Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
'ರಾಮ ಇನ್ನೂ 5 ವರ್ಷದ ಬಾಲಕ' ವಿಶ್ರಾಂತಿಗಾಗಿ 1 ಗಂಟೆ ದರ್ಶನ ಬಂದ್: ಪ್ರಧಾನ ಅರ್ಚಕ
ದೇಶದ ಅತ್ಯಂತ ದೊಡ್ಡ ರಾಮ ಮಂದಿರವನ್ನು ಅಯೋಧ್ಯೆಯಲ್ಲಿ ಕಳೆದ ತಿಂಗಳು ಉದ್ಘಾಟಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಭವ್ಯ ದೇವಾಲಯ ಲೋಕಾರ್ಪಣೆ ಮಾಡಿದ್ದರು. ಬಳಿಕ ಲಕ್ಷಾಂತರ ಭಕ್ತರು ಬಾಲ ರಾಮನ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ನಿತ್ಯವು ಲಕ್ಷಕ್ಕೂ ಹೆಚ್ಚು ಭಕ್ತರು ರಾಮನ ದರ್ಶನ ಪಡೆಯುತ್ತಿದ್ದಾರೆ.
ಆದರೆ ದೇವಾಲಯ ಲೋಕಾರ್ಪಣೆಗೊಂಡ ಬಳಿಕ ಈವರೆಗೂ ನಿರಂತರ ದರ್ಶನ ನೀಡಲಾಗುತ್ತಿದೆ. ದಿನದ ಕೆಲವೇ ಗಂಟೆಗಳು ಮಾತ್ರ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತಿದೆ. ಆದರೆ ಈಗ ದಿನದದಲ್ಲಿ ಒಂದು ಗಂಟೆಗಳ ದೇವಾಲಯ ಮುಚ್ಚುವುದಾಗಿ ದೇವಾಲಯದ ಪ್ರಧಾನ ಅರ್ಚಕರು ತಿಳಿಸಿದ್ದಾರೆ.

ಹೌದು ಅಯೋಧ್ಯೆಯ ರಾಮಮಂದಿರವನ್ನು ಶುಕ್ರವಾರದಿಂದ ಪ್ರತಿದಿನ ಮಧ್ಯಾಹ್ನ ಒಂದು ಗಂಟೆ ಮುಚ್ಚಲಾಗುವುದು ಎಂದು ರಾಮ ಮಂದಿರದ ಮುಖ್ಯ ಅರ್ಚಕರು ತಿಳಿಸಿದ್ದಾರೆ. ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಟ್ರಸ್ಟ್ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ದರ್ಶನದ ಸಮಯವನ್ನು ಹೆಚ್ಚಿಸಿತ್ತು.
ಜನವರಿ 23ರಿಂದ, ಬೆಳಗ್ಗೆ 4 ಗಂಟೆಯಿಂದ ದರ್ಶನ ವ್ಯವಸ್ಥೆ ಆರಂಭಗೊಂಡು ರಾತ್ರಿಯವರೆಗೂ ಮುಂದುವರೆಯುತ್ತಿದೆ. ಹೀಗಾಗಿ ದಿನದ ಒಂದು ಗಂಟೆ ಬಾಗಿಲು ಹಾಕಲು ನಿರ್ಧರಿಸಲಾಗಿದೆ. ಈ ಕುರಿತು ಮಾತನಾಡಿರುವ ದೇವಾಲಯದ ಪ್ರಧಾನ ಅರ್ಚಕರು ಹೇಳಿದಿಷ್ಟು,
'ಶ್ರೀ ರಾಮ್ ಲಲ್ಲಾ 5 ವರ್ಷದ ಮಗುವಾಗಿದ್ದು, ಇಷ್ಟು ಗಂಟೆಗಳ ಕಾಲ ಎಚ್ಚರವಾಗಿರಲು ಆತನು ಒತ್ತಡವನ್ನು ಹೊಂದಲು ಸಾಧ್ಯವಿಲ್ಲ. ಆದ್ದರಿಂದ ಬಾಲ ದೇವರಿಗೆ ಸ್ವಲ್ಪ ವಿಶ್ರಾಂತಿ ನೀಡಲು, ದೇವಾಲಯದ ಬಾಗಿಲುಗಳನ್ನು ಮುಚ್ಚಲು ಟ್ರಸ್ಟ್ ನಿರ್ಧರಿಸಿದೆ. ಮಧ್ಯಾಹ್ನ 12:30 ರಿಂದ 1:30 ರವರೆಗೆ, ದೇವರು ವಿಶ್ರಾಂತಿ ಪಡೆಯಲಿ' ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.
ಈ ವಿಶ್ರಾಂತಿಯ ಸಮಯದಿಂದ ಭಕ್ತರ ಆರತಿ ಸಮಯದಲ್ಲೂ ಬದಲಾವಣೆಯಾಗುವ ಸಾಧ್ಯತೆ ಇದೆ. ಆನ್‌ಲೈನ್‌ನಲ್ಲಿ ಆರತಿ ಪಾಸ್ ಪಡೆಯುವಾಗ ಭಕ್ತರು ಸಮಯವನ್ನು ಸರಿಯಾಗಿ ನೋಡಿ ನಮೂದಿಸಿಕೊಳ್ಳಬೇಕಾಗಿದೆ. ಹೀಗಾಗಿ ಮಧ್ಯಾಹ್ನದ ಹೊತ್ತಿನಲ್ಲಿ ದೇವರ ದರ್ಶನ ಪಡೆಯಲು ಸಾಧ್ಯವಿಲ್ಲ ಎಂದು ಟ್ರಸ್ಟ್ ತಿಳಿಸಿದೆ.
ಭಕ್ತರ ನಿಯಂತ್ರಣಕ್ಕೆ ತಿರುಮಲ ಸಿಸ್ಟಂ
ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತಾದಿಗಳ ದಟ್ಟಣೆಯನ್ನು ನಿರ್ವಹಿಸುವಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಬೆಂಬಲವನ್ನು ನೀಡಲಿದೆ. ಡಳಿತ ಮಂಡಳಿಯ ಕೋರಿಕೆಯ ಮೇರೆಗೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮ ರೆಡ್ಡಿ ಅವರು ತಮ್ಮ ಸಹಾಯಕರೊಂದಿಗೆ ಶನಿವಾರ ಅಯೋಧ್ಯೆಗೆ ಆಗಮಿಸಿದ್ದರು.
ದೇವಾಲಯದ ಪಟ್ಟಣವನ್ನು ತಲುಪಿದ ನಂತರ, ಧರ್ಮ ರೆಡ್ಡಿ ಮತ್ತು ಅವರ ತಂಡವು ರಾಮ್ ಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ದೇವಸ್ಥಾನದಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಲಿದ್ದಾರೆ. ರ್ಯನಿರ್ವಾಹಕ ಅಧಿಕಾರಿ ರಾಮಮಂದಿರದಲ್ಲಿ ಸರತಿ ಸಾಲುಗಳ ಸ್ಥಾಪನೆ ಮತ್ತು ಅವುಗಳ ನಿರ್ವಹಣೆಯ ಬಗ್ಗೆ ವಿವರವಾದ ವರದಿಯನ್ನು ಸಿದ್ಧಪಡಿಸುವ ಸಾಧ್ಯತೆಯಿದೆ, ಇದರಿಂದ ಭಕ್ತರು ತ್ವರಿತ ಮತ್ತು ಆರಾಮದಾಯಕ ದರ್ಶನವನ್ನು ಪಡೆಯಬಹುದು.
ರಾಮಮಂದಿರಕ್ಕೆ ಹೆಚ್ಚಾದ ಭಕ್ತರ ಸಂಖ್ಯೆ
ರಾಮಮಂದಿರ ಉದ್ಘಾಟನೆಗೊಂಡ ದಿನದಿಂದಲೇ ಭಕ್ತರ ದಂಡು ಹೆಚ್ಚಾಗಿದೆ. ಅದರಲ್ಲೂ ವಿಶೇಷ ರೈಲು ಸೇವೆ ನೀಡದ ಬಳಿಕ ಭಕ್ತರ ಸಂಖ್ಯೆ ದುಪ್ಪಟ್ಟಾಗಿದೆ. ಹೀಗಾಗಿ ಈ ಜನದಟ್ಟಣೆ ತಡೆಯಲು ದೇವಾಲಯ ಟ್ರಸ್ಟ್ ತಿರುಮಲದ ಟ್ರಸ್ಟ್‌ನ ನೆರವು ಕೇಳಿದೆ.
ದೇಶಾದ್ಯಂತ ವಿಶೇಷ ರೈಲುಗಳ ಪ್ರಾರಂಭವು ದೇವಾಲಯದ ಪಟ್ಟಣದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದೆ. ಪ್ರತಿದಿನ ಸರಾಸರಿ 80,000 ಭಕ್ತರು ರಾಮನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ, ಇದು ದೇಶದ ಅತಿ ಹೆಚ್ಚು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ.



Click it and Unblock the Notifications