Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಜೂನ್ 17ರಿಂದ ನವೆಂಬರ್ 4ರವರೆಗೆ ಶನಿಯ ವಕ್ರೀಯ ಚಲನೆ: ಈ 3 ರಾಶಿಯವರಿಗೆ ಹಣ ಲಾಭ
ಯಾವುದೇ ಗ್ರಹ ವಕ್ರೀಯ ಚಲನೆಯಲ್ಲಿದ್ದಾಗ ಅದು ಪ್ರಭಾವ ಬೀರುವುದಿಲ್ಲ ಎಂದು ಹೇಳಲಾಗುವುದು. ಅದರಲ್ಲೂ ಶನಿ ಗ್ರಹದ ಪ್ರಭಾವ ಎಂದರೆ ಎಲ್ಲರೂ ಭಯ ಪಡುತ್ತಾರೆ. ಏಕೆಂದರೆ ಇದು ಬೀರುವ ಪರಿಣಾಮ ತುಂಬಾ ದೀರ್ಘವಾಗಿರುವುದರಿಂದ ಜನರಿಗೆ ಶನಿ ಸಂಚಾರವೆಂದರೆ ಈ ಸಂಚಾರ ನಮ್ಮ ರಾಶಿಗೆ ಹೇಗಿರಲಿದೆ ಎಂಬ ಆತಂಕ ಮೂಡುವುದು.

ಜೂನ್ 17ಕ್ಕೆ ಕುಂಭ ರಾಶಿಯಲ್ಲಿ ವಕ್ರೀಯವಾಗಿ ಚಲಿಸುವ ಶನಿಯು 4 ನವೆಂಬರ್‌ವರೆಗೆ ವಕ್ರೀಯವಾಗಿ ಚಲಿಸಲಿದೆ. ಶನಿಯು ವಕ್ರೀಯವಾಗಿ ಚಲಿಸಿದಾಗ ದ್ವಾದಶ ರಾಶಿಗಳಲ್ಲಿ ಕೆಲವೊಂದು ರಾಶಿಯವರಿಗೆ ಈ ಸಂಚಾರ ಆರ್ಥಿಕವಾಗಿ ಅದೃಷ್ಟ ತರಲಿದೆ. ಆ ರಾಶಿಗಳ ಬಗ್ಗೆ ನೋಡುವುದಾದರೆ
ಮಿಥುನ ರಾಶಿ
ಶನಿಯ ಹಿಮ್ಮುಖ ಚಲನೆ ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಒಳ್ಳೆಯದಿದೆ. ಈ ಸಮಯದಲ್ಲಿ ಕೆಲಸಕ್ಕೆ ಸಂಬಂಧಿಸಿದಂತೆ ಮಾಡುವ ಪ್ರಯಾಣದಿಂದ ಲಾಭ ಗಳಿಸುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯು ಬಲಗೊಳ್ಳಲು ಪ್ರಾರಂಭಿಸುತ್ತದೆ. ಆರ್ಥಿಕವಾಗಿ ಈ ಅವಧಿ ಒಳ್ಳೆಯದಿದೆ. ನೀವು ಪೂರ್ವಜರ ಆಸ್ತಿ ಪಡೆಯಬಹುದು. ಉದ್ಯೋಗದಲ್ಲಿ ವರ್ಗಾವಣೆ ಆಗಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಅವಧಿ ಆರ್ಥಿಕವಾಗಿ ಅನುಕೂಲಕರವಾಗಿದೆ. ಈ ಸಾಗಣೆಯ ಅವಧಿಯಲ್ಲಿ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಯಾವುದೋ ಕಾರಣಕ್ಕೆ ಸ್ಥಗಿತವಾಗಿದ್ದ ಕೆಲಸ ಪೂರ್ಣವಾಗಲಿದೆ. ವ್ಯವಹಾರದಲ್ಲಿ ಲಾಭಗಳಿಸಲು ಸಾಧ್ಯವಾಗುವುದ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಬಹುದು. ಈ ಅವಧಿಯಲ್ಲಿ ಹಣದ ಪರಿಸ್ಥಿತಿ ಚೆನ್ನಾಗಿರಲಿದೆ. ಯಾರಿಗೂ ಸಾಲ ನೀಡುವುದು ಅಥವಾ ನೀವು ಇತರರ ಬಳಿಯಿಂದ ಸಾಲ ಪಡೆಯುವುದು ಮಾಡಬೇಡಿ.
ಧನು ರಾಶಿ
ಶನಿಯ ಹಿಮ್ಮುಖ ಚಲನೆಯು ಧನು ರಾಶಿಯವರಿಗೆ ಅತ್ಯುತ್ತಮ ಫಲಿತಾಂಶಗಳನ್ನು ನೀಡಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ ಕೆಲಸ ಕಾರ್ಯಗಳು ತುಂಬಾ ಸುಗಮವಾಗಿ ನೆರವೇರಲಿದೆ. ಈ ಅವಧಿಯಲ್ಲಿ ನಿಮ್ಮ ವ್ಯವಹಾರ ಅಥವಾ ಕೆಲಸದ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಕೆಲಸಕ್ಕೆ ಅಥವಾ ವ್ಯಾಪಾರಕ್ಕೆ ಸಂಬಂಧಿಸಿದಂತೆ ಮಾಡುವ ಪ್ರಯಾಣ ಲಾಭ ತರಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ
ಮಕರ ರಾಶಿ
ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ. ಈ ಸಮಯದಲ್ಲಿ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಇನ್ನು ಆಸ್ತಿ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಪ್ರತಿ ಶನಿವಾರ ಈ ಮಂತ್ರ ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications
