Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಶ್ರೀರಾಮನ ಸ್ಮರ್ಶಿಸಿದ ಸೂರ್ಯ ರಶ್ಮಿ..! 'ಸೂರ್ಯ ತಿಲಕ'ದ ಪ್ರಯೋಗ ಯಶಸ್ವಿ
ನಾಳೆ ದೇಶದಾದ್ಯಂತ ವಿಜೃಂಭಣೆಯ ರಾಮ ನವಮಿ ಆಚರಿಸಲಾಗುತ್ತಿದೆ. ಆದರೆ ಈ ಬಾರಿ ಅಯೋಧ್ಯೆಯಲ್ಲಿ ರಾಮ ನವಮಿ ಆಚರಣೆ ವಿಶೇಷವಾಗಿರಲಿದೆ. ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ ಬಾರಿಗೆ ರಾಮ ನವಮಿ ಆಚರಿಸಲಾಗುತ್ತಿದ್ದು, ಟ್ರಸ್ಟ್ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ನಡುವೆ ಸೂರ್ಯರಶ್ಮಿ ಪ್ರಯೋಗ ಕೂಡ ಯಶಸ್ವಿಯಾಗಿದ್ದು ರಾಮನವಮಿಯಂದು ಸೂರ್ಯ ರಶ್ಮಿ ಶ್ರೀರಾಮನ ಮೂರ್ತಿ ಸ್ಪರ್ಶ ಮಾಡಲಿದೆ. ಗರ್ಭಗುಡಿಯಲ್ಲಿರುವ ರಾಮನ ಮೂರ್ತಿಗೆ 'ಸೂರ್ಯತಿಲಕ' ಇಟ್ಟಿರುವ ವಿಡಿಯೋಗಳು ವೈರಲ್ ಆಗುತ್ತಿವೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ಏಪ್ರಿಲ್ 17ರಂದು ರಾಮನವಮಿಯನ್ನು ಆಚರಿಸಲಾಗುತ್ತಿದೆ. ಈ ದಿನ ಬಾಲರಾಮನ ಮೂರ್ತಿಯ ಮೇಲೆ ಸೂರ್ಯರಶ್ಮಿಯ ಕಿರಣ ಬೀಳಲಿದೆ. ಇದರ ಪ್ರಯೋಗ ಈಗಾಗಲೇ ರೂರ್ಕಿಯ ಕೇಂದ್ರೀಯ ಕಟ್ಟಡ ಸಂಶೋಧನಾ ಸಂಸ್ಥೆಯ ತಜ್ಞರ ಸಮ್ಮುಖದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ತಜ್ಞರು ಈ ತಂತ್ರಜ್ಞಾನ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಏಪ್ರಿಲ್ 17ರ ರಾಮನವಮಿಯಂದು ಸಹ ಬಾಲರಾಮನ ಮೂರ್ತಿಯ ಮೇಲೆ ಮೂರು ಕನ್ನಡಿಗಳ ಸಹಾಯದಿಂದ ಎರಡೂವರೆ ನಿಮಿಷಗಳ ಕಾಲ ಸೂರ್ಯರಶ್ಮಿ ಬೀಳಲಿದೆ. ಅದನ್ನು ದೂರದರ್ಶನ ನೇರ ಪ್ರಸಾರ ಮಾಡಲಿದ್ದು, ಜಗತ್ತಿನಾದ್ಯಂತ ಜನರು ಈ ತಂತ್ರಜ್ಞಾನ ಕೌತುಕವನ್ನು ಕಣ್ತುಂಬಿಕೊಳ್ಳಬಹುದಾಗಿದೆ ಎಂದು ಟ್ರಸ್ಟ್ ಪ್ರಕಟಿಸಿದೆ.
ಅಯೋಧ್ಯೆಯಲ್ಲಿ ಮೊದಲ ಬಾರಿಗೆ ರಾಮನವಮಿ ಆಚರಿಸಲಾಗುತ್ತಿದೆ. ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಏಪ್ರಿಲ್ 17ರಂದು ನೈವೇದ್ಯ ಹಾಗೂ ಪ್ರಸಾದವಾಗಿ ವಿತರಿಸಲು 1,11,111 ಕೆಜಿ ತೂಕದ ಲಾಡುಗಳನ್ನು ಅಯೋಧ್ಯೆಗೆ ಕಳುಹಿಸಲಾಗಿದೆ.
ಏನಿದು 'ಸೂರ್ಯ ತಿಲಕ'?
ಎಸ್ ಕೆ ಪಾಣಿಗ್ರಾಹಿ ನೇತೃತ್ವದ ವಿಜ್ಞಾನಿಗಳ ತಂಡವು 'ಸೂರ್ಯ ತಿಲಕ'ವನ್ನು ವಿನ್ಯಾಸಗೊಳಿಸಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಖಗೋಳ ಅವಲೋಕನಗಳ ಆಧಾರದ ಮೇಲೆ ಈ ವಿನ್ಯಾಸ ಮಾಡಲಾಗಿದೆ. ಅಯೋಧ್ಯೆಯ ರಾಮಮಂದಿರದ ಅರ್ಚಕರು ವಿಜ್ಞಾನಿಗಳ ಸಮ್ಮುಖದಲ್ಲಿ 'ಸೂರ್ಯ ತಿಲಕ' ಪ್ರಯೋಗವನ್ನು ನಿನ್ನೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.
ಏಪ್ರಿಲ್ 17 ರಂದು ಆಚರಿಸಲಾಗುವ ರಾಮನವಮಿ ಹಬ್ಬದ ಮೊದಲು ಸೂರ್ಯನ ಕಿರಣಗಳು ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಲಿವೆ. ಸುಮಾರು 6 ನಿಮಿಷಗಳ ಕಾಲ ಸೂರ್ಯನ ಕಿರಣ ರಾಮ ಲಲ್ಲಾನ ಮೂರ್ತಿ ಮೇಲೆ ಬೀಳಲಿದೆ. ಈ ವೇಳೆ ವಿಶೇಷ ಪೂಜೆ ನೆರವೇರಲಿದೆ.
ಇದು ಹೇಗೆ ಸಾಧ್ಯ..?
ಈ ರೀತಿ ಸೂರ್ಯ ರಶ್ಮಿ ವಿಗ್ರಹವನ್ನು ಸ್ಪರ್ಶಿಸುವುದು ನೈಸರ್ಗಿಕ ಪ್ರಕ್ರಿಯೆಯಾಗಿಲ್ಲ. ಬದಲಾಗಿ ದೇವಲಯದ ಮೂರನೇ ಮಹಡಿಯಲ್ಲಿ ಆಪ್ಟಿಕಲ್ ಲೆನ್ಸ್ ಅನ್ನು ಇರಿಸಲಾಗಿದೆ. ಇದು ಪೈಪ್‌ಗಳಲ್ಲಿ ಇರಿಸಲಾದ ರಿಫ್ಲೆಕ್ಟರ್‌ಗಳ ಸರಣಿಯ ಮೂಲಕ ಕಿರಣವನ್ನು ನೆಲಮಹಡಿಗೆ ರವಾನಿಸುತ್ತದೆ. ಸೂರ್ಯನ ಬೆಳಕು ನೇರವಾಗಿ ರಾಮನ ಹಣೆ ಮೇಲೆ ಬೀಳುವಂತೆ ಈ ವಿನ್ಯಾಸ ಮಾಡಲಾಗಿದೆ. ಇದು ಯಾವ ದಿನದಲ್ಲಿ ಬೇಕಾದರು ಬೀಳುವಂತೆ ಮಾಡಬಹುದು.
ರಾಮ ನವಮಿ ಶುಭ ಮುಹೂರ್ತ ಏನು?
ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯು ಏಪ್ರಿಲ್ 16 ರಂದು ಮಧ್ಯಾಹ್ನ 01:23 ಕ್ಕೆ ಪ್ರಾರಂಭವಾಗುತ್ತದೆ. ಈ ದಿನಾಂಕವು ಏಪ್ರಿಲ್ 17 ರಂದು ಮಧ್ಯಾಹ್ನ 03:14 ಕ್ಕೆ ಕೊನೆಗೊಳ್ಳಲಿದೆ. ಉದಯ ತಿಥಿಯ ಪ್ರಕಾರ, ಏಪ್ರಿಲ್ 17 ರ ಬುಧವಾರದಂದು ರಾಮ ನವಮಿಯ ಹಬ್ಬವನ್ನು ಆಚರಿಸಲಾಗುತ್ತದೆ. ರಾಮ ನವಮಿಯ ಶುಭ ಮುಹೂರ್ತ - ಬೆಳಗ್ಗೆ 11:03 ರಿಂದ ಮಧ್ಯಾಹ್ನ 1:38ರ ವರೆಗೆ.



Click it and Unblock the Notifications
