ್ 23ರಿಂದ ಶನಿ ಮಾರ್ಗವಾಗಿ ಚಲಿಸಲಾರಂಭಿಸಿದಾಗ ಈ ರಾಶಿಗಳಿಗೆ ಒಳಿತಾಗಲಿದೆ:

ಮೇಷ ರಾಶಿ
ಶನಿಯು ಮಾರ್ಗಿಯಾದಾಗ ಮೇಷ ರಾಶಿಯ ಜನರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ ಶನಿಯು ಮೇಷ ರಾಶಿಯ ಹತ್ತನೇ ಮನೆಯಲ್ಲಿ ಕುಳಿತಿದ್ದಾನೆ. ಈ ಸ್ಥಾನವು ವ್ಯವಹಾರದಲ್ಲಿ ಪ್ರಯೋಜನವನ್ನು ನೀಡುತ್ತದೆ, ಉತ್ತಮ ಉದ್ಯೋಗಾವಕಾಶಗಳನ್ನು ನೀಡುತ್ತದೆ. ಇದರೊಂದಿಗೆಗೌರವವನ್ನು ಹೆಚ್ಚಿಸುತ್ತದೆ.

ಕರ್ಕ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿ ದೇವನು ಕರ್ಕ ರಾಶಿಯ ಏಳನೇ ಮನೆಯಲ್ಲಿ ಚಲಿಸಲಿದೆ. ಕರ್ಕ ರಾಶಿಯ ಜನರ ಜೀವನದಲ್ಲಿ ದೀರ್ಘಕಾಲದ ಸಮಸ್ಯೆಗಳು ಕಡಿಮೆಯಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಲಾಭದ ಸಾಧ್ಯತೆಗಳಿವೆ. ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ವೈವಾಹಿಕ ಜೀವನದಲ್ಲಿ ಮಾಧುರ್ಯ ಇರುತ್ತದೆ.

ತುಲಾ ರಾಶಿ
ಶನಿ ಮಕರದಲ್ಲಿ ಮಾರ್ಗಿಯಾದಾಗ ಶನಿದೇವನು ತುಲಾ ರಾಶಿಯ ನಾಲ್ಕನೇ ಮನೆಯಲ್ಲಿರುತ್ತಾನೆ. ಇದರಿಂದ ನಿಮ್ಮಆದಾಯ ಹೆಚ್ಚುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹಿರಿಯರ ಆರೋಗ್ಯ ಉತ್ತಮವಾಗಿರುತ್ತದೆ. ಮಗುವಿನ ಕಡೆಯಿಂದ ಒಳ್ಳೆಯ ಸುದ್ದಿ ಸಿಗಲಿದೆ.

ವೃಶ್ಚಿಕ ರಾಶಿ
ಶನಿಯು ನಿಮ್ಮ ರಾಶಿಯ ಮೂರನೇ ಮನೆಯಲ್ಲಿರಲಿದೆ. ವೃಶ್ಚಿಕ ರಾಶಿಯವರಿಗೆ ಶನಿಯ ಮಾರ್ಗವು ತುಂಬಾ ಪ್ರಯೋಜನಕಾರಿಯಾಗಿದೆ. ಈ ಸಮಯದಲ್ಲಿ ನೀವು ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಆಸ್ತಿಯಲ್ಲಿ ಹೂಡಿಕೆ ಲಾಭದಾಯಕವಾಗಿರುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣ ಇರುತ್ತದೆ.

ಮೀನ ರಾಶಿ
ಮೀನ ರಾಶಿಯಲ್ಲಿ 11ನೇ ಮನೆಯಲ್ಲಿ ಇರಲಿದೆ. ಮೀನ ರಾಶಿಯ ಮನೆಯಲ್ಲಿರುತ್ತಾನೆ. ದೀರ್ಘಕಾಲದಿಂದ ಅನುಭವಿಸಿದ ನಷ್ಟವನ್ನು ಸರಿದೂಗಿಸಲಾಗುತ್ತದೆ. ಅನಗತ್ಯ ಚಿಂತೆಗಳಿಂದ ಮುಕ್ತಿ ಪಡೆಯುತ್ತೀರಿ. ಮನೆಯ ಸಮಸ್ಯೆಗಳು ಬಗೆಹರಿಯಲಿವೆ. ಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಮಂಗಳಕರ ಸಾಧ್ಯತೆಗಳಿವೆ.



Click it and Unblock the Notifications
