Latest Updates
-
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ!
ಬಿಡುಗಡೆಗೂ ಮುನ್ನ '45' ಸಿನಿಮಾ ನಿರ್ಮಾಪಕರು ಸೇಫ್; ದಾಖಲೆ ಬೆಲೆಗೆ ಓಟಿಟಿ, ಟಿವಿ ರೈಟ್ಸ್ ಸೇಲ್
ಅರ್ಜುನ್ ಜನ್ಯಾ ನಿರ್ದೇಶನದ '45' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಶಿವಣ್ಣ ಹಾಗೂ ಉಪೇಂದ್ರ ಜುಗಲ್‌ಬಂದಿ ಸಿನಿರಸಿಕರಿಗೆ ಭರ್ಜರಿ ಮನರಂಜನೆ ಉಣಬಡಿಸುವ ಸುಳಿವು ಸಿಕ್ತಿದೆ. ಭಿನ್ನ ವಿಭಿನ್ನ ಗೆಟಪ್‌ಗಳಲ್ಲಿ ಶಿವಣ್ಣ ಮೋಡಿ ಮಾಡಲು ಬರ್ತಿದ್ದಾರೆ. ಚಿತ್ರದ ಪ್ರೀ ರಿಲೀಸ್ ಬ್ಯುಸಿನೆಸ್ ಜೋರಾಗಿದ್ದು ನಿರ್ಮಾಪಕರು ಸೇಫ್ ಎನ್ನುವಂತಾಗಿದೆ.
ವರ್ಷದಬಹುನಿರೀಕ್ಷಿತ ಮಲ್ಟಿಸ್ಟಾರರ್ ಸಿನಿಮಾ ಇದು. ರಾಜ್. ಬಿ ಶೆಟ್ಟಿ ಕೂಡ ಚಿತ್ರದ ತಾರಾಗಣದಲ್ಲಿದ್ದಾರೆ. ರಮೇಶ್ ರೆಡ್ಡಿ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ, ಅನಿಲ್ ಕುಮಾರ್ ಸಂಭಾಷಣೆ ಚಿತ್ರಕ್ಕಿದೆ. ಸ್ವತಃ ಅರ್ಜುನ್ ಜನ್ಯಾ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಚಿತ್ರದ ಓಟಿಟಿ, ಸ್ಯಾಟಲೈಟ್ ರೈಟ್ಸ್ ಮಾರಾಟವಾಗಿದೆ. '45' ಸಿನಿಮಾ ವಿತರಣೆ ಹಕ್ಕು ಕೆವಿಎನ್ ಪ್ರೊಡಕ್ಷನ್ ಪಾಲಾಗಿದೆ. ಹಾಗಾಗಿ ಬಿಡುಗಡೆಗೂ ಮುನ್ನ ಸಿನಿಮಾ ಭರ್ಜರಿ ಬ್ಯುಸಿನೆಸ್ ಮಾಡಿದೆ.

ಥ್ರಿಯೇಟ್ರಿಕಲ್, ಓಟಿಟಿ ಹಾಗೂ ಸ್ಯಾಟಲೈಟ್ ರೈಟ್ಸ್ ಸೇರಿ 60ರಿಂದ 100 ಕೋಟಿ ರೂ.ವರೆಗೆ '45' ಸಿನಿಮಾ ಬ್ಯುಸಿನೆಸ್ ಮಾಡಿದೆ ಎನ್ನಲಾಗ್ತಿದೆ. ಕನ್ನಡ ಸಿನಿಮಾಗಳ ಓಟಿಟಿ, ಸ್ಯಾಟಲೈಟ್ ರೈಟ್ಸ್ ಮಾರಾಟ ಕೊಂಚ ಕಷ್ಟ ಎನ್ನುವಂತಾಗಿದೆ. ಓಟಿಟಿ ಸಂಸ್ಥೆಗಳು ಹೇಳಿದಂತೆ ಕೇಳಬೇಕು ಎನ್ನುವ ವಾದ ಇದೆ. ಆದರೆ ಶಿವಣ್ಣ-ಉಪ್ಪಿ ಕಾಂಬಿನೇಷನ್ ಚಿತ್ರಕ್ಕೆ ಆನೆ ಬಲ ತಂದುಕೊಟ್ಟಿದೆ. ಜೀ ಸಂಸ್ಥೆಗೆ '45' ಸಿನಿಮಾ ಓಟಿಟಿ ಹಾಗೂ ಸ್ಯಾಟಲೈಟ್ ರೈಟ್ಸ್ ಮಾರಾಟವಾಗಿದೆ. ಸಿನಿಮಾ ಬಿಡುಗಡೆ ಆಗಿ ಕೆಲ ವಾರಗಳ ಬಳಿಕ ಸಿನಿಮಾ ಸ್ಟ್ರೀಮಿಂಗ್ ಆಗಲಿದೆ.
ಕ್ರಿಸ್‌ಮಸ್ ಸಂಭ್ರಮದಲ್ಲಿ ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಅದೇ ದಿನ ಸುದೀಪ್ ನಟನೆಯ 'ಮಾರ್ಕ್' ಚಿತ್ರ ಕೂಡ ತೆರೆಗಪ್ಪಳಿಸಲಿದೆ. ಹಾಗಾಗಿ ಎರಡೂ ಸಿನಿಮಾಗಳ ನಡುವೆ ಬಾಕ್ಸಾಫೀಸ್ ಕ್ಲ್ಯಾಶ್ ಏರ್ಪಡಲಿದೆ. ಕ್ರಿಸ್‌ಮಸ್ ವೀಕೆಂಡ್ ರಜೆ, ಹೊಸ ವರ್ಷ ಸಂಭ್ರಮದಲ್ಲಿ ದೊಡ್ಡಮಟ್ಟದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವ ಲೆಕ್ಕಾಚಾರ ಶುರುವಾಗಿದೆ. '45' ಸಿನಿಮಾ ಟ್ರೈಲರ್ ನೋಡಿ ಸಿನಿರಸಿಕರು ಹುಬ್ಬೇರಿಸಿದ್ದಾರೆ. ಕಥೆಯ ಸುಳಿವು ಬಿಟ್ಟುಕೊಡದೇ ಬಹಳ ಸೊಗಸಾಗಿ ಟ್ರೈಲರ್ ಕಟ್ ಮಾಡಿದ್ದಾರೆ. ಮೊದಲ ಚಿತ್ರದಲ್ಲೇ ಅರ್ಜುನ್ ಜನ್ಯಾ ಮ್ಯಾಜಿಕ್ ಮಾಡಲು ಹೊರಟಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
ಟ್ರೈಲರ್ ಟೆಸ್ಟ್‌ನಲ್ಲಿ ಅರ್ಜುನ್ ಜನ್ಯಾ ಪಾಸ್ ಆಗಿದ್ದಾರೆ. ಕಂಪ್ಲೀಟ್ ಸಿನಿಮಾ ಇದೇ ರೀತಿ ಥ್ರಿಲ್ ಕೊಟ್ಟರೆ ಬಾಕ್ಸಾಫೀಸ್ ಶೇಕ್ ಆಗುವುದು ಗ್ಯಾರಂಟಿ ಎಂದು ಸಿನಿರಸಿಕರು ಕಾಮೆಂಟ್ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ '45' ಸಿನಿಮಾ ಬಿಡುಗಡೆ ಆಗಲಿದೆ. ಬೇರೆ ಭಾಷೆಗಳಲ್ಲಿ ಕೂಡ ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಈಗಾಗಲೇ 'ಆಫ್ರೋ ಟಪಾಂಗ್' ಪ್ರಮೋಷನಲ್ ಸಾಂಗ್ ಹಿಟ್ ಆಗಿದೆ. 'ಪ್ರೀತ್ಸೆ', 'ಲವ-ಕುಶ' ಬಳಿಕ ಶಿವಣ್ಣ ಹಾಗೂ ಉಪೇಂದ್ರ ಜೊತೆಯಾಗಿ ನಟಿಸಿರುವ ಸಿನಿಮಾ ಇದಾಗಿದೆ. ಹಾಗಾಗಿ ಅಭಿಮಾನಿಗಳ ನಿರೀಕ್ಷೆ ಡಬಲ್ ಆಗಿದೆ.
ರಾಜೇಂದ್ರನ್, ಕೌಸ್ತುಭ ಮಣಿ, ಜಿಶು ಸೆಂಗುಪ್ತ, ಪೂಜಾ ರಾಮಚಂದ್ರನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ರಾಯಪ್ಪ ಆಗಿ ಉಪೇಂದ್ರ ಹಾಗೂ ಶಿವಪ್ಪ ಆಗಿ ಶಿವರಾಜ್‌ಕುಮಾರ್ ಚಿತ್ರದಲ್ಲಿ ಮುಖಾಮುಖಿ ಆಗುತ್ತಿದೆ. ಇವರಿಬ್ಬರ ನಡುವೆ ರಾಜ್. ಬಿ ಶೆಟ್ಟಿ ಕಥೆ, ವ್ಯಥೆ ಏನು ಎನ್ನುವುದನ್ನು ತೆರೆಮೇಲೆ ನೋಡಿ ಎಂಜಾಯ್ ಮಾಡಬೇಕು. ಈ ಕಥೆ ಹೇಳಲು ಜನ್ಯಾ ಒಂದು ಕಾಲ್ಪನಿಕ ಪ್ರಪಂಚವನ್ನೇ ಸೃಷ್ಟಿಸಿದ್ದಾರೆ. ಅನ್ನು ತೆರೆಮೇಲೆ ಕಣ್ತುಂಬಿಕೊಳ್ಳಬೇಕಿದೆ. ನಿರೀಕ್ಷೆಗೆ ತಕ್ಕಂತೆ '45' ಸಿನಿಮಾ ಮೂಡಿ ಬಂದರೆ ಬಾಕ್ಸಾಫೀಸ್ ಕೊಳ್ಳೆ ಹೊಡೆಯಲಿದೆ.



Click it and Unblock the Notifications
