Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮಾಸಿಕ ಭವಿಷ್ಯ: ಸೆಪ್ಟೆಂಬರ್ ತಿಂಗಳು ಮೀನ ರಾಶಿಯವರಿಗೆ ಮಿಶ್ರಫಲ, ಜಾಗ್ರತೆ!
ಸೆಪ್ಟೆಂಬರ್ ಮಾಸಿಕ ಭವಿಷ್ಯ 2023 ರ ಪ್ರಕಾರ, ಈ ತಿಂಗಳು ಮೀನ ರಾಶಿಯವರಿಗೆ ಹೇಗಿರಲಿದೆ? ನಿಮ್ಮ ವೃತ್ತಿ ಜೀವನ, ವೈಯಕ್ತಿಕ ಬದುಕು, ಆರ್ಥಿಕ ಜೀವನ, ಆರೋಗ್ಯ ಜೀವನ ಹೇಗಿರಲಿದೆ ಎಂದು ತಿಳಿಯೋಣ ಬನ್ನಿ:
ವೃತ್ತಿ ಜೀವನ
ಮೀನ ರಾಶಿಯವರ ಸೆಪ್ಟೆಂಬರ್ ತಿಂಗಳ ವೃತ್ತಿ ಜೀವನದ ಬಗ್ಗೆ ಹೇಳುವುದಾದರೆ ನೀವು ನಿಮ್ಮ ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳಿಂದ ಕೆಲವು ಕಷ್ಟಕರ ಸವಾಲುಗಳನ್ನು ಎದುರಿಸಬೇಕಾಗಬಹುದು. ಈ ತಿಂಗಳಿನಲ್ಲಿ ಹೆಚ್ಚಿನ ಗ್ರಹಗಳು ನಿಮಗೆ ಪ್ರತಿಕೂಲವಾಗಿ ಇರುವುದರಿಂದ ಕೆಲಸದ ಒತ್ತಡವು ನಿಮ್ಮ ಮೇಲೆ ಹೆಚ್ಚಾಗಬಹುದು. ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಬಡ್ತಿಯ ನಿರೀಕ್ಷೆಯಲ್ಲಿದ್ದರೆ ಇನ್ನೂ ಸ್ವಲ್ಪ ಕಾಯಬೇಕಾಗಿದೆ.

ತಮ್ಮದೇ ಆದ ವ್ಯಾಪಾರವನ್ನು ನಡೆಸುತ್ತಿರುವವರು ಈ ಅವಧಿಯಲ್ಲಿ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು, ಇದರಿಂದಾಗಿ ನಿರೀಕ್ಷಿತ ಲಾಭವನ್ನು ಗಳಿಸುವುದು ಕಷ್ಟವಾಗುವುದು, ಕೆಲವು ಸಂದರ್ಭಗಳಲ್ಲಿ ನಷ್ಟದ ಸಾಧ್ಯತೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ನಡೆಸಲು ಸಲಹೆ ನೀಡಲಾಗಿದೆ. ವ್ಯಾಪಾರಸ್ಥರು ತಮ್ಮ ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು, ಇದರಿಂದಾಗಿ ನಿರೀಕ್ಷಿತ ಲಾಭವನ್ನು ಗಳಿಸುವುದು ಸ್ವಲ್ಪ ಕಷ್ಟಕರವಾಗುವುದು. ಈ ಅವಧಿಯಲ್ಲಿ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕು.
ಆರ್ಥಿಕ ಸ್ಥಿತಿ
ನಿಮ್ಮ ಆರ್ಥಿಕ ಜೀವನದ ಬಗ್ಗೆ ಹೇಳುವುದಾದರೆ ಈ ತಿಂಗಳು ನೀವು ಹಣವನ್ನು ಗಳಿಸುವಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗಬಹುದು. ಶನಿ, ರಾಹು, ಕೇತುವಿನಿಂದಾಗಿ ನಿಮ್ಮ ಖರ್ಚುಗಳು ಹೆಚ್ಚಾಗಲಿದೆ. ಈ ಖರ್ಚು ತಪ್ಪಿಸಲು ಸಾಧ್ಯವಾಗುವುದಿಲ್ಲ. ಆದರೆ ಗುರುವಿನ ಪ್ರಭಾವ ಉತ್ತಮವಾಗಿರುವುದರಿಂದ ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡವರು ಉತ್ತಮ ಲಾಭ ಗಳಿಸಬಹುದು. ಈ ಅವಧಿಯಲ್ಲಿ ಹಣವನ್ನು ಉಳಿಸಲು ಕಷ್ಟವಾಗುವುದು, ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.
ಆರೋಗ್ಯ ಜೀವನ
ಈ ಅವಧಿಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ನೀವು ಮಾನಸಿಕ ಒತ್ತಡ ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಬಲಿಯಾಗಬಹುದು. ಈ ಅವಧಿಯಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ. ವ್ಯಾಯಾಮ ಮತ್ತು ಧ್ಯಾನ ಇತ್ಯಾದಿಗಳನ್ನು ನಿಯಮಿತವಾಗಿ ಮಾಡಿ.
ಪ್ರೀತಿ, ಮದುವೆ, ಕುಟುಂಬ ಜೀವನ
ಪ್ರೇಮಿಗಳು ಹಾಗೂ ವಿವಾಹಿತರು ತಮ್ಮ ಸಂಬಂಧದಲ್ಲಿ ಕೆಲ ಸಮಸ್ಯೆಗಳನ್ನು ಎದುರಿಸಬಹುದು, ನಿಮ್ಮಿಬ್ಬರ ನಡುವೆ ಹೊಂದಾಣಿಕೆಯ ಕೊರತೆ ಕಂಡು ಬರುವುದು. ಈ ಅವಧಿಯಲ್ಲಿ ಅನಾವಶ್ಯಕವಾದ ವಿವಾದಗಳು ಉಂಟಾಗಬಹುದು. ಈ ಅವಧಿಯಲ್ಲಿ ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಇದರಿಂದ ನಿಮ್ಮಿಬ್ಬರ ನಡುವಿನ ಅನೇಕ ಸಮಸ್ಯೆ ಕಡಿಮೆಯಾಗುವುದು. ಕುಟುಂಬ ಜೀವನದಲ್ಲೂ ಕೆಲ ಸಮಸ್ಯೆಗಳಿರಬಹುದು, ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಪರಿಹಾರ
ಪ್ರತಿದಿನ ಹನುಮಾನ್ ಚಾಲೀಸಾ ಪಠಿಸಿ.
"ಓಂ ಗುರುವೇ ನಮಃ" ಎಂದು ಪ್ರತಿದಿನ 108 ಬಾರಿ ಜಪಿಸಿ.



Click it and Unblock the Notifications
