Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೂರ್ಯ-ಬುಧ ಯುತಿ: ಜೂನ್-ಜುಲೈನಲ್ಲಿ ಈ ರಾಶಿಯವರಿಗೆ ಗಜಕೇಸರಿ ಯೋಗ!
ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಜೂನ್ 7 ರಂದು ವೃಷಭ ರಾಶಿಗೆ ಪ್ರವೇಶಿಸಿದೆ. ಸೂರ್ಯನು ಈಗಾಗಲೇ ಬುಧ ರಾಶಿಯಲ್ಲಿ ಜೂನ್ 15ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಲಿದೆ. ಇದರಿಂದ ಬುಧ-ಸೂರ್ಯ ಯುತಿ ಸಂಭವಿಸಿದೆ. ರಾಶಿಯಲ್ಲಿ ಬುಧ ಮತ್ತು ಸೂರ್ಯ ಒಟ್ಟಿಗೆ ಸೇರಿದಾಗ ವಿಶೇಷ ಫಲಿತಾಂಶಗಳನ್ನು ನೀಡಲಿದೆ. ಇದರಿಂದ ಬುಧಾದಿತ್ಯ ಯೋಗವು ರೂಪುಗೊಳ್ಳುವುದು. ಇದರಿಂದಾಗಿ ಯಾವ ರಾಶಿಯವರಿಗೆ ಆ ಯೋಗವಿದೆಯೋ ಅವರಿಗೆ , ಸಂಪತ್ತು, ಸಂತೋಷ, ಗೌರವ ಹೆಚ್ಚಾಗಲಿದೆ.
ಅಲ್ಲದೆ ಜೂನ್ 24ರ ನಂತರ ಈ ಯೋಗ ಮತ್ತೊಮ್ಮೆ ಏರ್ಪಡಲಿದೆ.

ಇದರಿಂದ ಗಜಕೇಸರಿ ಯೋಗ ರೂಪುಗೊಂಡಿದ್ದು ಈ ಯೋಗವನ್ನು ಅತ್ಯಂತ ಮಂಗಳಕರ ಮತ್ತು ಪರಿಪೂರ್ಣ ಎಂದು ವಿವರಿಸಲಾಗಿದೆ ಏಕೆಂದರೆ ಗುರು ಮತ್ತು ಚಂದ್ರನ ವಿಶೇಷ ಸ್ಥಾನವು ರೂಪುಗೊಂಡಾಗ ಈ ಯೋಗವು ರೂಪುಗೊಳ್ಳುತ್ತದೆ. ಗುರು ಮತ್ತು ಚಂದ್ರರು ಯಾವುದಾದರೂ ರಾಶಿಯಲ್ಲಿ ಒಟ್ಟಿಗೆ ಕುಳಿತಾಗ ಅಥವಾ ಗುರು ಇರುವ ರಾಶಿಯಿಂದ ನಾಲ್ಕನೇ, ಏಳನೇ ಅಥವಾ ಹತ್ತನೇ ಮನೆಯಲ್ಲಿ ಚಂದ್ರನಿದ್ದರೆ ಗಜ ಕೇಸರಿ ಯೋಗವು ರೂಪುಗೊಳ್ಳುತ್ತದೆ. ಈ ಎರಡೂ ಯೋಗದ ಪ್ರಭಾವದಿಂದಾಗಿ ಈ ರಾಶಿಯವರ ಪಾಲಿಗೆ ಅದೃಷ್ಟ ಲಕ್ಷ್ಮಿ ಒಲಿದು ಬಂದಿದ್ದಾಳೆ.
ವೃಷಭ ರಾಶಿ
ಈ ಎರಡೂ ರಾಜಯೋಗಗಳು ತುಂಬಾನೇ ಶುಭಕರವಾಗಿದೆ. ಇದರಿಂದಾಗಿ ಕೌಟುಂಬಿಕ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಈ ಸಮಯದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಸಹ ಪಡೆಯುತ್ತೀರಿ. ಆತ್ಮಸ್ಥೈರ್ಯ ವೃದ್ಧಿ, ಬಡ್ತಿ ಜತೆಗೆ ಧನಲಾಭ ಸಿಗುವ ಸಾಧ್ಯತೆ ಇದೆ. ಮನೆಯಲ್ಲಿ ಅವಾಹಿತರಿದ್ದು ಅವರ ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಸಂಬಂಧ ಕೂಡಿ ಬರಲಿದೆ. ಕೆಲಸದ ವಿಷಯದಲ್ಲಿ ಈ ಸಮಯ ತುಂಬಾನೇ ಒಳ್ಳೆಯದಿದೆ. ನೀವು ಈ ಸಮಯದಲ್ಲಿ ಆರ್ಥಿಕ ಲಾಭ ಪಡೆಯುತ್ತೀರಿ. ಆರೋಗ್ಯದಲ್ಲಿ ಸಮಸ್ಯೆ ಇದ್ದರೆ ಈ ಅವಧಿಯಲ್ಲಿ ಸುಧಾರಣೆ ಕಂಡು ಬರುವುದು.
ಕರ್ಕ ರಾಶಿ:
ಈ ರಾಶಿಯವರಿಗೆ ಈ ಎರಡು ಯೋಗದಿಂದಾಗಿ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಸೂರ್ಯನ ಸಂಚಾರವು ಪ್ರಗತಿ, ಸಂಪತ್ತು ಮತ್ತು ವೃತ್ತಿಜೀವನದಲ್ಲಿ ಯಶಸ್ಸನ್ನು ನೀಡಲಿದೆ. ಈ ಸಮಯದಲ್ಲಿ ಸಂಬಳ ಹೆಚ್ಚಾಗಲಿದೆ ನೀವು ಹಣ ಗಳಿಸಲು ಉತ್ತಮ ಅವಕಾಶ ಪಡೆಯುತ್ತೀರಿ. ವ್ಯಾಪಾರದಲ್ಲಿ ಲಾಭ ಹೆಚ್ಚಾಗಲಿದೆ, ಹೂಡಿಕೆಯಿಂದ ಲಾಭ ಸಿಗಲಿದೆ. ಇನ್ನು ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಯಶಸ್ಸು ಪಡೆಯಬಹುದು. ವೃತ್ತಿ- ವ್ಯವಹಾರದಲ್ಲಿ ಯಶಸ್ಸನ್ನು ಪಡೆಯಬಹುದು. ವ್ಯಾಪಾರಸ್ಥರ ಆದಾಯ ಹೆಚ್ಚಾಗಲಿದೆ. ಈ ಸಮಯದಲ್ಲಿ ಧಾರ್ಮಿಕ ಪೂಜೆಗಳಲ್ಲಿ ಆಸಕ್ತಿ ಹೆಚ್ಚಾಗುವುದು. ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ:
ತುಲಾ ರಾಶಿಯವರಿಗೆ ಬುಧ ಆದಿತ್ಯ ಯೋಗ, ಗಜಕೇಸರಿ ರಾಜಯೋಗ ತುಂಬಾ ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ, ವೃತ್ತಿಪರ ಮತ್ತು ವೈಯಕ್ತಿಕ ವಿಜೀವನದಲ್ಲಿ ಯಶಸ್ಸು ಪಡೆಯುತ್ತೀರಿ. ವ್ಯಾಪಾರದಲ್ಲಿ ಉತ್ತಮ ಬೆಳವಣಿಗೆ ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧ ತುಂಬಾ ಚೆನ್ನಾಗಿರಲಿದೆ. ಕುಟುಂಬದ ವಾತಾವರಣವು ಉತ್ತಮವಾಗಿರುತ್ತದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಅಲ್ಲದೆ ಈ ಅವಧಿಯಲ್ಲಿ ಹೂಡಿಕೆ ಮಾಡಿದರೆ ಲಾಭ ಗಳಿಸುತ್ತೀತಿ. ಈ ಸಮಯದಲ್ಲಿ ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು.
ಕನ್ಯಾ ರಾಶಿ: ನಿಮ್ಮ ರಾಶಿಯಲ್ಲಿ ಸೂರ್ಯ ಮತ್ತು ಬುಧ ಇಬ್ಬರೂ ಒಂಬತ್ತನೇ ಮನೆಯಲ್ಲಿರುವುದರಿಂದ ನೀವು ಈ ಎರಡು ಯೋಗದ ಸಂಪೂರ್ಣ ಲಾಭವನ್ನು ಪಡೆಯಬಹುದು. ಕೌಟುಂಬಿಕ ಜೀವನ ಉತ್ತಮವಾಗಿರುತ್ತದೆ . ಅದೃಷ್ಟದ ಬೆಂಬಲದಿಂದಾಗಿ, ಸ್ಥಗಿತಗೊಂಡ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸದಿಂದ ಉನ್ನತ ಅಧಿಕಾರಿಗಳು ಹೆಚ್ಚು ಪ್ರಭಾವಿತರಾಗಬಹುದು. ಆರ್ಥಿಕ ಸ್ಥಿತಿಯೂ ಉತ್ತಮವಾಗಿರಲಿದೆ. ವ್ಯಾಪಾರದಲ್ಲಿ ಲಾಭ ಪಡೆಯಲು ನಿಮ್ಮ ಕಾರ್ಯತಂತ್ರದಲ್ಲಿ ಬದಲಾವಣೆಯ ಅಗತ್ಯವಿದೆ.ಹೊಸ ವ್ಯವಹಾರವನ್ನು ಪ್ರಾರಂಭಿಸಲು ಉತ್ತಮ ಅವಕಾಶಗಳಿವೆ. ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ.
ಮೀನ ರಾಶಿ: ಈ ಅವಧಿ ಮೀನ ರಾಶಿಯವರಿಗೆ ಲಾಭದಾಯಕವಾಗಲಿದೆ. ವಿದೇಶದಲ್ಲಿಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಉದ್ಯೋಗಾವಕಾಶಗಳು ಸಿಗಲಿವೆ. ಹೂಡಿಕೆಯಿಂದ ಉತ್ತಮ ಆದಾಯವಿರುತ್ತದೆ, ಲಾಭ ಗಳಿಸಲು ಉತ್ತಮ ಅವಕಾಶಗಳಿವೆ. ವೃತ್ತಿಗೆ ಸಂಬಂಧಿಸಿದಂತೆ ಯಾವುದೇ ಒಳ್ಳೆಯ ಸುದ್ದಿಯನ್ನು ಪಡೆಯುವ ಸಾಧ್ಯತೆಯಿದೆ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ. ನೀವು ಆಸ್ತಿ ಅಥವಾ ಭೂಮಿಯನ್ನು ಖರೀದಿಸಲು ಬಯಸಿದರೆ, ನಿಮ್ಮ ಆಸೆ ಈಡೇರುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯ ಅಧಿಪತಿ ಸೂರ್ಯ. ಈ ಸೂರ್ಯ ಬುಧ ಯುತಿ ನಿಮ್ಮ ರಾಶಿಯವರಿಗೂ ತುಂಬಾನೇ ಅನುಕೂಲಕರವಾಗುದೆ. ಆರ್ಥಿಕ ಲಾಭ, ಉದ್ಯೋಗ-ವ್ಯವಹಾರದಲ್ಲಿ ಪ್ರಗತಿ ಮತ್ತು ಸ್ಥಗಿತಗೊಂಡ ಹಣ ಹಿಂತಿರುಗುವ ಸಾಧ್ಯತೆಗಳಿವೆ. ವೃತ್ತಿಯಲ್ಲಿ ಬಡ್ತಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸಬಹುದು. ಮತ್ತೊಂದೆಡೆ, ನೀವು ನ್ಯಾಯಾಲಯದ ಪ್ರಕರಣಗಳಲ್ಲಿ ಯಶಸ್ಸನ್ನು ಪಡೆಯಬಹುದು. ಆದಾಯ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಬಹುದು. ರಾಜಕೀಯಕ್ಕೆ ಸಂಬಂಧಿಸಿದವರು ಒಳ್ಳೆಯ ಲಾಭ ಪಡೆಯಬಹುದು.



Click it and Unblock the Notifications
