ಜುಲೈ 10ರ ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ವೈದಿಕ ಶಾಸ್ತ್ರದ ಪ್ರಕಾರ ಜುಲೈ 10ರ ಭವಿಷ್ಯ ನೀಡಲಾಗಿದ್ದು ವಾರದ ಮೊದಲ ದಿನ ನಿಮ್ಮ ರಾಶಿಗೆ ಹೇಗಿರಲಿದೆ ನೋಡೋಣ:
ದಿನಾಂಕ: ಜುಲೈ 10
ತಿಥಿ: ಅಷ್ಟಮಿ
ನಕ್ಷತ್ರ: ರೇವತಿ ಸಂಜೆ 06:59ರ ನಂತರ ಅಶ್ವಿನಿ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಬೆಳಗ್ಗೆ 07:36ರಿಂದ 09:12ರವರೆಗೆ

ಮೇಷ ರಾಶಿ

ಇತರರ ವಿಷಯದಲ್ಲಿ ನಿಮ್ಮ ಪ್ರತಿಕ್ರಿಯೆಯನ್ನು ನೀಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ, ಇಲ್ಲದಿದ್ದರೆ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳಬಹುದು. ನಿಮ್ಮ ಸಂಗಾತಿಯನ್ನು ಪ್ರೀತಿ ಮತ್ತು ಗೌರವದಿಂದ ನೋಡಿಕೊಳ್ಳಲು ಪ್ರಯತ್ನಿಸಿ. ಸಣ್ಣ ವಿಷಯಗಳಿಗೆ ಕೋಪಗೊಳ್ಳಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 3 ರವರೆಗೆ

Today Horoscope July 10: 10 July 2023 Dina Bhavishya In Kannada

ವೃಷಭ ರಾಶಿ

ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಇಂದು ಅದೃಷ್ಟದ ದಿನವಾಗಲಿದೆ. ವೃಷಭ ರಾಶಿಯವರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಬರಬೇಕಾಗಿದ್ದ ಹಣ ನಿಮ್ಮ ಕೈ ಸೇರಲಿದೆ. ಪ್ರಣಯ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 2:50 ರವರೆಗೆ

ಮಿಥುನ ರಾಶಿ

ವೈವಾಹಿಕ ಜೀವನದಲ್ಲಿ ಪರಿಸ್ಥಿತಿಯು ಏರಿಳಿತಗಳಿಂದ ಕೂಡಿರಲಿದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವಿರಬಹುದು, ಹಣಕಾಸಿನ ವಿಚಾರದಲ್ಲಿ ಯಾವುದೇ ಆತುರ ಬೇಡ. ವಿಶೇಷವಾಗಿ ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡುವಾಗ, ನೀವು ಎಚ್ಚರಿಕೆಯಿಂದ ಯೋಚಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ

ಕರ್ಕ ರಾಶಿ

ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುತ್ತೀರಿ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಜೀವನ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಒಟ್ಟಿನಲ್ಲಿ ಈ ದಿನವನ್ನು ನೀವು ಖುಷಿಯಿಂದ ಕಳೆಯುವಿರಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

ಸಿಂಹ ರಾಶಿ

ಕೆಲಸ-ಸಂಬಂಧಿತ ಚಿಂತೆಗಳು ದೂರಾಗಲಿದೆ. ನಿಮ್ಮ ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ. ಆರೋಗ್ಯ ಸಮಸ್ಯೆ ಇದ್ದರೆ ಈ ದಿನ ಸುಧಾರಣೆ ಕಂಡು ಬರಲಿದೆ, ಅನಾರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡದೆ ಔಷಧಗಳನ್ನು ಸರಿಯಾಗಿ ತೆಗೆದುಕೊಳ್ಳಿ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 7:00 ರವರೆಗೆ

ಕನ್ಯಾ ರಾಶಿ

ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಅಷ್ಟು ಸರಿಯಿರಲ್ಲ , ಈ ದಿನ ನೀವು ತುಂಬಾ ಸಮತೋಲಿತವಾಗಿ ವರ್ತಿಸುವಂತೆ ಸಲಹೆ ನೀಡಲಾಗಿದೆ. ಹೆಚ್ಚುತ್ತಿರುವ ಕೆಲಸದ ಹೊರೆಯು ನಿಮಗೆ ತುಂಬಾ ಆಯಾಸವನ್ನುಂಟು ಮಾಡುತ್ತದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ, ಆರೋಗ್ಯ ಕೂಡ ದುರ್ಬಲವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ 3:20 ರವರೆಗೆ

ತುಲಾ ರಾಶಿ

ಗ್ರಹಗಳ ನಕಾರಾತ್ಮಕ ಸ್ಥಾನವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆರೋಗ್ಯದಲ್ಲಿ ದಿಢೀರ್ ಕ್ಷೀಣಿಸುವ ಸಾಧ್ಯತೆ ಇದೆ. ನಿಮ್ಮ ಹಠಮಾರಿ ಸ್ವಭಾವವು ನಿಮ್ಮ ಸಂಬಂಧಗಳಲ್ಲಿ ಸಮಸ್ಯೆ ಹೆಚ್ಚಿಸಬಹುದು. ನೀವು ಕೋಪ ಮತ್ತು ಅಹಂಕಾರವನ್ನು ನಿಯಂತ್ರಿಸಿದರೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8:30 ರವರೆಗೆ

ವೃಶ್ಚಿಕ ರಾಶಿ

ಇಂದು ನೀವು ಕೆಲಸಕ್ಕಾಗಿ ಮಾಡುವ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನಿರ್ಧಾರ ನಿಮ್ಮ ಪರವಾಗಿ ಬರಬಹುದು. ಹಣದ ವಿಷಯದಲ್ಲಿ ಈ ದಿನ ಅದೃಷ್ಟದಿಂದ ಕೂಡಿದೆ. ನೀವು ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ

ನಿಮ್ಮ ಸಂಗಾತಿಯೊಂದಿಗೆ ನೀವು ಬಿರುಕು ಹೊಂದಿದ್ದರೆ, ಇಂದು ಎಲ್ಲವೂ ಸರಿಯಾಗಲಿದೆ. ನೀವೂ ಎಲ್ಲ ಮನಸ್ತಾಪ ಮರೆತು ಮುಂದುವರೆಯಲು ಪ್ರಯತ್ನಿಸಬೇಕು. ಹಣದ ವಿಷಯದಲ್ಲಿ, ದಿನವು ಸ್ವಲ್ಪ ದುಬಾರಿಯಾಗಿದೆ. ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗಿದೆ. ರೊಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5 ರಿಂದ 9:15 ರವರೆಗೆ

ಮಕರ ರಾಶಿ

ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ. ಅನೇಕ ಪ್ರಯತ್ನಗಳ ಹೊರತಾಗಿಯೂ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯದಿದ್ದರೆ ನಿಮ್ಮ ಪ್ರಯತ್ನಗಳನ್ನು ನೀವು ಮುಂದುವರಿಸಬೇಕಾಗಿದೆ. ಶೀಘ್ರದಲ್ಲೇ ವಿಷಯಗಳು ನಿಮ್ಮ ಪರವಾಗಿ ತಿರುಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ಕುಂಭ ರಾಶಿ

ಉದ್ಯೋಗಸ್ಥರಿಗೆ ಈ ದಿನ ಪ್ರಗತಿಯಿಂದ ಕೂಡಿರಲಿದೆ. ಆದರೆ ದುರಾಂಕಾರದ ವರ್ತನೆ ಒಳ್ಳೆಯದಲ್ಲ. ಹಣದ ವಿಷಯದಲ್ಲಿ ಇಂದು ಉತ್ತಮ ದಿನವಾಗಿರುತ್ತದೆ. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಅದು ನಿಮಗೆ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಗ್ಗೆ 10:30 ರಿಂದ ಮದ್ಯಾಹ್ನ 12:10ರವರೆಗೆ

ಮೀನ ರಾಶಿ

ಯಾವುದೇ ಸಮಸ್ಯೆ ಇದ್ದರೆ ನಿಮ್ಮವರ ಜೊತೆ ಅದನ್ನು ಮುಕ್ತವಾಗಿ ಹಂಚಿಕೊಳ್ಳಬೇಕು. ಬಹುಶಃ ಅವರಿಂದ ಸಮಸ್ಯೆಗೆ ಪರಿಹಾರವನ್ನು ಕಾಣಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಕಷ್ಟಪಟ್ಟು ದುಡಿದ ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಪ್ರಣಯ ಜೀವನದಲ್ಲಿ ಉದ್ವೇಗ ಹೆಚ್ಚಾಗಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 27

English summary

Today Horoscope July 10: 10 July 2023 Dina Bhavishya In Kannada

Today Horoscope July 10: 10 July 2023 Dina Bhavishya In Kannada.
Story first published: Monday, July 10, 2023, 4:00 [IST]
X
Desktop Bottom Promotion