Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 21 ದಿನ ಭವಿಷ್ಯ: ಗುರುವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 21ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ:ಷಷ್ಠಿ
ನಕ್ಷತ್ರ:03:35ರವರೆಗೆ ಅನುರಾಧ ನಂತರ ಜ್ಯೇಷ್ಠ
ಪಕ್ಷ: ಶುಕ್ಲಪಕ್ಷ
ರಾಹುಕಾಲ: ಮಧ್ಯಾಹ್ನ 01:45 03:16ರವರೆಗೆ

ಮೇಷ ರಾಶಿ
ವೈವಾಹಿಕ, ಪ್ರೇಮ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಕೂಡ ಚೆನ್ನಾಗಿರಲಿದೆ, ಇಂದು ನೀವು ಸಾಲದ ವಹಿವಾಟುಗಳನ್ನು ತಪ್ಪಿಸಲು ಸಲಹೆ ನೀಡಲಾಗಿದೆ. ಕಚೇರಿಯಲ್ಲಿ, ನಿಮ್ಮ ಕೆಲಸವನ್ನು ಪೂರ್ಣ ಶಕ್ತಿ ಮತ್ತು ಉತ್ಸಾಹದಿಂದ ಪೂರ್ಣಗೊಳಿಸಲು ಸಲಹೆ ನೀಡಲಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:20 ರಿಂದ 8:20 ರವರೆಗೆ
ವೃಷಭ ರಾಶಿ
ನೀವು ಮಧುಮೇಹ ಹೊಂದಿದ್ದರೆ, ನಿಮ್ಮ ಆಹಾರ ಪದ್ಧತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿ, ಇಲ್ಲದಿದ್ದರೆ ಅದು ಕಷ್ಟಕರವಾಗಬಹುದು. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ. ಇಂದು ನಿಮ್ಮ ಸಂಗಾತಿಯು ಉತ್ತಮ ಮನಸ್ಥಿತಿಯಲ್ಲಿರುತ್ತಾರೆ. ಕೆಲಸದ ವಿಷಯದಲ್ಲಿ ಈ ದಿನ ಸಾಧಾರಣವಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಗ್ಗೆ 4:55 ರಿಂದ 9:30 ರವರೆಗೆ
ಮಿಥುನ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯಿಂದ ನೀವು ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ವಿಷಯದಲ್ಲಿ ಈ ದಿನ ಶುಭ ದಿನ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ತೊಡಗಿರುವವರು ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:45 ರವರೆಗೆ
ಕರ್ಕ ರಾಶಿ
ಈ ದಿನ ನಿಮ್ಮ ಪ್ರಮುಖ ಕೆಲಸಕ್ಕೆ ಅಡಚಣೆ ಉಂಟಾಗಬಹುದು, ನಿಮ್ಮ ಕೆಲಸ ಪೂರ್ಣಗೊಳಿಸಲು ಕಷ್ಟವಾಗುವುದು. ದಿನದ ಎರಡನೇ ಭಾಗದಲ್ಲಿ ನೀವು ಇದ್ದಕ್ಕಿದ್ದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ. ನಿಮ್ಮ ಪ್ರೀತಿಪಾತ್ರರೊಂದಿಗೆ ನಿಮ್ಮ ಸಂತೋಷವನ್ನು ಹಂಚಿಕೊಳ್ಳುವಿರಿ. ಆರ್ಥಿಕಸ್ಥಿತಿ ಚೆನ್ನಾಗಿರಲಿದೆ. ನೀವು ಕೆಲವು ದುಬಾರಿ ಐಷಾರಾಮಿಗಳನ್ನು ಸಹ ಖರೀದಿಸಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ರಾತ್ರಿ 8:45 ರವರೆಗೆ
ಸಿಂಹ ರಾಶಿ
ಈ ದಿನ ನಿಮಗೆ ಸಂತೋಷದಿಂದ ಕೂಡಿರಲಿದೆ. ನೀವು ಕೆಲವು ಸಮಯದಿಂದ ಹಣದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ನಿಮ್ಮ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಪ್ರಮುಖ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಕಚೇರಿಯಲ್ಲಿ ನೀಡಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:15 ರವರೆಗೆ
ಕನ್ಯಾ ರಾಶಿ
ಈ ದಿನ ಕೆಲವರು ನಿಮಗೆ ತೊಂದರೆಯನ್ನುಂಟು ಮಾಡಲು ಪ್ರಯತ್ನಿಸಬಹುದು. ಆದರೆ ನೀವು ಕೋಪಪಟ್ಟುಕೊಳ್ಳದೆ ಬುದ್ಧಿವಂತಿಕೆಯಿಂದ ನಿಭಾಯಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ವೆಚ್ಚಗಳು ಬಜೆಟ್ ಅನ್ನು ಮೀರಬಹುದು. ಕಚೇರಿಯಲ್ಲಿ ಕೆಲಸದ ಕಡೆ ಗಮನಹರಿಸಬೇಕು, ಹಿಂದೆ ಆದ ತಪ್ಪು ಮತ್ತೆ ಮಾಡದಂತೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 7 ರಿಂದ 9:25 ರವರೆಗೆ
ತುಲಾ ರಾಶಿ
ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸುವ ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಮಕ್ಕಳ ಕಡೆಯಿಂದ ತೊಂದರೆ ಉಂಟಾಗಬಹುದು. ನೀವು ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 38
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ
ವೃಶ್ಚಿಕ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಬೇಕಾಗುವುದು, ಸಾಧ್ಯವಾದರೆ ಈ ಪ್ರಯಾಣ ತಪ್ಪಿಸಿ, ಏಕೆಂದರೆ ಇದರಿಂದ ನೀವು ಬಯಸಿದ ಲಾಭವೇನೂ ದೊರೆಯುವುದಿಲ್ಲ. ನೀವು ವಿದ್ಯಾರ್ಥಿಯಾಗಿದ್ದರೆ ಈ ದಿನ ನಿಮಗೆ ತುಂಬಾ ಪ್ರಮುಖವಾಗಿದೆ. ವಿದ್ಯಾಭ್ಯಾಸದಲ್ಲಿ ಬರುವ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ. ಮನೆಯ ವಾತಾವರಣ ಅಷ್ಟೇನೂ ಚೆನ್ನಾಗಿರುವುದಿಲ್ಲ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ ಮಧ್ಯಾಹ್ನ 3 ರವರೆಗೆ
ಧನು ರಾಶಿ
ಇಂದು ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಸಂಬಂಧವನ್ನು ಸುಧಾರಿಸಲು ಪ್ರಯತ್ನಿಸಿ. ಚಿಕ್ಕ-ಪುಟ್ಟ ತಪ್ಪುಗಳನ್ನು ದೊಡ್ಡದು ಮಾಡಲು ಹೋಗಬೇಡಿ. ಇಂದು ನಿಮ್ಮ ಕೆಲಸಕ್ಕೆ ಉತ್ತಮ ಮನ್ನಣೆ ಸಿಗಲಿದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ
ಮಕರ ರಾಶಿ
ಈ ದಿನ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ವ್ಯಾಪಾರಸ್ಥರು ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿಯು ತುಂಬಾ ರೋಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ. ಇಂದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನಗಳಲ್ಲಿ ಒಂದಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಕುಂಭ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ. ಆದರೆ ಹೆಚ್ಚಿನ ಶ್ರಮ ಹಾಗೂ ಆತ್ಮವಿಶ್ವಾಸದಿಂದ ಕೆಲಸ ಮಾಡಿ ಎಲ್ಲವೂ ಸರಿಯಾಗುವುದು. ಶೀಘ್ರದಲ್ಲೇ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಹರ್ಷದ ವಾತಾವರಣ ಇರುತ್ತದೆ. ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನಿಮ್ಮ ಬಜೆಟ್ ಪ್ರಕಾರ ಮಾತ್ರ ನೀವು ಖರ್ಚು ಮಾಡಬೇಕು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 9:30 ರಿಂದ ಮಧ್ಯಾಹ್ನ 2:55 ರವರೆಗೆ
ಮೀನ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರುತ್ತದೆ. ನೀವು ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ನಿಮಗೆ ಉತ್ತಮ ಅವಕಾಶ ಸಿಗಬಹುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಭಿನ್ನಾಭಿಪ್ರಾಯವಿದ್ದರೆ ಮಾತನಾಡುವ ಮೂಲಕ ಸರಿಪಡಿಸಲು ಪ್ರಯತ್ನಿಸಿ. ಕೆಲಸವನ್ನು ತುಂಬಾ ಜಾಗ್ರತೆಯಿಂದ ಮಾಡಿ, ಚಿಕ್ಕ ತಪ್ಪು ದೊಡ್ಡ ನಷ್ಟವನ್ನು ಉಂಟು ಮಾಡಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಮುಹೂರ್ತ: ಬೆಳಗ್ಗೆ 4:20 ರಿಂದ 11 ರವರೆಗೆ



Click it and Unblock the Notifications