Latest Updates
-
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ
ವಾರ ಭವಿಷ್ಯ (ಡಿ 11-ಡಿ17): ದ್ವಾದಶ ರಾಶಿಗಳ ಈ ವಾರದ ರಾಶಿಫಲ ಹೇಗಿದೆ?
ವೈದಿಕ ಶಾಸ್ತ್ರದಲ್ಲಿ ಗ್ರಹಗತಿಗಳ ಚಲನೆ ಅವುಗಳು ನಮ್ಮ ರಾಶಿಯ ಮೇಲೆ ಬೀರುವ ಪ್ರಭಾವ ಇವುಗಳ ಆಧಾರದ ಮೇಲೆ ಭವಿಷ್ಯ ಹೇಳಲಾಗುವುದು. ಕನ್ನಡ ಬೋಲ್ಡ್ ಸ್ಕೈ ನಮ್ಮ ಓದುಗರಿಗಾಗಿ ಡಿಸೆಂಬರ್ 11ರಿಂದ ಡಿಸೆಂಬರ್ 17ರವರೆಗೆ ದ್ವಾದಶ ರಾಶಿಗಳ ವಾರ ಭವಿಷ್ಯ, ಯಾವ ರಾಶಿಗೆ ಈ ವಾರ ಯಾವ ಬಣ್ಣ, ಯಾವ ದಿನ, ಯಾವ ಸಂಖ್ಯೆ ಅದೃಷ್ಟಕರ ಎಂಬೆಲ್ಲಾ ಮಾಹಿತಿ ವಿವರವಾಗಿ ನೀಡಿದೆ ನೋಡಿ:

ಸೂಚನೆ: ಈ ವಾರ ಭವಿಷ್ಯವನ್ನು ನಮ್ಮ ಜ್ಯೋತಿಷ್ಯರು ನಮಗೆ ನೀಡಿರುವ ಮಾಹಿತಿಯ ಆಧಾರದ ಮೇಲೆ ನೀಡಲಾಗಿದೆ.

ಮೇಷ ರಾಶಿ
ವ್ಯಾಪಾರಸ್ಥರಿಗೆ ಈ ವಾರ ತುಂಬಾ ಲಾಭದಾಯಕವಾಗಿರುತ್ತದೆ. ನಿಮ್ಮ ಹಣಕಾಸಿನ ಭಾಗವು ಬಲವಾಗುವುದು. ಅದೇ ಸಮಯದಲ್ಲಿ, ಉದ್ಯೋಗಿಗಳ ಎಲ್ಲಾ ಬಾಕಿಯುಳಿದ ಕೆಲಸಗಳು ಪೂರ್ಣಗೊಳ್ಳುವುದು. ಆದ್ದರಿಂದ ಈ ವಾರ ನಿಮ್ಮ ಕೆಲಸದ ಹೊರೆ ಕಡಿಮೆಯಾಗುವುದು.
ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುವುದು. ನಿಮ್ಮ ಹಣಕಾಸಿನ ಭಾಗವನ್ನು ಬಲಪಡಿಸಲು ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಮನೆಯಲ್ಲಿ ವಿವಾಹಯೋಗ್ಯ ಸದಸ್ಯರಿದ್ದರೆ, ಅವರಿಗೆ ಉತ್ತಮ ವಿವಾಹ ಪ್ರಸ್ತಾಪ ಬರಬಹುದು. ಆರೋಗ್ಯದ ವಿಷಯದಲ್ಲಿ, ಈ ಸಮಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಕೆಲಸದ ಜೊತೆಗೆ ವಿಶ್ರಾಂತಿಯತ್ತ ಗಮನ ಹರಿಸಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿನ: ಗುರುವಾರ

ವೃಷಭ ರಾಶಿ
ವಾರದ ಆರಂಭದ ದಿನಗಳು ನಿಮಗೆ ತುಂಬಾ ಒಳ್ಳೆಯದು. ನಿಮ್ಮ ಕೆಲಸದ ಮೇಲೆ ನೀವು ಸಂಪೂರ್ಣವಾಗಿ ಗಮನ ಹರಿಸಲು ಸಾಧ್ಯವಾಗುತ್ತದೆ, ಜೊತೆಗೆ ನೀವು ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ಕೂಡ ಸಾಧ್ಯವಾಗುವುದು. ಉದ್ಯಮಿಗಳು ತಮ್ಮ ಉತ್ತಮ ನಿರ್ಧಾರಗಳ ಸರಿಯಾದ ಫಲಿತಾಂಶಗಳನ್ನು ಪಡೆಯಬಹುದು. ಈ ವಾರ ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ. ವೈವಾಹಿಕ ಜೀವನದಲ್ಲಿ ಖುಷಿ ಇರುತ್ತದೆ. ಈ ವಾರ ಆರೋಗ್ಯ ಕೂಡ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಭಾನುವಾರ

ಮಿಥುನ ರಾಶಿ
ಪ್ರೀತಿಯ ವಿಷಯದಲ್ಲಿ ಈ ವಾರ ತುಂಬಾ ವಿಶೇಷವಾಗಿರುತ್ತದೆ. ಈ ಅವಧಿಯಲ್ಲಿ ನೀವು ಮದುವೆಯಾಗಲು ನಿರ್ಧರಿಸಬಹುದು. ನಿಮ್ಮ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುವ ಸಾಧ್ಯತೆಯಿದೆ. ವಿವಾಹಿತರ ವೈವಾಹಿಕ ಜೀವನವು ಸಂತೋಷದಿಂದ ಇರುತ್ತದೆ. ಆದಾಯ ಬರುತ್ತದೆ ಆದರೆ ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಅನಗತ್ಯವಾಗಿ ವ್ಯರ್ಥ ಮಾಡುವುದನ್ನು ತಪ್ಪಿಸಿ.
ಕೆಲಸದ ಚಿಂತೆ ಸ್ವಲ್ಪ ಕಾಡಲಿದೆ. ನಿಮ್ಮ ಕೆಲಸದಲ್ಲಿ ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ ಅಡೆತಡೆಗಳು ಇರಬಹುದು. ಆದರೆ ಆತುರದಲ್ಲಿ ಯಾವುದೇ ನಿರ್ಧಾರ ತೆಗೆದಕೊಳ್ಳಬೇಡಿ. ಈ ಅವಧಿಯಲ್ಲಿ ನೀವು ಹೊಟ್ಟೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಹೊರಗಡೆಯ ಆಹಾರ ಸೇವಿಸಬೇಡಿ, ಆರೋಗ್ಯಕರ ಆಹಾರಕ್ರಮದತ್ತ ಗಮನ ನೀಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ದಿನ: ಸೋಮವಾರ

ಕರ್ಕ ರಾಶಿ
ನಿಮ್ಮ ಮನೆಯ ವಾತಾವರಣವು ಸ್ವಲ್ಪ ಸಮಯದಿಂದ ಸರಿಯಿಲ್ಲದಿದ್ದರೆ ಈ ವಾರ ದೊಡ್ಡ ಸುಧಾರಣೆಯನ್ನು ಕಾಣಬಹುದು. ಕುಟುಂಬ ಸದಸ್ಯರಲ್ಲಿ ಪ್ರೀತಿ ಮತ್ತು ಒಗ್ಗಟ್ಟು ಹೆಚ್ಚಾಗುತ್ತದೆ. ನಿಮ್ಮ ಮನೆಯ ಹಿರಿಯರು ಸಹ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನೀವು ಅವಿವಾಹಿತರಾಗಿದ್ದರೆ ಮತ್ತು ಮದುವೆಯಾಗಲು ಬಯಸಿದರೆ, ನೀವು ಬಯಸಿದ ಜೀವನ ಸಂಗಾತಿಯನ್ನು ಪಡೆಯಬಹುದು. ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಹೊರೆ ಇರಬಹುದು. ನಿಮ್ಮ ಎಲ್ಲಾ ಕಾರ್ಯಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸುವುದು ಉತ್ತಮ. ಸಣ್ಣ ವ್ಯಾಪಾರಸ್ಥರಿಗೆ ಈ ವಾರ ತುಂಬಾ ಲಾಭದಾಯಕವಾಗಿರುತ್ತದೆ. ಆರ್ಥಿಕ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಯಾವುದೇ ಸಮಸ್ಯೆ ಇರುವುದಿಲ್ಲ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿನ: ಬುಧವಾರ

ಸಿಂಹ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಈ ಅವಧಿಯಲ್ಲಿ ನೀವು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆದರೆ, ಯಾವುದೇ ಆತುರಪಡದೆ ನಿರ್ಧಾರ ತೆಗೆದುಕೊಳ್ಳಿ. ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಯೋಚಿಸುತ್ತಿದ್ದರೆ ಈ ಸಮಯ ಸರಿಯಲ್ಲ. ನೀವು ಈಗ ಇರುವ ಕೆಲಸ ಮಾಡಲು ಪ್ರಯತ್ನಿಸಿ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಮನ ಗೆಲ್ಲುವ ಅವಕಾಶ ಸಿಗುತ್ತದೆ. ಈ ಸಮಯದಲ್ಲಿ ನೀವು ದೊಡ್ಡ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶವನ್ನು ನೀಡಲಾಗುವುದು. ನೀವು ಯಾವುದೇ ರೀತಿಯ ತಪ್ಪು ಮಾಡದಿರುವುದು ಉತ್ತಮ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಧಾರ್ಮಿಕ ವಿಷಯಗಳತ್ತ ಒಲವು ಹೆಚ್ಚಲಿದೆ. ಹಣದ ವಿಷಯದಲ್ಲಿ, ಈ ಸಮಯವು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿನ: ಗುರುವಾರ

ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ನೀವು ಇತ್ತೀಚೆಗೆ ಹೊಸ ಕೆಲಸಕ್ಕೆ ಸೇರಿದ್ದರೆ, ನೀವು ತುಂಬಾ ಕಷ್ಟಪಟ್ಟು ಕೆಲಸ ಮಾಡಲು ಸಲಹೆ ನೀಡಲಾಗುವುದು. ಈ ಸಮಯದಲ್ಲಿ, ಉದ್ಯಮಿಗಳು ಸಣ್ಣ ಕೆಲಸಗಳನ್ನು ಸಹ ಪೂರ್ಣಗೊಳಿಸಲು ಕಷ್ಟಪಡಬೇಕಾಗಬಹುದು. ಈ ಅವಧಿಯಲ್ಲಿ ನೀವು ಆರ್ಥಿಕ ಬಿಕ್ಕಟ್ಟನ್ನು ಸಹ ಎದುರಿಸಬೇಕಾಗುತ್ತದೆ. ಮನೆಯ ವಾತಾವರಣ ಸುಧಾರಿಸಬಹುದು. ಆದರೆ ನಿಮ್ಮ ನಡವಳಿಕೆ ಮತ್ತು ಮಾತಿನ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಪೂರ್ವಜರ ಯಾವುದೇ ಆಸ್ತಿಯನ್ನು ಮಾರಾಟ ಮಾಡಲು ನೀವು ಯೋಜಿಸುತ್ತಿದ್ದರೆ, ಈ ಸಮಯದಲ್ಲಿ ನಿಮ್ಮ ಯೋಜನೆಯು ಮುಂದುವರಿಯಬಹುದು. ನಿಮಗೆ ಹೃದಯ ಸಂಬಂಧಿ ಕಾಯಿಲೆ ಇದ್ದರೆ, ಈ ಸಮಯದಲ್ಲಿ ನೀವು ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ದಿನ: ಶನಿವಾರ

ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ತುಂಬಾ ಅದೃಷ್ಟಶಾಲಿಯಾಗಲಿದೆ. ನಿಮ್ಮ ಎಲ್ಲಾ ಚಿಂತನಶೀಲ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಈ ಸಮಯದಲ್ಲಿ, ನಿಮ್ಮ ಆತ್ಮವಿಶ್ವಾಸ ಹೆಚ್ಚಲಿದೆ. ಉದ್ಯೋಗಿಗಳು ಮೇಲಾಧಿಕಾರಿಗಳ ಗಮನ ಸೆಳೆಯುತ್ತೀರಿ. ಅದೇ ಸಮಯದಲ್ಲಿ, ಉದ್ಯಮಿಗಳು ಲಾಭ ಗಳಿಸಲು ಅನೇಕ ಅವಕಾಶಗಳನ್ನು ಪಡೆಯಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ವಾರ ನಿಮಗೆ ತುಂಬಾ ಲಾಭದಾಯಕವಾಗಿರುತ್ತದೆ. ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಇದು ಸರಿಯಾದ ಸಮಯ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ವಾರದ ಕೊನೆಯಲ್ಲಿ, ನೀವು ಸ್ವಲ್ಪ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಭಾನುವಾರ

ವೃಶ್ಚಿಕ ರಾಶಿ
ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ದೀರ್ಘಕಾಲದಿಂದ ತೆರೆದುಕೊಳ್ಳುತ್ತದೆ. ಆಮದು-ರಫ್ತು ವ್ಯಾಪಾರ ಮಾಡುವವರು ಈ ಅವಧಿಯಲ್ಲಿ ದೊಡ್ಡ ಲಾಭಗಳನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಪ್ರತಿಕೂಲವಾಗಿ ಕಾಣುತ್ತಿವೆ. ಮನೆಯಲ್ಲಿ ಹಣದ ಬಗ್ಗೆ ಚರ್ಚೆಯಾಗಬಹುದು. ನೀವು ತುಂಬಾ ಸಮತೋಲಿತವಾಗಿ ವರ್ತಿಸಲು ಸಲಹೆ ನೀಡಲಾಗಿದೆ. ಆರೋಗ್ಯದ ವಿಷಯದಲ್ಲಿ, ಈ ಸಮಯವು ನಿಮಗೆ ಒಳ್ಳೆಯದಲ್ಲ, ಸಣ್ಣ ಪುಟ್ಟ ಸಮಸ್ಯೆಗಳು ಮುಂದುವರಿಯುತ್ತವೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿನ: ಶನಿವಾರ
ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ಪ್ರಗತಿಯ ಹಾದಿಯು ನಿಮಗೆ

ಧನು ರಾಶಿ
ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಈ ವಾರ ಬಹಳ ಮಹತ್ವದ್ದಾಗಿದೆ. ನಿಮ್ಮ ಯಾವುದೇ ಪ್ರಯತ್ನಗಳಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ಈ ಅವಧಿಯಲ್ಲಿ ನಿಮ್ಮ ಸ್ಥಾನವು ಬಲಗೊಳ್ಳುವ ಸಾಧ್ಯತೆಯಿದೆ. ಮತ್ತೊಂದೆಡೆ, ನೀವು ಉದ್ಯೋಗಿಯಾಗಿದ್ದು ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ನಿಮ್ಮ ದಾರಿಯಲ್ಲಿ ಕೆಲವು ಅಡೆತಡೆಗಳು ಇರಬಹುದು. ಆದರೆ ನೀವು ಧನಾತ್ಮಕವಾಗಿ ಚಿಂತಿಸಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಸಮತೋಲನದಲ್ಲಿರುತ್ತದೆ. ನಿಮ್ಮ ಆರೋಗ್ಯದ ವಿಚಾರದಲ್ಲಿ ಸಣ್ಣ ಪುಟ್ಟ ಸಮಸ್ಯೆ ಬಂದರೂ ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ದಿನ: ಸೋಮವಾರ

ಮಕರ ರಾಶಿ
ಉದ್ಯೋಗಸ್ಥರಿಗೆ ಈ ವಾರ ಬಹಳ ಮಹತ್ವದ್ದಾಗಿದೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸದಲ್ಲಿ ಪ್ರಗತಿಯನ್ನು ಸಾಧಿಸಬಹುದು. ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ನೀವು ಬಯಸಿದ ಉದ್ಯೋಗವನ್ನು ಪಡೆಯಬಹುದು. ಸರ್ಕಾರಿ ಉದ್ಯೋಗ ಮಾಡುವವರ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆಗಳು ಹೆಚ್ಚು. ದೊಡ್ಡ ಉದ್ಯಮಿಗಳಿಗೆ ಈ ವಾರ ಒಳ್ಳೆಯ ಲಾಭ ಸಿಗಲಿದೆ. ಇದಲ್ಲದೆ, ಈ ಸಮಯದಲ್ಲಿ ನೀವು ಲಾಭ ಗಳಿಸಲು ಉತ್ತಮ ಅವಕಾಶವನ್ನು ಸಹ ಪಡೆಯುತ್ತೀರಿ. ಈ ಅವಧಿಯಲ್ಲಿ ನೀವು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಮನೆಯ ವಾತಾವರಣವು ಸಂತೋಷದಿಂದ ಕೂಡಿರುತ್ತದೆ. ಹಣದ ವಿಷಯದಲ್ಲಿ ಈ ಸಮಯವು ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯ ಕೂಡ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ದಿನ: ಶನಿವಾರ

ಕುಂಭ ರಾಶಿ
ಕುಂಭ ರಾಶಿಯ ಪ್ರೇಮಿಗಳಿಗೆ ಈ ವಾರ ಒಳ್ಳೆಯದು. ವಿವಾಹಿತರಿಗೂ ಈ ವಾರವು ಉತ್ತಮವಾಗಿರುತ್ತದೆ. ಕೆಲವು ಸಮಯದಿಂದ ನಿಮ್ಮ ವೈವಾಹಿಕ ಜೀವನಕ್ಕೆ ಸರಿಯಾದ ಗಮನವನ್ನು ನೀಡಲು ಸಾಧ್ಯವಾಗದಿದ್ದರೆ ಈ ವಾರ ಉತ್ತಮ ಸಮಯ ಕಳೆಯಲು ಸಾಧ್ಯವಾಗುವುದು. ಆರ್ಥಿಕ ರಂಗದಲ್ಲಿ ಈ ವಾರ ಉತ್ತಮವಾಗಿರುತ್ತದೆ. ಆದರೆ ದೊಡ್ಡ ಖರ್ಚು ಮಾಡುವುದನ್ನು ತಪ್ಪಿಸುವುದು ಒಳ್ಳೆಯದು. ನೀವು ಉಳಿತಾಯದತ್ತ ಹೆಚ್ಚು ಗಮನಹರಿಸಿದರೆ ಸಾಲಗಳಿಂದ ಮುಕ್ತಿ ಸಿಗುತ್ತದೆ. ಉದ್ಯೋಗಸ್ಥರು ಕಚೇರಿಯಲ್ಲಿ ಜಾಗರೂಕರಾಗಿರಲು ಸೂಚಿಸಲಾಗಿದೆ. ನಿರ್ಲಕ್ಷ್ಯವು ನಿಮಗೆ ತೊಂದರೆಗಳನ್ನು ಹೆಚ್ಚಿಸಬಹುದು. ವ್ಯಾಪಾರಸ್ಥರಿಗೆ ಈ ವಾರ ಸರಾಸರಿಯಾಗಲಿದೆ. ನೀವು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಹವಾಮಾನದಲ್ಲಿನ ಬದಲಾವಣೆಯಿಂದಾಗಿ, ಆರೋಗ್ಯದಲ್ಲಿ ಕ್ಷೀಣಿಸಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟ ದ ಸಂಖ್ಯೆ: 24
ಅದೃಷ್ಟದ ದಿನ: ಗುರುವಾರ

ಮೀನ ರಾಶಿ
ಮನೆಯ ವಾತಾವರಣದಲ್ಲಿ ಸುಧಾರಣೆ ಕಾಣುವುದು. ನಿಮ್ಮ ಹಿರಿಯರು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಕೋಪ ಮತ್ತು ಆತುರವು ಸಂಬಂಧಗಳಲ್ಲಿ ಬಿರುಕು ಹೆಚ್ಚಿಸಬಹುದು. ಈ ಸಮಯದಲ್ಲಿ ನೀವು ಕೆಲಸದ ಬಗ್ಗೆ ತುಂಬಾ ಚಿಂತಿತರಾಗುತ್ತೀರಿ. ಹೆಚ್ಚಿನ ಕೆಲಸದ ಹೊರೆಯಿಂದಾಗಿ, ನೀವು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಉದ್ಯಮಿಗಳಿಗೆ ಈ ಬಾರಿ ಏರಿಳಿತಗಳಿರುತ್ತದೆ. ಈ ಅವಧಿಯಲ್ಲಿ, ಕಠಿಣ ಪರಿಶ್ರಮದ ಹೊರತಾಗಿಯೂ ನೀವು ಉತ್ತಮ ಲಾಭವನ್ನು ಪಡೆಯಲು ಸಾಧ್ಯವಾಗದೇ ಹೋಗಬಹುದು. ಆದರೆ ನಿಮ್ಮ ಮೇಲೆ ನಂಬಿಕೆ ಇಡಲು ಸಲಹೆ ನೀಡಲಾಗಿದೆ. ವಾರದ ಮಧ್ಯದಲ್ಲಿ ನೀವು ದೂರ ಪ್ರಯಾಣ ಮಾಡಬಹುದು. ನಿಮ್ಮ ಈ ಭೇಟಿ ಬಹಳ ವಿಶೇಷವಾಗಿರುತ್ತದೆ. ಹಣದ ವಿಷಯದಲ್ಲಿ ಈ ವಾರ ತುಂಬಾ ಚೆನ್ನಾಗಿರಲಿದೆ. ಕಡಿಮೆ ಶ್ರಮದಿಂದ ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 33
ಅದೃಷ್ಟದ ದಿನ: ಶುಕ್ರವಾರ



Click it and Unblock the Notifications











