Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಜೂನ್ 5ರಿಂದ ಶನಿಯ ವಕ್ರೀಯ ಚಲನೆ: ಈ 4 ರಾಶಿಗಳಿಗೆ ಈ ಅವಧಿ ಅತ್ಯಂತ ಮಂಗಳಕರ
ಶನಿಯ ನೇರ ಚಲನೆ ಹಾಗೂ ವಕ್ರೀಯ ಚಲನೆ ಎರಡೂ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಎರಡೂವರೆ ವರ್ಷ ಸಮಯ ತೆಗೆದುಕೊಳ್ಳುತ್ತದೆ. ಈ ವರ್ಷ ಏಪ್ರಿಲ್ ಕುಂಭ ರಾಶಿ ಪ್ರವೇಶಿಸಿದ ಶನಿ ಈಗ ಅದೇ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸಲಿದೆ. ಜೂನ್ 5 ರಿಂದ ಶನಿಯು ಕುಂಭ ರಾಶಿಯಲ್ಲಿ ಹಿಮ್ಮೆಟ್ಟುತ್ತಾನೆ. ಇದರ ನಂತರ ಜುಲೈ 12 ರಿಂದ, ಶನಿದೇವನು ಕುಂಭ ರಾಶಿಯಿಂದ ಮಕರ ರಾಶಿಗೆ ಮರುಪ್ರವೇಶ ಮಾಡಿ ಹಿಮ್ಮುಖ ಚಲನೆ ಮಾಡಲಿದೆ.

ಶನಿಯ ಹಿಮ್ಮುಖ ಚಲನೆಯಿಂದ ಅನೇಕ ರಾಶಿಚಕ್ರದ ಚಿಹ್ನೆಗಳು ವಿಶೇಷ ಪ್ರಯೋಜನಗಳನ್ನು ಪಡೆಯುತ್ತವೆ. ಅದರಲ್ಲೂ ಈ ರಾಶಿಗಳಿಗೆ ತುಂಬಾನೇ ಒಳ್ಳೆಯದಿದೆ:

ಮೇಷ ರಾಶಿ 2022
ಮೇಷ ರಾಶಿಯವರ ಹನ್ನೊಂದನೇ ಮನೆಯಲ್ಲಿ ಶನಿಯು ಹಿಮ್ಮುಖವಾಗಿ ಚಲಿಸಲಿದೆ, ಈ ಮನೆಯನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಶನಿಯು ಹಿಮ್ಮುಖವಾಗಿರುವುದರಿಂದ ಈ ರಾಶಿಯವರಿಗೆಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ. ಉದ್ಯೋಗದಲ್ಲಿ ಬಡ್ತಿಯೊಂದಿಗೆ ನಿಮ್ಮಕೆಲಸವು ಮೆಚ್ಚುಗೆ ಪಡೆಯುತ್ತದೆ. ವ್ಯವಹಾರದಲ್ಲೂ ಲಾಭ ಗಳಿಸುವಿರಿ. ಹೊಸ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಶುಭ ಸುದ್ದಿ ಸಿಗಲಿದೆ.

ವೃಷಭ ರಾಶಿ
ವೃಷಭ ರಾಶಿಯಲ್ಲಿ ಶನಿಯು ಹತ್ತನೇ ಮನೆಯಲ್ಲಿ ಹಿಮ್ಮುಖವಾಗಿ ಚಲಿಸಲಿದ್ದಾನೆ. ಇದರಿಂದಾಗಿ ಈ ರಾಶಿಯವರು ಬಹಳಷ್ಟು ಪ್ರಯೋಜನಗಳನ್ನು ಪಡೆಯುತ್ತಾರೆ. ಕೆ ವ್ಯಾಪಾರದಲ್ಲಿ ಲಾಭ ಗಳಿಸುವಿರಿ. ಯಾವುದೇ ಕೆಲಸ ಮಾಡಿದರೂ ಖಂಡಿತ ಯಶಸ್ಸು ಸಿಗುತ್ತದೆ. ಆದರೆ ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದ್ದರಿಂದ ತಾಳ್ಮೆಯಿಂದ ಎಲ್ಲವನ್ನು ಬಗೆಹರಿಸಲು ಪ್ರಯತ್ನಿಸಿ.

ಮಿಥುನ ರಾಶಿ
ಮಿಥುನ ರಾಶಿಯವರಲ್ಲಿ ಶನಿಯು ಒಂಬತ್ತನೇ ಮನೆಯಲ್ಲಿ ಸಂಚರಿಸುತ್ತಿದ್ದಾನೆ. ಈ ಅವಧಿಯಲ್ಲಿ ಶನಿದೇವನ ಕೃಪೆಯಿಂದ ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅಪಾರ ಯಶಸ್ಸು ದೊರೆಯಲಿದೆ. ಆದರೆ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಧನು ರಾಶಿ
ಧನು ರಾಶಿಯವರಲ್ಲಿ ಶನಿಯು ಮೂರನೇ ಮನೆಯಲ್ಲಿ ಹಿಮ್ಮುಖವಾಗಿ ಹೋಗುತ್ತಿದ್ದಾನೆ ಇದರಿಂದಾಗಿ ನೀವು ಬಹಳಷ್ಟು ಪ್ರಯೋಜನಗಳನ್ನು ಪಡೆಯಲಿದ್ದೀರಿ. ನೀವು ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ಈ ಸಮಯ ಅತ್ಯಂತ ಸೂಕ್ತವೆಂದು ಪರಿಗಣಿಸಲಾಗಿದೆ. ವೃತ್ತಿಯಲ್ಲಿಯೂ ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯಲು ಸಾಧ್ಯಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಮ್ಮ ಮನೆಯಲ್ಲಿ ಹಕ್ಕಿ ಗೂಡು ಕಟ್ಟಿದರೆ ಅದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ರೀತಿಯೇನಾದರೂ ಆದರೆ ಇದರರ್ಥ ಮುಂಬರುವ ದಿನಗಳಲ್ಲಿ ನೀವು ಹಣದ ಕೊರತೆಯಿಂದ ಮುಕ್ತರಾಗುತ್ತೀರಿ ಎಂಬುವುದಾಗಿದೆ.



Click it and Unblock the Notifications
