Latest Updates
-
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ
Simha Rashi Ugadi Bhavishya 2022 : ಯುಗಾದಿ ಪಂಚಾಂಗ 2022-23: ಹೇಗಿದೆ ಸಿಂಹ ರಾಶಿಯ ಭವಿಷ್ಯ?
ಯುಗಾದಿ ಎಂದರೆ ಹೊಸ ಸಂವತ್ಸರ, ಯುಗಾದಿ ಪಂಚಾಂಗ ಪ್ರಕಾರ ದ್ವಾದಶಗಳ ರಾಶಿಫಲ ಹೇಳಲಾಗುವುದು. ನಾವು ಪ್ರತೀ ರಾಶಿಯ ವಾರ್ಷಿಕ ರಾಶಿಫಲ ವಿವರವಾಗಿ ನೀಡಿದ್ದೇವೆ. ಇಲ್ಲಿ ಸಿಂಹ ರಾಶಿಯವರ ಉದ್ಯೋಗ, ವ್ಯಾಪಾರ, ಕುಟುಂಬ, ಶಿಕ್ಷಣ, ಆರೋಗ್ಯ ಯುಗಾದಿ ಪಂಚಾಂಗ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:

ಸಿಂಹ ರಾಶಿಯವರ ಅಧಿಪತಿ ಸೂರ್ಯ. ಮಖ ನಕ್ಷತ್ರ 1, 2, 3 ಮತ್ತು 4ನೇ ಪಾದ, ಪುಬ್ಬಾ 1, 2, 3, 4 ಪಾದ ಹಾಗೂ ಉತ್ತರಾ ನಕ್ಷತ್ರ1 ಪಾದಗಳಲ್ಲಿದೆ. ಇವರಿಗೆ ಆದಾಯ 8 ವ್ಯಯ 14 ಇದೆ. ಆದ್ದರಿಂದ ಆದಾಯಕ್ಕಿಂತ ಖರ್ಚೇ ಜಾಸ್ತಿ ನಿಮಗೆ ಈ ವರ್ಷ ಇರಲಿದೆ. ಯೋಗ 1 ಹಾಗೂ ಅವಮಾನ 5 ಇದೆ.
ಯುಗಾದಿ ಪಂಚಾಂಗ ಪ್ರಕಾರ ಈ ವರ್ಷ ಉತ್ತಮ ಫಲ ದೊರೆಯಲಿವೆ. ಶುಭ ಫಲಿತಾಂಶಗಳ ಜೊತೆಗೆ ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗಬಹುದು. ನಿಮ್ಮ ಔದ್ಯೋಗಿಕ ಜೀವನದ ಬಗ್ಗೆ ಹೇಳುವುದಾದರೆ, ಉದ್ಯೋಗಿಗಳಿಗೆ ಬಹಳ ಒಳ್ಳೆಯ ಫಲ ಸಿಗಲಿದೆ. ಯುಗಾದಿ ನಂತರ, ಪ್ರಮೋಷನ್ ಅಥವಾ ಮೇಲಾಧಿಕಾರಿಗಳಿಂದ ಮನ್ನಣೆ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬದಲಾವಣೆ ಬಯಸುತ್ತಿರುವವರಿಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿವೆ. ದ್ವಿತೀಯಾರ್ಧದಲ್ಲಿ ಬಾಕಿ ಉಳಿದಂತ ಕೆಲಸಗಳು ಪೂರ್ಣಗೊಳ್ಳುತ್ತವೆ. ಈ ಮೂಲಕ ನಿಮಗೆ ಹೆಚ್ಚು ಲಾಭ ಬರುವ ಸಾಧ್ಯತೆಯಿದೆ. ವ್ಯಾಪಾರಸ್ಥರಿಗೂ ಉತ್ತಮ ಕಾಲ.
ಈ ವರ್ಷ ಆರಂಭದಲ್ಲಿ ವಿದ್ಯಾರ್ಥಿಗಳು ಸ್ವಲ್ಪ ಎಚ್ಚರಿಕೆಯಿಂದರಬೇಕು. ಗ್ರಹಗಳ ಸ್ಥಾನ ಬದಲಾವಣೆಯಿಂದ ಮನಸ್ಸನ್ನು ಕೇಂದ್ರಿಕರೀಸಲು ಸಾಧ್ಯವಾಗುವುದಿಲ್ಲ. ಇದು ಪರೀಕ್ಷೆಯ ಮೇಲೆ ಪ್ರಭಾವ ಬೀರಬಹುದು. ಆದರೆ, ಏಪ್ರಿಲ್ ಕೊನೆಯ ವಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರಲಿದೆ. ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಉತ್ತಮ ಸಮಯ. ಸ್ಪರ್ಧಾತ್ಮ ಪರೀಕ್ಷೆ ತಯಾರಿ ನಡೆಸುತ್ತಿರುವವರಿಗೆ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ.
ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಆದರೆ, ಸಂಗಾತಿಯ ಆರೋಗ್ಯ ಏರುಪೇರಾಗಬಹುದು. ಇದರಿಂದ ಒತ್ತಡವೂ ಹೆಚ್ಚಾಗಬಹುದು. ಜೊತೆಗೆ ಸಂಬಂಧದಲ್ಲಿ ಇರುವ ಎಲ್ಲಾ ಮನಸ್ಥಾಪಗಳು ವರ್ಷದ ಅಂತ್ಯದಲ್ಲಿ ಪರಿಹಾರವಾಗುತ್ತವೆ. ಕೌಟಂಬಿಕ ಜೀವನ ಉತ್ತಮವಾಗಿರುತ್ತದೆ. ಮನೆಯಲ್ಲಿ ಶುಭ ಕಾರ್ಯ ನಡೆಯುವುದು.
ಆರೋಗ್ಯದ ಬಗ್ಗೆ ಹೇಳುವುದಾದರೆ, ಉತ್ತಮವಾಗಿರುತ್ತದೆ. ಆದರೆ, ರಾಹುವಿನ ಸ್ಥಾನ ಬದಲಾವಣೆಯಿಂದ ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಈ ವರ್ಷ ನಿಮ್ಮ ಭವಿಷ್ಯ ಚೆನ್ನಾಗಿದ್ದು, ಸಣ್ಣ ಸಣ್ಣ ಸಮಸ್ಯೆಗಳು ಎದುರಾಗಲಿವೆ.
ಅದೃಷ್ಟ ಸಂಖ್ಯೆ -2
ಪರಿಹಾರ:
ರತ್ನಪುಷ್ಪಗಳನ್ನು ಸುರಿಸುವ ಮೂಲಕ ಸೂರ್ಯನಿಗೆ ನೀರನ್ನು ಅರ್ಪಿಸಿ.



Click it and Unblock the Notifications
