Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸೂರ್ಯ-ಶನಿ ಸಂಚಾರ 2023 : ಈ 4 ರಾಶಿಯವರಿಗೆ ಉದ್ಯೋಗ ರೇಖೆ ಚೆನ್ನಾಗಿರಲಿದೆ!
ಸೂರ್ಯ ಮತ್ತು ಶನಿಯು ಜೂನ್ ತಿಂಗಳಿನಲ್ಲಿ ಬಹುತೇಕ ಏಕ ಕಾಲದಲ್ಲಿಸಂಚಾರ ನಡೆಸಲಿದ್ದಾರೆ. ಜೂನ್ 15 ರಂದು ರಾತ್ರಿ 11.58 ಕ್ಕೆ ಸೂರ್ಯ ಮಿಥುನ ರಾಶಿಗೆ ಪ್ರವೇಶಿಸುತ್ತಾನೆ. ಮತ್ತೊಂದೆಡೆ ಜೂನ್ 17 ರಂದು ಶನಿಯು ಕುಂಭ ರಾಶಿಯಲ್ಲಿ ಹಿಮ್ಮೆಟ್ಟಲಿದೆ.
ಸೂರ್ಯ ಮತ್ತು ಶನಿಯ ಏಕಕಾಲಿಕ ಹಿಮ್ಮೆಟ್ಟುವಿಕೆಯನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಇದರ ಪರಿಣಾಮವಾಗಿ ನಾಲ್ಕು ರಾಶಿಗಳಿಗೆ ಶುಭ ಫಲವನ್ನು ನೀಡಲಿದೆ. ವೃತ್ತಿ ಸೇರಿದಂತೆ ಕೌಂಟುಬಿಕವಾಗಿ ಅನೇಕ ಲಾಭಗಳನ್ನು ಈ ರಾಶಿಯವರು ಪಡೆಯಲಿದ್ದಾರೆ. ಅಷ್ಟಕ್ಕು ಆ ನಾಲ್ಕು ರಾಶಿಗಳು ಯಾವುದು ಅನ್ನೋದನ್ನು ತಿಳಿಯೋಣ.

ಮಿಥುನ ರಾಶಿ
ಸೂರ್ಯನು ಮಿಥುನ ರಾಶಿಗೆ ಪ್ರವೇಶಿಸುತ್ತಿರೋದ್ರಿಂದ ಈ ಸಂದರ್ಭದಲ್ಲಿ ಮಿಥುನ ರಾಶಿಯವರ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುವ ಸಾಧ್ಯತೆಗಳಿವೆ. ಉದ್ಯೋಗದಲ್ಲಿ ಬಡ್ತಿ ಪಡೆಯುವುದು ಮಾತ್ರವಲ್ಲದೇ ನಿಮ್ಮ ಸಂಭಳವೂ ಹೆಚ್ಚಾಗಲಿದೆ. ಪಾಲುದಾರಿಕೆಯಲ್ಲಿ ವ್ಯವಹಾರ ಮಾಡಿದರೆ ತುಂಬಾನೇ ಒಳ್ಳೆಯದು. ಇದರಿಂದ ಪ್ರಗತಿ ಹೊಂದುತ್ತೀರಿ ಮತ್ತು ಪಾಲುದಾರರೊಂದಿಗೆ ಉತ್ತಮ ಭಾಂದವ್ಯ ವೃದ್ಧಿಯಾಗಲಿದೆ. ಹೊಸ ಕೆಲಸ ಆರಂಭಿಸಲು ಇದು ಉತ್ತಮ ಕಾಲ. ಇದರಿಂದ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ನಿಮ್ಮ ವೈವಾಹಿಕ ಜೀವನದಲ್ಲಿ ಕೊಂಚ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಸಿಂಹ ರಾಶಿ
ಸೂರ್ಯ ಮತ್ತು ಶನಿ ಸಂಚಾರವು ಸಿಂಹ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡಲಿದೆ. ಈ ಸಮಯದಲ್ಲಿ ನಿಮ್ಮ ಜೀವನ ಶಾಂತಿಯುತವಾಗಿರುತ್ತದೆ. ಆದರೆ ನಿಮ್ಮ ಆಲೋಚನೆಯ ವ್ಯಾಪ್ತಿ ಹೆಚ್ಚಾಗುತ್ತಾ ಸಾಗಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ಆಗೋದ್ರಿಂದ ಸಾಕಷ್ಟು ದುಡ್ಡು ಖರ್ಚು ಮಾಡಬೇಕಾಗುತ್ತದೆ. ನಿಮ್ಮ ಎಲ್ಲಾ ರೀತಿಯ ತೊಂದರೆಗಳು ನಿವಾರಣೆಯಾಗುತ್ತದೆ. ಹಾಗೂ ನಿಮಗೆ ಹಿರಿಯರ ಸಂಪೂರ್ಣ ಬೆಂಬಲ ಸಿಗಲಿದೆ.
ಕನ್ಯಾ ರಾಶಿ
ಸೂರ್ಯ-ಶನಿ ಸಂಚಾರದಿಂದ ಕನ್ಯಾ ರಾಶಿಯವರು ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲಿದ್ದಾರೆ. ನೀವು ವ್ಯಾಪಾರದಲ್ಲಿ ಉತ್ತಮ ಮಟ್ಟದಲ್ಲಿ ಬೆಳೆಯುವ ಸಾಧ್ಯತೆಗಳು ಹೆಚ್ಚಾಗಿದೆ. ನಿಮ್ಮ ಕೆಲಸದಲ್ಲಿ ಅನುಕೂಲಕರ ಬದಲಾವಣೆಗಳಾಗುವ ಸಾಧ್ಯತೆಯಿದೆ. ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಮತ್ತು ನೀವು ಕುಟುಂಬದೊಂದಿಗೆ ಪುಣ್ಯ ಕ್ಷೇತ್ರಗಳಿಗೆ ಪ್ರವಾಸ ಮಾಡುವ ಸಾಧ್ಯತೆಗಳಿದೆ. ನಿಮ್ಮ ಕುಟುಂಬದೊಂದಿಗೆ ನಿಮ್ಮ ಸಂಬಂಧ ಇನ್ನಷ್ಟು ಉತ್ತಮವಾಗುತ್ತದೆ.
ಮಕರ ರಾಶಿ
ಸೂರ್ಯ-ಶನಿ ಸಂಚಾರದಿಂದ ಮಕರ ರಾಶಿಯವರು ಅನಿರೀಕ್ಷಿತ ಯಶಸ್ಸನ್ನು ಪಡೆಯುತ್ತಾರೆ. ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ವ್ಯಾಪಾರಕ್ಕೆ ಸಂಬಂಧಿಸಿದ ಯಾವುದೇ ಹೊಸ ಕೆಲಸವನ್ನು ಮಾಡಬಹುದು. ನೀವು ಉದ್ಯೋಗದಲ್ಲಿ ಬಡ್ತಿಯನ್ನು ಪಡೆಯುತ್ತೀರಿ ಮತ್ತು ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ. ಧಾರ್ಮಿಕ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿದೆ.



Click it and Unblock the Notifications
