Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಶನಿ ಹಿಮ್ಮೆಟ್ಟುವಿಕೆ : ನಾಲ್ಕು ರಾಶಿಯವರಿಗೆ ಶುಭ ಫಲ
ವೈದಿಕ ಜ್ಯೋತಿಷ್ಯದ ಪ್ರಕಾರ ನ್ಯಾಯ ಮತ್ತು ಕರ್ಮಧಾತನಾದ ಶನಿಯು ತನ್ನ ರಾಶಿಯನ್ನು ಬದಲಾಯಿಸಿದಾಗ ಎಲ್ಲಾ 12 ರಾಶಿಗಳ ಮೇಲೆ ವ್ಯಾಪಕ ಪ್ರಭಾವ ಬೀರುತ್ತದೆ. ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಶನಿ ದೇವನು ಜೂನ್ 17, 2023 ರಂದು ರಾತ್ರಿ 10.48 ಕ್ಕೆ ಕುಂಭ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸಲಿದ್ದಾನೆ. ಶನಿಯ ವಕ್ರಿ ಎಂದರೆ ವಿರುದ್ಧ ದಿಕ್ಕಿನಲ್ಲಿ ಚಲಿಸುವುದು. ಶನಿಯ ಈ ಹಿಮ್ಮುಖ ಚಲನೆಯು ನವೆಂಬರ್ 4, 2023 ರವರೆಗೆ ಇರುತ್ತದೆ. ಅಷ್ಟಕ್ಕು ಶನಿಯ ಹಿಮ್ಮುಖ ಚಲನೆಯಿಂದ ಯಾವ ರಾಶಿಯವರಿಗೆ ಲಾಭವಾಗಲಿದೆ ತಿಳಿಯೋಣ.
ಮೇಷ ರಾಶಿ
ಮೇಷ ರಾಶಿಯವರಿಗೆ ಶನಿಯ ಹಿಮ್ಮೆಟ್ಟುವಿಕೆಯಿಂದ ಕೊಂಚ ವರದಾನವಾಗಲಿದೆ ಅಂತಾನೇ ಹೇಳಬಹುದು. ವಿತ್ತೀಯ ಲಾಭಕ್ಕಾಗಿ ನೀವು ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ನೀವು ಶನಿದೇವನ ವಿಶೇಷ ಅನುಗ್ರಹವನ್ನು ಪಡೆಯಲಿದ್ದೀರಿ. ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಶನಿದೇವನ ಕೃಪೆಯಿಂದ ಈ ಸಮಯದಲ್ಲಿ ವ್ಯಾಪಾರದಲ್ಲಿ ಲಾಭವಾಗುವ ಸಾಧ್ಯತೆಯಿದೆ. ಕಷ್ಟ ಕಾಲದಲ್ಲಿ ಸ್ನೇಹಿತರು ನಿಮಗೆ ಸಹಾಯ ಮಾಡುತ್ತಾರೆ. ಬ್ಯಾಂಕ್ ವ್ಯವಹಾರಗಳು ಯಾವುದೇ ಅಡ್ಡಿ ಆತಂಕವಿಲ್ಲದೇ ನೆರವೇರುತ್ತದೆ.

ಕನ್ಯಾ ರಾಶಿ
ಶನಿ ದೇವನ ಹಿಮ್ಮೆಟ್ಟುವಿಕೆಯು ಕನ್ಯಾ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆ. ನೀವು ಶತ್ರುಗಳ ವಿರುದ್ಧ ಜಯಶಾಲಿಯಾಗುತ್ತೀರಿ. ವಿದೇಶ ಪ್ರವಾಸಕ್ಕೆ ಉತ್ತಮ ಅವಕಾಶವಿದೆ. ನೀವು ವಿದೇಶಕ್ಕೆ ಹೋಗಲು ವೀಸಾಕ್ಕೆ ಅರ್ಜಿ ಸಲ್ಲಿಸಬಹುದು. ಈ ಸಮಯದಲ್ಲಿ ನೀವು ಒಳ್ಳೆಯ ಸುದ್ದಿಗಳನ್ನೇ ಕೇಳುತ್ತೀರಿ. ಇನ್ನೂ ನಿಮ್ಮ ಎಲ್ಲಾ ಸಾಲಗಳನ್ನು ಈ ಸಮಯದಲ್ಲಿ ಮರುಪಾವತಿಸಲು ಸಾಧ್ಯವಾಗುತ್ತದೆ.
ವೃಷಭ ರಾಶಿ
ಶನಿ ದೇವನ ಹಿಮ್ಮೆಟ್ಟುವಿಕೆಯಿಂದ ನೀವು ಲಾಭವನ್ನು ಪಡೆಯಲಿದ್ದೀರಿ. ಇದರಿಂದಾಗಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ನೀವು ಸುಧಾರಣೆಯನ್ನು ಕಾಣುತ್ತೀರಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಪೂರ್ವಜರ ಆಸ್ತಿಯಿಂದ ನೀವು ಹೆಚ್ಚಿನ ಲಾಭವನ್ನು ಪಡೆಯಬಹುದು. ಈ ಸಮಯದಲ್ಲಿ ನೀವು ಯಾವಾಗಲೂ ನಿಮ್ಮ ಗುರಿಗಳ ಮೇಲೆ ಕೇಂದ್ರೀಕರಿಸುತ್ತೀರಿ. ವ್ಯವಹಾರದಲ್ಲಿ ಅರ್ಥಪೂರ್ಣ ಪ್ರಯತ್ನಗಳನ್ನು ಮಾಡುವ ಮೂಲಕ ನೀವು ಉತ್ತಮ ಲಾಭವನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ.
ಧನು ರಾಶಿ
ಶನಿಯ ಹಿಮ್ಮೆಟ್ಟುವಿಕೆಯಿಂದ ಧನು ರಾಶಿಯವರಿಗೆ ಪ್ರಯೋಜನಕಾರಿ ಅಂತಾನೇ ಹೇಳಬಹುದು. ನೀವು ನಿಮ್ಮ ಕ್ಷೇತ್ರದಲ್ಲಿ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಇದರಿಂದ ನೀವು ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಲಾಭಕ್ಕಾಗಿ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣ ನಿಮ್ಮ ಪರವಾಗಿಯೇ ಇರುತ್ತದೆ.



Click it and Unblock the Notifications
