Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಶಿಕ್ಷಕರ ದಿನಾಚರಣೆ 2024: ಭಾರತದ 2ನೇ ರಾಷ್ಟ್ರಪತಿ ರಾಧಾಕೃಷ್ಣನ್ ಬಗ್ಗೆ ನಿಮಗೆಷ್ಟು ಗೊತ್ತು..!?
ಪ್ರತಿ ವರ್ಷ ಸೆಪ್ಟೆಂಬರ್ 05ರಂದು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಅಪಾರ ಕೊಡುಗೆಗಳು ಮತ್ತು ಸಾಧನೆಗಳನ್ನು ಗುರುತಿಸಿ ಅವರ ಜನ್ಮದಿನದ ಗೌರವಾರ್ಥವಾಗಿ ಸೆಪ್ಟೆಂಬರ್ 5 ರಂದು ರಾಷ್ಟ್ರೀಯ ಶಿಕ್ಷಕರ ದಿನವನ್ನು ಆಚರಿಸುತ್ತದೆ. ಸೆಪ್ಟೆಂಬರ್ 5, 1888 ರಂದು ಜನಿಸಿದ ಡಾ. ರಾಧಾಕೃಷ್ಣನ್ ಅವರು ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅವರ ಹುಟ್ಟಿದ ದಿನವನ್ನ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.
ಬಡ ತೆಲುಗು ಬ್ರಾಹ್ಮಣ ಕುಟುಂಬದಿಂದ ಬಂದ ಡಾ ರಾಧಾಕೃಷ್ಣನ್ ಅವರು ತಮ್ಮ ಸಂಪೂರ್ಣ ಶಿಕ್ಷಣವನ್ನು ವಿದ್ಯಾರ್ಥಿವೇತನದ ಮೂಲಕ ಪೂರ್ಣಗೊಳಿಸಿದ್ದರು. ಜೀವನದುದ್ದಕ್ಕೂ ರಾಧಾಕೃಷ್ಣನ್ ಅವರು ಅದ್ಭುತ ವಿದ್ಯಾರ್ಥಿ ಮತ್ತು ಪ್ರೀತಿಯ ಶಿಕ್ಷಕರಾಗಿದ್ದರು.

1962 ರಲ್ಲಿ, ಭಾರತದ ಎರಡನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವಾಗ, ಅವರ ಜನ್ಮದಿನವನ್ನು ವಿಶೇಷ ದಿನವಾಗಿ ಆಚರಿಸಲು ಅವರ ವಿದ್ಯಾರ್ಥಿಗಳು ಅವರನ್ನು ಸಂಪರ್ಕಿಸಿದರು. ಆದರೆ, ಸಮಾಜಕ್ಕೆ ಶಿಕ್ಷಕರು ನೀಡಿರುವ ಅಮೂಲ್ಯ ಕೊಡುಗೆಯನ್ನು ಗುರುತಿಸಲು ಸೆಪ್ಟೆಂಬರ್ 5ರಂದು ಶಿಕ್ಷಕರ ದಿನವನ್ನಾಗಿ ಆಚರಿಸಬೇಕು ಎಂದು ಡಾ.ರಾಧಾಕೃಷ್ಣನ್ ಮನವಿ ಮಾಡಿದ್ದರು.
ಇನ್ನು ಭಾರತದ ಎರಡನೇ ರಾಷ್ಟ್ರಪತಿ ಅವರ ಕುರಿತು ನಿಮಗೆ ಗೊತ್ತಿಲ್ಲದ ಒಂದಿಷ್ಟು ಮಾಹಿತಿಯನ್ನ ಇಲ್ಲಿ ನೀಡಲಾಗಿದೆ ನೋಡಿ. 1962 ರಿಂದ, ಶಿಕ್ಷಕರ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಆಚರಿಸಲಾಗುತ್ತದೆ. ಡಾ ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 5, 1888 ರಂದು ತಮಿಳುನಾಡಿನ ತಿರುಟ್ಟಣಿಯಲ್ಲಿ ಜನಿಸಿದರು. ಅವರ ತಂದೆ ಮತ್ತು ತಾಯಿ ಸರ್ವಪಲ್ಲಿ ವೀರಸ್ವಾಮಿ ಮತ್ತು ಸೀತಮ್ಮ.
1946 ರಲ್ಲಿ, ಡಾ ರಾಧಾಕೃಷ್ಣನ್ ಅವರು ಸಂವಿಧಾನ ಸಭೆಗೆ ಆಯ್ಕೆಯಾದರು. ಅವರು ಯುನೆಸ್ಕೋ ಮತ್ತು ನಂತರ ಮಾಸ್ಕೋಗೆ ರಾಯಭಾರಿಯಾಗಿ ಸೇವೆ ಸಲ್ಲಿಸಿದರು. 1952 ರಲ್ಲಿ ಭಾರತದ ಮೊದಲ ಉಪರಾಷ್ಟ್ರಪತಿಯಾದರು ಮತ್ತು 1962 ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದಾರೆ. 1954ರಲ್ಲಿ ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಯಿತು. 1963ರಲ್ಲಿ ಅವರಿಗೆ ಆರ್ಡರ್ ಆಫ್ ಮೆರಿಟ್ ಮತ್ತು 1975 ರಲ್ಲಿ ಟೆಂಪಲ್ಟನ್ ಪ್ರಶಸ್ತಿಯನ್ನು ನೀಡಲಾಯಿತು. ಜೊತೆಗೆ ಅವರು 1939 ರಿಂದ 1948 ರವರೆಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದರು.
ಭಾರತದ ರಾಷ್ಟ್ರಪತಿಯಾದಾಗ ಅವರು ಪ್ರತಿ ತಿಂಗಳು 10,000 ರೂಪಾಯಿ ಸಂಬಳದಲ್ಲಿ ₹2,500 ಮಾತ್ರ ಸ್ವೀಕರಿಸುತ್ತಿದ್ದರು. ಉಳಿದ ಮೊತ್ತವನ್ನು ಪ್ರತಿ ತಿಂಗಳು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ನೀಡುತ್ತಿದ್ದರು. ಹಾಗೆ ಅವರು ಹಲವು ಸಮಾಜಮುಖಿ ಕಾರ್ಯಗಳಿಂದಲೂ ಹೆಸರಾಗಿದ್ದರು, ಹಣಕಾಸಿನ ಸಮಸ್ಯೆಯಿಂದ ಶಿಕ್ಷಣ ಅರ್ಧಕ್ಕೆ ಬಿಟ್ಟ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತಿದ್ದರು. ಕಾಲೇಜಿನಲ್ಲಿ ಕಷ್ಟ ಎಂದು ಹೇಳಿಕೊಂಡಿದ್ದ ಹಲವು ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿದ್ದರು.
ರಾಧಾಕೃಷ್ಣನ್ ಅವರ ಕೆಲವು ನುಡಿಮುತ್ತುಗಳು
ಮನುಷ್ಯ ರಾಕ್ಷಸನಾದರೆ ಅದು ಅವನ ಸೋಲು,
ಮನುಷ್ಯ ಮಹಾಪುರುಷನಾದರೆ ಅದೊಂದು ಪವಾಡ,
ಮನುಷ್ಯ ಮನುಷ್ಯನಾದರೆ ಅದು ಅವನ ಗೆಲುವು.
ಜ್ಞಾನವು ನಮಗೆ ಶಕ್ತಿಯನ್ನು ನೀಡುತ್ತದೆ, ಪ್ರೀತಿ ನಮಗೆ ಪರಿಪೂರ್ಣತೆಯನ್ನು ನೀಡುತ್ತದೆ.
ಮಾನವ ಸ್ವಭಾವವು ಮೂಲಭೂತವಾಗಿ ಒಳ್ಳೆಯದು,
ಮತ್ತು ಜ್ಞಾನೋದಯದ ಅನ್ವೇಷಣೆಯು ಎಲ್ಲಾ ಅನಿಷ್ಟಗಳನ್ನು ತೊಡೆದುಹಾಕುವ ಶಕ್ತಿಯನ್ನು ಹೊಂದಿದೆ.
ನಮ್ಮ ಬಗ್ಗೆ ಯೋಚಿಸಲು ನಮಗೆ ಸಹಾಯ ಮಾಡುವವರೇ ನಿಜವಾದ ಶಿಕ್ಷಕರು.
ಶಿಕ್ಷಕರು ಉತ್ತಮ ನಾಗರಿಕರನ್ನ ಮಾತ್ರ ಸೃಷ್ಟಿಸಲು ಸಾಧ್ಯ, ಆದ್ರೆ ಉತ್ತಮ ಸಮಾಜವನ್ನ ಅವರೇ ನಿರ್ಮಿಸಬೇಕು.



Click it and Unblock the Notifications