Latest Updates
-
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ?
ಕರಾವಳಿಗೆ ಅಪ್ಪಳಿಸಲಿದೆ ರೆಮಲ್ ಸೈಕ್ಲೋನ್..! ರೆಮಲ್ ಅರ್ಥವೇನು ಗೊತ್ತಾ?
ರಾಜ್ಯದ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ 15 ದಿನಗಳಲ್ಲಿ ಕರ್ನಾಟಕದಾದ್ಯಂತ ಮಳೆಯಾಗಿದ್ದು, ಇನ್ನು ಒಂದು ವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅವಧಿ ಪೂರ್ವ ಮುಂಗಾರಿನ ಮುನ್ಸೂಚನೆಯೂ ಸಿಕ್ಕಿದ್ದುಮ ರೈತರಲ್ಲಿ ಸಂತಸ ಮೂಡಿದೆ. ಜೊತೆಗೆ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.
ಇದರ ನಡುವೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪರಿಣಾಮವಾಗಿ ಚಂಡಮಾರುತ ಉಂಟಾಗಿದ್ದು, 2024ರ ಮೊದಲ ಚಂಡಮಾರುತ ಇದಾಗಿದೆ. ಈ ಸೈಕ್ಲೋನ್ ಬಾಂಗ್ಲಾದೇಶ ಕರಾವಳಿ ಹಾಗೂ ಭಾರತದ ಕರಾವಳಿಗೆ ಅಪ್ಪಳಿಸುವ ಸಾಧ್ಯತ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಈ ಚಂಡಮಾರುತಕ್ಕೆ ರೆಮಲ್ ಎಂದು ಹೆಸರಿಡಲಾಗಿದೆ. ಮೇ 26ರಂದು ಭಾರತದ ಕರಾವಳಿ ಭಾಗದಲ್ಲಿ ರೆಮಲ್ ಅಬ್ಬರಿಸಿದಲಿದೆಯಂತೆ. ರೆಮಲ್ ಚಂಡಮಾರುತವು ಭಾನುವಾರ ಮಧ್ಯರಾತ್ರಿ ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ಅಪ್ಪಳಿಸಲಿದೆ.
ಭಾನುವಾರ ಮಧ್ಯರಾತ್ರಿಯ ವೇಳೆಗೆ ಇದು ತೀವ್ರ ಚಂಡಮಾರುತದ ಚಂಡಮಾರುತವಾಗಿ ಸಾಗರ್ ದ್ವೀಪ ಮತ್ತು ಖೆಪುಪಾರಾ ನಡುವೆ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ.
ರೆಮಲ್ ಚಂಡಮಾರುತ ಎಂದು ಹೆಸರಿಟ್ಟಿದ್ದು ಏಕೆ? ಇದರ ಅರ್ಥವೇನು?
ಚಂಡಮಾರುತಕ್ಕೆ ಒಮಾನ್‌ನಿಂದ 'ರೆಮಲ್' ಎಂದು ಹೆಸರಿಸಲಾಗಿದೆ, ಅರೇಬಿಕ್‌ನಲ್ಲಿ ರೆಮಲ್ ಎಂದರೆ 'ಮರಳು' ಎಂಬರ್ಥ ನೀಡುತ್ತದೆ. ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತಗಳನ್ನು ಪ್ರಮಾಣಿತ ನಾಮಕರಣದ ಸಂಪ್ರದಾಯದ ಆಧಾರದ ಮೇಲೆ ಪ್ರದೇಶದ ಒಟ್ಟು 13 ದೇಶಗಳು ಹೆಸರಿಸುತ್ತವೆ. ಈ ಸಮಾವೇಶದ ಪ್ರಕಾರ ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರಗಳು (RSMCs) ಮತ್ತು ಉಷ್ಣವಲಯದ ಸೈಕ್ಲೋನ್ ಎಚ್ಚರಿಕೆ ಕೇಂದ್ರಗಳು (TCWCs) ಪ್ರಪಂಚದಾದ್ಯಂತ ಪ್ರತಿ ಚಂಡಮಾರುತವನ್ನು ಹೆಸರಿಸುತ್ತವೆ. ಹೀಗಾಗಿ ಈ ಚಂಡಮಾರುತ್ತಕ್ಕೆ ಮೊದಲೇ ಹೆಸರಿಡಲಾಗಿದ್ದು, ರೆಮಲ್ ಎಂದು ನಾಮಕರಣ ಮಾಡಲಾಗಿದೆ.
IMD ಪ್ರಕಾರ, ಚಂಡಮಾರುತವು ಭಾನುವಾರ ಗಂಟೆಗೆ 102 ಕಿಲೋಮೀಟರ್ ವೇಗವನ್ನು ತಲುಪುವ ಸಾಧ್ಯತೆಯಿದೆ. ಮೇ 26 ಮತ್ತು 27 ಕ್ಕೆ ಭಾರಿ ಮಳೆಯ ಎಚ್ಚರಿಕೆಯನ್ನು ಸಹ ನೀಡಿದೆ. ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಡಿಶಾದ ಪಕ್ಕದ ಜಿಲ್ಲೆಗಳಲ್ಲಿ, ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮತ್ತು ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಜೊತೆಗೆ ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರದಲ್ಲಿ, ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಗಾಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಇನ್ನು ಕೆಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಈಗಾಗಲೇ ಬೆಂಗಳೂರು ಸೇರಿ, ಚಾಮರಾಜನಗರ, ಕೊಡಗು, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದ್ದು, ಇನ್ನೊಂದು ವಾರವೂ ಈ ಮಳೆ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮೇ 26ರ ಬೆಳಗ್ಗೆವರೆಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಕೆಲವು ಕಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.



Click it and Unblock the Notifications

