Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಈ ರಾಶಿಯವರಿಗೆ ಸರ್ಕಾರಿ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚು!
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ವ್ಯಕ್ತಿಯ ಜೀವನದಲ್ಲಿ ಸಂಭವಿಸುವ ಘಟನೆಗಳು ಅವನ ಗ್ರಹಗಳ ನಕ್ಷತ್ರಪುಂಜ, ವ್ಯಕ್ತಿಯ ಜನ್ಮ ದಿನಾಂಕ ಮತ್ತು ಹುಟ್ಟಿದ ಸಮಯ ಇತ್ಯಾದಿಗಳನ್ನು ಆಧರಿಸಿವೆ. ಅದೇ ರೀತಿ, ಪ್ರತಿ ರಾಶಿಗಳ ಮೇಲೆ ವಿವಿಧ ಗ್ರಹಗಳ ಪ್ರಭಾವವು ವೃತ್ತಿ, ವ್ಯಾಪಾರ, ಉದ್ಯೋಗ, ವೈವಾಹಿಕ ಜೀವನ ಇತ್ಯಾದಿಗಳ ಮೇಲೆ ಇರುತ್ತದೆ.
ಹಲವರಿಗೆ ಸರ್ಕಾರಿ ನೌಕರಿ ಮಾಡಬೇಕೆಂಬ ಹಂಬಲವಿದ್ದು, ಅದಕ್ಕಾಗಿ ಶ್ರಮಿಸುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಗಳಿಗೆ ಸರ್ಕಾರಿ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚಿದೆಯಂತೆ. ಅವರಿಗೆ ಆ ಅದೃಷ್ಟ ಇದೆ ಎಂದು ಹೇಳಲಾಗುತ್ತದೆ. ಹಾಗಾದರೆ, ಸರ್ಕಾರಿ ಉದ್ಯೋಗಕ್ಕಾಗಿ ಹಂಬಲಿಸುವ ಹಾಗೂ ಅದನ್ನು ಪಡೆದುಕೊಳ್ಳುವ ರಾಶಿಗಳು ಯಾವುವು ಎಂಬುದನ್ನು ನೋಡೋಣ.
ಯಾವ ರಾಶಿಯವರಿಗೆ ಸರ್ಕಾರಿ ನೌಕರಿ ಸಿಗುವ ಸಾಧ್ಯತೆ ಹೆಚ್ಚು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಸಿಂಹ ರಾಶಿ:
ಸಿಂಹ ರಾಶಿಯ ಜನರು ಸಾಕಷ್ಟು ಧೈರ್ಯದ ಗುಣಗಳನ್ನು ಹೊಂದಿರುತ್ತಾರೆ. ಈ ಜನರು ಕಷ್ಟಪಟ್ಟು ಕೆಲಸ ಮಾಡಲು ಹೆದರುವುದಿಲ್ಲ ಮತ್ತು ಅವರು ತಮ್ಮ ಮನಸ್ಸಿನಲ್ಲಿ ಒಮ್ಮೆ ನಿರ್ಧರಿಸಿದ್ದನ್ನು ಪೂರೈಸದೆ ಸಮಾಧಾನ ಪಡುವುದಿಲ್ಲ. ಇವರ ಈ ಕಠಿಣ ಪರಿಶ್ರಮದ ಗುಣದಿಂದಾಗಿ ಸರ್ಕಾರಿ ಹುದ್ದೆಗಳು ಸಿಗುವ ಸಾಧ್ಯತೆ ಹೆಚ್ಚಿದ್ದು, ಆ ಕ್ಷೇತ್ರದಲ್ಲಿ ಉನ್ನತ ಹುದ್ದೆಗೆ ಹೋಗುತ್ತಾರೆ ಎಂದು ಸಿಂಹ ರಾಶಿಯವರ ಬಗ್ಗೆ ಹೇಳಲಾಗುತ್ತದೆ.

ಕನ್ಯಾ ರಾಶಿ:
ಕನ್ಯಾ ರಾಶಿಯವರು ಪ್ರತಿಯೊಂದು ಕೆಲಸವನ್ನು ಸಂಪೂರ್ಣ ಸಮರ್ಪಣೆಯಿಂದ ಮಾಡುತ್ತಾರೆ ಮತ್ತು ಗುರಿಯನ್ನು ಸಾಧಿಸುವಲ್ಲಿ ನಿರತರಾಗುತ್ತಾರೆ. ಕನ್ಯಾ ರಾಶಿಯವರಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ನೌಕರಿ ಸಿಗುವ ಸಾಧ್ಯತೆ ಹೆಚ್ಚು. ತದನಂತರ ಅವರು ಯಾವುದೇ ಸಣ್ಣ ಕೆಲಸ ಮಾಡಲು ಇಷ್ಟಪಡುವುದಿಲ್ಲ. ಸರ್ಕಾರಿ ನೌಕರಿ ಸಿಕ್ಕ ಮೇಲೆ ಈ ಜನ ದುಡಿಮೆಯ ಬಲದ ಮೇಲೆ ಅದೇ ಕ್ಷೇತ್ರದಲ್ಲಿ ಬಹಳ ದೂರ ಸಾಗುತ್ತಾರೆ.

ತುಲಾ ರಾಶಿ:
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ತುಲಾ ರಾಶಿಯ ಜನರು ತಮ್ಮ ವೃತ್ತಿಜೀವನವನ್ನು ಸರ್ಕಾರಿ ಉದ್ಯೋಗದಲ್ಲಿ ಮಾಡಲು ಇಷ್ಟಪಡುತ್ತಾರೆ. ಈ ಕಾರಣಕ್ಕಾಗಿ ಈ ಜನರು ಸಹ ಅದಕ್ಕಾಗಿ ಶ್ರಮಿಸುತ್ತಾರೆ. ತುಲಾ ರಾಶಿಯ ಜನರು ತಮ್ಮದೇ ಆದ ರೀತಿಯಲ್ಲಿ ಶ್ರಮವಹಿಸಿ ಎಲ್ಲದರಲ್ಲೂ ಯಶಸ್ಸನ್ನು ಸಾಧಿಸುತ್ತಾರೆ. ಅಲ್ಲದೇ ಯಾವುದೇ ಕಷ್ಟ ಬಂದರೂ ಹಿಂದೆ ಸರಿಯದೇ ಇರುವುದು ಇವರ ವಿಶೇಷತೆ.



Click it and Unblock the Notifications