Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಕೇರಳ ತಲುಪಿದ ಮಾನ್ಸೂನ್..! ಜೂನ್ 6ಕ್ಕೆ ರಾಜ್ಯಕ್ಕೆ ಎಂಟ್ರಿ ಸಾಧ್ಯತೆ..!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭಗೊಂಡು ಬಹುಪಾಲು ಕಡೆಗಳಲ್ಲಿ ಮಳೆಯಾಗಿದೆ. ಮುಂದಿನ ದಿನದಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆಯಂತು ಸಿಕ್ಕಿದೆ. ಸದ್ಯ ಮಾನ್ಸೂನ್ ಮಾರುತಗಳು ಭಾರತಕ್ಕೆ ಪ್ರವೇಶ ಪಡೆದಿದ್ದು, ಈ ಬಾರಿ ಸಕಾಲದಲ್ಲಿ ಮಳೆಗಾಲ ಆರಂಭವಾಗುವ ಸೂಚನೆ ಸಿಕ್ಕಿದೆ.
ಈಗಾಗಲೇ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ತಲುಪಿ ಭಾರೀ ಮಳೆಗೆ ಕಾರಣವಾಗಿದೆ. ಕೇರಳದ ಕರಾವಳಿ ಹಾಗೂ ಒಳನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಕೇರಳದ ಬಳಿಕ ಕರ್ನಾಟಕಕ್ಕೆ ಮಾನ್ಸೂನ್ ಮಾರುತಗಳು ಎಂಟ್ರಿ ಕೊಡಲಿವೆ. ಈ ಬಾರಿ ಈ ಮಾರುತಗಳು ಜೂನ್ 6 ಅಥವಾ 7ರಂದು ರಾಜ್ಯ ಪ್ರವೇಶಿಸಲಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಏಳು ದಿನಗಳ ಕಾಲ ಗುಡುಗು ಸಹಿತ ಪೂರ್ವ ಮುಂಗಾರು ಮಳೆಯಾಗಲಿದ್ದು, ಹಾಸನ, ಕೊಡಗು, ಮೈಸೂರು, ಉಡುಪಿ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಇದರ ಜೊತೆಗೆ ರಾಜ್ಯದಲ್ಲಿ ಕ್ರಮೇಣ ತಾಪಮಾನ ಇಳಿಕೆಯಾಗುವುದನ್ನು ಗಮನಿಸಬಹುದಿದೆ.
ಸಾಮಾನ್ಯವಾಗಿ ಮುಂಗಾರು ಮಳೆ ಜೂನ್ ಮೊದಲ ವಾರ ದೇಶ ಪ್ರವೇಶಿಸಿ ನಂತರ ಒಂದರಿಂದ ಎರಡು ವಾರದಲ್ಲಿ ಇಡಿ ದೇಶವನ್ನು ಆವರಿಸುತ್ತದೆ. ಆದರೆ ಈ ಭಾರಿ ಮೇ ತಿಂಗಳ ಕೊನೆಯಲ್ಲಿ ಭಾರತ ಪ್ರವೇಶಿಸುತ್ತಿರುವ ಬಗ್ಗೆ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇತ್ತ ಮುಂದಿನ 7 ದಿನಗಳಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲೀನ್ಸ್ ಮತ್ತು ಕೊಮೊರಿನ್ ಪ್ರದೇಶದ ಉಳಿದ ಭಾಗಗಳಿಗೆ ಮಾರುತಗಳು ಮತ್ತಷ್ಟು ಹೆಚ್ಚಾಗುತ್ತಿವೆ.
ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ
ಈ ಬಾರಿ ವಾಡಿಕೆಗಿಂತ ಹೆಚ್ಚು ಮಾನ್ಸೂನ್ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕರಾವಳಿ ಮತ್ತು ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅತಿ ಹೆಚ್ಚು ಮಂಗಳೂರಿನ ಪಣಂಬೂ ರಿನಲ್ಲಿ 366 ಎಂ.ಎಂ ಮಳೆ ಬಿದ್ದಿದೆ. ಅದೇ ರೀತಿ ಮಾನ್ಸೂನ್ ಸಹ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ತಜ್ಞರ ತಂಡ ತಿಳಿಸಿದೆ.
ಜೂನ್ ನಿಂದ ಸೆಪ್ಟಂಬರ್ ವರೆಗಿನ ಮುಂಗಾರು ಋತುವಿನಲ್ಲಿ ಬರುವ ಮಳೆಯು ದೇಶದ ಆರ್ಥಿಕತೆಯನ್ನು ನಿರ್ಧರಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಚಂಡಮಾರುತದಿಂದಾಗಿ ಮುಂಗಾರು ಬೇಗ ಪ್ರವೇಶಿಸುತ್ತಿದ್ದು, ಪೂರ್ವ ಮುಂಗಾರು ಸಹ ಉತ್ತಮ ಮಳೆ ದಾಖಲಿಸಿದೆ. ಜೊತೆಗೆ ಆಗಸ್ಟ್ ಹಾಗೂ ಸೆಪ್ಟೆಂಬರ್ ವೇಳೆ ಮಾನ್ಸೂನ್ ಅತ್ಯಧಿಕ ಮಟ್ಟ ತಲುಪಲಿದೆ ಎಂದು ತಿಳಿದುಬಂದಿದೆ.
ದೇಶದ ದಕ್ಷಿಣದ ರಾಜ್ಯಗಳ ಮೂಲಕ ಉತ್ತರದತ್ತ ಮುಂಗಾರು ಮಳೆಯ ಮಾರುತುಗಳ ಸಾಗಲಿವೆ. ಇದರಿಂದ ಶಾಖದ ಅಲೆಗೆ ಸಿಲುಕಿರುವ ಅಸ್ಸಾಂ, ದೆಹಲಿ, ಬಿಹಾರದಂತಹ ಕೆಲವು ರಾಜ್ಯಗಳಿಗೆ ಜೂನ್ ಮೊದಲ ವಾರದ ಮುಕ್ತಿ ಸಿಗುವ ಸಾಧ್ಯತೆ ಇದೆ. ಇತ್ತ ರಾಜ್ಯದ ಬಹುಪಾಲು ಎಲ್ಲಾ ಪ್ರದೇಶದಲ್ಲೂ ಅತ್ಯುತ್ತಮ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಮಲೆನಾಡಿನ ಒಂದಷ್ಟು ಭಾಗಗಳು ಹಾಗೂ ಕರಾವಳಿ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಾಡಿಕೆಯಷ್ಟು ಅಗತ್ಯ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.



Click it and Unblock the Notifications
