Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಶುಕ್ರ ಗೋಚಾರ ಫಲ: ಈ 3 ರಾಶಿಯವರು ಆ.7ರವರೆಗೆ ಜಾಗ್ರತೆ, ಶುಕ್ರದೋಷಕ್ಕೆ ಪರಿಹಾರವೇನು?
ವೈದಿಕ ಜ್ಯೋತಿಷ್ಯದಲ್ಲಿ, ಶುಕ್ರನನ್ನು ದೈಹಿಕ ಸಂತೋಷ, ಅನುಕೂಲತೆಯ ಅಂಶವೆಂದು ಪರಿಗಣಿಸಲಾಗಿದೆ, ಜುಲೈ 7 ರಂದು ಶುಕ್ರವು ಸೂರ್ಯ ಅಧಿಪತಿಯಾಗಿರುವ ಸಿಂಹ ರಾಶಿಯನ್ನು ಪ್ರವೇಶಿಸಿದೆ, ಶುಕ್ರನು ಆಗಸ್ಟ್ 7ರವರೆಗೆ ಇದೇ ರಾಶಿಯಲ್ಲಿದ್ದು ನಂತರ ಹಿಮ್ಮುಖ ಚಲನೆ ಮಾಡಲಿದೆ. ಸಿಂಹ ರಾಶಿಯಲ್ಲಿ ಶುಕ್ರನ ಈ ಸಂಕ್ರಮಣದಿಂದಾಗಿ 3 ರಾಶಿಯವರು ಈ ಅವಧಿಯಲ್ಲಿ ಸ್ವಲ್ಪ ಜಾಗ್ರತೆವಹಿಸಬೇಕಾಗಿದೆ:
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಶುಕ್ರನು ಎರಡನೇ ಮನೆಯ ಅಧಿಪತಿಯಾಗಿದ್ದು ಈಗ ನಿಮ್ಮ ಹನ್ನೆರಡನೇ ಮನೆಗೆ ಸಂಚರಿಸಿದೆ. 12ನೇ ಮನೆಯಲ್ಲಿರುವ ಶುಕ್ರ ಶತ್ರು ಮನೆಯ ಮೇಲೆ ಪೂರ್ಣ ದೃಷ್ಟಿ ಹೊಂದಿರುತ್ತಾನೆ. ಶುಕ್ರನ ಈ ಸಂಚಾರದಿಂದ ಕನ್ಯಾ ರಾಶಿಯವರು ಅನಿರೀಕ್ಷಿತ ಖರ್ಚುಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ನಿಮ್ಮ ಅದೃಷ್ಟದ ಬೆಂಬಲ ಸ್ವಲ್ಪ ಕಡಿಮೆ ಇರಲಿದೆ. ಈ ಸಮಯದಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಬೇಕು. ಮಧುಮೇಹ ರೋಗಿಗಳಿಗೆ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುತ್ತದೆ.

ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು, ನಿಮ್ಮ ಮಾರ್ಗದರ್ಶಕರೊಂದಿಗೆ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಈ ಸಮಯದಲ್ಲಿ ಮಾನಸಿಕ ಒತ್ತಡ ಎದುರಿಸಬೇಕಾಗುವುದು. ನೀವು ಕೆಲವು ವ್ಯಕ್ತಿಗಳೊಂದಿಗೆ ಜಾಗ್ರತೆಯಿಂದಿರುವುದು ಒಳ್ಳೆಯದು.
ಮಕರ ರಾಶಿ
ಮಕರ ರಾಶಿಯವರಲ್ಲಿ ಶುಕ್ರ 8ನೇ ಮನೆಯಲ್ಲಿ ಇರಲಿದೆ. ಈ ಸಮಯ ವಿದ್ಯಾರ್ಥಿಗಳಿಗೆ ಸವಾಲಿನಿಂದ ಕೂಡಿರಲಿದೆ. ಈ ಸಮಯದಲ್ಲಿ, ಸರ್ಕಾರಿ ಉದ್ಯೋಗಗಳಿಗೆ ತಯಾರಿ ಮಾಡುವ ಜನರು ಪ್ರತಿಕೂಲ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ನೀವು ಹೆಚ್ಚು ಜಾಗ್ರತೆಯಿಂದಿರಬೇಕು. ಈ ಸಮಯದಲ್ಲಿ ನಿಮ್ಮ ಯಾವುದೇ ಮಹಿಳಾ ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ಈ ಸಮಯದಲ್ಲಿ ಅಪರಿಚಿತ ಮಹಿಳೆಯೊಂದಿಗೆ ನಿಮ್ಮ ಸ್ನೇಹ ಬೆಳೆಯಲು ಬಿಡಬೇಡಿ, ಇದರಿಂದ ನಿಮಗೆ ಅಪಾಯ ಹೆಚ್ಚು, ಮಾನಸಿಕ ನೆಮ್ಮದಿ ಹಾಳಾಗುವುದು. ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು.
ಹಣದ ಖರ್ಚು ಅಧಿಕವಿರಲಿದೆ. ಆದ್ದರಿಂದ ಈ ವಿಷಯದಲ್ಲಿ ಹೆಚ್ಚು ಜಾಗ್ರತೆವಹಿಸಿ. ಈ ಸಮಯದಲ್ಲಿ ನಿಮ್ಮ ಕೆಲಸ ಕಾರ್ಯಗಳು ವಿಳಂಬವಾಗುವುದು. ಮಂಗಳ ಮತ್ತು ಶುಕ್ರ ಸಂಯೋಗದ ಸಮಯದಲ್ಲಿ, ನಿಮ್ಮ ಅದೃಷ್ಟ ಸ್ವಲ್ಪ ದುರ್ಬಲವಾಗಬಹುದು. ನಿಮ್ಮ ಶ್ರಮದ ಫಲವನ್ನು ಪಡೆಯಲು ಸ್ವಲ್ಪ ಸಮಯ ಕಾಯಬೇಕಾದ ಸಾಧ್ಯತೆಯಿದೆ. ಉದ್ಯಮಿಗಳಿಗೆ ನೀವು ನಿರೀಕ್ಷಿಸಿದಷ್ಟು ಲಾಭ ಸಿಗದಿರಬಹುದು. ಅಲ್ಲದೆ, ಆರ್ಥಿಕ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಇಲ್ಲ. ಈ ಸಮಯದಲ್ಲಿ, ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಗಳು ನಿಮ್ಮನ್ನು ಕಾಡಬಹುದು.
ಮೀನ ರಾಶಿ
ಮೀನ ರಾಶಿಯವರಲ್ಲಿಶುಕ್ರ 6ನೇ ಮನೆಯಲ್ಲಿ ಇರಲಿದೆ. ಶುಕ್ರನು ಈ ಸ್ಥಾನದಲ್ಲಿದ್ದರೆ ಶತ್ರಸ್ಥಾನ ಸೃಷ್ಟಿಸಲಿದೆ ಎಂದು ಪರಿಗಣಿಸಲಾಗಿದೆ. ಶುಕ್ರನ ಈ ಸಂಕ್ರಮಣದ ಸಮಯದಲ್ಲಿ ನಿಮ್ಮ ಒಡಹುಟ್ಟಿದವರೊಂದಿಗೆ ನೀವು ವಿವಾದವನ್ನು ಹೊಂದಿರಬಹುದು. ಕುಟುಂಬದ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ವಿವಾದವಿದ್ದರೆ, ಅದನ್ನು ನ್ಯಾಯಾಲಯದ ಹೊರಗೆ ಬಗೆಹರಿಸಲು ಪ್ರಯತ್ನಿಸಿ. ವಿಷಯ ನ್ಯಾಯಾಲಯದ ಮೆಟ್ಟಿಲೇರಿದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳು ಎದುರಾಗಬಹುದು.. ಈ ಸಮಯದಲ್ಲಿ, ಮೀನ ರಾಶಿಯ ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ನಿಮಗೆ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಕಾಯಿಲೆ ಇದ್ದರೆ, ಖಂಡಿತವಾಗಿಯೂ ವೈದ್ಯರನ್ನು ಭೇಟಿ ಮಾಡಿ.
ಈ ಸಮಯದಲ್ಲಿ ನಿಮ್ಮ ಕೆಲಸದಲ್ಲಿ ನೀವು ಬಯಸಿದ ಫಲಿತಾಂಶ ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಕೆಲಸವನ್ನು ಬದಲಾಯಿಸಲು ಬಯಸಿದರೆ ಈ ಸಮಯವು ಅನುಕೂಲಕರವಾಗಿಲ್ಲ. ಸ್ವಲ್ಪ ಸಮಯ ಕಾಯುವುದು ಒಳ್ಳೆಯದು. ಈ ಸಮಯದಲ್ಲಿ, ಆಮದು-ರಫ್ತಿಗೆ ಸಂಬಂಧಿಸಿದ ವ್ಯಾಪಾರ ವರ್ಗವು ಹಣದ ಕೊರತೆಯನ್ನು ಎದುರಿಸಬೇಕಾಗಬಹುದು.
ಶುಕ್ರ ದೋಷಕ್ಕೆ ಪರಿಹಾರ
- ಪ್ರತಿದಿನ ಶುಕ್ರ ಬೀಜ ಮಂತ್ರ ಪಠಿಸಿ
- ಶುಕ್ರವಾರ ಚಿಕ್ಕ ಹುಡುಗಿಯರಿಗೆ ಕನ್ಯಾ ಪೂಜೆ ಮಾಡಿ ಅವರಿಗೆ ಬಿಳಿ ಸಿಹಿಯನ್ನು ವಿತರಿಸಿ.
- ಪ್ರತಿದಿನ ಕನಕಧಾರಾ ಸ್ತೋತ್ರವನ್ನು ಪಠಿಸಿ.
- ಪ್ರತಿ ಶುಕ್ರವಾರ ಲಕ್ಷ್ಮಿ ದೇವಿಗೆ 5 ಕೆಂಪು ಬಣ್ಣದ ಹೂವುಗಳನ್ನು ಅರ್ಪಿಸಿ.
- ಪ್ರತಿ ಶುಕ್ರವಾರ ಶುಕ್ರನ ಬೀಜ ಮಂತ್ರವನ್ನು ಪಠಿಸಿ.
- ಸಾಧ್ಯವಾದರೆ, ಸಾಧ್ಯವಾದಷ್ಟು ಬಿಳಿ ಮತ್ತು ಗುಲಾಬಿ ಬಣ್ಣದ ಬಟ್ಟೆಗಳನ್ನು ಧರಿಸಿ.
- ಶುಕ್ರವಾರ ಉಪವಾಸವಿದ್ದರೆ ಒಳ್ಳೆಯದು
- ಮನೆ ಮತ್ತು ಕೆಲಸದ ಸ್ಥಳದಲ್ಲಿ ಶುಕ್ರ ಯಂತ್ರವನ್ನು ಸ್ಥಾಪಿಸಿ ಮತ್ತು ಅದನ್ನು ನಿಯಮಿತವಾಗಿ ಪೂಜಿಸಿ.
- ಪ್ರತಿದಿನ ಹನುಮಾನ್ ಚಾಲೀಸಾ ಪಠಿಸಿ.
- ಬಡ ಮಕ್ಕಳಿಗೆ ಬೇಸನ್ ಲಡ್ಡೂ ಮತ್ತು ಸಿಹಿ ತಿನ್ನಿಸಿ.



Click it and Unblock the Notifications











