Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
Raj Bhang Yoga : ರಾಜಭಂಗ್ ಯೋಗ : 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ!
ಶುಕ್ರನು ಆಗಸ್ಟ್ 7 ರಂದು ಕರ್ಕಾಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಸೂರ್ಯನು ಈಗಾಗಲೇ ಕರ್ಕಾಟಕ ರಾಶಿಯಲ್ಲಿದ್ದಾನೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕರ್ಕಾಟಕ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರನ ಉಪಸ್ಥಿತಿಯಿಂದಾಗಿ ರಾಜಭಂಗ್ ಯೋಗ ಸೃಷ್ಟಿಯಾಗುತ್ತದೆ. ಸೂರ್ಯ ಮತ್ತು ಶುಕ್ರ ಇಬ್ಬರೂ ಪರಸ್ಪರ ಶತ್ರುಗಳೆಂದು ಪರಿಗಣಿಸಲಾಗಿದೆ. ರಾಜಭಂಗ್ ಯೋಗವು ರೂಪುಗೊಳ್ಳೋದ್ರಿಂದ ಇದು ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರಲಿದೆ.
ಅದ್ರಲ್ಲೂ ಕೆಲವು ರಾಶಿಯವರು ರಾಜಭಂಗ್ ಯೋಗದಿಂದ ನಾನಾ ರೀತಿಯ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಇನ್ನೂ ಕೆಲವರಿಗೆ ಶುಭವಾಗಲಿದೆ. ಅಷ್ಟಕ್ಕು ಆ 4 ರಾಶಿಯವರ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಅನ್ನೋದನ್ನು ತಿಳಿಯೋಣ.

ಮೇಷ ರಾಶಿ
ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ರೂಪುಗೊಂಡ ರಾಜಭಂಗ್ ಯೋಗವು ಮೇಷ ರಾಶಿಯವರಿಗೆ ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ ನೀವು ನಿಮ್ಮ ಹೆತ್ತವರೊಂದಿಗೆ ತೀರ್ಥಯಾತ್ರೆಗೆ ಹೋಗಲು ಯೋಜಿಸುತ್ತೀರಿ. ಹಳೆಯ ಹೂಡಿಕೆಯು ಉತ್ತಮ ಲಾಭವನ್ನು ನೀಡುತ್ತದೆ. ಮತ್ತು ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗುತ್ತದೆ. ಉದ್ಯೋಗಸ್ಥರಿಗೆ ವೃತ್ತಿ ಪ್ರಗತಿಗೆ ಉತ್ತಮ ಅವಕಾಶಗಳು ಸಿಗುತ್ತವೆ. ಸಂಬಂಧಗಳು ಸಹ ಉತ್ತಮವಾಗಿರುತ್ತವೆ.
ಹಳೆಯ ರೋಗಗಳಿಂದ ಮುಕ್ತಿ ಹೊಂದಿ ಆರೋಗ್ಯ ಪ್ರಾಪ್ತಿಯಾಗುತ್ತದೆ. ನೀವು ವಾಹನ ಅಥವಾ ಭೂಮಿಯನ್ನು ಖರೀದಿಸಲು ಬಯಸಿದರೆ ಈ ಅವಧಿಯು ನಿಮಗೆ ಅನುಕೂಲಕರವಾಗಿರುತ್ತದೆ. ಪ್ರಯೋಜನಗಳನ್ನು ಪಡೆಯುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಸೂರ್ಯ ಮತ್ತು ಶುಕ್ರನ ಸಂಯೋಗದಿಂದ ರೂಪುಗೊಂಡ ರಾಜಭಂಗ್ ಯೋಗವು ಮಂಗಳಕರ ಮತ್ತು ಫಲದಾಯಕವಾಗಿರುತ್ತದೆ. ಈ ಸಮಯದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಇದರಿಂದಾಗಿ ನಿಮ್ಮ ಖ್ಯಾತಿಯೂ ಹೆಚ್ಚಾಗುತ್ತದೆ. ಹಿರಿಯ ವ್ಯಕ್ತಿಯ ಸಹಾಯದಿಂದ ನೀವು ಕಳೆದುಕೊಂಡಿರುವ ಹಣವನ್ನು ಮರಳಿ ಪಡೆಯುತ್ತೀರಿ.
ರಾಜಭಾಂಗ್ ಯೋಗದ ಪ್ರಭಾವದಿಂದಾಗಿ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಂದ ನಿಮಗೆ ಮುಕ್ತಿ ಸಿಗುತ್ತದೆ. ಉದ್ಯೋಗಸ್ಥರು ಅಧಿಕಾರಿಗಳ ಬೆಂಬಲವನ್ನು ಪಡೆಯುತ್ತಾರೆ. ಹೊಸ ಉದ್ಯೋಗ ಸಿಗುವ ಸಾಧ್ಯತೆಗಳು ಕೂಡ ಇದೆ. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. ವಿದೇಶಕ್ಕೆ ಹೋಗಲು ಬಯಸುವ ಇದು ಒಳ್ಳೆಯ ಸಮಯ.
ತುಲಾ ರಾಶಿ
ತುಲಾ ರಾಶಿಯವರು ರಾಜಭಂಗ್ ಯೋಗದಿಂದ ಉತ್ತಮ ಪ್ರಯೋಜನಗಳನ್ನು ಪಡೆಯುತ್ತಾರೆ. ಈ ಸಮಯದಲ್ಲಿ ಆರ್ಥಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮತ್ತು ನೀವು ವಿತ್ತೀಯ ಲಾಭವನ್ನು ಕಾಣಬಹುದು. ಹೊಸ ಜನರೊಂದಿಗೆ ಕೆಲಸ ಮಾಡುವ ಅವಕಾಶ ಸಿಗಲಿದೆ. ನೀವು ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿದ್ದರೆ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಸರ್ಕಾರಿ ವಲಯದಲ್ಲೂ ಹೆಚ್ಚಿನ ಲಾಭ ಪಡೆಯುವ ಸಾಧ್ಯತೆಗಳಿವೆ.
ವ್ಯಾಪಾರ ಮಾಡುವವರಿಗೆ ಈ ಅವಧಿಯು ಅನುಕೂಲಕರವಾಗಿರುತ್ತದೆ. ಮತ್ತು ನಿಮ್ಮ ವ್ಯಾಪಾರದ ವಿಸ್ತರಣೆ ಸಾಧ್ಯವಾಗುತ್ತದೆ. ಈ ಅವಧಿಯಲ್ಲಿ ಒಂಟಿಯಾಗಿರುವವರು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ತುಲಾ ರಾಶಿಯವರ ವ್ಯಾಪಾರ ಉತ್ತಮವಾಗಿ ನಡೆಯುತ್ತದೆ. ಮತ್ತು ಪರಿಸ್ಥಿತಿ ಸುಧಾರಿಸುತ್ತದೆ.
ಧನು ರಾಶಿ
ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ರೂಪುಗೊಂಡ ರಾಜಭಂಗ್ ಯೋಗವು ಧನು ರಾಶಿಯವರಿಗೆ ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ ನಿಮ್ಮ ಸಂಬಳದಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ. ನಿಮ್ಮ ವಿಶ್ವಾಸಾರ್ಹತೆ ಹೆಚ್ಚಾಗುತ್ತದೆ. ಮತ್ತು ತಂಡವನ್ನು ಮುನ್ನಡೆಸಲು ನಿಮಗೆ ಅವಕಾಶ ಸಿಗುತ್ತದೆ. ನಿಮ್ಮ ಕೆಲಸದಿಂದ ಇತರರ ಮೆಚ್ಚುಗೆಗೆ ಪಾತ್ರರಾಗುತ್ತಿರಿ. ಈ ಸಮಯದಲ್ಲಿ ನೀವು ಕೆಲವು ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡಬಹುದು.
ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಹೊಂದಿರುತ್ತಾರೆ. ಮತ್ತು ಪೋಷಕರೊಂದಿಗೆ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. ನಿಮ್ಮ ಪ್ರೀತಿಯ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲವಾಗುತ್ತದೆ. ಮತ್ತು ನಿಮ್ಮ ಕುಟುಂಬದ ಸದಸ್ಯರನ್ನು ಸಹ ನೀವು ಭೇಟಿ ಮಾಡಬಹುದು.



Click it and Unblock the Notifications