Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮೇಷರಾಶಿಯಲ್ಲಿ ಸೂರ್ಯ ಸಂಕ್ರಮಣ : ಈ 5 ರಾಶಿಯವರಿಗೆ ಸಂಕಷ್ಟ
ಸೂರ್ಯ ದೇವನು ಏಪ್ರಿಲ್ 14 ರಂದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದನ್ನು ಮೇಷ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ರಾಹು ಈಗಾಗಲೇ ಮೇಷ ರಾಶಿಯಲ್ಲಿದ್ದು ಏಪ್ರಿಲ್ 14 ರಂದು ಮೇಷ ರಾಶಿಯಲ್ಲಿ ರಾಹು ಮತ್ತು ಸೂರ್ಯನ ಸಂಯೋಗವಾಗಲಿದೆ. ಮತ್ತೊಂದೆಡೆ ರಾಹುವು ಯಾವುದೇ ಗ್ರಹದೊಂದಿಗೆ ಸೇರಿಕೊಂಡರೂ ಅದರ ಪರಿಣಾಮ ಹೆಚ್ಚಾಗಿರುತ್ತದೆ. ಮೇಷ ರಾಶಿಯಲ್ಲಿ ಸೂರ್ಯ ಮತ್ತು ರಾಹು ಸಂಯೋಗದಿಂದ ಗ್ರಹಣ ಯೋಗವು ರೂಪುಗೊಳ್ಳಲಿದ್ದು, ಇದರ ಕೆಟ್ಟ ಪರಿಣಾಮ ಈ 5 ರಾಶಿಯವರ ಮೇಲೆ ಹೆಚ್ಚಾಗಿ ಇರಲಿದೆ. ಹಾಗಾದ್ರೆ ಆ ರಾಶಿಗಳು ಯಾವುದು ಅನ್ನೋದನ್ನ ನೋಡೋಣ :

ವೃಷಭ ರಾಶಿ
ಸೂರ್ಯನು ವೃಷಭ ರಾಶಿಯ 12ನೇ ಮನೆಯಲ್ಲಿ ಸಂಚಾರ ಮಾಡುತ್ತಾನೆ. ಹೀಗಾಗಿ ಆರ್ಥಿಕವಾಗಿ ನೀವು ಬಹಳಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಇನ್ನೂ ಉದ್ಯೋಗಕ್ಕೆ ಸಂಬಂಧಿಸಿದಂತೆ ಕೂಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಕ್ಕೆ ಸಂಬಂಧಿಸದಂತೆ ನಷ್ಟವನ್ನು ಅನುಭವಿಸಬೇಕಾಗಯತ್ತದೆ. ಈ ಸಮಯದಲ್ಲಿ ನಿಮ್ಮ ಕುಟುಂಬದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಿ.
ಕನ್ಯಾ ರಾಶಿ
ಕನ್ಯಾರಾಶಿಯ 8 ನೇ ಮನೆಯಲ್ಲಿ ಸೂರ್ಯನ ಸಂಚಾರವು ಅಮಂಗಳ ಎಂದು ಹೇಳಲಾಗುತ್ತದೆ. ನಿಮ್ಮ ಖರ್ಚುಗಳು ಇದ್ದಕ್ಕಿದ್ದ ಹಾಗೇ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ನಷ್ಟ. ಅಪಘಾತ ಉಂಟಾಗಿ ಅದಕ್ಕಾಗಿ ನೀವು ಹೆಚ್ಚಿನ ಹಣ ವ್ಯಯ ಮಾಡಬೇಕಾಗುತ್ತದೆ. ಉದ್ಯೋಗದಲ್ಲಿ ಸಂಯಮದಿಂದ ಕೆಲಸ ಮಾಡಿ ಮತ್ತು ನೀವು ವ್ಯಾಪಾರಸ್ಥರಾಗಿದ್ದರೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಆರೋಗ್ಯವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ.
ತುಲಾ ರಾಶಿ
ಸೂರ್ಯನು ತುಲಾ ರಾಶಿಯ 7 ನೇ ಮನೆಯಲ್ಲಿ ಸಾಗಲಿದ್ದಾನೆ. ಸೂರ್ಯನ ಈ ಸಂಚಾರವು ತುಲಾರಾಶಿಯವರಿಗೆ ಮಿಶ್ರ ಫಲಗಳನ್ನು ನೀಡಲಿದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ಏರಿಳಿತಗಳು ಕಂಡುಬರುತ್ತವೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಕೊಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ. ನಿಮ್ಮ ಸ್ವಂತ ವ್ಯವಹಾರವಿದ್ದರೆ ಎಚ್ಚರಿಕೆಯಿಂದ ಕೆಲಸ ಮಾಡಿ. ಅನಪೇಕ್ಷಿತ ಪ್ರಯಾಣವು ನಿಮಗೆ ಹಾನಿ ಉಂಟು ಮಾಡುವ ಸಾಧ್ಯತೆಗಳಿದೆ.
ಮಕರ ರಾಶಿ
ಮಕರ ರಾಶಿಯ ನಾಲ್ಕನೇ ಮನೆಯಲ್ಲಿ ಸೂರ್ಯನ ಸಂಚಾರವಾಗಲಿದೆ. ಈ ಸಮಯದಲ್ಲಿ ನೀವು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಸವಾಲುಗಳನ್ನು ಎದುರಿಸುವ ಸಾಧ್ಯತೆಗಳಿದೆ. ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು. ಆದ್ದರಿಂದ ನೀವು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಮುಂದುವರಿದರೆ ತುಂಬಾನೇ ಒಳ್ಳೆಯದು. ಸಂಬಂಧಗಳ ಕಡೆಗೂ ಗಮನ ಕೊಡೋದು ಮುಖ್ಯವಾಗುತ್ತದೆ. ಇನ್ನೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಮೀನ ರಾಶಿ
ಮೀನ ರಾಶಿಯವರ ರಾಶಿಚಕ್ರದ ಎರಡನೇ ಮನೆಯಲ್ಲಿ ಸೂರ್ಯನ ಸಂಚಾರವು ನಿಮಗೆ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು. ವೃತ್ತಿ ಮತ್ತು ಉದ್ಯೋಗದಲ್ಲಿ ನೀವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರದಲ್ಲಿ ಲಾಭ ಆಗುತ್ತೆ ಅಂತ ಹೇಳೋದಿಕ್ಕಾಗೋದಿಲ್ಲ. ಈ ವಿಚಾರದಲ್ಲಿ ನಿಮ್ಮ ಆತಂಕ ಹೆಚ್ಚಾಗುತ್ತದೆ. ಇನ್ನೂ ಹಣಕಾಸಿನ ನಷ್ಟವನ್ನು ತಪ್ಪಿಸಿ. ಈ ಸಮಯದಲ್ಲಿ ನಿಮ್ಮ ಖರ್ಚುಗಳು ಹೆಚ್ಚಾಗಬಹುದು. ಸಂಬಂಧಿಕರ ಜೊತೆಗೆ ಮನಸ್ಥಾಪ ಕಿರಿ ಕಿರಿ ಉಂಟಾಗುತ್ತದೆ.



Click it and Unblock the Notifications


