Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಮಾಸಿಕ ಭವಿಷ್ಯ: ಸೆಪ್ಟೆಂಬರ್ ತಿಂಗಳು ಸಿಂಹ ರಾಶಿಯವರಿಗೆ ಹೇಗಿರಲಿದೆ?
ಸೆಪ್ಟೆಂಬರ್ ಮಾಸಿಕ ಭವಿಷ್ಯ 2023 ರ ಪ್ರಕಾರ, ಈ ತಿಂಗಳು ಸಿಂಹ ರಾಶಿಯವರಿಗೆ ಹೇಗಿರಲಿದೆ? ನಿಮ್ಮ ವೃತ್ತಿ ಜೀವನ, ವೈಯಕ್ತಿಕ ಬದುಕು, ಆರ್ಥಿಕ ಜೀವನ, ಆರೋಗ್ಯ ಜೀವನ ಹೇಗಿರಲಿದೆ ಎಂದು ತಿಳಿಯೋಣ ಬನ್ನಿ:
ಸಿಂಹ ರಾಶಿ
ಸೆಪ್ಟೆಂಬರ್ ತಿಂಗಳ ಮಾಸಿಕ ಭವಿಷ್ಯದ ಪ್ರಕಾರ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ ಒಂಬತ್ತನೇ ಮನೆಯಲ್ಲಿ ಗುರುವಿನ ಉಪಸ್ಥಿತಿ ನಿಮಗೆ ಉತ್ತಮ ಪ್ರಯೋಜನಗಳನ್ನು ನೀಡಲಿದೆ. ಆದರೆ ಸಹೋದ್ಯೋಗಿಗಳು ಮತ್ತು ಮೇಲಾಧಿಕಾರಿಗಳಿಂದ ಕೆಲಸದ ಸ್ಥಳದಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗಬಹುದು. ಇದರಿಂದ ಆತಂಕಕ್ಕೆ ಒಳಗಾಗಬಹುದು. ಆದರೆ ನೀವು ವೃತ್ತಿ ಕ್ಷೇತ್ರದಲ್ಲಿ, ವ್ಯಕ್ತಿಯು ವ್ಯವಸ್ಥಿತವಾಗಿ ಯೋಜನೆ ಮಾಡಿದರೆ ಆಗ ಮಾತ್ರ ಯಶಸ್ಸಿನ ಸಾಧ್ಯತೆ ಇರುತ್ತದೆ.

ವ್ಯಾಪಾರ ಕ್ಷೇತ್ರದಲ್ಲಿ ಈ ತಿಂಗಳು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು, ಏಕೆಂದರೆ ಗುರುಗ್ರಹವು ಶುಭ ಪರಿಣಾಮವನ್ನು ಹೊಂದಿದೆ. ಈ ತಿಂಗಳಲ್ಲಿ, ನೀವು ಹೊಸ ಪಾಲುದಾರಿಕೆಯ ವ್ಯವಹಾರ ಮಾಡಿದರೆ ಒಳ್ಳೆಯದಾಗಲಿದೆ. ಹನ್ನೆರಡನೇ ಮನೆಯಲ್ಲಿ ಹಿಮ್ಮುಖ ಚಲನೆಯಲ್ಲಿದ್ದಾನೆ ಈ ಅವಧಿಯಲ್ಲಿ ಉದ್ಯೋಗದಲ್ಲಿ ಅತೃಪ್ತಿ ಉಂಟಾಗುವುದು, ಆದರೆ ಶುಕ್ರ ಉದಯವಾದ ಮೇಲೆ ಸೆಪ್ಟೆಂಬರ್ 18ರಿಂದ ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ.
ಆರ್ಥಿಕ ಜೀವನ
ಆರ್ಥಿಕ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ಈ ಅವಧಿಯಲ್ಲಿ ಹಣ ಸಂಪಾದಿಸುವುದರ ಜೊತೆಗೆ ಹಣವನ್ನು ಉಳಿಸುವ ಬಗ್ಗೆ ಕೂಡ ಪ್ರಯತ್ನ ಮಾಡುತ್ತೀರಿ, ಆದರೆ ಏಳನೇ ಮನೆಯಲ್ಲಿ ಶನಿ ಇರುವುದರಿಂದ, ನಿಮ್ಮ ಖರ್ಚುಗಳು ಹೆಚ್ಚಾಗಬಹುದು, ಶನಿಯ ಪ್ರಭಾವದಿಂದ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ, ಇದರಿಂದಾಗಿ ಅನಗತ್ಯ ವೆಚ್ಚಗಳು ಹೆಚ್ಚಾಗುವ ಸಾಧ್ಯತೆಯಿದೆ. ಸಂಗಾತಿಯ ಆರೋಗ್ಯಕ್ಕಾಗಿ ಹಣವನ್ನು ಖರ್ಚು ಮಾಡಬೇಕಾಗಬಹುದು.
ಎರಡನೇ ಮನೆಯ ಅಧಿಪತಿಯಾಗಿ ಮೊದಲ ಮನೆಯಲ್ಲಿ ಬುಧದ ಪ್ರತಿಕೂಲ ಸ್ಥಾನದ ಪರಿಣಾಮವಾಗಿ ವ್ಯವಹಾರದಲ್ಲಿ ಉತ್ತಮ ಲಾಭವನ್ನು ಗಳಿಸಲು ಸಾಧ್ಯವಾಗದಿರಬಹುದು. ಈ ತಿಂಗಳು ವ್ಯಾಪಾರ ಮಾಡುವವರು ಲಾಭ/ನಷ್ಟ ಇಲ್ಲದ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಈ ತಿಂಗಳು ಹೊಸ ಪಾಲುದಾರಿಕೆಯನ್ನು ಮಾಡುವುದು ಅಥವಾ ಹೊಸ ಯೋಜನೆಯನ್ನು ಮಾಡುವುದು ಮಾಡಬೇಡಿ, ನಷ್ಟ ಉಂಟಾಗಬಹುದು.
ಆರೋಗ್ಯ ಜೀವನ
ಸೆಪ್ಟೆಂಬರ್ 2023 ರ ಮಾಸಿಕ ಜಾತಕದ ಪ್ರಕಾರ ಈ ತಿಂಗಳಿನಲ್ಲಿ ಆರೋಗ್ಯ ಚೆನ್ನಾಗಿರಲಿದೆ. ಇದರಿಂದ ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಲು ಸಾಧ್ಯವಾಗುವುದು.
ಪ್ರೀತಿ, ಮದುವೆ, ಕುಟುಂಬ ಜೀವನ
ನಿಮ್ಮ ಕುಟುಂಬ ಹಾಗೂ ವೈವಾಹಿಕ ಜೀವನ ಈ ಅವಧಿಯಲ್ಲಿ ಚೆನ್ನಾಗಿರಲಿದೆ. ಪ್ರೇಮಿಗಳು ತಮ್ಮ ಸಂಬಂಧವನ್ನು ಮದುವೆ ಮೂಲಕ ಗಟ್ಟಿಯಾಗಿಸಲು ಚಿಂತಿಸಬಹುದು. ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಅವಧಿಯಲ್ಲಿ ಮದುವೆ ಸಂಬಂಧ ಕೂಡಿ ಬರಲಿದೆ.
ಪರಿಹಾರ
* ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ಆರ್ಘ್ಯ ಅರ್ಪಿಸಿ.
* ಆದಿತ್ಯ ಹೃದಯ ಮಂತ್ರವನ್ನು ಜಪಿಸಿ.



Click it and Unblock the Notifications