Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಶುಕ್ರ-ಮಂಗಳ ಯುತಿ 2023: ಈ 4 ರಾಶಿಯವರ ಅದೃಷ್ಟ ಖುಲಾಯಿಸಲಿದೆ
ವೈದಿಕ ಜ್ಯೋತಿಷ್ಯದ ಪ್ರಕಾರ ಒಂದು ಗ್ರಹವು ತನ್ನ ರಾಶಿಯನ್ನು ಬದಲಾಯಿಸುವಾಗ ಅದರ ಪರಿಣಾಮವು ಎಲ್ಲಾ ರಾಶಿಗಳ ಮೇಲೆ ಸ್ಪಷ್ಟವಾಗಿ ಗೋಚರವಾಗಲಿದೆ. ಇದರ ಪರಿಣಾಮ ಕೆಲವೊಂದು ರಾಶಿಗಳಿಗೆ ಶುಭವಾದರೆ ಮತ್ತೂ ಕೆಲವು ರಾಶಿಗಳಿಗೆ ಅಶುಭವಾಗಲಿದೆ. ಈ ತಿಂಗಳ ಕೊನೆಯ ಸಂಚಾರವು ಮೇ 30 ರ ರಾತ್ರಿ ಸಂಭವಿಸಲಿದೆ. ಈ ದಿನ ಶುಕ್ರನು ಕರ್ಕಾಟಕ ರಾಶಿಯಲ್ಲಿ ಸಾಗಲಿದ್ದಾನೆ. ರಾತ್ರಿ 7.39ಕ್ಕೆ ಚಂದ್ರ ಕರ್ಕಾಟಕ ರಾಶಿಯಲ್ಲಿ ಈ ಸಂಕ್ರಮಣ ನಡೆಯಲಿದೆ.
ಶುಕ್ರನು ಮೇ 30 ರಂದು ಈ ರಾಶಿಗೆ ಆಗಮಿಸಲಿದ್ದು ಜುಲೈ 7 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ. ಈ ಸಮಯದಲ್ಲಿ ಮಂಗಳ ಮತ್ತು ಶುಕ್ರನ ಸಂಯೋಜನೆಯಿಂದ ಅನೇಕ ರಾಶಿಯವರಿಗೆ ಇದರಿಂದ ಶುಭವಾಗಲಿದೆ. ಅಷ್ಟಕ್ಕೂ ಈ ಸಮಯವು ಯಾವ ರಾಶಿಯವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಅನ್ನೋದನ್ನು ತಿಳಿದುಕೊಳ್ಳೋಣ.

ಮೇಷ ರಾಶಿ
ಶುಕ್ರ ಮತ್ತು ಮಂಗಳನ ಸಂಯೋಜನೆಯಿಂದ ಮೇಷ ರಾಶಿಯವರಿಗೆ ಈ ಸಮಯದಲ್ಲಿ ಎಲ್ಲವೂ ಒಳ್ಳೆಯದಾಗಲಿದೆ. ಮೇಷ ರಾಶಿಯವರು ಕುಟುಂಬದ ಸೌಲಭ್ಯಗಳ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕು. ಇಷ್ಟು ಮಾತ್ರವಲ್ಲದೆ ಮನೆಯವರಿಗಾಗಿ ಕೆಲವೊಂದು ವಸ್ತುಗಳನ್ನು ಖರೀದಿಸಬೇಕಾಗುತ್ತದೆ. ಇನ್ನೂ ಅವಿವಾಹಿತರಿಗೆ ಮದುವೆಯಾಗೋ ಭಾಗ್ಯವಿದೆ. ಇಷ್ಟು ದಿನ ನಿಮಗೆ ಸಿಗದಿರೋ ಹಣವನ್ನು ನೀವು ಮರಳಿ ಪಡೆಯಬಹುದು. ಈ ಸಮಯದಲ್ಲಿ ನೀವು ಯಾವುದೇ ರೀತಿಯ ಒತ್ತಡವನ್ನು ಹೊಂದಿರುವುದಿಲ್ಲ. ಆರ್ಥಿಕ ಲಾಭದ ಎಲ್ಲಾ ಸಾಧ್ಯತೆಗಳೂ ಇವೆ.
ಮಿಥುನ ರಾಶಿ
ಶುಕ್ರ ಹಾಗೂ ಮಂಗಳನ ಯುತಿಯಿಂದಾಗಿ ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗುತ್ತದೆ. ಒರ್ವ ವ್ಯಕ್ತಿಯ ಕೌಟುಂಬಿಕ ಸಂತೋಷದಲ್ಲಿ ಹೆಚ್ಚಳವಾಗುತ್ತದೆ. ವೃತ್ತಿಯಲ್ಲಿ ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನೀವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ ಈ ಸಮಯದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಆದಾಯದ ಹೆಚ್ಚಳವು ನಿಮ್ಮ ಜೀವನಶೈಲಿಯನ್ನು ಸುಧಾರಿಸುತ್ತದೆ.
ಕರ್ಕಾಟಕ ರಾಶಿ
ಶುಕ್ರ ಮತ್ತು ಮಂಗಳನ ಸಂಯೋಗವು ಕರ್ಕಾಟಕ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಜೀವನದಲ್ಲಿ ಅನೇಕ ಶುಭ ಘಟನೆಗಳು ನಡೆಯಲಿದೆ. ಅಷ್ಟೇ ಅಲ್ಲ ನೀವು ಪ್ರೀತಿಸಿದವರೊಂದಿಗೆ ನಿಮ್ಮ ಬಾಂಧವ್ಯ ಉತ್ತಮವಾಗುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಂಬಂಧವಿರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಿಮ್ಮ ಸಂಬಂಧವು ಬಲವಾಗಿರುತ್ತದೆ. ಭವಿಷ್ಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ.
ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಶುಕ್ರ ಮತ್ತು ಮಂಗಳ ಸಂಯೋಜನೆಯು ವಿಶೇಷವಾಗಿ ಮಂಗಳಕರ ಮತ್ತು ಫಲದಾಯಕವಾಗಿರುತ್ತದೆ. ಈ ರಾಶಿಯವರು ಆರ್ಥಿಕ ಪ್ರಗತಿ ಸಾಧಿಸುತ್ತಾರೆ. ಅವಿವಾಹಿತರ ಹುಡುಗಿ/ಹುಡುಗ ಹುಡುಕಾಟ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಅಷ್ಟೇ ಅಲ್ಲ ಕಷ್ಟ ಕಾಲದಲ್ಲಿ ಸಹೋದರ ಸಹೋದರಿಯರ ಸಹಕಾರ ದೊರೆಯಲಿದೆ.



Click it and Unblock the Notifications
