Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಶನಿ ಹಾಗೂ ಬುಧ ಸೇರಿ ಧನ ರಾಜಯೋಗ 2023: ಈ 3 ರಾಶಿಯವರಿಗೆ ಹಣದ ಚಿಂತೆ ಇರಲ್ಲ
ಸೆಪ್ಟೆಂಬರ್ 18ಕ್ಕೆ ಶನಿ ಹಾಗೂ ಬುಧ ಒಂದಾಗಿರುವುದರಿಂದ ಧನರಾಜ ಯೋಗ ಏರ್ಪಟ್ಟಿದೆ. ಈ ಧನರಾಜ ಯೋಗದಿಂದಾಗಿ ಕೆಲ ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ. ಶನಿ ಕೆಟ್ಟದ್ದನ್ನು ಮಾತ್ರ ನೀಡುತ್ತಾನೆ ಎಂದು ಕೆಲವರು ಭಾವಿಸುತ್ತಾರೆ. ಶನಿಯು ನಿಮಗೆ ಅದೃಷ್ಟವನ್ನೂ ನೀಡುತ್ತಾನೆ.
ಶನಿ ಹಾಗೂ ಬುಧದ ಸಂಯೋಗದಿಂದ ಧನ ರಾಜ ಯೋಗ ಉಂಟಾಗುವುದು, ಈ ಯೋಗದಿಂದಾಗಿ ಐಶ್ವರ್ಯ ಹೆಚ್ಚಾಗುವುದು. ಈ ಯೋಗದಿಂದಾಗಿ 3 ರಾಶಿಯವರಿಗೆ ಧನ ಯೋಗವಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ:

ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ತುಂಬಾನೇ ಚೆನ್ನಾಗಿರಲಿದೆ. ವೃತ್ತಿ ಜೀವನದಲ್ಲಿ ಅದೃಷ್ಟದ ಬೆಂಬಲದಿಂದ ಉತ್ತಮ ಬೆಳವಣಿಗೆ ಕಾಣುತ್ತೀರಿ. ಬುಧನ ಕೃಪೆ ನಿಮ್ಮ 5ನೇ ಮನೆಯಲ್ಲಿದೆ, ಇದರಿಂದ ವೃತ್ತಿ ಜೀವನದಲ್ಲಿ ಬಡ್ತಿ ಸಿಗಲಿದೆ, ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಈ ಅವಧಿಯಲ್ಲಿ ಹೂಡಿಕೆ ಮಾಡಲು ಈ ಸಮಯ ಅದೃಷ್ಟಕರವಾಗಿದೆ. ನಿಮ್ಮ ಇಷ್ಟಾರ್ಥಗಳು ನೆರವೇರಲಿದೆ. ವ್ಯಾಪಾರಸ್ಥರು, ಉದ್ಯಮಿಗಳು ಬುಧ-ಶನಿಯ ಕೃಪೆಯಿಂದ ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತೀರಿ.
ವೃಷಭ ರಾಶಿ
ನಿಮ್ಮ ರಾಶಿಯಲ್ಲಿ 4ನೇ ಮನೆಯಲ್ಲಿ ಬುಧ ಹಾಗೂ ಶನಿ ಗ್ರಹವಿದೆ. ಈ ಅವಧಿಯಲ್ಲಿ ನಿಮಗೆ ಹೊಸ ಉದ್ಯೋಗ ಅವಕಾಶಗಳು ದೊರೆಯಲಿದೆ. ನೀವು ಮಾಡುತ್ತಿರುವ ಕೆಲಸದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಆದರೆ ಈ ಅವಧಿಯಲ್ಲಿ ತಾಯಿಯ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಕುಟುಂಬದಲ್ಲಿ ಉತ್ತಮ ಹೊಣದಾಣಿಕೆ ಇರಲಿದೆ. ನಿಮ್ಮ ಆದಾಯ ಹೆಚ್ಚಾಗಲಿದೆ, ನೀವು ಉತ್ತಮ ಬೆಳವಣಿಗೆಯನ್ನು ಕಾಣಬಹುದು.
ತುಲಾ ರಾಶಿ
ತುಲಾ ರಾಶಿಯವರಲ್ಲಿ ಧನರಾಜ ಯೋಗ ಉಂಟಾಗಿದೆ. ಬುಧ ಹಾಗೂ ಶನಿ ನಿಮಗೆ ಅನುಕೂಲಕರವಾಗಿರುವುದರಿಂದ ನೀವು ವೃತ್ತಿ ಜೀವನದಲ್ಲಿ ತುಂಬಾನೇ ಅನುಕೂಲಕಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿರತೆ ಇರಲಿದೆ, ಇದರಿಂದ ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಯಶಸ್ಸು ನಿಮ್ಮದಾಗಲಿದೆ.
ನೀವು ಈ ರಾಶಿಯವರಾಗಿದ್ದರೆ ಈ ಅವಧಿ ನಿಮಗೆ ತುಂಬಾನೇ ಶುಭವಾಗಿದೆ, ಗ್ರಹಗಳ ಸ್ಥಾನವು ನಿಮಗೆ ಅನುಕೂಲಕರವಾಗಿದೆ. ನೀವು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಖಂಡಿತ ಯಶಸ್ಸು ಪಡೆಯಬಹುದು.



Click it and Unblock the Notifications
