Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
School Holiday: ರಣಭೀಕರ ಮಳೆ.. ಎಂಟು ಜಿಲ್ಲೆಗಳಲ್ಲಿ ರಜೆ ಘೋಷಣೆ! ಇಲ್ಲಿದೆ ಪಟ್ಟಿ
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಜವರಾಯ, ಈಗ ಮತ್ತೆ ಅಬ್ಬರಿಸುತ್ತಿದ್ದಾನೆ. ಹೌದು, ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ (Karnataka Weather) ಸುರಿಯುತ್ತಿದ್ದು, ಹವಾಮಾನ ಇಲಾಖೆ ಈಗಾಗಲೇ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆಯಿಂದಾಗಿ ಎಂಟು ಜಿಲ್ಲೆಗಳಾದ್ಯಂತ ಶಾಲೆ ಮತ್ತು ಕಾಲೇಜುಗಳಿಗೆ ರಜೆ (school holiday in karnataka) ಘೋಷಿಸಲಾಗಿದೆ. ಎಲ್ಲೆಲ್ಲಿ ರಜೆ ಎಂಬ ಮಾಹಿತಿ ಇಲ್ಲಿದೆ.
ರಾಜ್ಯದ ಮಂಗಳೂರು, ಉಡುಪಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ (Karnataka Rain) ಆರ್ಭಟ ಮುಂದುವರಿದಿದೆ. ಇಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳ ಪ್ರವಾಹ, ಕೃಷಿ ಭೂಮಿ ಜಲಾವೃತ ಮತ್ತು ಗುಡ್ಡ ಕುಸಿತದಂತಹ ಅನಾಹುತಗಳು ಸಂಭವಿಸಿವೆ. ಕಳೆದ ಕೆಲವು ದಿನಗಳಿಂದ ತುಸು ವಿರಾಮ ನೀಡಿದ್ದ ಮಳೆಯು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಉತ್ತರ ಕರ್ನಾಟಕದ ಭಾಗಗಳಲ್ಲಿ ಮತ್ತೆ ಅಬ್ಬರಿಸುತ್ತಿದೆ. ಮಳೆಯಿಂದಾಗಿ ಉಂಟಾದ ತೊಂದರೆಗಳ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ವಿವಿಧ ತಾಲೂಕುಗಳಲ್ಲಿ ರಜೆ ನೀಡಲಾಗಿದೆ.

ಚಿತ್ರದುರ್ಗದಲ್ಲಿ ನಿರಂತರ ಮಳೆ, ಶಾಲೆಗಳಿಗೆ ರಜೆ
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ಅತಿಯಾದ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ 11 ತಾಲ್ಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಮುಂಡಗೋಡು ತಾಲೂಕಿಗೆ ಮಾತ್ರ ರಜೆ ನೀಡಿಲ್ಲ. ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಭಟ್ಕಳ, ಸಿದ್ಧಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ ಮತ್ತು ಹಳಿಯಾಳದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯ ಕಾರಣ, ಜಿಲ್ಲಾಧಿಕಾರಿ ಎಚ್.ವಿ.ದರ್ಶನ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ರಜೆ
ಶಿವಮೊಗ್ಗ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿವಿಧ ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಶಾಲಾ-ಕಾಲೇಜುಗಳಿಗೆ ರಜೆ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲೂ ರಜೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಕಾರಣ, ಸಕಲೇಶಪುರ ಮತ್ತು ಬೇಲೂರು ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ರಜೆ
ಕೊಡಗು ಜಿಲ್ಲೆಯಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಜೋರು ಗಾಳಿ ಮತ್ತು ಮಳೆಯ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಮುಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ (ನರಸಿಂಹರಾಜಪುರ) ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲೂ ರಜೆ
ದಾವಣಗೆರೆ ಜಿಲ್ಲೆಯಾದ್ಯಂತವೂ ಭಾರೀ ಮಳೆಯಾಗುತ್ತಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ.



Click it and Unblock the Notifications

