Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
ನವೆಂಬರ್ 16ರವರೆಗೆ ಮಂಗಳ ಗ್ರಹದ ಮೇಲೆ ಇರಲಿದೆ ರಾಹು-ಕೇತು ಪ್ರಭಾವದಿಂದ ನಿಮ್ಮ ರಾಶಿಗೆ ಹೇಗಿರಲಿದೆ?
ಅಕ್ಟೋಬರ್ 3ಕ್ಕೆ ಮಂಗಳ ತುಲಾ ರಾಶಿಗೆ ಪ್ರವೇಶಿಸಿದೆ. ತುಲಾ ರಾಶಿಯಲ್ಲಿರುವ ಮಂಗಳನ ಮೇಲೆ ರಾಹು-ಕೇತುಗಳ ಪ್ರಭಾವವೂ ಇದೆ. ಈ ರಾಹು-ಕೇತು. ಮಂಗಳನ ಪ್ರಭಾವ 12 ರಾಶಿಗಳ ಮೇಲೆ ನವೆಂಬರ್ 16ರವರೆಗೆ ಈ ರೀತಿ ಇರಲಿದೆ ನೋಡಿ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಅವಧಿ ಶುಭವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು, ವೈವಾಹಿಕ ಜೀವನದಲ್ಲಿ ಕಲೆವು ಅಡೆತಡೆಗಳು ಇರಬಹುದು. ಸಮಾಜದಲ್ಲಿ ನಿಮ್ಮ ಗೌರವಕ್ಕೆ ಧಕ್ಕೆ ಕೂಡ ಉಂಟಾಗಬಹುದು ಆದ್ದರಿಂದ ಜಾಗ್ರತೆವಹಿಸಿ.

ವೃಷಭ ರಾಶಿ
ತುಲಾದಲ್ಲಿ ಮಂಗಳದ ಮೇಲೆ ರಾಹು ಕೇತುಗಳ ಪ್ರಭಾವದಿಂದಾಗಿ ನಿಮ್ಮ ಸಂಗಾತಿಯೊಂದಿಗೆ ನಿಮಗೆ ಸಮಸ್ಯೆಗಳಿರಬಹುದು. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು. ಆದರೆ ವೃತ್ತಿ ಜೀವನದಲ್ಲಿ ಅದೃಷ್ಟದ ಬೆಂಬಲವಿದೆ.
ಮಿಥುನ ರಾಶಿ
ಮಿಥುನ ರಾಶಿಯವರು ಈ ಅವಧಿಯಲ್ಲಿ ಜಾಗ್ರತೆಯಿಂದಿರಬೇಕು. ಕುಟುಂಬದಲ್ಲಿ ಸಮಸ್ಯೆಗಳಿರಬಹುದು, ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು ಆದರೆ ಹಣಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇರುವುದಿಲ್ಲ. ಈ ಅವಧಿಯಲ್ಲಿ ಹೆಚ್ಚು ಹಣಗಳಿಸಲು ಸಾಧ್ಯವಾಗುವುದು.
ಕರ್ಕ ರಾಶಿ
ಈ ಅವಧಿಯಲ್ಲಿ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಆದರೆ ತಾಯಿಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಜಾಗ್ರತೆವಹಿಸಿ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಉದ್ಯಮಿಗಳು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು.
ಸಿಂಹ ರಾಶಿ
ಈ ಅವಧಿಯಲ್ಲಿ ನಿಮ್ಮಲ್ಲಿ ಧೈರ್ಯ ಹೆಚ್ಚಾಗಲಿದೆ, ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ನೀವು ಗಾಡಿ ಚಲಾಯಿಸುವಾಗ ಜಾಗ್ರತೆವಹಿಸಿ. ನಿಮ್ಮ ಖರ್ಚುಗಳು ಹೆಚ್ಚಿರಲಿದೆ.
ಕನ್ಯಾ ರಾಶಿ
ಈ ಅವಧಿಯಲ್ಲಿ ಹೊಟ್ಟೆಯ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು, ನಿಮ್ಮ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ ಚಿಂತೆಯೂ ಕಾಡುವುದು. ನಿಮ್ಮ ಕುಟುಂಬದ ಸದಸ್ಯರ ಅಥವಾ ಆಪ್ತ ಸ್ನೇಹಿತರ ಆರೋಗ್ಯ ಸರಿಯಿರಲ್ಲ, ಇದರಿಂದ ನಿಮ್ಮ ಆತಂಕ ಹೆಚ್ಚಾಗಲಿದೆ.
ತುಲಾ ರಾಶಿ
ಈ ಸಮಯದಲ್ಲಿ ತುಂಬಾ ಕೋಪ ಅಧಿಕವಿರಲಿದೆ. ಮಾನಸಿಕ ಒತ್ತಡ ಅಧಿಕವಿರಲಿದೆ, ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಡಬಹುದು, ಪ್ರೇಮಿಗಳು ತಮ್ಮ ಸಂಬಂಧದ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಈ ಅವಧಿಯಲ್ಲಿ ನಿಮ್ಮ ಕೋಪ ತುಂಬಾ ಹೆಚ್ಚಾಗಲಿದೆ. ಒಡಹುಟ್ಟಿದವರ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಡಬಹುದು.
ಧನು ರಾಶಿ
ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ. ಕುಟುಂಬ ಸದಸ್ಯರ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ನೀವಾಡುವ ಮಾತಿನ ಕಡೆಗೆ ತುಂಬಾನೇ ಗಮನಹರಿಸಬೇಕಾಗಿದೆ.
ಮಕರ ರಾಶಿ
ಸರ್ಕಾರಿ ನೌಕರರಿಗೆ ಈ ಅವಧಿ ಉತ್ತಮವಾಗಿರಲಿದೆ. ಈ ಸಮಯದಲ್ಲಿ ಅನೇಕ ಶುಭ ಫಲವನ್ನು ಪಡೆಯುತ್ತೀರಿ. ತಾಯಿಗೆ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ನಿಮ್ಮ ಹೃದಯದ ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಈ ಅವಧಿಯಲ್ಲಿ ಕೆಲಸದಲ್ಲಿ ಅಭಿವೃದ್ಧಿ ಕಾಣುವಿರಿ. ನಿಮ್ಮ ಆದಾಯ ಹೆಚ್ಚಾಗಲಿದೆ, ಕೃಷಿ ಸಂಬಂಧಿಸಿದ ಕೆಲಸ ಮಾಡುವವರಿಗೆ ಈ ಅವಧಿ ಉತ್ತಮವಾಗಿದೆ.
ಮೀನ ರಾಶಿ
ಹೊಟ್ಟೆ ಹಾಗೂ ಪಾದಕ್ಕೆ ಸಂಬಂಧಿಸಿದ ಸಮಸ್ಯೆ ಇರಬಹುದು. ಕುಟುಂಬದಲ್ಲಿ ಸಮಸ್ಯೆಗಳಿರಬಹುದು, ಈ ಬಗ್ಗೆ ನೀವು ತುಂಬಾನೇ ಜಾಗ್ರತೆವಹಿಸಿ. ಆದಾಯ ಗಳಿಸಲು ಸರಿಯಾದ ಹೆಜ್ಜೆ ಇಡಿ.



Click it and Unblock the Notifications
